Just In
- 6 hrs ago
ಜಬ್ರೋನಿಕ್ಸ್ ಡ್ರಿಪ್ ಸ್ಮಾರ್ಟ್ವಾಚ್ ಬಿಡುಗಡೆ! ಲಾಂಗ್ ಬ್ಯಾಟರಿ ಬ್ಯಾಕ್ಅಪ್ ವಿಶೇಷ!
- 7 hrs ago
ಡಿಜಿಟಲ್ ಇಂಡಿಯಾಗಾಗಿ ನಾಲ್ಕು ಹೊಸ ಯೋಜನೆಗಳನ್ನು ಪರಿಚಯಿಸಿದ ಪ್ರಧಾನಿ ಮೋದಿ!
- 9 hrs ago
ಭಾರತದಲ್ಲಿ ಬಹುನಿರೀಕ್ಷಿತ ಐಫೋನ್ 14 ಪ್ರೊ ಬೆಲೆ ಎಷ್ಟಿರಬಹುದು?..ಫೀಚರ್ಸ್ ಏನು?
- 10 hrs ago
ಸಾರ್ವಜನಿಕರೇ ನಿಮ್ಮ ಮನೆ ಮೇಲೆ ಮೊಬೈಲ್ ಟವರ್ ಹಾಕಿಸುವ ಮುನ್ನ ಎಚ್ಚರ?
Don't Miss
- Sports
ವಿಂಡೀಸ್ ಪ್ರವಾಸದಲ್ಲಿ ಹಿರಿಯ ಆಟಗಾರರಿಗೆ ವಿಶ್ರಾಂತಿ, ಸಂಜು ಸ್ಯಾಮ್ಸನ್ಗೆ ಸಿಗಲಿದೆ ಮತ್ತೊಂದು ಅವಕಾಶ?
- News
ಅಮೃತ್ ನಗರೋತ್ಥಾನ ಯೋಜನೆಯಡಿ ಬೆಂಗಳೂರು ಪೂರ್ವ ವಲಯಕ್ಕೆ 450 ಕೋಟಿ ಮಂಜೂರು
- Movies
ಹಿಂದಿಗೆ ಹೋಗುತ್ತಿದೆ ಏಳು ವರ್ಷ ಹಳೆಯ ಕನ್ನಡ ಸಿನಿಮಾ: ಅಕ್ಷಯ್-ಶಾಹಿದ್ ನಡುವೆ ಪೈಪೋಟಿ!
- Finance
ಸರ್ವೀಸ್ ಚಾರ್ಜ್ ಬಗ್ಗೆ ಗ್ರಾಹಕರು ದೂರು ನೀಡುವುದು ಹೇಗೆ?
- Lifestyle
ಯಾರೂ ಇಲ್ಲದಿದ್ದಾಗ ಪುರುಷ ಈ ರೀತಿ ವಿಲಕ್ಷಣವಾಗಿ ವರ್ತಿಸುತ್ತಾನೆ, ಗೊತ್ತಾ? ಇದನ್ನು ಓದಿದ್ರೆ ನೀವು ಶಾಕ್ ಆಗೋದು ಪಕ್ಕಾ!
- Automobiles
ದೇಶದ ಮೊದಲ 150kWh ಡಿಸಿ ಇವಿ ಫಾಸ್ಟ್ ಚಾರ್ಜರ್ ಸ್ಥಾಪಿಸಿದ ಕಿಯಾ ಇಂಡಿಯಾ
- Education
Karnataka Second PUC Results 2022 : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಉತ್ತರ ಪತ್ರಿಕೆಯ ಪ್ರತಿಗಳು ಜು.6ರಿಂದ ಲಭ್ಯ
- Travel
ಸೂರ್ಯ, ಅಲೆಗಳು ಮತ್ತು ಮರಳು ಇವುಗಳ ಸಮ್ಮಿಲನ ಕಡಲತೀರದ ಪಟ್ಟಣ - ಮಲ್ಪೆ
ಭಾರತದಲ್ಲಿ ಮಾರ್ಚ್ ತಿಂಗಳಿನಲ್ಲಿ 18 ಲಕ್ಷ ಖಾತೆ ಬ್ಯಾನ್ ಮಾಡಿದ ವಾಟ್ಸಾಪ್!
ವಾಟ್ಸಾಪ್ ಅಪ್ಲಿಕೇಶನ್ ಮಾರ್ಚ್ ತಿಂಗಳಿನಲ್ಲಿ ಭಾರತದ 18 ಲಕ್ಷಕ್ಕೂ ಹೆಚ್ಚು ಖಾತೆಗಳನ್ನು ಬ್ಯಾನ್ ಮಾಡಿರುವುದಾಗಿ ಹೇಳಿದೆ. ಭಾರತ ಸರ್ಕಾರದ ಹೊಸ ಐಟಿ ನಿಯಮ 2021ರ ಅನುಸರಣೆಯ ಪ್ರಕಾರ ಈ ಕ್ರಮವನ್ನು ತೆಗೆದುಕೊಂಡಿರುವುದಾಗಿ ಹೇಳಿದೆ. ಹೊಸ ಐಟಿ ನಿಯಮ 2021 ಜಾರಿಗೆ ಬಂದ ನಂತರ ಪ್ರತಿ ತಿಂಗಳ ಅನುಸರಣಾ ವರದಿಯನ್ನು ಕೊಡುವುದು ಕಡ್ಡಾಯವಾಗಿದೆ ಅದರಂತೆ ವಾಟ್ಸಾಪ್ ಮಾರ್ಚ್ ತಿಂಗಳಿನಲ್ಲಿ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ವರದಿ ಮಾಡಿದೆ.

ವಾಟ್ಸಾಪ್ ಅಪ್ಲಿಕೇಶನ್ ಮಾರ್ಚ್ 1 ರಿಂದ ಮಾರ್ಚ್ 31 2022 ರ ನಡುವಿನ ಮಾಸಿಕ ವರದಿಯನ್ನು ಬಿಡುಗಡೆ ಮಾಡಿದೆ. ಈ ಮಾಸಿಕ ವರದಿಯಲ್ಲಿ ಭಾರತದ 18 ಲಕ್ಷಕ್ಕೂ ಹೆಚ್ಚು ಖಾತೆಗಳನ್ನು ಬ್ಯಾನ್ ಮಾಡಿದೆ. ಇನ್ನು ಈ ಮಾಸಿಕ ಬಳಕೆದಾರ-ಸುರಕ್ಷತಾ ವರದಿಯು ಬಳಕೆದಾರರಿಂದ ಸ್ವೀಕರಿಸಿದ ದೂರುಗಳು ಮತ್ತು ವಾಟ್ಸಾಪ್ ತೆಗೆದುಕೊಂಡ ಕ್ರಮಗಳ ವಿವರಗಳನ್ನು ವರದಿ ಮಾಡಿದೆ. ಇನ್ನು ಮಾರ್ಚ್ ತಿಂಗಳ ವರದಿಯಲ್ಲಿ ಏನೆಲ್ಲಾ ಉಲ್ಲೇಖಿಸಲಾಗಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ವಾಟ್ಸಾಪ್ ಮಾರ್ಚ್ ತಿಂಗಳಿನಲ್ಲಿ ಬಳಕೆದಾರರು ಮಾಡಿದ ರಿಪೋರ್ಟ್ ಆಧಾರದ ಮೇಲೆ 18 ಲಕ್ಷಕ್ಕೂ ಹೆಚ್ಚು ಖಾತೆಯನ್ನು ಬ್ಯಾನ್ ಮಾಡಿದೆ. ಬ್ಯಾನ್ ಆಗಿರುವ ಖಾತೆಗಳು ಕಿರುಕುಳ, ನಕಲಿ ಮಾಹಿತಿಯನ್ನು ಫಾರ್ವರ್ಡ್ ಮಾಡುವುದು, ಇತರ ಬಳಕೆದಾರರನ್ನು ವಂಚಿಸಿರುವುದು ಕಂಡುಬಂದಿದೆ.ಇದಲ್ಲದೆ ಹಾನಿಕಾರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಈ ಖಾತೆಗಳನ್ನು ನಿಷೇಧಿಸಲಾಗಿದೆ. ವಾಟ್ಸಾಪ್ ಈಗಾಗಲೇ ವಾಟ್ಸಾಪ್ ಸಂದೇಶಗಳನ್ನು ಫಾರ್ವರ್ಡ್ ಮಾಡುವುದನ್ನು ಸೀಮಿತಗೊಳಿಸಿದೆ. ಅದರಂತೆ ನಕಲಿ ಸುದ್ದಿಗಳ ಹರಡಿರುವ ಖಾತೆಗಳನ್ನು ಬ್ಯಾನ್ ಮಾಡಿದೆ.

18 ಲಕ್ಷ ಖಾತೆಗಳನ್ನು ಏಕೆ ನಿಷೇಧಿಸಲಾಗಿದೆ?
ವಾಟ್ಸಾಪ್ ಹೊಸ ಐಟಿ ನಿಯಮಗಳ ಅನ್ವಯ ಈ ಖಾತೆಗಳನ್ನು ನಿಷೇದಿಸಿದೆ. ಅಲ್ಲದೆ ವಾಟ್ಸಾಪ್ ಅಪ್ಲಿಕೇಶನ್ ನೀತಿಗಳು ಮತ್ತು ಮಾರ್ಗಸೂಚಿಗಳಿಗೆ ಬದ್ಧವಾಗಿರದ ಖಾತೆಗಳನ್ನು ಕೂಡ ಬ್ಯಾನ್ ಮಾಡಿದೆ. ಹಾಗೆಯೇ ತಪ್ಪು ಮಾಹಿತಿಯನ್ನು ಹರಡುವ, ಬಳಕೆದಾರರೊಂದಿಗೆ ಅನುಮಾನಾಸ್ಪದ ಲಿಂಕ್ಗಳನ್ನು ಹಂಚಿಕೊಳ್ಳುವ ಅಥವಾ ಅವರ ಸಂಪರ್ಕಗಳೊಂದಿಗೆ ಪರಿಶೀಲಿಸದ ಫಾರ್ವರ್ಡ್ ಮಾಡಿದ ಸಂದೇಶಗಳನ್ನು ಹಂಚಿಕೊಳ್ಳುವ ಖಾತೆಗಳನ್ನು ಕೂಡ ಸಾಮಾನ್ಯವಾಗಿ ಬ್ಯಾನ್ ಮಾಡಲಿದೆ. ಇನ್ನು ಈ ನಿಷೇಧಿತ ವಾಟ್ಸಾಪ್ ಅಕೌಂಟ್ಗಳು ಬೇರೆಯವರಿಗೆ ವಂಚನೆ ಮಾಡಿರುವ ಮಾಹಿತಿ ಕೂಡ ಬಹಿರಂಗವಾಗಿದೆ.

ಇನ್ನು ಈಗಾಗಲೇ ವಾಟ್ಸಾಪ್ ಐಟಿ ನಿಯಮಗಳು 2021 ರ ಅನುಸಾರವಾಗಿ ಫೆಬ್ರವರಿ 1 ಮತ್ತು 28 ರ ನಡುವೆ 10 ಲಕ್ಷಕ್ಕೂ ಹೆಚ್ಚು ವಾಟ್ಸಾಪ್ ಖಾತೆ ಬ್ಯಾನ್ ಮಾಡಿದೆ. ಈ ಅವಧಿಯಲ್ಲಿ ಕೂಡ ಬಳಕೆದಾರರಿಂದ ಸ್ವೀಕರಿಸಿದ ದೂರುಗಳ ವಿವರಗಳನ್ನು ಮತ್ತು ವಾಟ್ಸಾಪ್ ತೆಗೆದುಕೊಂಡ ಅನುಗುಣವಾದ ಕ್ರಮಗಳನ್ನು ತೆಗೆದುಕೊಂಡಿತ್ತು. ಅಲ್ಲದೆ ವಾಟ್ಸಾಪ್ನಲ್ಲಿ ನಿಂದನೆಯನ್ನು ಎದುರಿಸಲು ಸ್ವಂತ ತಡೆಗಟ್ಟುವ ಕ್ರಮಗಳನ್ನು ಒಳಗೊಂಡಿರುವುದಾಗಿ ಹೇಳಿಕೊಂಡಿತ್ತು. ಇದರೊಂದಿಗೆ ವಾಟ್ಸಾಪ್ನ ಎಲ್ಲಾ ಸಂದೇಶಗಳು ಎಂಡ್-ಟು-ಎಂಡ್ ಎನ್ಕ್ರಿಪ್ಟ್ ಆಗಿವೆ ಅನ್ನೊದನ್ನ ಮತ್ತೊಮ್ಮೆ ವರದಿಯಲ್ಲಿ ಉಲ್ಲೇಖ ಮಾಡಿತ್ತು.

ಇದಲ್ಲದೆ ವಾಟ್ಸಾಪ್ ತನ್ನ ಪ್ಲಾಟ್ಫಾರ್ಮ್ನಲ್ಲಿ ಕ್ವಿಕ್ ರಿಯಾಕ್ಷನ್ ಫೀಚರ್ಸ್ ಪರಿಚಯಿಸಲು ಮುಂದಾಗಿದೆ. ಇದರಿಂದ ನೀವು ಸ್ಟೇಟಸ್ ಅಪ್ಡೇಟ್ ನೋಡುವಾಗಲೂ ಕೂಡ ಎಮೋಜಿ ರಿಯಾಕ್ಷನ್ ನೀಡಲು ಸಾಧ್ಯವಾಗಲಿದೆ. ಇನ್ನು ಈ ರಿಯಾಕ್ಷನ್ ಆಯ್ಕೆಯು ಎಂಟು ಎಮೋಟಿಕಾನ್ಗಳಿಗೆ ಮಾತ್ರ ಸೀಮಿತವಾಗಿದೆ ಎಂದು ಹೇಳಲಾಗಿದೆ. ಇದು ಬಳಕೆದಾರರಿಗೆ ವೈಯಕ್ತಿಕ ಎಮೋಜಿಯನ್ನು ಸಂದೇಶವಾಗಿ ಕಳುಹಿಸದೆಯೇ ಸ್ಟೇಟಸ್ ಅಪ್ಡೇಟ್ ಕಡೆಗೆ ಭಾವನೆಗಳನ್ನು ವ್ಯಕ್ತಪಡಿಸಲು ಅನುವು ಮಾಡಿಕೊಡುತ್ತದೆ. ಇವುಗಳಲ್ಲಿ ಹೃದಯದ ಕಣ್ಣುಗಳಿಂದ ನಗುತ್ತಿರುವ ಮುಖ, ಸಂತೋಷದ ಕಣ್ಣೀರಿನ ಮುಖ, ತೆರೆದ ಬಾಯಿಯ ಮುಖ, ಅಳುವ ಮುಖ, ಮಡಚಿ ಕೈಗಳನ್ನು ಹೊಂದಿರುವ ವ್ಯಕ್ತಿ, ಚಪ್ಪಾಳೆ, ಪಾರ್ಟಿ ಪಾಪ್ಪರ್ ಮತ್ತು ನೂರು ಅಂಕಗಳ ಎಮೋಜಿಯನ್ನು ಕಾಣಬಹುದಾಗಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
44,999
-
15,999
-
20,449
-
7,332
-
18,990
-
31,999
-
54,999
-
17,091
-
17,091
-
13,999
-
31,830
-
31,499
-
26,265
-
24,960
-
21,839
-
15,999
-
11,570
-
11,700
-
7,070
-
7,086