iPhone 13 Price Cut : ಐಫೋನ್ ಖರೀದಿ ಮಾಡುವವರಿಗೆ ಸಿಹಿಸುದ್ದಿ; ಸಿಗುತ್ತೆ ಭರ್ಜರಿ ಡಿಸ್ಕೌಂಟ್!
ಮೊಬೈಲ್ ಮಾರುಕಟ್ಟೆಯಲ್ಲಿ ಆಪಲ್ ಐಫೋನ್ ಅತೀ ಜನಪ್ರಿಯ ಸ್ಥಾನ ಪಡೆದಿದ್ದು, ಬಹುತೇಕರು ಗ್ರಾಹಕರು ಐಫೋನ್ ಖರೀದಿಸಬಹು ಬಯಸುತ್ತಾರೆ. ಮಹಿಳೆಯರಿಗೂ ಸಹ ಐಫೋನ್ ಮೇಲೆ ಒಲವು ಹೆಚ್ಚು. ಸದ್ಯ ಭರ್ಜರಿ ರಿಯಾಯಿತಿ ಬೆಲೆಯಲ್ಲಿ ಹೊಸ ಐಫೋನ್ ಖರೀದಿಸುವ ಪ್ಲ್ಯಾನ್ ಹೊಂದಿದ್ದರೆ, ವಿಜಯ್ ಸೇಲ್ಸ್ ಇ ಕಾಮರ್ಸ್ ತಾಣ ಬೆಸ್ಟ್ ಆಗಿದೆ.
ಹೌದು, ಮಹಿಳಾ ದಿನದ ಪ್ರಯುಕ್ತ ವಿಜಯ್ ಸೇಲ್ಸ್ (Vijay Sales) ತಾಣವು ಕೆಲವು ಫೋನ್‌ಗಳಿಗೆ ಡಿಸ್ಕೌಂಟ್ ಲಭ್ಯ ಮಾಡಿದೆ. ಆ ಪೈಕಿ ಐಫೋನ್ 13 ಸಹ ಆಕರ್ಷಕ ಡಿಸ್ಕೌಂಟ್ ಪಡೆದಿದೆ. ಐಫೋನ್ 13 (128GB) ಬೆಲೆ 69,900ರೂ. ಆಗಿದ್ದು, ಕೊಡುಗೆಯಲ್ಲಿ 62,790ರೂ. ಗಳಿಗೆ ಕಾಣಿಸಿಕೊಂಡಿದೆ.

ಈ ಕೊಡುಗೆಯ ಜೊತೆಗೆ ಎಚ್‌ಎಸ್‌ಬಿಸಿ ಬ್ಯಾಂಕ್ ಸೇರಿದಂತೆ ಇತರ ಕೆಲವು ಬ್ಯಾಂಕ್‌ಗಳಿಂದಲೂ ಆಕರ್ಷಕ ರಿಯಾಯಿತಿ, ಕ್ಯಾಶ್‌ಬ್ಯಾಕ್ ಕೊಡುಗೆಗಳು ಲಭ್ಯವಾಗಲಿವೆ. ಹಾಗೆಯೇ ಆಕರ್ಷಕ ಇಎಮ್‌ಐ (EMI) ಆಯ್ಕೆಗಳು ಸಹ ಗ್ರಾಹಕರಿಗೆ ಲಭ್ಯವಾಗಲಿವೆ. ಹಾಗಾದರೆ ಐಫೋನ್ 13 ಫೋನಿನ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಐಫೋನ್ 13 ಫೋನಿನ ಪ್ರಮುಖ ಫೀಚರ್ಸ್
ಈ ಫೋನ್ 6.1 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಅತ್ಯುತ್ತುಮ ಪಿಕ್ಸಲ್ ರೆಸಲ್ಯೂಶನ್ ಪಡೆದಿದೆ. 1200 nits ಬ್ರೈಟ್ನೆಸ್ ಹೊಂದಿದೆ. ಹಾಗೆಯೇ ಈ ಫೋನ್ A15 ಬಯೋನಿಕ್ ಸೋಕ್ ಕ್ವಾಡ್ ಕೋರ್ ಪ್ರೊಸೆಸರ್ ಅನ್ನು ಹೊಂದಿದೆ. 5G ಅನ್ನು ಬೆಂಬಲಿಸುತ್ತದೆ.
ಐಫೋನ್ 13 ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಹೊಂದಿದ್ದು, ಅವುಗಳು ಕ್ರಮವಾಗಿ 12 ಮೆಗಾ ಪಿಕ್ಸೆಲ್ ಅಲ್ಟ್ರಾ ಕ್ಯಾಮೆರಾ ಸೆನ್ಸಾರ್ ಹೊಂದಿದ್ದು, ಇನ್ನೊಂದು ಕ್ಯಾಮೆರಾವು 12 ಮೆಗಾ ಪಿಕ್ಸಲ್ ವೈಲ್ಡ್ ಆಂಗಲ್ ಲೆನ್ಸ್ ಪಡೆದಿದೆ. ಯಾವುದೇ ಸಂದರ್ಭದಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಲು ನೆರವಾಗಲಿದೆ. ಸಿನಿಮ್ಯಾಟಿಕ್ ಮೋಡ್ ಆಯ್ಕೆ ಪಡೆದಿದೆ.

ಐಫೋನ್ 14 ಫೋನಿನ ಪ್ರಮುಖ ಫೀಚರ್ಸ್
ಐಫೋನ್ 14 ಫೋನ್ 6.1 ಇಂಚಿನ FHD+ ಡಿಸ್‌ಪ್ಲೇ ಹೊಂದಿದ್ದು, 1200 nits ಬ್ರೈಟ್ನಸ್ ಸಪೋರ್ಟ್ ಹಾಗೆಯೇ ಇದು ಡ್ಯುಯಲ್ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 12 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಮುಂಭಾಗದಲ್ಲಿ 12 ಮೆಗಾ ಪಿಕ್ಸಲ್‌ನ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.
ಇದು 128GB, 256GB ಮತ್ತು 512GB ಸ್ಟೋರೇಜ್ ಆಯ್ಕೆಗಳನ್ನು ಒಳಗೊಂಡಿದೆ. ಐಫೋನ್ 14 ಫೋನ್ 5G ಕನೆಕ್ಟಿವಿಟಿ ಸೌಲಭ್ಯ ಅನ್ನು ಪಡೆದಿದೆ. ಇದು ಇ-ಸಿಮ್ ಆಯ್ಕೆ ಒಳಗೊಂಡಿದೆ.

ಐಫೋನ್ 14 ಪ್ಲಸ್ ಫೋನಿನ ಪ್ರಮುಖ ಫೀಚರ್ಸ್
ಐಫೋನ್ 14 ಪ್ಲಸ್ ಫೋನ್ 6.7 ಇಂಚಿನ ಡಿಸ್‌ಪ್ಲೇ ಸಾಮರ್ಥ್ಯ ಪಡೆದಿದ್ದು, OLED ಡಿಸ್‌ಪ್ಲೇ ಹೊಂದಿದ್ದು, 1200 nits ಬ್ರೈಟ್ನಸ್ ಸಪೋರ್ಟ್ ಹಾಗೆಯೇ ಇದು ಡ್ಯುಯಲ್ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 12 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಮುಂಭಾಗದಲ್ಲಿ 12 ಮೆಗಾ ಪಿಕ್ಸಲ್‌ನ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.
128 GB, 256 GB ಮತ್ತು 512 GB ಸ್ಟೋರೇಜ್ ಆಯ್ಕೆಗಳನ್ನು ಒಳಗೊಂಡಿದೆ. ಐಫೋನ್ 14 ಗೆ ಹೋಲಿಸಿದರೆ, ಈ ಫೋನ್ ದೀರ್ಘ ಬ್ಯಾಟರಿ ಸಾಮರ್ಥ್ಯ ವನ್ನು ಪಡೆದಿದೆ. ಇದು ಐಫೋನ್ 14 ಪ್ಲಸ್ ಫೋನ್ ಸಹ 5G ಕನೆಕ್ಟಿವಿಟಿ ಸೌಲಭ್ಯ ಪಡೆದಿದೆ. ಇದು ಇ-ಸಿಮ್ ಸಪೋರ್ಟ್ ಪಡೆದಿದೆ.


Click it and Unblock the Notifications








