ವಿಶ್ವ ಛಾಯಾಗ್ರಹಣ ದಿನ: ಈ ಸ್ಮಾರ್ಟ್‌ಫೋನ್‌ಗಳು ಫೋಟೋಗ್ರಫಿಗೆ ಸೂಕ್ತ ಎನಿಸಲಿವೆ!

|

ಇಂದಿನ ದಿನಗಳಲ್ಲಿ ಫೋಟೋಗ್ರಫಿಯ ಕಲ್ಪನೆ ಸಾಕಷ್ಟು ಬದಲಾಗಿದೆ. ಫೋಟೋಗ್ರಫಿಯ ಬಗ್ಗೆ ಎಲ್ಲರಿಗೂ ಆಸಕ್ತಿ ಇದ್ದೆ ಇರುತ್ತದೆ. ಇದೇ ಕಾರಣಕ್ಕೆ ಕ್ಯಾಮೆರಾಗಳನ್ನು ಖರೀದಿಸಬೇಕು ಅಂದೆನಿಲ್ಲ. ಇಂದು ಅತ್ಯುತ್ತಮ ಫೋಟೋಗಳನ್ನು ಸೆರೆಹಿಡಿಯುವುದಕ್ಕೆ ಸಾಕಷ್ಟು ಸ್ಮಾರ್ಟ್‌ಫೋನ್‌ ಕ್ಯಾಮೆರಾಗಳು ಕೂಡ ಸಮರ್ಥವಾಗಿವೆ. ಇದೇ ಕಾರಣಕ್ಕೆ ಹೆಚ್ಚಿನ ಜನರು ತಮ್ಮ ಸ್ಮಾರ್ಟ್‌ಫೋನ್‌ಗಳಲ್ಲಿಯೇ ಬೆಸ್ಟ್‌ ಫೋಟೋಗಳನ್ನು ಕ್ಲಿಕ್‌ ಮಾಡುವುದಕ್ಕೆ ಪ್ರಯತ್ನ ನಡೆಸುತ್ತಾರೆ.

ಕ್ಯಾಮೆರಾ

ಹೌದು, ಇಂದಿನ ಯುವಜನತೆ ತಾವು ಎಲ್ಲಿಯೇ ಹೋದರೂ ಕೂಡ ಸುಂದರ ತಾಣಗಳನ್ನು ತಮ್ಮ ಕ್ಯಾಮೆರಾಗಳಲ್ಲಿ ಸೆರೆಹಿಡಿಯುವ ಪ್ರಯತ್ನ ನಡೆಸುತ್ತಾರೆ. ಇದಕ್ಕೆ ತಕ್ಕಂತೆ ಇಂದಿನ ಸ್ಮಾರ್ಟ್‌ಫೋನ್‌ಗಳಲ್ಲಿ ಸೂಕ್ತವಾದ ಕ್ಯಾಮೆರಾ ಸೆಟ್‌ಅಪ್‌ ಅನ್ನು ನೀಡಲಾಗ್ತಿದೆ. ಅದರಲ್ಲೂ ಟ್ರಿಪಲ್‌, ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್‌ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಯಲ್ಲಿ ಸಾಕಷ್ಟು ಸದ್ದು ಮಾಡ್ತಿವೆ. ಹಾಗಾದ್ರೆ ವಿಶ್ವ ಛಾಯಾಗ್ರಹಣ ದಿನವಾದ ಇಂದು ನೀವು ಫೋಟೋಗ್ರಫಿಗಾಗಿ ಬಳಸಬಹುದಾದ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಒನ್‌ಪ್ಲಸ್‌ 9 ಪ್ರೊ 5G

ಒನ್‌ಪ್ಲಸ್‌ 9 ಪ್ರೊ 5G

ಒನ್‌ಪ್ಲಸ್‌ 9 ಪ್ರೊ 5G ಸ್ಮಾರ್ಟ್‌ಫೋನ್‌ ಕೂಡ ಕ್ಯಾಮೆರಾ ಕೇಂದ್ರಿತ ಫೀಚರ್ಸ್‌ಗಳನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮೊದಲನೇ ಕ್ಯಾಮೆರಾ 48 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್‌, ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಸೆನ್ಸಾರ್‌, ನಾಲ್ಕನೇ ಕ್ಯಾಮೆರಾ 2 ಮೆಗಾಫಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಇನ್ನು ರಿಯರ್‌ ಕ್ಯಾಮೆರಾ ಮೂಲಕ 4K 120 fps ವೀಡಿಯೊ ರೆಕಾರ್ಡಿಂಗ್ ಅನ್ನು ಮಾಡಬಹುದಾಗಿದೆ. ಇದಲ್ಲದೆ ಪ್ರೊ ಮೋಡ್‌ನಲ್ಲಿ 12-ಬಿಟ್ RAW, ನೈಟ್‌ಸ್ಕೇಪ್ ವೀಡಿಯೊ 2.0, ಅಲ್ಟ್ರಾಶಾಟ್ HDR, ಟಿಲ್ಟ್-ಶಿಫ್ಟ್ ಮೋಡ್, ವೀಡಿಯೊ HDR, ವೀಡಿಯೊ ಪೋರ್ಟ್ರೇಟ್, ಫೋಕಸ್ ಟ್ರ್ಯಾಕಿಂಗ್ ಫೀಚರ್ಸ್‌ಗಳನ್ನು ನೀಡಲಾಗಿದೆ. ಇದು ಅಮೆಜಾನ್‌ನಲ್ಲಿ 49,999ರೂ. ಬೆಲೆಗೆ ಲಭ್ಯವಿದೆ.

ಶಿಯೋಮಿ 11 T ಪ್ರೊ

ಶಿಯೋಮಿ 11 T ಪ್ರೊ

ಶಿಯೋಮಿ 11T ಪ್ರೊ 5G ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್‌ HM2 ಸೆನ್ಸಾರ್‌ f/1.75 ವೈಡ್-ಆಂಗಲ್ ಲೆನ್ಸ್‌ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಅಲ್ಟ್ರಾ-ವೈಡ್ ಎಫ್/2.2 ಲೆನ್ಸ್‌ 120 ಡಿಗ್ರಿಗಳ ಫೀಲ್ಡ್-ಆಫ್-ವ್ಯೂ (FoV) ಹೊಂದಿದೆ. ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಟೆಲಿಮ್ಯಾಕ್ರೋ ಲೆನ್ಸ್‌ ಅನ್ನು ಹೊಂದಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ನಲ್ಲಿ ಟೈಮ್-ಲ್ಯಾಪ್ಸ್, ಸಿನಿಮಾಟಿಕ್ ಫಿಲ್ಟರ್‌ಗಳು ಮತ್ತು ಆಡಿಯೊ ಜೂಮ್‌ನಂತಹ 50 ಕ್ಕೂ ಹೆಚ್ಚು ಡೈರೆಕ್ಟರ್ ಮೋಡ್‌ಗಳೊಂದಿಗೆ ಪ್ರೀ ಲೋಡ್ ಆಗಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಕೂಡ ಹೊಂದಿದೆ. ಇದು ಅಮೆಜಾನ್‌ನಲ್ಲಿ 35,999ರೂ. ಬೆಲೆಗೆ ದೊರೆಯಲಿದೆ.

ರಿಯಲ್‌ಮಿ GT 2 ಪ್ರೊ

ರಿಯಲ್‌ಮಿ GT 2 ಪ್ರೊ

ನೀವು ಅತ್ಯುತ್ತಮ ಫೋಟೋಗ್ರಫಿಗಾಗಿ ಬಳಸಬಹುದಾದ ಸ್ಮಾರ್ಟ್‌ಫೋನ್‌ಗಳಲ್ಲಿ ರಿಯಲ್‌ಮಿ GT 2 ಪ್ರೊ ಸ್ಮಾರ್ಟ್‌ಫೋನ್‌ ಕೂಡ ಒಂದಾಗಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಸೆನ್ಸಾರ್‌, ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಅನ್ನು ಹೊಂದಿದೆ. ಜೊತೆಗೆ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ರಿಯರ್‌ ಕ್ಯಾಮೆರಾದಲ್ಲಿ 8K ಮತ್ತು ಮುಂಭಾಗದಲ್ಲಿ 1080p ವೀಡಿಯೊ ರೆಕಾರ್ಡಿಂಗ್ ಸಾಮರ್ಥ್ಯವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಅಮೆಜಾನ್‌ನಲ್ಲಿ 49,959ರೂ. ಬೆಲೆಗೆ ಲಭ್ಯವಿದೆ.

ಮೊಟೊ ಎಡ್ಜ್‌ 30 ಪ್ರೊ

ಮೊಟೊ ಎಡ್ಜ್‌ 30 ಪ್ರೊ

ಫೋಟೋಗ್ರಫಿ ಪ್ರಿಯರು ಖರೀದಿಸಬಹುದಾದ ಬೆಸ್ಟ್‌ ಸ್ಮಾರ್ಟ್‌ಫೋನ್‌ಗಳಲ್ಲಿ ಮೊಟೊ ಎಡ್ಜ್‌ 30ಪ್ರೊ ಕೂಡ ಒಂದಾಗಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 50ಮೆಗಾಪಿಕ್ಸೆಲ್‌ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಡೆಪ್ತ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 60 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಡ್ಯುಯಲ್-ಟೋನ್ ಫ್ಲ್ಯಾಷ್, HDR, ಪನೋರಮಾ ಆಯ್ಕೆಗಳನ್ನು ನೀಡಲಾಗಿದೆ. ಅಲ್ಲದೆ 8K 30fps ವೀಡಿಯೊ ರೆಕಾರ್ಡಿಂಗ್‌ ಮಾಡಬಹುದಾಗಿದೆ. ಇದು ಫ್ಲಿಪ್‌ಕಾರ್ಟ್‌ನಲ್ಲಿ 49,999ರೂ. ಬೆಲೆಗೆ ಲಭ್ಯವಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S21 FE

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S21 FE

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S21 FE ಸ್ಮಾರ್ಟ್‌ಫೋನ್‌ ಫೋಟೋಗ್ರಫಿಗೆ ಪೂರಕವಾದ ಕ್ಯಾಮೆರಾ ಫೀಚರ್ಸ್‌ಗಳನ್ನು ಒಳಗೊಂಡಿದೆ. ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 12MP ಸೆನ್ಸಾರ್‌ ಸಾಮರ್ಥ್ಯವನ್ನು ಹೊಂದಿದೆ. ಎರಡನೇ ಕ್ಯಾಮೆರಾ 12MP ಅಲ್ಟ್ರಾವೈಡ್‌ ಸೆನ್ಸಾರ್‌ ಅನ್ನು ಹೊಂದಿದೆ. ಇನ್ನು ಮೂರನೇ ಕ್ಯಾಮೆರಾ 8MP 3x ಟೆಲಿಫೋಟೋ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 32MP ಫಿಕ್ಸೆಡ್ ಫೋಕಸ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ಕ್ಯಾಮೆರಾ ಬಂಪ್ ಅನ್ನು ಮ್ಯಾಟ್-ಫಿನಿಶ್ ಬ್ಯಾಕ್ ಪ್ಯಾನೆಲ್‌ಗೆ ಸಂಯೋಜಿಸಲಾಗಿದೆ. ಫ್ಲ್ಯಾಶ್ ಮಾಡ್ಯೂಲ್ ಅನ್ನು ಕ್ಯಾಮರಾ ಲೈಟ್‌ ಹೊರಗೆ ಇರಿಸಲಾಗಿದೆ. ಇದರಲ್ಲಿ ವರ್ಧಿತ ರಾತ್ರಿ ಮೋಡ್, 30X ಸ್ಪೇಸ್ ಜೂಮ್ ಮತ್ತು ಡ್ಯುಯಲ್-ರೆಕಾರ್ಡಿಂಗ್ ಮೋಡ್ ಎಲ್ಲವನ್ನೂ ಕ್ಯಾಮರಾ ಸಾಫ್ಟ್‌ವೇರ್‌ನಲ್ಲಿ ಸೇರಿಸಲಾಗಿದೆ. ಇದು ಅಮೆಜಾನ್‌ನಲ್ಲಿ 49,999ರೂ. ಬೆಲೆಗೆ ಲಭ್ಯವಿದೆ.

Best Mobiles in India

English summary
World Photography Day 2022: best camera smartphones under Rs 50,000 in India

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X