ಶೀಘ್ರದಲ್ಲೇ ಬರಲಿದೆ ವಿಶ್ವದ ಮೊದಲ ಅಂಡರ್-ಡಿಸ್ಪ್ಲೇ ಕ್ಯಾಮೆರಾ ಸ್ಮಾರ್ಟ್‌ಫೋನ್‌!

|

ಟೆಕ್‌ ವಲಯದಲ್ಲಿ ಸಾಕಷ್ಟು ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳು ಲಭ್ಯವಿವೆ. ಟೆಕ್ನಾಲಜಿ ಆಪ್ಡೇಟ್‌ ಆದಂತೆ ಭಿನ್ನ ಮಾದರಿಯ ಸ್ಮಾರ್ಟ್‌ಫೊನ್‌ಗಳು ಗ್ರಾಹಕರ ಕೈ ಸೇರುತ್ತಿವೆ. ಸದ್ಯ ಇದೀಗ ಟೆಕ್‌ ವಲಯದಲ್ಲಿ ಸಾಕಷ್ಟು ದಿನದಿಂದ ಚರ್ಚೆಯಲ್ಲಿದ್ದ ಇನ್‌ಡಿಸ್ಪ್ಲೇ ಕ್ಯಾಮೆರಾ ಸ್ಮಾರ್ಟ್‌ಫೋನ್‌ ಮಾರುಕಟ್ಟೆಗೆ ಎಂಟ್ರಿ ನೀಡಲು ಸಿದ್ದವಾಗಿದೆ. ಇಂತಹದೊಂದು ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡುತ್ತಿರೋದು ಜನಪ್ರಿಯ ZTE ಸಂಸ್ಥೆಯಾಗಿದ್ದು, ಈ ಸ್ಮಾರ್ಟ್‌ಫೋನ್‌ ಅನ್ನು ZTE ಅಕ್ಸಾನ್‌20 5G ಎಂದು ಹೆಸರಿಸಲಾಗಿದೆ.

ZTE ಅಕ್ಸಾನ್‌20 5G ಸ್ಮಾರ್ಟ್‌ಫೋನ್

ಹೌದು, ZTE ಕಂಪೆನಿ ZTE ಅಕ್ಸಾನ್‌20 5G ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಲು ಸಿದ್ದತೆ ನಡೆಸಿದೆ.ಇನ್ನು ಈ ಸ್ಮಾರ್ಟ್‌ಫೋನ್‌ ಇನ್-ಡಿಸ್ಪ್ಲೇ ಕ್ಯಾಮೆರಾವನ್ನು ಹೊಂದಿರುವ ವಿಶ್ವದ ಮೊದಲ ಸಾಮೂಹಿಕ ಉತ್ಪಾದನೆಯ ಸ್ಮಾರ್ಟ್‌ಫೋನ್‌ ಇದಾಗಿದೆ. ಅಲ್ಲದೆ ಆಕ್ಸನ್ 20 5G ವಿಶ್ವದ ಮೊದಲ ಅಂಡರ್-ಡಿಸ್ಪ್ಲೇ ಕ್ಯಾಮೆರಾ ಸ್ಮಾರ್ಟ್‌ಫೋನ್‌ ಆಗಿರುತ್ತದೆ ಎಂದು ಕಂಪೆನಿ ತನ್ನ ಟ್ವಿಟ್ಟರ್ ಪೋಸ್ಟ್ನಲ್ಲಿ ಉಲ್ಲೇಖಿಸಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ ಇದೇ ಸೆಪ್ಟೆಂಬರ್ 1 ರಂದು ಬಿಡುಗಡೆ ಆಗಲಿದೆ ಎನ್ನಲಾಗ್ತಿದೆ. ಇನ್ನುಳಿದಂತೆ ಲಬ್ಯ ಮಾಹಿತಿಯ ಪ್ರಕಾರ ಈ ಸ್ಮಾರ್ಟ್‌ಫೋನ್‌ ವಿಶೇಷತೆಯೇನು ಅನ್ನೊದನ್ನ ತಿಳಿದುಕೊಳ್ಳೋಣ ಬನ್ನಿರಿ.

ಕ್ಯಾಮೆರಾ

ಇನ್ನು ವಿಶ್ವದ ಮೊದಲ ಅಂಡರ್-ಡಿಸ್ಪ್ಲೇ ಕ್ಯಾಮೆರಾ ಸ್ಮಾರ್ಟ್‌ಫೋನ್‌ ಆಗಿರುವ ZTE ಅಕ್ಸಾನ್‌20 5G ಸ್ಮಾರ್ಟ್‌ಫೋನ್‌ ಉತ್ತಮ ಡಿಸ್‌ಪ್ಲೇ ವಿನ್ಯಾಸ ಹೊಂದಿರಲಿದೆ ಎನ್ನಲಾಗ್ತಿದೆ. ಅದರಲ್ಲೂ ಈ ಸ್ಮಾರ್ಟ್‌ಫೋನ್‌ 1,080x2,460 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.92-ಇಂಚಿನ ಡಿಸ್‌ಪ್ಲೇಯನ್ನು ಹೊಂದಿರುವ ಸಾಧ್ಯತೆ ಇದೆ. ಇದಲ್ಲದೆ ಈ ಡಿಸ್‌ಪ್ಲೇ OLED ಡಿಸ್ಪ್ಲೇ ವಿನ್ಯಾಸವನ್ನು ಹೊಂದಿರಲಿದೆ ಎನ್ನಲಾಗ್ತಿದೆ. ಇದು ಇನ್‌ ಡಿಸ್‌ಪ್ಲೇ ಕ್ಯಾಮೆರಾ ಹೊಂದಿರುವುದರಿಂದ ಉತ್ತಮ ವಿಡಿಯೋ ಕರೆಗಳಿಗೆ ಬೆಂಬಲಿಸುವ ಡಿಸ್‌ಪ್ಲೇ ಮಾದರಿ ಹೊಂದಿರಲಿದೆ ಎನ್ನಲಾಗ್ತಿದೆ.

ಸ್ಮಾರ್ಟ್‌ಫೋನ್‌

ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಸಿಪಿಯು ಪ್ರೊಸೆಸರ್‌ ಅನ್ನು ಒಳಗೊಂಡಿರುವ ಸಾದ್ಯತೆ ಇದೆ. ಅಲ್ಲದೆ ಇದು RAM ಸಾಮರ್ಥ್ಯಗಳ ಆಧಾರದ ಮೇಲೆ ಮೂರು ರೂಪಾಂತರಗಳು ಹೊಂದಿರಬಹುದು ಎಂದು ಅಂದಾಜಿಸಲಾಗಿದ್ದು, ಅದರಲ್ಲಿ 6GBRAM+64GB, 8GB RAM+128GB, 12GB RAM ಮತ್ತು 256GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನು ಹೊಂದಿರಲಿದೆ ಎನ್ನಲಾಗ್ತಿದೆ.

ಕ್ಯಾಮೆರಾ

ಅಲ್ಲದೆ, ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿರಲಿದೆ ಎನ್ನಲಾಗ್ತಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8-ಮೆಗಾಪಿಕ್ಸೆಲ್ ಸೆನ್ಸಾರ್‌,ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌, ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿರಬಹುದು ಎಂದು ಹೇಳಲಾಗ್ತಿದೆ. ಇನ್ನು 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದ್ದು, ಇದು ಡಿಸ್‌ಪ್ಲೇ ಮೇಲೆ ಇರುವುದು ಇದರ ವಿಶೇಷತೆ ಆಗಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ 4120mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ.

Best Mobiles in India

English summary
It has even mentioned it on the Twitter post that Axon 20 5G will be the “World's First Under-display Camera Smartphone.” The pricing and availability will only be known once the device is out on September 1.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X