Home
ಸುದ್ದಿಜಾಲ

ಸದ್ಯದಲ್ಲೇ ಎಂಟ್ರಿ ಕೊಡಲಿದೆ ಶಿಯೋಮಿ ಮಿ 11 ಲೈಟ್ 5G NE ಸ್ಮಾರ್ಟ್‌ಫೋನ್!

ಜನಪ್ರಿಯ ಶಿಯೋಮಿ ಕಂಪೆನಿ ಬಜೆಟ್‌ ದರದ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಭಾರತದ ಮಾರುಕಟ್ಟೆಯಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದ್ದು, ಇತ್ತೀಚಿಗಷ್ಟೆ ಶಿಯೋಮಿ ಮಿ 11 ಲೈಟ್ ಪರಿಚಯಿಸಿ ಗ್ರಾಹಕರ ಗಮನ ಸೆಳೆದಿದೆ. ಅದರ ಮುಂದುವರಿದ ಭಾಗವಾಗಿ ಸಂಸ್ಥೆಯು ಇದೀಗ ನೂತನವಾಗಿ ಶಿಯೋಮಿ ಮಿ 11 ಲೈಟ್ 5G NE ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಲು ಸಕಲ ತಯಾರಿ ನಡೆಸಿದೆ.

ಸದ್ಯದಲ್ಲೇ ಎಂಟ್ರಿ ಕೊಡಲಿದೆ ಶಿಯೋಮಿ ಮಿ 11 ಲೈಟ್ 5G NE ಸ್ಮಾರ್ಟ್‌ಫೋನ್!

ಹೌದು, ಶಿಯೋಮಿ ಕಂಪನಿಯು ಸದ್ಯದಲ್ಲೇ ಹೊಸದಾಗಿ ಮಿ 11 ಲೈಟ್ 5G NE ಸ್ಮಾರ್ಟ್‌ಫೋನ್‌ ಮಾಡಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 5G ಸಪೋರ್ಟ್‌ ಪಡೆದಿರಲಿದ್ದು, ಟ್ರಿಪಲ್ ಕ್ಯಾಮೆರಾ ರಚನೆಯನ್ನು ಒಳಗೊಂಡಿರಲಿದೆ. ಹಿಂಬದಿಯ ಮುಖ್ಯ ಕ್ಯಾಮೆರಾವು 64 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿ ಇರಲಿದೆ. ಜೊತೆಗೆ ಸೆಲ್ಫಿ ಪ್ರಿಯರನ್ನು ಸೆಳೆಯಲು ಮುಂಬದಿಯಲ್ಲಿ 20 ಮೆಗಾ ಪಿಕ್ಸಲ್‌ ಸೆನ್ಸಾರ್‌ ಕ್ಯಾಮೆರಾ ನೀಡುವ ಸಾಧ್ಯತೆಗಳಿವೆ. ಹಾಗೆಯೇ ಈ ಫೋನ್ ಬ್ಲ್ಯಾಕ್ ಬಣ್ಣದ ಆಯ್ಕೆಯನ್ನು ಹೊಂದಿರಲಿದೆ. ಈ ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 780G SoC ಪ್ರೊಸೆಸರ್ ಬಲದಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನುಳಿದಂತೆ ಮಿ 11 ಲೈಟ್ 5G NE ಸ್ಮಾರ್ಟ್‌ಫೋನ್‌ ಯಾವೆಲ್ಲ ಫೀಚರ್ಸ್‌ ಇರಲಿವೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಸದ್ಯದಲ್ಲೇ ಎಂಟ್ರಿ ಕೊಡಲಿದೆ ಶಿಯೋಮಿ ಮಿ 11 ಲೈಟ್ 5G NE ಸ್ಮಾರ್ಟ್‌ಫೋನ್!

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಶಿಯೋಮಿ ಮಿ 11 ಲೈಟ್ 5G NE ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.55-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿರಲಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಒಳಗೊಂಡಿರಲಿದೆ ಎಂದು ನಿರೀಕ್ಷಿಸಲಾಗಿದೆ. ಜೊತೆಗೆ 90Hz ರಿಫ್ರೆಶ್ ರೇಟ್‌ ಹೊಂದಿರಲಿದೆ ಎನ್ನಲಾಗಿದೆ.

ಪ್ರೊಸೆಸರ್‌ ಬಲ ಯಾವುದು?
ಶಿಯೋಮಿ ಮಿ 11 ಲೈಟ್ 5G NE ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 780G SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದಿರುವ ಸಾಧ್ಯತೆಗಳಿವೆ. ಹಾಗೆಯೇ ಇದು ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ ಎನ್ನಲಾಗಿದೆ. ಹಾಗೆಯೇ 6GB RAM ಮತ್ತು 128GB ಹಾಗೂ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ವೇರಿಯೆಂಟ್‌ ಆಯ್ಕೆಯನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ.

ಸದ್ಯದಲ್ಲೇ ಎಂಟ್ರಿ ಕೊಡಲಿದೆ ಶಿಯೋಮಿ ಮಿ 11 ಲೈಟ್ 5G NE ಸ್ಮಾರ್ಟ್‌ಫೋನ್!

ಕ್ಯಾಮೆರಾ ವಿಶೇಷ ಏನಿರಲಿದೆ
ಶಿಯೋಮಿ ಮಿ 11 ಲೈಟ್ 5G NE ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಅಪ್ ಅನ್ನು ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಇರುವ ನಿರೀಕ್ಷೆಗಳಿವೆ. ಇದಲ್ಲದೆ 20 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿರಲಿದೆ ಎಂದು ಹೇಳಲಾಗಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್‌
ಶಿಯೋಮಿ ಮಿ 11 ಲೈಟ್ 5G NE ಸ್ಮಾರ್ಟ್‌ಫೋನ್‌ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ ಎನ್ನಲಾಗಿದೆ. ಜೊತೆಗೆ ಈ ಫೋನ್ ಫಾಸ್ಟ್‌ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಬ್ಲೂಟೂತ್‌, ಯುಎಸ್‌ಬಿ ಟೈಪ್‌ ಸಿ 2ಯನ್ನು ಬೆಂಬಲಿಸಲಿದೆ ಎನ್ನಲಾಗಿದೆ.

ರೆಡ್ಮಿ ನೋಟ್ 10 ಸ್ಮಾರ್ಟ್‌ಫೋನ್‌ ಫೀಚರ್ಸ್‌
ರೆಡ್ಮಿ ನೋಟ್ 10 ಸ್ಮಾರ್ಟ್‌ಫೋನ್‌ 1080x2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.43-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 20:9 ರಚನೆಯ ಅನುಪಾತವನ್ನು ಹೊಂದಿದ್ದು, ಸೂಪರ್ ಅಮೋಲೆಡ್ ಡಿಸ್‌ಪ್ಲೇ ಇದಾಗಿದೆ. ಜೊತೆಗೆ ಇದು 100% ಡಿಸಿಐ-ಪಿ 3 ಅನ್ನು ಹೊಂದಿದೆ. ವಿಶಾಲ ಬಣ್ಣದ ಹರವು, ಮತ್ತು ಗರಿಷ್ಠ ಬ್ರೈಟ್‌ನೆಸ್‌ 1100 ನಿಟ್‌ಗಳವರೆಗೆ ಇರಲಿದೆ. ಇನ್ನು ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್‌ ಅನ್ನು ಹೊಂದಿದೆ.

ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 678 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ MIUI 12 ರೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನುಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್‌ ಮೂಲಕ 512GB ವರೆಗೆ ಸ್ಟೋರೇಜ್‌ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

Best Mobiles in India

English summary
Xiaomi 11 Lite 5G NE Launching In India This Month: Expected Specifications.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+