ಶಿಯೋಮಿ 11 ಲೈಟ್ 5G NE ಸ್ಮಾರ್ಟ್‌ಫೋನ್‌ ಬಿಡುಗಡೆಗೆ ಮುಹೂರ್ತ ಫಿಕ್ಸ್‌!

|

ಪ್ರತಿಷ್ಠಿತ ಮೊಬೈಲ್ ತಯಾರಿಕಾ ಸಂಸ್ಥೆಗಳಲ್ಲಿ ಒಂದಾದ ಶಿಯೋಮಿ ಕಂಪನಿಯು ಬಜೆಟ್‌ ದರದ ಫೋನ್‌ಗಳ ಜೊತೆಗೆ ಹೈ ಎಂಡ್‌ ಮಾದರಿಯ ಫೋನ್‌ಗಳನ್ನು ಪರಿಚಯಿಸಿದೆ. ಅದೇ ಹಾದಿಯಲ್ಲಿ ಮುನ್ನಡೆದಿರುವ ಕಂಪನಿಯು ನೂತನವಾಗಿ ಮಿ 11 ಲೈಟ್ 5G NE ಫೋನ್ ಬಿಡುಗಡೆ ಮಾಡುವ ಸೂಚನೆ ಹೊರಹಾಕಿದೆ. ಸಂಸ್ಥೆಯು ಇದೇ ಸೆ. 15 ರಂದು ಶಿಯೋಮಿ 11T ಮತ್ತು ಶಿಯೋಮಿ 11T ಪ್ರೊ ಫೋನ್‌ಗಳ ಜೊತೆಗೆ ಮಿ 11 ಲೈಟ್ 5G NE ಫೋನ್‌ ಅನ್ನು ಲಾಂಚ್ ಮಾಡಲಿದೆ ಎನ್ನಲಾಗಿದೆ.

ಜೊತೆಗೆ

ಶಿಯೋಮಿ ಕಂಪನಿಯು ಅಧಿಕೃತವಾಗಿ ಬಿಡುಗಡೆ ಮಾಡಿರುವ ಟೀಸರ್‌ನಲ್ಲಿ ಕಂಪನಿಯ ಬಹುನಿರೀಕ್ಷಿತ 'ಮಿ 11 ಲೈಟ್ 5G NE' ಸ್ಮಾರ್ಟ್‌ಫೋನ್‌ ಇದೇ ಸೆಪ್ಟೆಂಬರ್ 15 ರಂದು ಬಿಡುಗಡೆ ಮಾಡಲು ಸೂಚನೆಯನ್ನು ಹೊರಹಾಕಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 5G ಸಪೋರ್ಟ್‌ ಪಡೆದಿರಲಿದ್ದು, ಟ್ರಿಪಲ್ ಕ್ಯಾಮೆರಾ ರಚನೆಯನ್ನು ಒಳಗೊಂಡಿರಲಿದೆ. ಹಿಂಬದಿಯ ಮುಖ್ಯ ಕ್ಯಾಮೆರಾವು 64 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿ ಇರಲಿದೆ. ಜೊತೆಗೆ ಸೆಲ್ಫಿ ಪ್ರಿಯರನ್ನು ಸೆಳೆಯಲು ಮುಂಬದಿಯಲ್ಲಿ 20 ಮೆಗಾ ಪಿಕ್ಸಲ್‌ ಸೆನ್ಸಾರ್‌ ಕ್ಯಾಮೆರಾ ನೀಡುವ ಸಾಧ್ಯತೆಗಳಿವೆ.

ಇನ್ನುಳಿದಂತೆ

ಹಾಗೆಯೇ ಈ ಫೋನ್ ಬ್ಲ್ಯಾಕ್ ಬಣ್ಣದ ಆಯ್ಕೆಯನ್ನು ಹೊಂದಿರಲಿದೆ. ಈ ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 780G SoC ಪ್ರೊಸೆಸರ್ ಬಲದಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನುಳಿದಂತೆ ಮಿ 11 ಲೈಟ್ 5G NE ಸ್ಮಾರ್ಟ್‌ಫೋನ್‌ ಯಾವೆಲ್ಲ ಫೀಚರ್ಸ್‌ ಇರಲಿವೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಶಿಯೋಮಿ ಮಿ 11 ಲೈಟ್ 5G NE ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.55-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿರಲಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಒಳಗೊಂಡಿರಲಿದೆ ಎಂದು ನಿರೀಕ್ಷಿಸಲಾಗಿದೆ. ಜೊತೆಗೆ 90Hz ರಿಫ್ರೆಶ್ ರೇಟ್‌ ಹೊಂದಿರಲಿದೆ ಎನ್ನಲಾಗಿದೆ.

ಪ್ರೊಸೆಸರ್‌ ಬಲ ಯಾವುದು?

ಪ್ರೊಸೆಸರ್‌ ಬಲ ಯಾವುದು?

ಶಿಯೋಮಿ ಮಿ 11 ಲೈಟ್ 5G NE ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 780G SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದಿರುವ ಸಾಧ್ಯತೆಗಳಿವೆ. ಹಾಗೆಯೇ ಇದು ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ ಎನ್ನಲಾಗಿದೆ. ಹಾಗೆಯೇ 6GB RAM ಮತ್ತು 128GB ಹಾಗೂ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ವೇರಿಯೆಂಟ್‌ ಆಯ್ಕೆಯನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ.

ಕ್ಯಾಮೆರಾ ವಿಶೇಷ ಏನಿರಲಿದೆ

ಕ್ಯಾಮೆರಾ ವಿಶೇಷ ಏನಿರಲಿದೆ

ಶಿಯೋಮಿ ಮಿ 11 ಲೈಟ್ 5G NE ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಅಪ್ ಅನ್ನು ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಇರುವ ನಿರೀಕ್ಷೆಗಳಿವೆ. ಇದಲ್ಲದೆ 20 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿರಲಿದೆ ಎಂದು ಹೇಳಲಾಗಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್‌

ಬ್ಯಾಟರಿ ಮತ್ತು ಇತರೆ ಫೀಚರ್ಸ್‌

ಶಿಯೋಮಿ ಮಿ 11 ಲೈಟ್ 5G NE ಸ್ಮಾರ್ಟ್‌ಫೋನ್‌ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ ಎನ್ನಲಾಗಿದೆ. ಜೊತೆಗೆ ಈ ಫೋನ್ ಫಾಸ್ಟ್‌ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಬ್ಲೂಟೂತ್‌, ಯುಎಸ್‌ಬಿ ಟೈಪ್‌ ಸಿ 2ಯನ್ನು ಬೆಂಬಲಿಸಲಿದೆ ಎನ್ನಲಾಗಿದೆ.

ಶಿಯೋಮಿ 11T ಮತ್ತು ಶಿಯೋಮಿ 11T ಪ್ರೊ

ಶಿಯೋಮಿ 11T ಮತ್ತು ಶಿಯೋಮಿ 11T ಪ್ರೊ

ಅದೇ ರೀತಿ ಶಿಯೋಮಿ 11T ಮತ್ತು ಶಿಯೋಮಿ 11T ಪ್ರೊ ಈ ಎರಡು ಫೋನ್‌ಗಳು ಸೆಲೆಸ್ಟಿಯಲ್ ಬ್ಲೂ, ಮೆಟೊರೈಟ್ ಗ್ರೇ, ಮತ್ತು ಮೂನ್‌ಲೈಟ್ ವೈಟ್ ಬಣ್ಣಗಳಲ್ಲಿ ಆಯ್ಕೆ ಹೊಂದಿರಲಿದೆ ಎಂದು ಲೀಕ್ ಮಾಹಿತಿಗಳಿಂದ ತಿಳಿದುಬಂದಿದೆ. ಇನ್ನು ನೋಡಲು ಎರಡು ಒಂದೇ ರೀತಿಯ ವಿನ್ಯಾಸವನ್ನು ಹೊಂದಿರುವಂತೆ ಕಾಣಿಸುವಂತಿದ್ದು, ಎರಡೂ ಫೋನ್‌ಗಳು ಹೋಲ್-ಪಂಚ್ ಡಿಸ್‌ಪ್ಲೇ ವಿನ್ಯಾಸದೊಂದಿಗೆ ಬರುವ ಸಾಧ್ಯತೆಗಳಿವೆ. ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಒಳಗೊಂಡಿವೆ ಎಂದು ರೆಂಡರ್‌ಗಳು ಸೂಚಿಸುತ್ತವೆ. ಹಾಗೆಯೇ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಹೊಂದಿರು ನಿರೀಕ್ಷೆಗಳಿವೆ.

Best Mobiles in India

English summary
Xiaomi 11 Lite 5G NE Teased To Launch On September 15.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X