ಶಿಯೋಮಿ ಮಿ 11 ಲೈಟ್ NE 5G ಬೆಲೆಯಲ್ಲಿ ಭರ್ಜರಿ ಇಳಿಕೆ!..ಇದು ಆಕರ್ಷಕ 5G ಫೋನ್!
ಶಿಯೋಮಿ ಸಂಸ್ಥೆಯು ತನ್ನ ಜನಪ್ರಿಯ 5G ಫೋನ್‌ಗಳಲ್ಲಿ ಒಂದಾದ ಶಿಯೋಮಿ ಮಿ 11 ಲೈಟ್ NE 5G ಫೋನ್ ಸ್ಟೈಲಿಶ್ ಡಿಸೈನ್ ಹಾಗೂ ಆಕರ್ಷಕ ಫೀಚರ್ಸ್‌ಗಳಿಂದ ಈಗಾಗಲೇ ಫೋನ್ ಪ್ರಿಯರನ್ನು ಸೆಳೆದಿದೆ. ಈ ಫೋನ್ ಇದೀಗ ಭರ್ಜರಿ ಡಿಸ್ಕೌಂಟ್ ಬೆಲೆಯಲ್ಲಿ ಕಾಣಿಸಿಕೊಂಡಿದ್ದು, ಗ್ರಾಹಕರಿಗೆ ಭಾರೀ ಖುಷಿ ನೀಡಿದೆ. ಶಿಯೋಮಿ ಮಿ 11 ಲೈಟ್ NE 5G ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 780G SoC ಪ್ರೊಸೆಸರ್ ನಲ್ಲಿ ಕಾರ್ಯ ನಿರ್ವಹಿಸುತ್ತದೆ.

ಹೌದು, ಜನಪ್ರಿಯ ಅಮೆಜಾನ್ ಪ್ಲಾಟ್‌ಫಾರ್ಮ್ ತಾಣದಲ್ಲಿ ಶಿಯೋಮಿ ಮಿ 11 ಲೈಟ್ NE 5G (8GB RAM, 128GB) ವೇರಿಯಂಟ್ ಸ್ಮಾರ್ಟ್‌ಫೋನ್ 25,999ರೂ. ಆಫರ್ ಬೆಲೆಯಲ್ಲಿ ಕಾಣಿಸಿಕೊಂಡಿದ್ದು, ಇದರ ಬೆಲೆಯ 33,999ರೂ. ಆಗಿತ್ತು. ಇದರೊಂದಿಗೆ ಐಸಿಐಸಿಐ ಬ್ಯಾಂಕ್‌ನಿಂದಲೂ ಕೊಡುಗೆ ಲಭ್ಯವಿದ್ದು, ಜೊತೆಗೆ ಆಕರ್ಷಕ ಎಕ್ಸ್‌ಚೇಂಜ್ ರಿಯಾಯಿತಿ ಕೊಡುಗೆ ಸಹ ಪಡೆದಿದೆ. ಹಾಗಾದರೇ ಶಿಯೋಮಿ ಮಿ 11 ಲೈಟ್ NE 5G ಫೋನಿನ ಇತರೆ ಫೀಚರ್ಸ್‌ಗಳು ಯಾವುವು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಶಿಯೋಮಿ ಮಿ 11 ಲೈಟ್ NE 5G ಸ್ಮಾರ್ಟ್‌ಫೋನ್ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.55 ಇಂಚಿನ ಫುಲ್ ಹೆಚ್‌ಡಿ + OLED ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಒಳಗೊಂಡಿದ್ದು ಜೊತೆಗೆ 90Hz ರಿಫ್ರೆಶ್ ರೇಟ್ ಹೊಂದಿದೆ. ಡಿಸ್‌ಪ್ಲೇಯು HDR10+ ಸಪೋರ್ಟ್ ಸಹ ಒಳಗೊಂಡಿದೆ.

ಪ್ರೊಸೆಸರ್ ಪವರ್ ಯಾವುದು
ಶಿಯೋಮಿ ಮಿ 11 ಲೈಟ್ NE 5G ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 780G SoC ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಬೆಂಬಲವನ್ನು ಒಳಗೊಂಡಿದೆ. ಹಾಗೆಯೇ 6GB RAM ಮತ್ತು 128GB ಹಾಗೂ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ವೇರಿಯೆಂಟ್ ಆಯ್ಕೆಯನ್ನು ಹೊಂದಿದೆ. ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿ ವಿಸ್ತರಿಸುವ ಅವಾಕಾಶ ನೀಡಿದೆ.

ಟ್ರಿಪಲ್ ಕ್ಯಾಮೆರಾ ಸೆಟಅಪ್ ರಚನೆ
ಶಿಯೋಮಿ ಮಿ 11 ಲೈಟ್ NE 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿವೆ. ಇದಲ್ಲದೆ 20 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಈ ಫೋನ್ ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್
ಶಿಯೋಮಿ ಮಿ 11 ಲೈಟ್ NE 5G ಸ್ಮಾರ್ಟ್‌ಫೋನ್ 4,250 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದಕ್ಕೆ ಪೂರಕವಾಗಿ ಈ ಫೋನ್ 33W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಬ್ಲೂಟೂತ್, ಯುಎಸ್‌ಬಿ ಟೈಪ್ ಸಿ 2 ಯನ್ನು ಬೆಂಬಲಿಸುತ್ತದೆ. ಹಾಗೆಯೇ ಡಾಲ್ಬಿ ವಿಜನ್, ಸಪೋರ್ಟ್ ಒಳಗೊಂಡಿದೆ. ಈ ಫೋನ್ 160.53x75.73x6.81mm ಸುತ್ತಳತೆ ಪಡೆದಿದ್ದು, 158 ಗ್ರಾಂ ತೂಕವನ್ನು ಪಡೆದಿದೆ.

ಮೆಮೊರಿ ಮತ್ತು ಕಲರ್ ಆಯ್ಕೆ
ಶಿಯೋಮಿ ಮಿ 11 ಲೈಟ್ NE 5G ಸ್ಮಾರ್ಟ್‌ಫೋನ್ 6GB RAM ಮತ್ತು 128GB ಹಾಗೂ 8GB RAM ಮತ್ತು 128GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ. ಇನ್ನು ಈ ಫೋನ್ ಡೈಮಂಡ್ ಡಾಜಲ್, ಕೋರಲ್, ಬ್ಲ್ಯಾಕ್ ಮತ್ತು ಜಾಜ್ ಬ್ಲೂ ಬಣ್ಣಗಳ ಆಯ್ಕೆಯನ್ನು ಪಡೆದಿದೆ.


Click it and Unblock the Notifications








