ಶಿಯೋಮಿ ಫೋನ್ ಖರೀದಿಸುವ ಗ್ರಾಹಕರಿಗೆ ಗುಡ್‌ನ್ಯೂಸ್!..ಭರ್ಜರಿ ಬೆಲೆ ಇಳಿಕೆ!
ಶಿಯೋಮಿ ಕಂಪನಿಯು ಮಿ ಸರಣಿಯಲ್ಲಿ ಬಿಡುಗಡೆ ಮಾಡಿರುವ ಹಲವು ಫೋನ್‌ಗಳ ಪೈಕಿ ಮಿ 11 ಲೈಟ್ NE 5G ಫೋನ್ ಗಮನ ಸೆಳೆದಿದೆ. ಇದೀಗ ಈ ಸ್ಮಾರ್ಟ್‌ಫೋನ್ ಬೆಲೆಯಲ್ಲಿ ದಿಢೀರ್ ಭರ್ಜರಿ ಇಳಿಕೆ ಆಗಿದ್ದು, ಈ ಸ್ಮಾರ್ಟ್‌ಫೋನ್ ಮತ್ತೆ ಗ್ರಾಹಕರನ್ನು ತನ್ನತ್ತ ಸೆಳೆಯುತ್ತಿದೆ. ಅಂದಹಾಗೆ ಈ ಫೋನ್ ಎರಡು ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ.

ಹೌದು, ಶಿಯೋಮಿ ಕಂಪನಿಯ ಮಿ 11 ಲೈಟ್ NE 5G (Xiaomi 11 Lite NE 5G) ಫೋನ್ ಬೆಲೆಯಲ್ಲಿ 3,000ರೂ. ಇಳಿಕೆ ಆಗಿದ್ದು, ದರ ಕಡಿತವು ಎರಡು ವೇರಿಯಂಟ್ ಮಾದರಿಗಳಿಗೂ ಅನ್ವಯವಾಗಲಿದೆ. ಬೆಲೆ ಇಳಿಕೆಯ ಬಳಿಕ 6GB+128GB ವೇರಿಯಂಟ್ 23,999ರೂ. ದರದಲ್ಲಿ ಕಾಣಿಸಿಕೊಂಡಿದೆ. ಹಾಗೆಯೇ 8GB+128GB ವೇರಿಯಂಟ್ 25,999ರೂ. ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ. ಇನ್ನುಳಿದಂತೆ ಶಿಯೋಮಿಯ ಹೊಸ 'ಮಿ 11 ಲೈಟ್ 5G NE' ಸ್ಮಾರ್ಟ್‌ಫೋನ್ ಯಾವೆಲ್ಲ ಫೀಚರ್ಸ್ ಹೊಂದಿದೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಮಿ 11 ಲೈಟ್ NE 5G : ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಶಿಯೋಮಿ ಮಿ 11 ಲೈಟ್ NE 5G ಸ್ಮಾರ್ಟ್‌ಫೋನ್ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.55 ಇಂಚಿನ ಫುಲ್ ಹೆಚ್‌ಡಿ + OLED ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಒಳಗೊಂಡಿದ್ದು ಜೊತೆಗೆ 90Hz ರಿಫ್ರೆಶ್ ರೇಟ್ ಹೊಂದಿದೆ. ಡಿಸ್‌ಪ್ಲೇಯು HDR10+ ಸಪೋರ್ಟ್ ಸಹ ಒಳಗೊಂಡಿದೆ.
ಮಿ 11 ಲೈಟ್ NE 5G : ಪ್ರೊಸೆಸರ್ ಪವರ್ ಯಾವುದು
ಶಿಯೋಮಿ ಮಿ 11 ಲೈಟ್ NE 5G ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 780G SoC ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಬೆಂಬಲವನ್ನು ಒಳಗೊಂಡಿದೆ. ಹಾಗೆಯೇ 6GB RAM ಮತ್ತು 128GB ಹಾಗೂ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ವೇರಿಯೆಂಟ್ ಆಯ್ಕೆಯನ್ನು ಹೊಂದಿದೆ. ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿ ವಿಸ್ತರಿಸುವ ಅವಾಕಾಶ ನೀಡಿದೆ.

ಮಿ 11 ಲೈಟ್ NE 5G : ಟ್ರಿಪಲ್ ಕ್ಯಾಮೆರಾ ಸೆಟಅಪ್ ರಚನೆ
ಶಿಯೋಮಿ ಮಿ 11 ಲೈಟ್ NE 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿವೆ. ಇದಲ್ಲದೆ 20 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಈ ಫೋನ್ ಒಳಗೊಂಡಿದೆ.
ಮಿ 11 ಲೈಟ್ NE 5G : ಬ್ಯಾಟರಿ ಮತ್ತು ಇತರೆ ಫೀಚರ್ಸ್
ಶಿಯೋಮಿ ಮಿ 11 ಲೈಟ್ NE 5G ಸ್ಮಾರ್ಟ್‌ಫೋನ್ 4,250mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದಕ್ಕೆ ಪೂರಕವಾಗಿ ಈ ಫೋನ್ 33W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಬ್ಲೂಟೂತ್, ಯುಎಸ್‌ಬಿ ಟೈಪ್ ಸಿ 2 ಯನ್ನು ಬೆಂಬಲಿಸುತ್ತದೆ. ಹಾಗೆಯೇ ಡಾಲ್ಬಿ ವಿಜನ್, ಸಪೋರ್ಟ್ ಒಳಗೊಂಡಿದೆ. ಈ ಫೋನ್ 160.53x75.73x6.81mm ಸುತ್ತಳತೆ ಪಡೆದಿದ್ದು, 158 ಗ್ರಾಂ ತೂಕವನ್ನು ಪಡೆದಿದೆ. ಶಿಯೋಮಿ ಮಿ 11 ಲೈಟ್ NE 5G ಸ್ಮಾರ್ಟ್‌ಫೋನ್ ಡೈಮಂಡ್ ಡಾಜಲ್, ಕೋರಲ್, ಬ್ಲ್ಯಾಕ್ ಮತ್ತು ಜಾಜ್ ಬ್ಲೂ ಬಣ್ಣಗಳ ಆಯ್ಕೆಯನ್ನು ಪಡೆದಿದೆ.


Click it and Unblock the Notifications








