Home
ಸುದ್ದಿಜಾಲ

ಶಿಯೋಮಿ 11 ಯೂತ್ ವಿಟಾಲಿಟಿ ಆವೃತ್ತಿ ಸ್ಮಾರ್ಟ್‌ಫೋನ್‌ ಬಿಡುಗಡೆ! ಫೀಚರ್ಸ್‌ ಹೇಗಿದೆ?

ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಶಿಯೋಮಿ ಕಂಪೆನಿಯ ಸ್ಮಾರ್ಟ್‌ಫೋನ್‌ಗಳು ಸಾಕಷ್ಟು ಜನಪ್ರಿಯತೆ ಪಡೆದಿವೆ. ತನ್ನ ಆಕರ್ಷಕ ವಿನ್ಯಾಸ, ಕ್ಯಾಮೆರಾ ಫೀಚರ್ಸ್‌ ಕಾರಣದಿಂದ ಸ್ಮಾರ್ಟ್‌ಫೋನ್‌ ಪ್ರಿಯರ ಹಾಟ್‌ ಫೇವರಿಟ್‌ ಆಗಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿರುವ ಶಿಯೋಮಿ ಕಂಪೆನಿ ಇದೀಗ ಹೊಸ ಸ್ಮಾರ್ಟ್‌ಫೋನ್‌ ಪರಿಚಯಿಸಿದೆ. ಸದ್ಯ ಶಿಯೋಮಿ 11 ಯೂತ್ ವಿಟಾಲಿಟಿ ಆವೃತ್ತಿಯನ್ನು ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಇನ್ನು ಈ ಫೋನ್‌ 64 ಮೆಗಾಪಿಕ್ಸೆಲ್ ಸೆನ್ಸಾರ್ ಮುಖ್ಯ ಕ್ಯಾಮೆರಾ ಹೊಂದಿರುವ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ.

ಶಿಯೋಮಿ

ಹೌದು, ಶಿಯೋಮಿ ಕಂಪೆನಿ ಇತ್ತೀಚಿನ ಆವೃತ್ತಿಯಾಗಿ ಹೊಸ ಶಿಯೋಮಿ 11 ಯೂತ್‌ ವಿಟಾಲಿಟಿ ಆವೃತ್ತಿಯನ್ನು ಪರಿಚಯಿಸಿದೆ. ಇದು ಚೀನಾ ಮಾರುಕಟ್ಟೆಯಲ್ಲಿ ಬಿಡುಗಡೆ ಆಗಿದ್ದು, ಈ ಹೊಸ ಫೋನ್ ಶಿಯೋಮಿ 11 Lite 5G NE ನ ಮರುಬ್ರಾಂಡೆಡ್ ಆವೃತ್ತಿಯಾಗಿದೆ. ಇದಲ್ಲದೆ ಈ ಫೋನ್‌ 6.55 ಇಂಚಿನ ಹೆಚ್‌ಡಿ ಡಿಸ್‌ಪ್ಲೇ ಹೊಂದಿದ್ದು, ಹೋಲ್-ಪಂಚ್ ವಿನ್ಯಾಸವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ವಿಶೇಷತೆ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ವಿಶೇಷ

ಡಿಸ್‌ಪ್ಲೇ ವಿಶೇಷ

ಶಿಯೋಮಿ 11 ಯೂತ್ ವಿಟಾಲಿಟಿ ಆವೃತ್ತಿಯು 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.55 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಇದು 90Hz ರಿಫ್ರೆಶ್ ರೇಟ್‌ ಹೊಂದಿದ್ದು, 240Hz ವರೆಗೆ ಟಚ್‌ ಸ್ಯಾಂಪ್ಲಿಂಗ್‌ ರೇಟ್‌ ಅನ್ನು ಪಡೆದುಕೊಂಡಿದೆ. ಈ ಡಿಸ್‌ಪ್ಲೇ ವೀಡಿಯೋ ವಿಕ್ಷನೆ ಹಾಗೂ ವಿಡಿಯೋ ಕರೆಗಳಿಗೆ ಯೋಗ್ಯವಾದ ಮಾದರಿಯನ್ನು ಪಡೆದಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಇನ್ನು ಈ ಸ್ಮಾರ್ಟ್‌ಫೋನ್‌ ಆಕ್ಟೋ-ಕೋರ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 778G SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ MIUI 12.5 ಜೊತೆಗೆ ಕಾರ್ಯನಿರ್ವಹಿಸುತ್ತದೆ. ಜೊತೆಗೆ 8GB RAM ಮತ್ತು 128GB ಮತ್ತು 256GB ಸ್ಟೋರೇಜ್‌ ವೇರಿಯೆಂಟ್‌ ಆಯ್ಕೆಗಳನ್ನು ಹೊಂದಿದೆ. ಇದು ಮೆಮೊರಿ ಕಾರ್ಡ್‌ ಬೆಂಬಲಿಸುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಕ್ಯಾಮೆರಾ ಫೀಚರ್ಸ್‌

ಕ್ಯಾಮೆರಾ ಫೀಚರ್ಸ್‌

ಶಿಯೋಮಿ 11 ಯೂತ್ ವಿಟಾಲಿಟಿ ಆವೃತ್ತಿಯು ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ f/1.79 ಲೆನ್ಸ್‌ನೊಂದಿಗೆ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಅನ್ನು ಸಹ ಒಳಗೊಂಡಿದೆ. ಇದಲ್ಲದೆ ಸೆಲ್ಫಿಗಳು ಮತ್ತು ವೀಡಿಯೋ ಚಾಟ್‌ಗಳಿಗಾಗಿ 20-ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ f/2.24 ಲೆನ್ಸ್‌ ಅನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಶಿಯೋಮಿ 11 ಯೂತ್ ವಿಟಾಲಿಟಿ ಆವೃತ್ತಿಯು 4,250mAh ಬ್ಯಾಟರಿಯನ್ನು ಒಳಗೊಂಡಿದೆ. ಇದು 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2, GPS/ A-GPS/ NavIC, ಇನ್ಫ್ರಾರೆಡ್ (IR), ಮತ್ತು USB ಟೈಪ್-C ಪೋರ್ಟ್ ಬೆಂಬಲಿಸಲಿದೆ. ಇದಲ್ಲದೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಶಿಯೋಮಿ 11 ಯೂತ್‌ ವಿಟಾಲಿಟಿ ಆವೃತ್ತಿಯು 8GB RAM + 128GB ಸ್ಟೋರೇಜ್ ರೂಪಾಂತರಕ್ಕಾಗಿ CNY 1,999 (ಸುಮಾರು 23,800ರೂ.) ಬೆಲೆ ನಿಗದಿಪಡಿಸಲಾಗಿದೆ. ಹಾಗೆಯೇ 8GB RAM + 256GB ಸ್ಟೋರೇಜ್ ಆಯ್ಕೆಯ ಬೆಲೆ CNY 2,299 (ಸುಮಾರು 27,300ರೂ.) ಹೊಂದಿರುತ್ತದೆ. ಇದು ಕಪ್ಪು, ನೀಲಿ, ಗುಲಾಬಿ ಮತ್ತು ಬಿಳಿ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ. ಜಾಗತಿಕ ಮಾರುಕಟ್ಟೆ ಹಾಗೂ ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆ ಆಗುವ ಸಾಧ್ಯತೆ ಇದೆ.

Best Mobiles in India

English summary
Xiaomi 11 Youth Vitality Edition was launched on Thursday as the latest model in the Xiaomi 11 series.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+