ಭಾರತದಲ್ಲಿ ಅತಿ ವೇಗದ ಚಾರ್ಜಿಂಗ್‌ ಬೆಂಬಲಿಸುವ ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದ ಶಿಯೋಮಿ!

|

ಭಾರತದ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಶಿಯೋಮಿ ಕಂಪೆನಿ ತನ್ನದೇ ಆದ ಜನಪ್ರಿಯತೆಯನ್ನು ಪಡೆದುಕೊಂಡಿದೆ. ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳ ಮೂಲಕ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಸದ್ಯ ಇದೀಗ ಭಾರತದಲ್ಲಿ ಮಾರುಕಟ್ಟೆಯಲ್ಲಿ ಶಿಯೋಮಿ 11i ಹೈಪರ್‌ಚಾರ್ಜ್ 5G ಮತ್ತು ಶಿಯೋಮಿ 11i 5G ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಈ ಎರಡೂ ಸ್ಮಾರ್ಟ್‌ಫೋನ್‌ಗಳು ಒಂದೇ ರೀತಿಯ ಫೀಚರ್ಸ್‌ಗಳನ್ನು ಒಳಗೊಂಡಿವೆ ಎನ್ನಲಾಗಿದೆ. ಆದರೆ ಶಿಯೋಮಿ 11i ಹೈಪರ್‌ಚಾರ್ಜ್ 5G ಫೋನ್‌ 120W ವೇಗದ ಚಾರ್ಜಿಂಗ್ ಅನ್ನು ಹೊಂದಿದೆ. ಶಿಯೋಮಿ 11i ಸ್ಮಾರ್ಟ್‌ಫೋನ್‌ 67W ವೇಗದ ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ.

ಶಿಯೋಮಿ

ಹೌದು, ಶಿಯೋಮಿ ಕಂಪೆನಿ ಭಾರತದಲ್ಲಿ ಶಿಯೋಮಿ 11i ಸರಣಿಯಲ್ಲಿ ಶಿಯೋಮಿ 11i ಹೈಪರ್‌ಚಾರ್ಜ್ 5G ಮತ್ತು ಶಿಯೋಮಿ 11i 5G ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಈ ಎರಡೂ ಸ್ಮಾರ್ಟ್‌ಫೋನ್‌ಗಳು 120Hz ರಿಫ್ರೆಶ್‌ ರೇಟ್‌ ಹೊಂದಿರುವ ಸೂಪರ್ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿವೆ. ಅಲ್ಲದೆ ಈ ಸ್ಮಾರ್ಟ್‌ಫೋನ್‌ಗಳು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 920 SoC ಪ್ರೊಸೆಸರ್‌ ಬಲವನ್ನು ಪಡೆದಿವೆ. ಇನ್ನುಳಿದಂತೆ ಈ ಎರಡೂ ಸ್ಮಾರ್ಟ್‌ಫೋನ್‌ಗಳ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಶಿಯೋಮಿ 11i ಹೈಪರ್‌ಚಾರ್ಜ್ 5G ಸ್ಮಾರ್ಟ್‌ಫೋನ್‌

ಶಿಯೋಮಿ 11i ಹೈಪರ್‌ಚಾರ್ಜ್ 5G ಸ್ಮಾರ್ಟ್‌ಫೋನ್‌

ಶಿಯೋಮಿ 11i ಹೈಪರ್‌ಚಾರ್ಜ್ 5G ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67-ಇಂಚಿನ ಫುಲ್‌ ಹೆಚ್‌ಡಿ + ಸೂಪರ್ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 920 SoC ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್ 11 ನಲ್ಲಿ MIUI 12.5 ವರ್ಧಿತ ಆವೃತ್ತಿಯೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್‌ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108-ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಜೊತೆಗೆ 4,500mAh ಡ್ಯುಯಲ್-ಸೆಲ್ ಲಿಥಿಯಂ ಪಾಲಿಮರ್ ಬ್ಯಾಟರಿಯನ್ನು ಹೊಂದಿದ್ದು, 120W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2, GPS/ A-GPS, USB ಟೈಪ್-C ಪೋರ್ಟ್ ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಬೆಂಬಲಿಸಲಿದೆ.

ಶಿಯೋಮಿ 11i 5G ಸ್ಮಾರ್ಟ್‌ಫೋನ್‌

ಶಿಯೋಮಿ 11i 5G ಸ್ಮಾರ್ಟ್‌ಫೋನ್‌

ಶಿಯೋಮಿ 11i 5G ಸ್ಮಾರ್ಟ್‌ಫೋನ್‌ ಕೂಡ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67-ಇಂಚಿನ ಫುಲ್‌ ಹೆಚ್‌ಡಿ + ಸೂಪರ್ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಹಾಗೂ 360Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 920 SoC ಪ್ರೊಸೆಸರ್‌ ಬಲವನ್ನು ಒಳಗೊಂಡಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್‌ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಆದರೆ ಈ ಸ್ಮಾರ್ಟ್‌ಫೋನ್‌ 5,160mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 67W ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ಶಿಯೋಮಿ 11i ಹೈಪರ್‌ಚಾರ್ಜ್ 5G ಸ್ಮಾರ್ಟ್‌ಫೋನ್‌ ಬೇಸ್ ಮಾಡೆಲ್‌ 6GB RAM + 128GB ಸ್ಟೋರೇಜ್ ರೂಪಾಂತರಕ್ಕಾಗಿ 26,999.ರೂ ಬೆಲೆ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ 8GB + 128GB ರೂಪಾಂತರ ಆಯ್ಕೆಗೆ 28,999.ರೂ ಬೆಲೆ ಹೊಂದಿದೆ. ಇನ್ನು ಶಿಯೋಮಿ 11i 5G ಸ್ಮಾರ್ಟ್‌ಫೋನ್‌ 6GB + 128GB ಮಾದರಿ ಆಯ್ಕೆಗೆ 24,999ರೂ ಬೆಲೆ ಹೊಂದಿದೆ. ಅಲ್ಲದೆ 8GB + 128GB ಆಯ್ಕೆಗೆ 26,999.ರೂ ಬೆಲೆ ಪಡೆದುಕೊಂಡಿದೆ. ಇನ್ನು ಎರಡೂ ಸ್ಮಾರ್ಟ್‌ಫೋನ್‌ಗಳು ಭಾರತದಲ್ಲಿ ಜನವರಿ 12 ರಿಂದ ಫ್ಲಿಪ್‌ಕಾರ್ಟ್‌, ಮಿ.ಕಾಮ್‌, ಮಿ ಹೋಮ್‌ ಸ್ಟೋರ್‌ಗಳು ಮತ್ತು ಆಫ್‌ಲೈನ್ ರಿಟೇಲ್‌ ಸ್ಟೋರ್‌ಗಳಲ್ಲಿ ಖರೀದಿಗೆ ಲಭ್ಯವಾಗಲಿದೆ.

ಲಾಂಚ್‌ ಆಫರ್‌

ಲಾಂಚ್‌ ಆಫರ್‌

ಇದಲ್ಲದೆ ಶಿಯೋಮಿ 11i ಹೈಪರ್‌ಚಾರ್ಜ್ 5G ಮತ್ತು ಶಿಯೋಮಿ 11i ಎರಡು ಸ್ಮಾರ್ಟ್‌ಫೋನ್‌ಗಳು ನ್ಯೂ ಇಯರ್‌ ಲಾಂಚ್‌ ಆಫರ್‌ ಪಡೆದುಕೊಂಡಿವೆ. ಅದರಂತೆ ನ್ಯೂ ಇಯರ್‌ ಲಾಂಚ್‌ ಆಫರ್‌ನಲ್ಲಿ 1,500ರೂ ರಿಯಾಯಿತಿ ಸಿಗಲಿದೆ. ಹಾಗೆಯೇ SBI ಕಾರ್ಡ್‌ಗಳನ್ನು ಬಳಸಿ ಖರೀದಿಸಿದರೆ 2,500ರೂ. ತನಕ ಕ್ಯಾಶ್‌ಬ್ಯಾಕ್ ದೊರೆಯಲಿದೆ.

Best Mobiles in India

English summary
Xiaomi 11i HyperCharge 5G is designed as a unique option in the series as it features 120W fast charging.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X