ಶಿಯೋಮಿ 11i ಹೈಪರ್‌ಚಾರ್ಜ್‌ 5G ಫೋನ್‌ ಭಾರೀ ಡಿಸ್ಕೌಂಟ್‌ನಲ್ಲಿ ಲಭ್ಯ!

|

ಶಿಯೋಮಿ ಕಂಪನಿಯು ಕೆಲವು ಬಜೆಟ್‌ ಬೆಲೆಯ ಫೋನ್‌ಗಳ ಜೊತೆಗೆ ಪ್ರೀಮಿಯಂ ಸ್ಮಾರ್ಟ್‌ಫೋನ್‌ಗಳ ಮೂಲಕವು ಗ್ರಾಹಕರ ಗಮನ ಸೆಳೆದಿದೆ. ಆ ಪೈಕಿ ಶಿಯೋಮಿ 11i ಹೈಪರ್‌ಚಾರ್ಜ್‌ 5G ಸ್ಮಾರ್ಟ್‌ಫೋನ್‌ ಕೆಲವು ಆಕರ್ಷಕ ಫೀಚರ್ಸ್‌ಗಳಿಂದ ಟ್ರೆಂಡಿ ಲುಕ್‌ ಪಡೆದಿದೆ. ಹಾಗೆಯೇ 108 ಮೆಗಾ ಪಿಕ್ಸಲ್‌ ಸೆನ್ಸಾರ್‌ ಕ್ಯಾಮೆರಾ, ವೇಗದ ಪ್ರೊಸೆಸರ್‌ ನಂತಹ ಫೀಚರ್ಸ್‌ಗಳಿಂದ ಹೈಲೈಟ್‌ ಆಗಿರುವ ಈ ಫೋನ್‌ ಇದೀ ಭರ್ಜರಿ ಡಿಸ್ಕೌಂಟ್‌ ಬೆಲೆಗೆ ಸಿಗಲಿದೆ.

ದೀಪಾವಳಿ

ಹೌದು, ಶಿಯೋಮಿ ಸಂಸ್ಥೆಯ ಶಿಯೋಮಿ 11i ಹೈಪರ್‌ಚಾರ್ಜ್‌ 5G ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್ ಆಯೋಜಿಸಿರುವ ಬಿಗ್‌ ಬಿಲಿಯನ್‌ ಡೇಸ್‌ ಸೇಲ್‌ (Flipkart Big Billion Days) ಹಾಗೂ ದೀಪಾವಳಿ ವಿತ್ ಮಿ (Diwali With Mi) ಮಾರಾಟ ಮೇಳಗಳಲ್ಲಿ ಆಕರ್ಷಕ ಡಿಸ್ಕೌಂಟ್‌ ಬೆಲೆಗೆ ಲಭ್ಯವಾಗಲಿದೆ. ಇನ್ನು ಫ್ಲಿಪ್‌ಕಾರ್ಟ್‌ ಬಿಗ್‌ ಬಿಲಿಯನ್‌ ಡೇಸ್‌ ಸೇಲ್‌ ಇದೇ ಸೆಪ್ಟೆಂಬರ್ 23 ರಿಂದ ಪ್ರಾರಂಭವಾಗಲಿದ್ದು, ದೀಪಾವಳಿ ವಿತ್ ಮಿ ಮಾರಾಟವು ಇದೇ ಸೆಪ್ಟೆಂಬರ್ 20 ರಿಂದ ಶುರುವಾಗಲಿದೆ.

ರಿಯಾಯಿತಿ

ಈ ಎರಡು ಪ್ಲಾಟ್‌ಫಾರ್ಮ್ ಗಳಲ್ಲಿ ಶಿಯೋಮಿ 11i ಹೈಪರ್‌ಚಾರ್ಜ್‌ 5G ಸ್ಮಾರ್ಟ್‌ಫೋನ್‌ ಜೊತೆಗೆ ಶಿಯೋಮಿ 11i 5G ಸ್ಮಾರ್ಟ್‌ಫೋನ್‌ ಸಹ ಬೊಂಬಾಟ್ ಕೊಡುಗೆಯಲ್ಲಿ ದೊರೆಯಲಿದೆ. ಶಿಯೋಮಿ 11i 5G ಫೋನ್‌ 6,000ರೂ. ಗಳ ರಿಯಾಯಿತಿ ಲಭ್ಯವಾಗಲಿದ್ದು, ಆರಂಭಿಕ ವೇರಿಯಂಟ್‌ 18,999ರೂ. ಗಳಿಗೆ ಸಿಗಲಿದೆ. ಹಾಗೆಯೇ ಶಿಯೋಮಿ 11i ಹೈಪರ್‌ಚಾರ್ಜ್‌ 5G ಸ್ಮಾರ್ಟ್‌ಫೋನ್‌ 6GB + 128GB ವೇರಿಯಂಟ್‌ 26,999ರೂ. ಗಳಿಗೆ ಲಭ್ಯವಾಗಲಿದೆ. ಇನ್ನು 8GB + 128GB ವೇರಿಯಂಟ್‌ 28,999ರೂ. ಗಳಿಗೆ ಸಿಗಲಿದೆ. ಹಾಗಾದರೆ ಶಿಯೋಮಿ 11i ಹೈಪರ್‌ಚಾರ್ಜ್‌ 5G ಮತ್ತು ಶಿಯೋಮಿ 11i 5G ಫೋನಿನ ಇತರೆ ಫೀಚರ್ಸ್‌ಗಳನ್ನು ಮುಂದೆ ನೋಡೋಣ ಬನ್ನಿರಿ.

ಶಿಯೋಮಿ 11i ಹೈಪರ್‌ಚಾರ್ಜ್ 5G ಸ್ಮಾರ್ಟ್‌ಫೋನ್‌

ಶಿಯೋಮಿ 11i ಹೈಪರ್‌ಚಾರ್ಜ್ 5G ಸ್ಮಾರ್ಟ್‌ಫೋನ್‌

ಶಿಯೋಮಿ 11i ಹೈಪರ್‌ಚಾರ್ಜ್ 5G ಸ್ಮಾರ್ಟ್‌ಫೋನ್‌ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67 ಇಂಚಿನ ಫುಲ್‌ ಹೆಚ್‌ಡಿ + ಸೂಪರ್ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 920 SoC ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್ 11 ನಲ್ಲಿ MIUI 12.5 ವರ್ಧಿತ ಆವೃತ್ತಿಯೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8 GB RAM ಮತ್ತು 128 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ.

ಕ್ಯಾಮೆರಾ

ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್‌ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಜೊತೆಗೆ 4,500 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 120W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2, GPS/ A-GPS, USB ಟೈಪ್-C ಪೋರ್ಟ್ ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಬೆಂಬಲಿಸಲಿದೆ.

ಶಿಯೋಮಿ 11i 5G ಸ್ಮಾರ್ಟ್‌ಫೋನ್‌

ಶಿಯೋಮಿ 11i 5G ಸ್ಮಾರ್ಟ್‌ಫೋನ್‌

ಶಿಯೋಮಿ 11i 5G ಸ್ಮಾರ್ಟ್‌ಫೋನ್‌ ಕೂಡ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67 ಇಂಚಿನ ಫುಲ್‌ ಹೆಚ್‌ಡಿ + ಸೂಪರ್ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಹಾಗೂ 360Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಹೊಂದಿದೆ.

ಇದಲ್ಲದೆ

ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 920 SoC ಪ್ರೊಸೆಸರ್‌ ಬಲವನ್ನು ಒಳಗೊಂಡಿದೆ. ಹಾಗೆಯೇ 8 GB RAM ಮತ್ತು 128 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್‌ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಆದರೆ ಈ ಸ್ಮಾರ್ಟ್‌ಫೋನ್‌ 5,160 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 67W ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

Best Mobiles in India

English summary
Xiaomi 11i HyperCharge 5G Phone Available with Offer Price: Should You Buy It.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X