ಶಿಯೋಮಿ 12 ಲೈಟ್ ಸ್ಮಾರ್ಟ್‌ಫೋನ್ ಅನಾವರಣ! 67W ವೇಗದ ಚಾರ್ಜಿಂಗ್ ವಿಶೇಷ!
ಟೆಕ್ ಮಾರುಕಟ್ಟೆಯಲ್ಲಿ ಶಿಯೋಮಿ ಕಂಪೆನಿ ಆಕರ್ಷಕ ಸ್ಮಾರ್ಟ್‌ಫೋನ್‌ಗಳಿಗೆ ಪ್ರಸಿದ್ಧಿಯನ್ನು ಪಡೆದುಕೊಂಡಿದೆ. ಈಗಾಗಲೇ ಹಲವು ಜನಪ್ರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ತನ್ನ ಸ್ಥಾನ ಭದ್ರಪಡಿಸಿಕೊಂಡಿದೆ. ವಿಭಿನ್ನ ಮಾದರಿಯ ಡಿಸ್‌ಪ್ಲೇ ವಿನ್ಯಾಸ, ಆಕರ್ಷಕ ಕ್ಯಾಮೆರಾ ಸೆಟಪ್ ಹಾಗೂ ಬ್ಯಾಟರಿ ಸಾಮರ್ಥ್ಯದ ಸ್ಮಾರ್ಟ್‌ಫೋನ್‌ಗಳಿಂದ ಸ್ಮಾರ್ಟ್‌ಫೋನ್ ಪ್ರಿಯರ ಮನಗೆದ್ದಿದೆ. ಸದ್ಯ ಇದೀಗ ತನ್ನ ಹೊಸ ಶಿಯೋಮಿ 12 ಲೈಟ್ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ 120Hz OLED ಡಿಸ್‌ಪ್ಲೇಯನ್ನು ಒಳಗೊಂಡಿದೆ.

ಹೌದು, ಶಿಯೋಮಿ 12 ಲೈಟ್ ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದೆ. ಇದು ಸ್ನಾಪ್‌ಡ್ರಾಗನ್ 778G ಪ್ರೊಸೆಸರ್ ಬಲವನ್ನು ಒಳಗೊಂಡಿದೆ. ಹಾಗೆಯೇ 6GB RAM ಮತ್ತು 128GB ಹಾಗೂ 8GB RAM ಮತ್ತು 256GB ಸ್ಟೋರೇಜ್ ಆಯ್ಕೆಯಲ್ಲಿ ದೊರೆಯಲಿದೆ. ಜೊತೆಗೆ 4,300 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 67W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

ಇನ್ನು ಶಿಯೋಮಿ 12 ಲೈಟ್ ಸ್ಮಾರ್ಟ್‌ಫೋನ್ 120Hz ರಿಫ್ರೆಶ್ ರೇಟ್ ಮತ್ತು 240Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಹೊಂದಿದೆ. ಇದು ಡ್ಯುಯಲ್ 5G ಸ್ಟ್ಯಾಂಡ್‌ಬೈ ಜೊತೆಗೆ ಡ್ಯುಯಲ್ ಸಿಮ್ ಬೆಂಬಲವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಸೆಲ್ಫಿ ಕ್ಯಾಮೆರಾದಲ್ಲಿ ಆಟೋಫೋಕಸ್ ಅನ್ನು ಹೊಂದಿದ್ದು, ಸೆಲ್ಫಿ ಪೋರ್ಟ್ರೇಟ್ ಮೋಡ್ ಮತ್ತು ಶಿಯೋಮಿ ಸೆಲ್ಫಿ ಗ್ಲೋನಂತಹ ಫೀಚರ್ಸ್‌ಗಳನ್ನು ಎಫೆಕ್ಟಿವ್ ಆಗಿ ಬಳಸುವುದಕ್ಕೆ ಅನುವು ಮಾಡಿಕೊಡಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಶಿಯೋಮಿ 12 ಲೈಟ್ ಸ್ಮಾರ್ಟ್‌ಫೋನ್ 6.55 ಇಂಚಿನ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಇದು 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಈ ಡಿಸ್‌ಪ್ಲೇ 120Hz ಡಾಲ್ಬಿ ವಿಷನ್, HDR10+, 950ನಿಟ್ಸ್ ಗರಿಷ್ಟ ಬ್ರೈಟ್‌ನೆಸ್ ಅನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 88.2% ಸ್ಕ್ರೀನ್ ಟು ಬಾಡಿ ಅನುಪಾತವನ್ನು ಪಡೆದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಇದು ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್ ಅನ್ನು ಒಳಗೊಂಡಿದೆ.

ಪ್ರೊಸೆಸರ್ ಯಾವುದು?
ಶಿಯೋಮಿ 12 ಲೈಟ್ ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 778G ಪ್ರೊಸೆಸರ್ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಹಾಗೂ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ವೇರಿಯೆಂಟ್ ಆಯ್ಕೆಯನ್ನು ಹೊಂದಿದೆ. ಇನ್ನು ಈ ಫೋನ್ ಮೆಮೊರಿ ಕಾರ್ಡ್ ಬೆಂಬಲಿಸುವುದಿಲ್ಲ ಎಂದು ಹೇಳಲಾಗಿದೆ.

ಕ್ಯಾಮೆರಾ ಸೆಟ್‌ಅಪ್
ಶಿಯೋಮಿ 12 ಲೈಟ್ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ GD2 ಸೆನ್ಸಾರ್ ಅನ್ನು ಹೊಂದಿದೆ. ಇದು AF ಮತ್ತು ಸೆಲ್ಫಿ ಪೋರ್ಟ್ರೇಟ್ ಮೋಡ್ ಮತ್ತು ಶಿಯೋಮಿ ಸೆಲ್ಫಿ ಗ್ಲೋ ಸೇರಿದಂತೆ ಸಾಕಷ್ಟು ಸಾಫ್ಟ್‌ವೇರ್ ವೈಶಿಷ್ಟ್ಯಗಳನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಶಿಯೋಮಿ 12 ಲೈಟ್ ಸ್ಮಾರ್ಟ್‌ಫೋನ್ 4,300mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 67W ವೇಗದ ಚಾರ್ಜಿಂಗ್‌ಗೆ ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್ ಡ್ಯುಯಲ್ 5G ಸ್ಟ್ಯಾಂಡ್‌ಬೈ ಜೊತೆಗೆ ಡ್ಯುಯಲ್ ಸಿಮ್ ಬೆಂಬಲವನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ, ಡ್ಯುಯಲ್-ಬ್ಯಾಂಡ್, Wi-Fi ಡೈರೆಕ್ಟ್, ಹಾಟ್‌ಸ್ಪಾಟ್, ಬ್ಲೂಟೂತ್ 5.2, A2DP, USB ಟೈಪ್-C 2.0, ಅನ್ನು ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್ ಅಕ್ಸಿಲೆರೊಮೀಟರ್, ಗೈರೊಮೀಟರ್, ಕಂಪಾಸ್, ವರ್ಚುವಲ್ ಪ್ರಾಕ್ಸಿಮಿಟಿ ಸೆನ್ಸಾರ್ ಅನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ
ಶಿಯೋಮಿ 12 ಲೈಟ್ ಸ್ಮಾರ್ಟ್‌ಫೋನ್ 6GB RAM ಮತ್ತು 128GB ಸ್ಟೋರೇಜ್ ಬೆಲೆ $400 (ಅಂದಾಜು 31,700ರೂ), ಆದರೆ 8GB RAM ಮತ್ತು 256GB ಸ್ಟೋರೇಜ್ ಬೆಲೆ $450 (ಅಂದಾಜು 35,700ರೂ)ಆಗಿದೆ. ಹಾಗೆಯೇ 8GB RAM ಮತ್ತು 256GB ಸ್ಟೊರೇಜ್ ಬೆಲೆ $500 (ಅಂದಾಜು 40,000ರೂ)ಆಗಿದೆ. ಇನ್ನು ಈ ಫೋನ್ ಪ್ರೀ ಆರ್ಡರ್ ಬುಕ್ಕಿಂಗ್ ಆನ್‌ಲೈನ್ ಸ್ಟೋರ್‌ಗಳ ಮೂಲಕ ಲೈವ್ ಆಗಿದೆ. ಈ ಸ್ಮಾರ್ಟ್‌ಫೋನ್ ಬ್ಲಾಕ್, ಲೈಟ್ ಗ್ರೀನ್, ಲೈಟ್ ಪಿಂಕ್ ಕಲರ್ ಆಯ್ಕೆಗಳಲ್ಲಿ ದೊರೆಯಲಿದೆ.ಇದು ಭಾರತದಲ್ಲಿ ಲಭ್ಯವಾಗುವುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಿಲ್ಲ.

ಇನ್ನು ಶಿಯೋಮಿ ಕಂಪೆನಿ ಭಾರತದಲ್ಲಿ ಮೂರು ದಿನಗಳ ಹಿಂದೆ ತನ್ನ ಶಿಯೋಮಿ 12S ಸರಣಿಯಲ್ಲಿ ಮೂರು ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಇದರಲ್ಲಿ ಶಿಯೋಮಿ 12S ಅಲ್ಟ್ರಾ, ಶಿಯೋಮಿ 12S ಪ್ರೊ ಮತ್ತು ಶಿಯೋಮಿ 12S ಸ್ಮಾರ್ಟ್‌ಫೋನ್‌ಗಳು ಸೇರಿವೆ. ಇನ್ನು ಈ ಸರಣಿಯ ಮೂರು ಸ್ಮಾರ್ಟ್‌ಫೋನ್‌ಗಳು ಕೂಡ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8+ Gen 1 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿವೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ಗಳು ಲೈಕಾ ಆಪ್ಟಿಕ್ಸ್ ಅನ್ನು ಒಳಗೊಂಡಿವೆ.

ಶಿಯೋಮಿ 12S ಸರಣಿಯ ಮೂರು ಸ್ಮಾರ್ಟ್‌ಫೋನ್‌ಗಳು ವಿಭಿನ್ನ ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಪಡೆದಿವೆ. ಇದರಲ್ಲಿ ಶಿಯೋಮಿ 12S ಅಲ್ಟ್ರಾ 4,860mAh ಬ್ಯಾಟರಿ, ಶಿಯೋಮಿ 12Sಪ್ರೊ 4,600mAh ಬ್ಯಾಟರಿ ಸಾಮರ್ಥ್ಯ ಹಾಗೂ ಶಿಯೋಮಿ 12S ಫೋನ್ 4,500mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿವೆ. ಆದರೆ ಮೂರು ಫೋನ್‌ಗಳು ಕೂಡ 10W ರಿವರ್ಸ್ ವಾಯರ್‌ಲೆಸ್ ಚಾರ್ಜಿಂಗ್ ಅನ್ನು ಬೆಂಬಲಿಸಲಿವೆ.


Click it and Unblock the Notifications








