Home
ಸುದ್ದಿಜಾಲ

ಶಿಯೋಮಿ 12 ಪ್ರೊ 5G ಬೆಲೆಯಲ್ಲಿ ಭರ್ಜರಿ ಇಳಿಕೆ!..ಗ್ರಾಹಕರಿಗೆ ಉಳಿತಾಯ!

ಜನಪ್ರಿಯ ಮೊಬೈಲ್‌ ಬ್ರ್ಯಾಂಡ್‌ಗಳಲ್ಲಿ ಒಂದಾಗಿರುವ ಶಿಯೋಮಿ ಸಂಸ್ಥೆಯು ಶಿಯೋಮಿ ಸರಣಿಯಲ್ಲಿ ಕೆಲವು ಅತ್ಯುತ್ತಮ ಫೋನ್‌ ಪರಿಚಯಿಸಿ ಫೋನ್‌ ಪ್ರಿಯರ ಮನ ಗೆದ್ದಿದೆ. ಆ ಪೈಕಿ ಶಿಯೋಮಿ 12 ಪ್ರೊ 5G ಫೋನ್‌ ಮಾರುಕಟ್ಟೆಯಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡಿದೆ. ಈ ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಇದೀಗ ಭರ್ಜರಿ ಇಳಿಕೆ ಆಗಿದ್ದು, ಮತ್ತೆ ಗ್ರಾಹಕರ ಗಮನ ಸೆಳೆಯುತ್ತಿದೆ. ಅಂದಹಾಗೆ ಈ ಫೋನ್‌ ಎರಡು ವೇರಿಯಂಟ್‌ ಆಯ್ಕೆಗಳನ್ನು ಪಡೆದಿದೆ.

ಶಿಯೋಮಿ 12 ಪ್ರೊ 5G ಬೆಲೆಯಲ್ಲಿ ಭರ್ಜರಿ ಇಳಿಕೆ!..ಗ್ರಾಹಕರಿಗೆ ಉಳಿತಾಯ!

ಹೌದು, ಶಿಯೋಮಿ ಕಂಪನಿಯ ಶಿಯೋಮಿ 12 ಪ್ರೊ 5G (Xiaomi 12 Pro 5G) ಫೋನ್‌ ಅಮೆಜಾನ್‌ ತಾಣದಲ್ಲಿ ರಿಯಾಯಿತಿ ಪಡೆದಿದೆ. ಈ ಫೋನಿನ 8GB RAM + 256GB ವೇರಿಯಂಟ್‌ ಬೆಲೆಯು 79,999ರೂ. ಆಗಿದ್ದು, ಬೆಲೆ ಇಳಿಕೆಯಿಂದ 55,999ರೂ. ಗಳಿಗೆ ಖರೀದಿಗೆ ಲಭ್ಯ. ಇದರೊಂದಿಗೆ ಎಕ್ಸ್‌ಚೇಂಜ್ ಕೊಡುಗೆ, ಬ್ಯಾಂಕ್‌ ಡಿಸ್ಕೌಂಟ್‌ಗಳು ಲಭ್ಯವಾಗಲಿವೆ.

ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್‌ ಹೊಂದಿದ್ದು, ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಪಡೆದಿದೆ. ಇನ್ನುಳಿದಂತೆ ಶಿಯೋಮಿಯ ಸಂಸ್ಥೆಯ ಶಿಯೋಮಿ 12 ಪ್ರೊ 5G ಸ್ಮಾರ್ಟ್‌ಫೋನ್‌ ಯಾವೆಲ್ಲ ಫೀಚರ್ಸ್‌ ಹೊಂದಿದೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಶಿಯೋಮಿ 12 ಪ್ರೊ 5G ಬೆಲೆಯಲ್ಲಿ ಭರ್ಜರಿ ಇಳಿಕೆ!..ಗ್ರಾಹಕರಿಗೆ ಉಳಿತಾಯ!

ಶಿಯೋಮಿ 12 ಪ್ರೊ 5G : ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಶಿಯೋಮಿ 12 ಪ್ರೊ 5G ಸ್ಮಾರ್ಟ್‌ಫೋನ್‌ 1,440 x 3,200 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.73 ಇಂಚಿನ WQHD+ Samsung E5 ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಇನ್ನು ಈ ಡಿಸ್‌ಪ್ಲೇ 1,500 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್ ಮತ್ತು 120Hz ಡೈನಾಮಿಕ್ ರಿಫ್ರೆಶ್ ರೇಟ್‌ ಅನ್ನು ಹೊಂದಿದೆ.

ಶಿಯೋಮಿ 12 ಪ್ರೊ 5G : ಪ್ರೊಸೆಸರ್‌ ಯಾವುದು?

ಶಿಯೋಮಿ 12 ಪ್ರೊ 5G ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 8GB RAM + 256GB ಹಾಗೂ 12GB RAM + 256GB ಇಂಟರ್‌ ಸ್ಟೋರೇಜ್‌ ಹೊಂದಿದೆ.

ಶಿಯೋಮಿ 12 ಪ್ರೊ 5G ಬೆಲೆಯಲ್ಲಿ ಭರ್ಜರಿ ಇಳಿಕೆ!..ಗ್ರಾಹಕರಿಗೆ ಉಳಿತಾಯ!

ಶಿಯೋಮಿ 12 ಪ್ರೊ 5G : ಕ್ಯಾಮೆರಾ ಸೆಟ್‌ಅಪ್‌

ಶಿಯೋಮಿ 12 ಪ್ರೊ 5G ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ನೊಂದಿಗೆ ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೋನಿ IMX707 ಸೆನ್ಸಾರ್‌, ಎರಡನೇ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಪೋರ್ಟ್ರೇಟ್ ಲೆನ್ಸ್‌ ಮತ್ತು 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅಲ್ಟ್ರಾ ವೈಡ್ ಲೆನ್ಸ್‌ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಶಿಯೋಮಿ 12 ಪ್ರೊ 5G : ಬ್ಯಾಟರಿ ಮತ್ತು ಇತರೆ ಸೌಲಭ್ಯ

ಶಿಯೋಮಿ 12 ಪ್ರೊ 5G ಸ್ಮಾರ್ಟ್‌ಫೋನ್‌ 4,600 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 120W ವೇಗದ ವೈರ್ಡ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. 50W ವೈರ್‌ಲೆಸ್ ಚಾರ್ಜಿಂಗ್ ಬೆಂಬಲವನ್ನು ಕೂಡ ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, Wi-Fi 6E, ಬ್ಲೂಟೂತ್ v5.2, NFC ಮತ್ತು USB ಟೈಪ್-C ಪೋರ್ಟ್ ಅನ್ನು ಬೆಂಬಲಿಸಲಿದೆ. ಇನ್ನು ಈ ಫೋನ್ ಬ್ಲೂ, ಬ್ಲ್ಯಾಕ್‌ ಹಾಗೂ ಓಪೆರಾ ಮಾವೆ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.

Best Mobiles in India

English summary
Xiaomi 12 Pro 5G Available at Huge Discount Prices on Amazon; Know Offer Price, Specifications details in kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+