Home
ಸುದ್ದಿಜಾಲ

ಭಾರತದಲ್ಲಿ ಶಿಯೋಮಿ 12 ಪ್ರೊ 5G ಸ್ಮಾರ್ಟ್‌ಫೋನ್‌ ಬಿಡುಗಡೆಗೆ ಮುಹೂರ್ತ ಪಿಕ್ಸ್‌!

ಭಾರತದ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಶೀಯೋಮಿ ಕಂಪೆನಿ ತನ್ನ ವಿಶೇಷ ಸ್ಮಾರ್ಟ್‌ಫೋನ್‌ಗಳಿಂದ ಹೆಚ್ಚಿನ ಜನಪ್ರಿಯತೆ ಪಡೆದುಕೊಂಡಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ತನ್ನ ಸ್ಥಾನ ಭದ್ರಪಡಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ಶಿಯೋಮಿ 12 ಪ್ರೊ 5G ಫೋನ್‌ ಬಿಡುಗಡೆಗೆ ಮುಹೂರ್ತ ಪಿಕ್ಸ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಭಾರತದಲ್ಲಿ ಇದೇ ಏಪ್ರಿಲ್ 27ಕ್ಕೆ ಬಿಡುಗಡೆ ಮಾಡುವುದಕ್ಕೆ ದಿನಾಂಕ ನಿಗದಿಪಡಿಸಿದೆ.

ಶಿಯೋಮಿ

ಹೌದು, ಶಿಯೋಮಿ ಕಂಪೆನಿ ಭಾರತದಲ್ಲಿ ಶಿಯೋಮಿ 12 ಪ್ರೊ 5G ಸ್ಮಾರ್ಟ್‌ಫೋನ್‌ ಬಿಡುಗಡೆ ದಿನಾಂಕವನ್ನು ಬಹಿರಂಗಪಡಿಸಿದೆ. 'ಸೇವ್ ದಿ ಡೇಟ್' ಟೀಸರ್ ಮೂಲಕ ಬಿಡುಗಡೆ ದಿನಾಂಕದ ಬಗ್ಗೆ ಮಾಹಿತಿಯನ್ನು ಶೇರ್‌ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದು 50 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಪ್ರೈಮೆರಿ ಕ್ಯಾಮೆರಾವನ್ನು ಹೊಂದಿರಲಿದೆ ಎನ್ನಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇತಷೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಶಿಯೋಮಿ 12 ಪ್ರೊ 5G ಸ್ಮಾರ್ಟ್‌ಫೋನ್‌ 1,440x3,200 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.73-ಇಂಚಿನ WQHD+ Samsung E5 ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಇನ್ನು ಈ ಡಿಸ್‌ಪ್ಲೇ 1,500 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್ ಮತ್ತು 120Hz ಡೈನಾಮಿಕ್ ರಿಫ್ರೆಶ್ ರೇಟ್‌ ಅನ್ನು ಹೊಂದಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಹೊಂದಿರಲಿದೆ. ಇದು ಮೆಮೊರಿ ಕಾರ್ಡ್‌ ಬೆಂಬಲಿಸುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಕ್ಯಾಮೆರಾ ಸೆಟಪ್‌

ಕ್ಯಾಮೆರಾ ಸೆಟಪ್‌

ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ನೊಂದಿಗೆ ಬರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX707 ಸೆನ್ಸಾರ್‌, ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಪೋರ್ಟ್ರೇಟ್ ಲೆನ್ಸ್‌ ಮತ್ತು 50 ಮೆಗಾಪಿಕ್ಸೆಲ್ ಸೆನ್ಸಾರ್‌ ಅಲ್ಟ್ರಾ-ವೈಡ್ ಲೆನ್ಸ್‌ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿರಲಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಶಿಯೋಮಿ 12 ಪ್ರೊ 5G ಸ್ಮಾರ್ಟ್‌ಫೋನ್‌ 4,600mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 120W ವೇಗದ ವೈರ್ಡ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. 50W ವೈರ್‌ಲೆಸ್ ಚಾರ್ಜಿಂಗ್ ಬೆಂಬಲವನ್ನು ಕೂಡ ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, Wi-Fi 6E, ಬ್ಲೂಟೂತ್ v5.2, NFC ಮತ್ತು USB ಟೈಪ್-C ಪೋರ್ಟ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತ ಲಭ್ಯತೆ

ಬೆಲೆ ಮತ್ತ ಲಭ್ಯತೆ

ಭಾರತದಲ್ಲಿ ಶಿಯೋಮಿ 12 ಪ್ರೊ 5G ಸ್ಮಾರ್ಟ್‌ಫೋನ್‌ ಬೆಲೆ 65,000ರೂ.ನಿಂದ ಪ್ರಾರಂಭವಾಗಲಿದೆ ಎಂದು ಅಂದಾಜಿಸಲಾಗಿದೆ. ಆದರೆ ಬೆಲೆಯ ವಿವರಗಳು ಇನ್ನು ಅಧಿಕೃತವಾಗಿ ಬಹಿರಂಗವಾಗಿಲ್ಲ. ಇನ್ನು ಶಿಯೋಮಿ 12 ಪ್ರೊ 5G ಜಾಗತಿಕ ಮಾರುಕಟ್ಟೆಗಳಲ್ಲಿ 8GB + 256GB ಮಾದರಿಗೆ $999 (ಸುಮಾರು 76,100ರೂ) ಆರಂಭಿಕ ಬೆಲೆಯನ್ನು ಹೊಂದಿದೆ. ಇದೇ ಸ್ಮಾರ್ಟ್‌ಫೋನ್‌ ಚೀನಾದಲ್ಲಿ 8GB RAM ಮತ್ತು 128GB ಸ್ಟೋರೇಜ್‌ ಆಯ್ಕೆಗೆ CNY 4,699 (ಸುಮಾರು 56,200ರೂ) ಆರಂಭಿಕ ಬೆಲೆ ಹೊಂದಿದೆ. ಹಾಗೆಯೇ ಟಾಪ್-ಎಂಡ್ 12GB + 256GB ಮಾದರಿಯು CNY 5,399 (ಸುಮಾರು 64,500ರೂ).ಬೆಲೆ ಹೊಂದಿದೆ.

Best Mobiles in India

English summary
Xiaomi 12 Pro 5G India launch date is set for April 27, the Chinese company has announced.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+