ಶಿಯೋಮಿ 12 ಪ್ರೊ ಖರೀದಿದಾರರಿಗೆ ಗುಡ್‌ನ್ಯೂಸ್‌; 5,000ರೂ. ಡಿಸ್ಕೌಂಟ್‌!

|

ಪ್ರಮುಖ ಇ ಕಾಮರ್ಸ್‌ ತಾಣ ಅಮೆಜಾನ್ ಇದೀಗ ಅಮೆಜಾನ್ ಗ್ರೇಟ್ ಫ್ರೀಡಮ್ ಫೆಸ್ಟಿವಲ್ ಸೇಲ್ ಆಯೋಜಿಸಿದೆ. ಈ ಸೇಲ್‌ನಲ್ಲಿ ಆಯ್ದ ಕೆಲವು ಸ್ಮಾರ್ಟ್‌ಫೋನ್‌, ಲ್ಯಾಪ್‌ಟಾಪ್‌ ಹಾಗೂ ಇತರೆ ಗ್ಯಾಡ್ಜೆಟ್ಸ್‌ಗಳು ಬಿಗ್ ರಿಯಾಯಿತಿಯಲ್ಲಿ ಕಾಣಿಸಿಕೊಳ್ಳುತ್ತವೆ ಎಂದು ಆನ್‌ಲೈನ್‌ ಶಾಪಿಂಗ್‌ ಪ್ರಿಯರಿಗೆ ತಿಳಿದಿದೆ ಇದೆ. ಆದರೆ ಇತ್ತೀಚಿನ ಬಿಡುಗಡೆ ಆಗಿರುವ ಈ ಶಿಯೋಮಿ 12 ಪ್ರೊ ಸ್ಮಾರ್ಟ್‌ಫೋನ್‌ ಆಕರ್ಷಕ ರಿಯಾಯಿತಿಯಲ್ಲಿ ಕಾಣಿಸಿಕೊಂಡಿದೆ.

ಸೇಲ್‌

ಹೌದು, ಶಿಯೋಮಿ ಸಂಸ್ಥೆಯ ಶಿಯೋಮಿ 12 ಪ್ರೊ ಸ್ಮಾರ್ಟ್‌ಫೋನ್‌ ಅಮೆಜಾನ್ ಗ್ರೇಟ್ ಫ್ರೀಡಮ್ ಫೆಸ್ಟಿವಲ್ ಸೇಲ್‌ ನಲ್ಲಿ ಭರ್ಜರಿ ಡಿಸ್ಕೌಂಟ್ ದರದಲ್ಲಿ ಕಾಣಿಸಿಕೊಂಡಿದೆ. ಕಳೆದ ಏಪ್ರಿಲ್‌ನಲ್ಲಿ ಭಾರತದಲ್ಲಿ ಈ ಫೋನ್ ಬಿಡುಗಡೆ ಮಾಡಲಾಯಿತು. ಕೆಲವು ಹೈ ಎಂಡ್‌ ಫೀಚರ್ಸ್‌ಗಳಿಂದ ಫೋನ್ ಗ್ರಾಹಕರ ಗಮನ ಸೆಳೆದಿದೆ. ಸದ್ಯ ಅಮೆಜಾನ್‌ನ ಅಮೆಜಾನ್ ಗ್ರೇಟ್ ಫ್ರೀಡಮ್ ಫೆಸ್ಟಿವಲ್ ಸೇಲ್ ನಲ್ಲಿ ಈ ಫೋನಿಗೆ 5,000 ರೂ. ಗಳ ಅಮೆಜಾನ್‌ ಪ್ರೋಮೊ ವೋಚರ್‌ ಲಭ್ಯ.

ಕ್ರೆಡಿಟ್

ಅಂದಹಾಗೇ ಅಮೆಜಾನ್ ಗ್ರೇಟ್ ಫ್ರೀಡಂ ಫೆಸ್ಟಿವಲ್ ಸೇಲ್‌ ಸದ್ಯ ಚಾಲ್ತಿ ಇದ್ದು, ಈ ಸೇಲ್ ಇದೇ ಆಗಸ್ಟ್ 10 ರಂದು ಕೊನೆಗೊಳ್ಳಲಿದೆ. ಹೆಚ್ಚುವರಿಯಾಗಿ, ಯಾವುದೇ ಬ್ಯಾಂಕ್‌ನಿಂದ ಕ್ರೆಡಿಟ್ ಕಾರ್ಡ್ ಬಳಸುವಾಗ 6,000 ರೂ. ರಿಯಾಯಿತಿ ಇದೆ. ಹೆಚ್ಚುವರಿಯಾಗಿ, SBI ಕ್ರೆಡಿಟ್ ಕಾರ್ಡ್‌ಗಳು ಹೆಚ್ಚುವರಿ 2,000 ರೂ. ಉಳಿತಾಯಕ್ಕೆ ಅರ್ಹವಾಗಿವೆ. ಜೊತೆಗೆ EMI ಸೌಲಭ್ಯ ಪಡೆಯಬಹುದು. ಆಫರ್‌ನಲ್ಲಿ ಈ ಫೋನ್‌ ಅನ್ನು ಗ್ರಾಹಕರು 49,999 ರೂ. ಗಳಿಗೆ ಖರೀದಿಸಬಹುದು. ಇನ್ನುಳಿದಂತೆ ಈ ಫೋನಿನ ಆಫರ್‌ ಮಾಹಿತಿ ಹಾಗೂ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಶಿಯೋಮಿ 12 ಪ್ರೊ 5G ಸ್ಮಾರ್ಟ್‌ಫೋನ್‌ 1,440 x 3,200 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.73-ಇಂಚಿನ WQHD+ Samsung E5 ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಇನ್ನು ಈ ಡಿಸ್‌ಪ್ಲೇ 1,500 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್ ಮತ್ತು 120Hz ಡೈನಾಮಿಕ್ ರಿಫ್ರೆಶ್ ರೇಟ್‌ ಅನ್ನು ಹೊಂದಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಹೊಂದಿರಲಿದೆ. ಇದು ಮೆಮೊರಿ ಕಾರ್ಡ್‌ ಬೆಂಬಲಿಸುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಕ್ಯಾಮೆರಾ ಸೆಟ್‌ಅಪ್‌

ಕ್ಯಾಮೆರಾ ಸೆಟ್‌ಅಪ್‌

ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ನೊಂದಿಗೆ ಬರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೋನಿ IMX707 ಸೆನ್ಸಾರ್‌, ಎರಡನೇ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಪೋರ್ಟ್ರೇಟ್ ಲೆನ್ಸ್‌ ಮತ್ತು 50 ಮೆಗಾಪಿಕ್ಸೆಲ್ ಸೆನ್ಸಾರ್‌ ಅಲ್ಟ್ರಾ-ವೈಡ್ ಲೆನ್ಸ್‌ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿರಲಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಶಿಯೋಮಿ 12 ಪ್ರೊ 5G ಸ್ಮಾರ್ಟ್‌ಫೋನ್‌ 4,600mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 120W ವೇಗದ ವೈರ್ಡ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. 50W ವೈರ್‌ಲೆಸ್ ಚಾರ್ಜಿಂಗ್ ಬೆಂಬಲವನ್ನು ಕೂಡ ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, Wi-Fi 6E, ಬ್ಲೂಟೂತ್ v5.2, NFC ಮತ್ತು USB ಟೈಪ್-C ಪೋರ್ಟ್ ಅನ್ನು ಬೆಂಬಲಿಸಲಿದೆ.

ಒನ್‌ಪ್ಲಸ್‌ ನಾರ್ಡ್‌ CE 2 ಲೈಟ್‌ 5G ಡಿಸ್ಕೌಂಟ್‌ನಲ್ಲಿ ಲಭ್ಯ

ಒನ್‌ಪ್ಲಸ್‌ ನಾರ್ಡ್‌ CE 2 ಲೈಟ್‌ 5G ಡಿಸ್ಕೌಂಟ್‌ನಲ್ಲಿ ಲಭ್ಯ

ಒನ್‌ಪ್ಲಸ್‌ ಸಂಸ್ಥೆಯ ಒನ್‌ಪ್ಲಸ್‌ ನಾರ್ಡ್‌ CE 2 ಲೈಟ್‌ 5G ಸ್ಮಾರ್ಟ್‌ಫೋನ್‌ ಅಮೆಜಾನ್ ಗ್ರೇಟ್ ಫ್ರೀಡಮ್ ಫೆಸ್ಟಿವಲ್ ಸೇಲ್‌ ನಲ್ಲಿ ಭರ್ಜರಿ ಡಿಸ್ಕೌಂಟ್ ದರದಲ್ಲಿ ಕಾಣಿಸಿಕೊಂಡಿದೆ. ಕಳೆದ ಏಪ್ರಿಲ್‌ನಲ್ಲಿ ಭಾರತದಲ್ಲಿ ಈ ಫೋನ್ ಬಿಡುಗಡೆ ಮಾಡಲಾಯಿತು. ರೇಟಿಂಗ್‌ ಹಾಗೂ ರಿವ್ಯೂವ್‌ಗಳಿಂದಲೂ ಈ ಫೋನ್ ಗ್ರಾಹಕರ ಗಮನ ಸೆಳೆದಿದೆ. ಸದ್ಯ ಅಮೆಜಾನ್‌ನ ಅಮೆಜಾನ್ ಗ್ರೇಟ್ ಫ್ರೀಡಮ್ ಫೆಸ್ಟಿವಲ್ ಸೇಲ್ ನಲ್ಲಿ ಈ ಫೋನ್ 17,999 ರೂ. ಆಫರ್‌ ಬೆಲೆಯಲ್ಲಿ ಲಭ್ಯ.

ಕ್ರೆಡಿಟ್

ಅಂದಹಾಗೇ ಅಮೆಜಾನ್ ಗ್ರೇಟ್ ಫ್ರೀಡಂ ಫೆಸ್ಟಿವಲ್ ಸೇಲ್‌ ಸದ್ಯ ಚಾಲ್ತಿ ಇದ್ದು, ಈ ಸೇಲ್ ಇದೇ ಆಗಸ್ಟ್ 10 ರಂದು ಕೊನೆಗೊಳ್ಳಲಿದೆ. ಅಮೆಜಾನ್ ಒನ್‌ಪ್ಲಸ್‌ ನಾರ್ಡ್‌ CE 2 ಲೈಟ್‌ 5G ಸ್ಮಾರ್ಟ್‌ಫೋನ್‌ ಮೇಲೆ ಫ್ಲಾಟ್ 1,000 ರೂ. ಬೆಲೆ ಕಡಿತವನ್ನು ನೀಡುತ್ತಿದೆ. SBI ಕ್ರೆಡಿಟ್ ಕಾರ್ಡ್‌ನೊಂದಿಗೆ 1,000 ರೂ. ತ್ವರಿತ ರಿಯಾಯಿತಿಯನ್ನು ಪಡೆಯಬಹುದು. ಜೊತೆಗೆ EMI ಸೌಲಭ್ಯದೊಂದಿಗೆ, 1,250ರೂ. ರಿಯಾಯಿತಿಯನ್ನು ಪಡೆಯಬಹುದು. ಇನ್ನುಳಿದಂತೆ ಈ ಫೋನಿನ ಆಫರ್‌ ಮಾಹಿತಿ ಹಾಗೂ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಆಫರ್‌ ಮಾಹಿತಿ:

ಆಫರ್‌ ಮಾಹಿತಿ:

- 1,000 ರೂ ಬೆಲೆ ಕಡಿತ
- ಎಸ್‌ಬಿಐ ಕ್ರೆಡಿಟ್ ಕಾರ್ಡ್ ವಹಿವಾಟುಗಳೊಂದಿಗೆ ರೂ 1,000 ತ್ವರಿತ ರಿಯಾಯಿತಿ (ಇಎಂಐ ಅಲ್ಲದ)
- SBI ಕ್ರೆಡಿಟ್ ಕಾರ್ಡ್ ವಹಿವಾಟುಗಳೊಂದಿಗೆ (EMI) ರೂ 1,250 ತ್ವರಿತ ರಿಯಾಯಿತಿ
- ಆಯ್ದ ಕಾರ್ಡ್‌ಗಳಲ್ಲಿ ಯಾವುದೇ ವೆಚ್ಚದ EMI, 6 ತಿಂಗಳವರೆಗೆ
- ಪ್ರೈಮ್‌ ಸದಸ್ಯರಿಗೆ ಅಮೆಜಾನ್‌ ಪೇ ಐಸಿಐಸಿಐ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ನೊಂದಿಗೆ 5% ಕ್ಯಾಶ್‌ಬ್ಯಾಕ್

ಒನ್‌ಪ್ಲಸ್‌ ನಾರ್ಡ್‌ CE 2 ಲೈಟ್‌ 5G - ಫೀಚರ್ಸ್‌

ಒನ್‌ಪ್ಲಸ್‌ ನಾರ್ಡ್‌ CE 2 ಲೈಟ್‌ 5G - ಫೀಚರ್ಸ್‌

ಒನ್‌ಪ್ಲಸ್‌ ನಾರ್ಡ್‌ CE 2 ಲೈಟ್‌ 5G ಸ್ಮಾರ್ಟ್‌ಫೋನ್‌ 1,080 x 2,412 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.59 ಇಂಚಿನ ಫುಲ್ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು 202ppi ಪಿಕ್ಸೆಲ್ ಸಾಂದ್ರತೆ ಯನ್ನು ಹೊಂದಿದೆ. ಇದು 120Hz ರಿಫ್ರೆಶ್ ರೇಟ್‌ ಅನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗ್ನ್ 695 SoC ಪ್ರೊಸೆಸರ್‌ ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಓಎಸ್‌ ಸಪೋರ್ಟ್‌ ಪಡೆದಿದೆ. ಹಾಗೆಯೇ 6GB RAM + 128GB ಮತ್ತು 8GB RAM + 128GB ಸ್ಟೋರೇಜ್‌ ಸಾಮರ್ಥ್ಯದ ವೇರಿಯಂಟ್ ಆಯ್ಕೆಗಳನ್ನು ಹೊಂದಿದೆ.

Best Mobiles in India

English summary
Xiaomi 12 Pro and OnePlus Nord CE 2 Lite 5G Available at Discount Prices on Amazon.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X