ಶಿಯೋಮಿಯ ಈ ಹೈ ಎಂಡ್ ಮೊಬೈಲ್ ಈಗ ಭಾರೀ ಡಿಸ್ಕೌಂಟ್‌ನಲ್ಲಿ ಲಭ್ಯ!
ಪ್ರಮುಖ ಮೊಬೈಲ್ ತಯಾರಿಕಾ ಕಂಪನಿಗಳಲ್ಲಿ ಒಂದಾದ ಶಿಯೋಮಿ ಕಂಪನಿಯು ಈಗಾಗಲೇ ಹಲವು ಭಿನ್ನ ಶ್ರೇಣಿಯ ಫೋನ್‌ಗಳ ಮೂಲಕ ಗ್ರಾಹಕರನ್ನು ಸೆಳೆದಿದೆ. ಬಜೆಟ್ ದರದ ಫೋನ್‌ಗಳ ಜೊತೆಗೆ ಹೈ ಎಂಡ್ ಮಾದರಿಯ ಫೋನ್‌ಗಳ ಆಯ್ಕೆಯನ್ನು ಸಹ ಹೊಂದಿದೆ. ಆ ಪೈಕಿ ಅತ್ಯುತ್ತಮ ಫೀಚರ್ಸ್‌ಗಳನ್ನು ಒಳಗೊಂಡಿರುವ ಶಿಯೋಮಿ 12 ಪ್ರೊ ಸ್ಮಾರ್ಟ್‌ಫೋನ್ ಈಗ ಭರ್ಜರಿ ಡಿಸ್ಕೌಂಟ್ ಕೊಡುಗೆಯಲ್ಲಿ ಖರೀದಿಗೆ ಲಭ್ಯ ಇದೆ.

ಹೌದು, ಶಿಯೋಮಿ ಕಂಪನಿಯ ಶಿಯೋಮಿ 12 ಪ್ರೊ ಸ್ಮಾರ್ಟ್‌ಫೋನ್ ಅನ್ನು ಗ್ರಾಹಕರು 10,000ರೂ. ವರೆಗೂ ರಿಯಾಯಿತಿ ಪಡೆಯಬಹುದಾಗಿದೆ. ಅಮೆಜಾನ್ ಕೂಪನ್ ಮತ್ತು ಐಸಿಐಸಿಐ ಕ್ರೆಡಿಟ್ ಕಾರ್ಡ್ ಕೊಡುಗೆ ಮೂಲಕ ಈ ಆಫರ್ ಪಡೆಯಬಹುದು. ಈ ಫೋನ್ 8GB/256GB ಮತ್ತು 12GB/256GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದೆ. 8GB/256GB ಬೇಸ್ ವೇರಿಯಂಟ್ ಬೆಲೆಯು 66,999ರೂ. ಆಗಿದ್ದು, ಡೀಲ್ ದರವು 52,999ರೂ. ಆಗಿದೆ.

ಅಮೆಜಾನ್ ಕೂಪನ್‌ನಲ್ಲಿ 4,000ರೂ. ರಿಯಾಯಿತಿ ಮತ್ತು ಐಸಿಐಸಿಐ ಕ್ರೆಡಿಟ್ ಮತ್ತು ಇಎಂಐ ವಹಿವಾಟುಗಳ ಮೂಲಕ 6,000 ರೂ ತ್ವರಿತ ರಿಯಾಯಿತಿಯನ್ನು ನೀಡುತ್ತಿದೆ. ಹಾಗಾದರೇ ಶಿಯೋಮಿ 12 ಪ್ರೊ ಸ್ಮಾರ್ಟ್‌ಫೋನಿನ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಶಿಯೋಮಿ 12 ಪ್ರೊ ಸ್ಮಾರ್ಟ್‌ಫೋನ್ 6.72 ಇಂಚಿನ WQHD+ E5 ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1,440 x 3,200 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಈ ಡಿಸ್‌ಪ್ಲೇ 1Hz ಮತ್ತು 120Hz ನಡುವಿನ ರಿಫ್ರೆಶ್ ರೇಟ್ ಬೆಂಬಲಿಸಲಿದೆ. ಇದು 1,500 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಹೊಂದಿದೆ. ಈ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ಪ್ರೊಟೆಕ್ಷನ್ ಅನ್ನು ಒಳಗೊಂಡಿದೆ.

ಪ್ರೊಸೆಸರ್ ಯಾವುದು?
ಶಿಯೋಮಿ 12 ಪ್ರೊ ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 12 ಅನ್ನು MIUI 13 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಇಂಟರ್ ಸ್ಟೋರೇಜ್ ಅನ್ನು ಒಳಗೊಂಡಿದೆ.

ಕ್ಯಾಮೆರಾ ಸೆನ್ಸಾರ್ ವಿಶೇಷ
ಶಿಯೋಮಿ 12 ಪ್ರೊ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೋನಿ IMX707 ಸೆನ್ಸಾರ್ ಅನ್ನು ಹೊಂದಿದ್ದು, ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ ಅನ್ನು ಬೆಂಬಲಿಸುವ f/1.8 ಲೆನ್ಸ್ ಹೊಂದಿದೆ. ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಶೂಟರ್ ಮತ್ತು ಮೂರನೇ ಕ್ಯಾಮೆತಾ 50 ಮೆಗಾಪಿಕ್ಸೆಲ್ ಟೆಲಿಫೋಟೋ ಲೆನ್ಸ್ ಅನ್ನು ಸಹ ಒಳಗೊಂಡಿದೆ. ಇನ್ನು ರಿಯರ್ ಕ್ಯಾಮೆರಾ 24fps ಫ್ರೇಮ್ ರೇಟ್‌ನಲ್ಲಿ 8K ವೀಡಿಯೊ ರೆಕಾರ್ಡಿಂಗ್ ಅನ್ನು ಬೆಂಬಲಿಸುತ್ತದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ.

ಬ್ಯಾಟರಿ ಮತ್ತು ಇತರೆ
ಶಿಯೋಮಿ 12 ಪ್ರೊ ಸ್ಮಾರ್ಟ್‌ಫೋನ್ 4,600mAh ಲಿ-ಪಾಲಿಮರ್ ಬ್ಯಾಟರಿಯನ್ನು ಹೊಂದಿದೆ. ಇದು 120W ಶಿಯೋಮಿ ಹೈಪರ್ ಚಾರ್ಜ್ ವೇಗದ ವೈರ್ಡ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಈ ಫೋನ್ ಕ್ವಿಕ್ ಚಾರ್ಜ್ 4, ಕ್ವಿಕ್ ಚಾರ್ಜ್ 3+ ಮತ್ತು ಪವರ್ ಡೆಲಿವರಿ 3.0 ಚಾರ್ಜಿಂಗ್ ಮಾನದಂಡಗಳನ್ನು ಸಹ ಬೆಂಬಲಿಸುತ್ತದೆ. ಇದಲ್ಲದೆ, ಇದು 50W ವೈರ್‌ಲೆಸ್ ಟರ್ಬೊ ಚಾರ್ಜಿಂಗ್ ಅನ್ನು ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6E, ಬ್ಲೂಟೂತ್ v5.2, GPS/ A-GPS/ NavIC, ಇನ್ಫ್ರಾರೆಡ್ (IR) ಬ್ಲಾಸ್ಟರ್, NFC, ಮತ್ತು USB ಟೈಪ್-C ಪೋರ್ಟ್ ಬೆಂಬಲಿಸಲಿದೆ.


Click it and Unblock the Notifications








