ಶಿಯೋಮಿ 12 ಪ್ರೊ ಸ್ಮಾರ್ಟ್‌ಫೋನ್‌ ಫಸ್ಟ್‌ ಸೇಲ್‌ ಇಂದು!..ಬೆಲೆ ಎಷ್ಟು?

|

ಶಿಯೋಮಿ ಸಂಸ್ಥೆಯು ಹೊಸದಾಗಿ ಬಿಡುಗಡೆ ಮಾಡಿರುವ ಶಿಯೋಮಿ 12 ಪ್ರೊ ಸ್ಮಾರ್ಟ್‌ಫೋನ್ ಆಕರ್ಷಕ ಫೀಚರ್ಸ್‌ಗಳಿಂದ ಈಗಾಗಲೇ ಗ್ರಾಹಕರನ್ನು ಸೆಳೆದಿದೆ. ಈ ಸ್ಮಾರ್ಟ್‌ಫೋನ್‌ ಫಸ್ಟ್ ಸೇಲ್ ಇಂದು ಮಧ್ಯಾಹ್ನ 12 ರಿಂದ ಇ-ಕಾಮರ್ಸ್‌ ತಾಣ ಅಮೆಜಾನ್ ಮತ್ತು ಅಧಿಕೃತ Mi.com ತಾಣಗಳಲ್ಲಿ ಮಾರಾಟ ಆರಂಭವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನಿನ ಆರಂಭಿಕ 6GB RAM + 128GB ಸ್ಟೋರೇಜ್‌ನ ವೇರಿಯಂಟ್ ಬೆಲೆಯು 62,999ರೂ.ಗಳು ಆಗಿದೆ.

ಶಿಯೋಮಿ 12 ಪ್ರೊ ಸ್ಮಾರ್ಟ್‌ಫೋನ್‌ ಫಸ್ಟ್‌ ಸೇಲ್‌ ಇಂದು!..ಬೆಲೆ ಎಷ್ಟು?

ಶಿಯೋಮಿ 12 ಪ್ರೊ ಸ್ಮಾರ್ಟ್‌ಫೋನ್ ಮೊದಲ ಮಾರಾಟ ಇಂದು (ಮೇ 2) ನಡೆಯಲಿದೆ. ಈ ಫೋನ್ ಟ್ರಿಪಲ್ ಕ್ಯಾಮೆರಾ ರಚನೆ ಪಡೆದಿದ್ದು, 50 ಮೆಗಾ ಪಿಕ್ಸೆಲ್ ಕ್ಯಾಮೆರಾ ಸೆನ್ಸಾರ್ ಒಳಗೊಂಡಿದೆ. ಹಾಗೂ ಫಾಸ್ಟ್‌ ಚಾರ್ಜಿಂಗ್ ಬೆಂಬಲಿತ 4,600mAh ಬ್ಯಾಟರಿ ಬಾಳಿಕೆಯನ್ನು ಪಡೆದಿದೆ. ಹಾಗೆಯೇ ಎರಡು ವೇರಿಯಂಟ್ ಆಯ್ಕೆ ಹೊಂದಿದ್ದು, ಅವುಗಳು ಕ್ರಮವಾಗಿ 8GB + 256GB ಮತ್ತು 12GB + 256GB ಆಗಿವೆ. ಹಾಗಾದರೇ ಶಿಯೋಮಿ 12 ಪ್ರೊ ಸ್ಮಾರ್ಟ್‌ಫೋನ್ ಇತರೆ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ತಿಳಿಯಲು ಮುಂದೆ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಶಿಯೋಮಿ 12 ಪ್ರೊ ಸ್ಮಾರ್ಟ್‌ಫೋನ್‌ 6.72 ಇಂಚಿನ WQHD+ E5 ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1,440 x 3,200 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಈ ಡಿಸ್‌ಪ್ಲೇ 1Hz ಮತ್ತು 120Hz ನಡುವಿನ ರಿಫ್ರೆಶ್‌ ರೇಟ್‌ ಬೆಂಬಲಿಸಲಿದೆ. ಇದು 1,500 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದೆ. ಈ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್‌ ಪ್ರೊಟೆಕ್ಷನ್‌ ಅನ್ನು ಒಳಗೊಂಡಿದೆ.

ಶಿಯೋಮಿ 12 ಪ್ರೊ ಸ್ಮಾರ್ಟ್‌ಫೋನ್‌ ಫಸ್ಟ್‌ ಸೇಲ್‌ ಇಂದು!..ಬೆಲೆ ಎಷ್ಟು?

ಪ್ರೊಸೆಸರ್‌ ಯಾವುದು?
ಶಿಯೋಮಿ 12 ಪ್ರೊ ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್‌ ಸ್ನಾಪ್‌ಡ್ರಾಗನ್‌ 8 Gen 1 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 12 ಅನ್ನು MIUI 13 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ.

ಕ್ಯಾಮೆರಾ ವಿಶೇಷ
ಶಿಯೋಮಿ 12 ಪ್ರೊ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೋನಿ IMX707 ಸೆನ್ಸಾರ್‌ ಅನ್ನು ಹೊಂದಿದ್ದು, ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ ಅನ್ನು ಬೆಂಬಲಿಸುವ f/1.8 ಲೆನ್ಸ್‌ ಹೊಂದಿದೆ. ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಶೂಟರ್ ಮತ್ತು ಮೂರನೇ ಕ್ಯಾಮೆತಾ 50 ಮೆಗಾಪಿಕ್ಸೆಲ್ ಟೆಲಿಫೋಟೋ ಲೆನ್ಸ್‌ ಅನ್ನು ಸಹ ಒಳಗೊಂಡಿದೆ. ಇನ್ನು ರಿಯರ್‌ ಕ್ಯಾಮೆರಾ 24fps ಫ್ರೇಮ್ ರೇಟ್‌ನಲ್ಲಿ 8K ವೀಡಿಯೊ ರೆಕಾರ್ಡಿಂಗ್ ಅನ್ನು ಬೆಂಬಲಿಸುತ್ತದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ.

ಬ್ಯಾಟರಿ ಮತ್ತು ಇತರೆ
ಶಿಯೋಮಿ 12 ಪ್ರೊ ಸ್ಮಾರ್ಟ್‌ಫೋನ್‌ 4,600mAh ಲಿ-ಪಾಲಿಮರ್‌ ಬ್ಯಾಟರಿಯನ್ನು ಹೊಂದಿದೆ. ಇದು 120W ಶಿಯೋಮಿ ಹೈಪರ್‌ ಚಾರ್ಜ್ ವೇಗದ ವೈರ್ಡ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಈ ಫೋನ್ ಕ್ವಿಕ್ ಚಾರ್ಜ್ 4, ಕ್ವಿಕ್ ಚಾರ್ಜ್ 3+ ಮತ್ತು ಪವರ್ ಡೆಲಿವರಿ 3.0 ಚಾರ್ಜಿಂಗ್ ಮಾನದಂಡಗಳನ್ನು ಸಹ ಬೆಂಬಲಿಸುತ್ತದೆ. ಇದಲ್ಲದೆ, ಇದು 50W ವೈರ್‌ಲೆಸ್ ಟರ್ಬೊ ಚಾರ್ಜಿಂಗ್ ಅನ್ನು ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6E, ಬ್ಲೂಟೂತ್ v5.2, GPS/ A-GPS/ NavIC, ಇನ್ಫ್ರಾರೆಡ್ (IR) ಬ್ಲಾಸ್ಟರ್, NFC, ಮತ್ತು USB ಟೈಪ್-C ಪೋರ್ಟ್ ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ಶಿಯೋಮಿ 12 ಪ್ರೊ ಸ್ಮಾರ್ಟ್‌ಫೋನ್‌ ಬೇಸ್‌ ಮಾಡೆಲ್‌ 8GB RAM ಮತ್ತು 256GB ಮಾದರಿಗೆ 62,999ರೂ. ಬೆಲೆ ಹೊಂದಿದೆ. ಹಾಗೆಯೇ 12GB RAM ಮತ್ತು 256GB ರೂಪಾಂತರದ ಆಯ್ಕೆಗೆ 66,999ರೂ. ಬೆಲೆ ಪಡೆದಿದೆ. ಇನ್ನು ಈ ಫೋನ್‌ ಕೌಚರ್ ಬ್ಲೂ, ನಾಯ್ರ್ ಬ್ಲಾಕ್ ಮತ್ತು ಒಪೆರಾ ಮೌವ್ ಬಣ್ಣಗಳ ಆಯ್ಕೆಯಲ್ಲಿ ಬರಲಿದೆ.

Most Read Articles
Best Mobiles in India

English summary
Xiaomi 12 Pro First Sale Today via Amazon: Price and Specifications.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X