ಶಾಶ್ವತವಾಗಿ ಬೆಲೆ ಇಳಿಕೆ ಕಂಡ ಶಿಯೋಮಿ 12 ಪ್ರೊ 5G!..ಭಾರೀ ಉಳಿತಾಯ!
ಶಿಯೋಮಿಯ ಜನಪ್ರಿಯ ಫೋನ್‌ಗಳಲ್ಲಿ ಒಂದಾದ ಶಿಯೋಮಿ 12 ಪ್ರೊ ಹೈ ಎಂಡ್ ಫೀಚರ್ಸ್‌ಗಳಿಂದ ಗ್ರಾಹಕರ ಗಮನ ಸೆಳೆದಿದೆ. ಇನ್ನು ಈ ಫೋನ್ ಖರೀದಿಸುವ ಗ್ರಾಹಕರಿಗೆ ಶಿಯೋಮಿ ಸಂಸ್ಥೆಯು ಈಗ ಭರ್ಜರಿ ಸಿಹಿಸುದ್ದಿ ನೀಡಿದೆ. ಸಂಸ್ಥೆಯು ಶಿಯೋಮಿ 12 ಪ್ರೊ ಫೋನ್ ಬೆಲೆಯಲ್ಲಿ ಇದೀಗ ಶಾಶ್ವತವಾಗಿ ಬೆಲೆ ಇಳಿಕೆ ಘೋಷಿಸಿದೆ.
ಹೌದು, ಶಿಯೋಮಿ ಸಂಸ್ಥೆ ತನ್ನ ಶಿಯೋಮಿ 12 ಪ್ರೊ 5G ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಭಾರೀ ಇಳಿಕೆ ತಿಳಿಸಿದೆ. ಈ ಫೋನ್ 62,999ರೂ. ಪ್ರೈಸ್ ಟ್ಯಾಗ್‌ನಲ್ಲಿ ಲಾಂಚ್ ಆಗಿತ್ತು. ಆದ್ರೆ ಈಗ ಬೆಲೆ ಇಳಿಕೆಯಿಂದಾಗಿ 42,999ರೂ. ಗಳಿಗೆ ಖರೀದಿಗೆ ಲಭ್ಯ. ಅಂದಹಾಗೆ ಈ ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್ ನಲ್ಲಿ ಕಾರ್ಯನಿರ್ವಹಿಸುತ್ತದೆ.

ಹಾಗೆಯೇ ಈ ಫೋನ್ 8 GB RAM + 256 GB ಹಾಗೂ 12 GB RAM + 256 GB ಇಂಟರ್ ಸ್ಟೋರೇಜ್ ಆಯ್ಕೆ ಪಡೆದಿದ್ದು, ಜೊತೆಗೆ ತ್ರಿವಳಿ ಕ್ಯಾಮೆರಾ ರಚನೆಯನ್ನು ಪಡೆದಿದೆ. ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಇನ್ನುಳಿದಂತೆ ಈ ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಶಿಯೋಮಿ 12 ಪ್ರೊ 5G ವಿಶೇಷತೆ ಹೇಗಿದೆ : ಶಿಯೋಮಿ 12 ಪ್ರೊ 5G ಸ್ಮಾರ್ಟ್‌ಫೋನ್ 1,440 x 3,200 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.73 ಇಂಚಿನ WQHD+ Samsung E5 ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಇನ್ನು ಈ ಡಿಸ್‌ಪ್ಲೇ 1,500 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಮತ್ತು 120Hz ಡೈನಾಮಿಕ್ ರಿಫ್ರೆಶ್ ರೇಟ್ ಅನ್ನು ಹೊಂದಿದೆ.
ಶಿಯೋಮಿ 12 ಪ್ರೊ 5G ಪ್ರೊಸೆಸರ್ ಯಾವುದು : ಶಿಯೋಮಿ 12 ಪ್ರೊ 5G ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 8 GB RAM + 256 GB ಹಾಗೂ 12 GB RAM + 256 GB ಇಂಟರ್ ಸ್ಟೋರೇಜ್ ಆಯ್ಕೆ ಹೊಂದಿದೆ.

ಶಿಯೋಮಿ 12 ಪ್ರೊ 5G ಕ್ಯಾಮೆರಾ ಸೆಟ್‌ಅಪ್ ಏನಿದೆ : ಶಿಯೋಮಿ 12 ಪ್ರೊ 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ನೊಂದಿಗೆ ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೋನಿ IMX707 ಸೆನ್ಸಾರ್, ಎರಡನೇ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಪೋರ್ಟ್ರೇಟ್ ಲೆನ್ಸ್ ಮತ್ತು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಅಲ್ಟ್ರಾ ವೈಡ್ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.
ಶಿಯೋಮಿ 12 ಪ್ರೊ 5G ಬ್ಯಾಟರಿ ಮತ್ತು ಇತರೆ ಫೀಚರ್ಸ್ : ಶಿಯೋಮಿ 12 ಪ್ರೊ 5G ಸ್ಮಾರ್ಟ್‌ಫೋನ್ 4,600 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 120W ವೇಗದ ವೈರ್ಡ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. 50W ವೈರ್‌ಲೆಸ್ ಚಾರ್ಜಿಂಗ್ ಬೆಂಬಲವನ್ನು ಕೂಡ ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, Wi-Fi 6E, ಬ್ಲೂಟೂತ್ v5.2, NFC ಮತ್ತು USB ಟೈಪ್-C ಪೋರ್ಟ್ ಅನ್ನು ಬೆಂಬಲಿಸಲಿದೆ. ಇನ್ನು ಈ ಫೋನ್ ಬ್ಲೂ, ಬ್ಲ್ಯಾಕ್ ಹಾಗೂ ಓಪೆರಾ ಮಾವೆ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.


Click it and Unblock the Notifications








