Home
ಸುದ್ದಿಜಾಲ

ಡಿಸೆಂಬರ್‌ 28ರಂದು ಮಾರುಕಟ್ಟೆಗೆ ಎಂಟ್ರಿ ನೀಡಲಿದೆ ಶಿಯೋಮಿ 12 ಸರಣಿ!

ಜಾಗತಿಕ ಮಾರುಕಟ್ಟೆಯಲ್ಲಿ ಶಿಯೋಮಿ ಕಂಪೆನಿ ತನ್ನದೇ ಆದ ಜನಪ್ರಿಯತೆಯನ್ನು ಪಡೆದುಕೊಂಡಿದೆ. ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಸ್ಮಾರ್ಟ್‌ಫೋನ್‌ ಪ್ರಿಯರ ನೆಚ್ಚಿನ ಬ್ರಾಂಡ್‌ಗಳಲ್ಲಿ ಒಂದೆನಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ಸ್ಮಾರ್ಟ್‌ಫೋನ್‌ ಶಿಯೋಮಿ 12 ಸರಣಿ ಬಿಡುಗಡೆ ವಿಚಾರವಾಗಿ ಸುದ್ದಿಯಲ್ಲಿದೆ. ಶಿಯೋಮಿಯ ಹೊಸ ಸ್ಮಾರ್ಟ್‌ಫೋನ್‌ ಶಿಯೋಮಿ 12 ಸರಣಿ ಇದೇ ಡಿಸೆಂಬರ್ 28 ರಂದು ಬಿಡುಗಡೆ ಆಗಲಿದೆ ಎಂದು ಹೇಳಲಾಗಿದೆ.

ಶಿಯೋಮಿ

ಹೌದು, ಶಿಯೋಮಿ ಕಂಪೆನಿ ಹೊಸ ಶಿಯೋಮಿ 12 ಸರಣಿಯ ಬಿಡುಗಡೆ ದಿನಾಂಕ ಬಹಿರಂಗಪಡಿಸಿದೆ. ಇದೇ ಸಂದರ್ಭದಲ್ಲಿ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದು ಆನ್‌ಲೈನ್‌ನಲ್ಲಿ ಬಹಿರಂಗವಾಗಿದೆ. ಲೀಕ್‌ ಮಾಹಿತಿ ಪ್ರಕಾರ ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿರಲಿದೆ ಎನ್ನಲಾಗಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ ಎಲ್ಇಡಿ ಫ್ಲ್ಯಾಷ್ ಅನ್ನು ಒಳಗೊಂಡಿರುವುದಾಗಿ ಹೇಳಲಾಗಿದೆ. ಹಾಗಾದ್ರೆ ಶಿಯೋಮಿ 12 ಸರಣಿ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಶಿಯೋಮಿ 12 ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.28 ಇಂಚಿನ ಅಮೋಲೆಡ್‌ ಡಿಸ್‌ಪ್ಲೇ ಹೊಂದಿರಲಿದೆ. ಈ ಡಿಸ್‌ಪ್ಲೇ 120Hz ರಿಫ್ರೇಶ್‌ ರೇಟ್‌ ಹೊಂದಿರುವ ಸಾದ್ಯತೆ ಇದೆ ಎನ್ನಲಾಗಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಪಡೆದುಕೊಂಡಿದೆ. ಇದು HDR10+ ಮತ್ತು Dolby Vision ಬೆಂಬಲಿಸುವ ಫುಲ್‌ ಹೆಚ್‌ಡಿ+ ಡಿಸ್ಪ್ಲೇ ಹೊಂದಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8 Gen 1 ಚಿಪ್‌ಸೆಟ್ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಶಿಯೋಮಿ 12 ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಮತ್ತು 3x ಜೂಮ್ ಲೆನ್ಸ್ ಅನ್ನು ಹೊಂದಿರಬಹುದು. ಇದಲ್ಲದೆ 20 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಶಿಯೋಮಿ 12 ಸ್ಮಾರ್ಟ್‌ಫೋನ್‌ 4500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 67W ವೈರ್ಡ್ ಚಾರ್ಜಿಂಗ್ ಮತ್ತು 30W ವೈರ್‌ಲೆಸ್ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, 5G, ಬ್ಲೂಟೂತ್ 5.2, Wi-Fi 6, NFC ಮತ್ತು ಹೆಚ್ಚಿನವುಗಳಿಗೆ ಬೆಂಬಲವನ್ನು ತರುವ ನಿರೀಕ್ಷೆಯಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಶಿಯೋಮಿ 12 ಸ್ಮಾರ್ಟ್‌ಫೋನ್‌ ಭಾರತದಲ್ಲಿ ಸುಮಾರು 44,000 ರೂಗಳಲ್ಲಿ ಲಭ್ಯವಾಗಬಹುದು ಎನ್ನಲಾಗಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ ಶಿಯೋಮಿ 12 ಬಿಡುಗಡೆಯು ಡಿಸೆಂಬರ್ 28 ರಂದು ನಡೆಯಲಿದೆ. ಶಿಯೋಮಿ 12 ನ ಅಧಿಕೃತ ಬೆಲೆಯನ್ನು ಬಿಡುಗಡೆಯ ದಿನದಂದು ಅನಾವರಣಗೊಳಿಸಲಾಗುವುದು ಎನ್ನಲಾಗಿದೆ.

ಶಿಯೋಮಿ

ಇನ್ನು ಇತ್ತೀಚಿಗೆ ಶಿಯೋಮಿ ಕಂಪೆನಿ ತನ್ನ ಶಿಯೋಮಿ 11 ಯೂತ್ ವಿಟಾಲಿಟಿ ಆವೃತ್ತಿಯನ್ನು ಪರಿಚಯಿಸಿತ್ತು. ಈ ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.55 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟೋ-ಕೋರ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 778G SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ MIUI 12.5 ಜೊತೆಗೆ ಕಾರ್ಯನಿರ್ವಹಿಸುತ್ತದೆ. ಜೊತೆಗೆ 8GB RAM ಮತ್ತು 128GB ಮತ್ತು 256GB ಸ್ಟೋರೇಜ್‌ ವೇರಿಯೆಂಟ್‌ ಆಯ್ಕೆಗಳನ್ನು ಹೊಂದಿದೆ. ಶಿಯೋಮಿ 11 ಯೂತ್ ವಿಟಾಲಿಟಿ ಆವೃತ್ತಿಯು ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ f/1.79 ಲೆನ್ಸ್‌ನೊಂದಿಗೆ ಹೊಂದಿದೆ. ಇದಲ್ಲದೆ ಸೆಲ್ಫಿಗಳು ಮತ್ತು ವೀಡಿಯೋ ಚಾಟ್‌ಗಳಿಗಾಗಿ 20-ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ f/2.24 ಲೆನ್ಸ್‌ ಅನ್ನು ಹೊಂದಿದೆ.

Best Mobiles in India

English summary
Xiaomi 12 series Launch Date Set for December 28.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+