Home
ಸುದ್ದಿಜಾಲ

ಜಾಗತಿಕ ಮಾರುಕಟ್ಟೆಯಲ್ಲಿ ಶಿಯೋಮಿ 12 ಸರಣಿ ಬಿಡುಗಡೆ! ವಿಶೇಷತೆ ಏನು?

ಟೆಕ್‌ ಮಾರುಕಟ್ಟೆಯಲ್ಲಿ ಶಿಯೋಮಿ ಕಂಪೆನಿ ತನ್ನ ವಿಶೇಷ ಸ್ಮಾರ್ಟ್‌ಫೋನ್‌ಗಳಿಗೆ ಪ್ರಸಿದ್ಧಿ ಪಡೆದುಕೊಂಡಿದೆ. ಈಗಾಗಲೇ ಅನೇಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ತನ್ನ ಸ್ಥಾನ ಭದ್ರಪಡಿಸಿಕೊಂಡಿದೆ. ಸದ್ಯ ಇದೀಗ ಜಾಗತಿಕ ಮಾರುಕಟ್ಟೆಯಲ್ಲಿ ಶಿಯೋಮಿ 12, ಶಿಯೋಮಿ 12 ಪ್ರೊ ಮತ್ತು ಶಿಯೋಮಿ 12X ಫೋನ್‌ಗಳನ್ನು ಲಾಂಚ್‌ ಮಾಡಿದೆ. ಇದರಲ್ಲಿ ಶಿಯೋಮಿ 12 ಮತ್ತು ಶಿಯೋಮಿ 12 ಪ್ರೊ ಸ್ಮಾರ್ಟ್‌ಫೋನ್‌ಗಳು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8 Gen 1 SoC ಪ್ರೊಸೆಸರ್‌ ಹೊಂದಿವೆ. ಆದರೆ ಶಿಯೋಮಿ 12X ಫೋನ್‌ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್‌ ಬಲವನ್ನು ಪಡೆದಿದೆ.

ಶಿಯೋಮಿ

ಹೌದು, ಶಿಯೋಮಿ ಕಂಪೆನಿ ಜಾಗತಿಕ ಮಾರುಕಟ್ಟೆಯಲ್ಲಿ ಶಿಯೋಮಿ 12 ಸರಣಿಯ ಮೂರು ಹೊಸ ಫೋನ್‌ಗಳನ್ನು ಬಿಡುಗಡೆ ಮಾಡಿದೆ. ಇನ್ನು ಈ ಮೂರು ಸ್ಮಾರ್ಟ್‌ಫೋನ್‌ಗಳು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿವೆ. ಇದಲ್ಲದೆ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಪ್ರೈಮರಿ ಕ್ಯಾಮೆರಾವನ್ನು ಒಳಗೊಂಡಿವೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ಗಳ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಶಿಯೋಮಿ 12 ಸ್ಮಾರ್ಟ್‌ಫೋನ್‌

ಶಿಯೋಮಿ 12 ಸ್ಮಾರ್ಟ್‌ಫೋನ್‌

ಶಿಯೋಮಿ 12 ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.28 ಇಂಚಿನ ಫುಲ್‌ HD+ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಒಳಗೊಂಡಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್‌ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯವನ್ನು ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 10W ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್ ಬೆಂಬಲವನ್ನು ಸಹ ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6E, ಬ್ಲೂಟೂತ್ v5.2, GPS/ A-GPS, NFC, ಇನ್ಫ್ರಾರೆಡ್ (IR), ಮತ್ತು USB ಟೈಪ್-C ಪೋರ್ಟ್ ಸೇರಿದೆ.

ಶಿಯೋಮಿ 12 ಪ್ರೊ ಸ್ಮಾರ್ಟ್‌ಫೋನ್‌

ಶಿಯೋಮಿ 12 ಪ್ರೊ ಸ್ಮಾರ್ಟ್‌ಫೋನ್‌

ಶಿಯೋಮಿ 12 ಪ್ರೊ ಸ್ಮಾರ್ಟ್‌ಫೋನ್‌ 6.73 ಇಂಚಿನ WQHD+ E5 ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 120Hz ಡೈನಾಮಿಕ್ ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಇದು ಆಪಲ್ ತನ್ನ ಪ್ರೀಮಿಯಂ ಐಫೋನ್ ಮಾದರಿಗಳಲ್ಲಿ ಬಳಸುವ ಕಡಿಮೆ-ತಾಪಮಾನದ ಪಾಲಿಕ್ರಿಸ್ಟಲಿನ್ ಆಕ್ಸೈಡ್ (LTPO) ಬ್ಯಾಕ್‌ಪ್ಲೇನ್ ತಂತ್ರಜ್ಞಾನವನ್ನು ಸಹ ಒಳಗೊಂಡಿದೆ. ಈ ಫೋನ್‌ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್‌ ಹೊಂದಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX707 ಪ್ರೈಮೆರಿ ಸೆನ್ಸಾರ್‌ ಅನ್ನು ಹೊಂದಿದೆ. ಜೊತೆಗೆ ಇದು 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯವನ್ನು ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಈ ಫೋನ್‌ 4,600mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು120W ವೇಗದ ವೈರ್ಡ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಫೋನ್ 50W ವೈರ್‌ಲೆಸ್ ಚಾರ್ಜಿಂಗ್ ಮತ್ತು 10W ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್ ಅನ್ನು ಸಹ ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6E, ಬ್ಲೂಟೂತ್ v5.2, GPS/ A-GPS, NFC, ಇನ್ಫ್ರಾರೆಡ್ (IR), ಮತ್ತು USB ಟೈಪ್-C ಪೋರ್ಟ್ ಅನ್ನು ಒಳಗೊಂಡಿದೆ.

ಶಿಯೋಮಿ 12X ಸ್ಮಾರ್ಟ್‌ಫೋನ್‌

ಶಿಯೋಮಿ 12X ಸ್ಮಾರ್ಟ್‌ಫೋನ್‌

ಶಿಯೋಮಿ 12X ಸ್ಮಾರ್ಟ್‌ಫೋನ್‌ ಅದೇ 6.28 ಇಂಚಿನ ಫುಲ್‌ HD+ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಒಳಗೊಂಡಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 870 SoC ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಜೊತೆಗೆ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 10W ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್ ಬೆಂಬಲವನ್ನು ಸಹ ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಶಿಯೋಮಿ 12 ಸ್ಮಾರ್ಟ್‌ಫೋನ್‌ 8GB RAM + 128GB ಸ್ಟೋರೇಜ್ ರೂಪಾಂತರಕ್ಕಾಗಿ $ 749 (ಸುಮಾರು 57,200ರೂ) ಬೆಲೆ ಹೊಂದಿದೆ. ಇನ್ನು ಶಿಯೋಮಿ 12 ಪ್ರೊ 8GB RAM + 256GB ಸ್ಟೋರೇಜ್ ರೂಪಾಂತರಕ್ಕಾಗಿ $999 (ಸುಮಾರು 76,300ರೂ) ಬೆಲೆ ಪಡೆದಿದೆ. ಆದರೆ ಶಿಯೋಮಿ 12X ಫೋನ್‌ 8GB RAM + 128GB ಸ್ಟೋರೇಜ್ ರೂಪಾಂತರಕ್ಕಾಗಿ $649 (ಸುಮಾರು 49,600ರೂ)ಬೆಲೆಯನ್ನು ಒಳಗೊಂಡಿದೆ.ಈ ಮೂರು ಸ್ಮಾರ್ಟ್‌ಫೋನ್‌ಗಳು ನೀಲಿ, ಬೂದು ಮತ್ತು ನೇರಳೆ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿದೆ.

Best Mobiles in India

English summary
Xiaomi 12 series With Triple Rear Cameras launched globally
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+