ಶಿಯೋಮಿ 13 ಸ್ಮಾರ್ಟ್‌ಫೋನ್ ಸರಣಿ ಬಿಡುಗಡೆ! ಲೈಕಾ ಕ್ಯಾಮೆರಾ ಲೆನ್ಸ್‌ ವಿಶೇಷ!

|

ಬಹು ನಿರೀಕ್ಷಿತ ಶಿಯೋಮಿ 13 ಸ್ಮಾರ್ಟ್‌ಫೋನ್ ಸರಣಿ ಅಧಿಕೃತವಾಗಿ ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಇನ್ನು ಸರಣಿಯಲ್ಲಿ ಶಿಯೋಮಿ 13 ಮತ್ತು ಶಿಯೋಮಿ 13 ಪ್ರೊ ಸ್ಮಾರ್ಟ್‌ಫೋನ್‌ಗಳು ಸೇರಿವೆ. ಈ ಎರಡೂ ಸ್ಮಾರ್ಟ್‌ಫೋನ್‌ಗಳು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 8 Gen 2SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 512GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ ಸರಣಿ ಲೈಕಾ ಕ್ಯಾಮೆರಾ ಲೆನ್ಸ್‌ನೊಂದಿಗೆ ಬರುತ್ತದೆ.

ಶಿಯೋಮಿ

ಹೌದು, ಶಿಯೋಮಿ ಕಂಪೆನಿ ತನ್ನ ಶಿಯೋಮಿ 13 ಸರಣಿಯನ್ನು ಲಾಂಚ್‌ ಮಾಡಿದೆ. ಈ ಸರಣಿಯ ಸ್ಮಾರ್ಟ್‌ಫೋನ್‌ಗಳು ತಮ್ಮ ಆಕರ್ಷಕ ಫೀಚರ್ಸ್‌ಗಳಿಂದ ಗಮನಸೆಳೆದಿವೆ. ಇದರಲ್ಲಿ ಶಿಯೋಮಿ 13 ಸ್ಮಾರ್ಟ್‌ಫೋನ್‌ 6.36 ಇಂಚಿನ ಒಎಲ್‌ಇಡಿ ಡಿಸ್‌ಪ್ಲೇ ಹೊಂದಿದೆ. ಆದರೆ ಶಿಯೋಮಿ 13 ಪ್ರೊ ಸ್ಮಾರ್ಟ್‌ಫೋನ್‌ 6.7 ಇಂಚಿನ ಡಿಸ್‌ಪ್ಲೇಯನ್ನು ಪಡೆದುಕೊಂಡಿದೆ. ಇನ್ನುಳಿದಂತೆ ಈ ಎರಡು ಸ್ಮಾರ್ಟ್‌ಫೋನ್‌ಗಳ ವಿಶೇಷತೆ ಏನು? ಫೀಚರ್ಸ್‌ ಏನಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಶಿಯೋಮಿ 13 ಫೀಚರ್ಸ್‌ ಹೇಗಿದೆ?

ಶಿಯೋಮಿ 13 ಫೀಚರ್ಸ್‌ ಹೇಗಿದೆ?

ಶಿಯೋಮಿ 13 ಸ್ಮಾರ್ಟ್‌ಫೋನ್‌ 6.36 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ OLED ಡಿಸ್ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯವನ್ನು ಒಳಗೊಂಡಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌, ಡಾಲ್ಬಿ ವಿಷನ್, HDR10+ ಮತ್ತು HLG ಬೆಂಬಲವನ್ನು ನೀಡುತ್ತದೆ. ಇನ್ನು ಡಿಸ್‌ಪ್ಲೇ 1,900ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ನೀಡಲಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 8 Gen 2 SoC ಪ್ರೊಸೆಸರ್‌ ಹೊಂದಿದೆ. ಹಾಗೆಯೇ 12GB RAM ಮತ್ತು 512GB ಇನ್‌ಬಿಲ್ಟ್‌ ಸ್ಟೋರೇಜ್‌ ಪಡೆದುಕೊಂಡಿದೆ.

ಸ್ಮಾರ್ಟ್‌ಫೋನ್‌

ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಹೊಂದಿದ್ದು, ಲೈಕಾ-ಕ್ಯಾಮೆರಾ ಲೆನ್ಸ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 10 ಮೆಗಾಪಿಕ್ಸೆಲ್ OIS-ಸಕ್ರಿಯಗೊಳಿಸಿದ ಟೆಲಿಫೋಟೋ ಕ್ಯಾಮೆರಾ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ 4500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 7W ವೈರ್ಡ್ ಮತ್ತು 50W ವೈರ್‌ಲೆಸ್ ಚಾರ್ಜಿಂಗ್‌ ಬೆಂಬಲಿಸಲಿದೆ.

ಶಿಯೋಮಿ 13ಪ್ರೊ ಫೀಚರ್ಸ್‌ ಹೇಗಿದೆ?

ಶಿಯೋಮಿ 13ಪ್ರೊ ಫೀಚರ್ಸ್‌ ಹೇಗಿದೆ?

ಶಿಯೋಮಿ 13ಪ್ರೊ ಸ್ಮಾರ್ಟ್‌ಫೋನ್‌ 6.7-ಇಂಚಿನ LTPO OLED ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌, ಡಾಲ್ಬಿ ವಿಷನ್ ಮತ್ತು HDR10 ಬೆಂಬಲದೊಂದಿಗೆ ಬರಲಿದೆ. ಇನ್ನು ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್‌ ಪ್ರೊಟೆಕ್ಷನ್‌ ಪಡೆದಿದೆ. ಇದು ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 8 Gen 2 SoC ಪ್ರೊಸೆಸರ್‌ ಹೊಂದಿದೆ. ಹಾಗೆಯೇ 12GB RAM ಮತ್ತು 512GB ಇನ್‌ಬಿಲ್ಟ್‌ ಸ್ಟೋರೇಜ್‌ ಪಡೆದುಕೊಂಡಿದೆ.

ಇದರಲ್ಲಿ

ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರಲ್ಲಿ ಮೂರು ಕ್ಯಾಮೆರಾಗಳು ಕೂಡ 50 ಮೆಗಾಪಿಕ್ಸೆಲ್ ಸೆನ್ಸಾರ್‌ ನೀಡಲಿವೆ. ಇದರಲ್ಲಿ ಟೆಲಿಫೋಟೋ ಲೆನ್ಸ್‌ ಕ್ಯಾಮೆರಾ 3.2 ಆಪ್ಟಿಕಲ್ ಜೂಮ್ ನೀಡುತ್ತದೆ. ಜೊತೆಗೆ ಶಿಯೋಮಿ 13 ಪ್ರೊ ಸ್ಮಾರ್ಟ್‌ಫೋನ್ 4820mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 120W ವೈರ್ಡ್ ಮತ್ತು 50W ವೈರ್‌ಲೆಸ್ ಚಾರ್ಜಿಂಗ್ ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಶಿಯೋಮಿ ಕಂಪೆನಿಯ ಈ ಎರಡು ಸ್ಮಾರ್ಟ್‌ಫೋನ್‌ಗಳು ಪ್ರಸ್ತುತ ಚೀನಾದಲ್ಲಿ ಮಾತ್ರ ಬಿಡುಗಡೆಯಾಗಿವೆ. ಇದರಲ್ಲಿ ಶಿಯೋಮಿ 13 8GM RAM ಮತ್ತು 128GB ಸ್ಟೋರೇಜ್ ಮಾಡೆಲ್‌ಗೆ ಬೆಲೆಯು CNY 3,999 (ಸುಮಾರು 47,300ರೂ)ಬೆಲೆ ಪಡೆದಿದೆ. ಹಾಗೆಯೇ 12GB RAM ಮತ್ತು 512GB ಸಂಗ್ರಹದ ಬೆಲೆ CNY 4,999 (ಸುಮಾರು 60,000ರೂ)ಬೆಲೆ ಒಳಗೊಂಡಿದೆ.
ಇನ್ನು ಶಿಯೋಮಿ 13 ಪ್ರೊ ಸ್ಮಾರ್ಟ್‌ಫೋನ್‌ ಬೇಸ್‌ ಮಾಡೆಲ್‌ 8GB RAM ಮತ್ತು 128GB ಸ್ಟೋರೇಜ್ ಆವೃತ್ತಿಗೆ CNY 4,999 (ಸುಮಾರು 60,000ರೂ)ಬೆಲೆಯನ್ನು ಪಡೆದುಕೊಂಡಿದೆ. ಇದರ 12GB RAM ಮತ್ತು 512GB ಸ್ಟೋರೇಜ್ ಮಾದರಿಯ ಬೆಲೆ CNY 6,299 (ಸುಮಾರು 74,500ರೂ)ಆಗಿದೆ. ಈ ಎರಡೂ ಸ್ಮಾರ್ಟ್‌ಫೋನ್‌ಗಳು ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿವೆ ಎಂದು ಹೇಳಲಾಗಿದೆ.

Best Mobiles in India

Read more about:
English summary
Xiaomi 13 series with Leica cameras launched

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X