ಶಿಯೋಮಿ 13T ಪ್ರೊ ಬಿಡುಗಡೆಗೆ ಮುಹೂರ್ತ ಫಿಕ್ಸ್; ಸ್ಟೈಲಿಶ್ ಡಿಸೈನ್, ಸ್ಟನಿಂಗ್ ಫೀಚರ್ಸ್!
ಶಿಯೋಮಿ ಕಂಪೆನಿ ಟೆಕ್ ವಲಯದಲ್ಲಿ ಸ್ಮಾರ್ಟ್‌ಫೋನ್ ದೈತ್ಯ ಅಂತಾನೇ ಹೆಸರುವಾಸಿಯಾಗಿದೆ. ತನ್ನ ವಿಭಿನ್ನ ಶೈಲಿಯ ಸ್ಮಾರ್ಟ್‌ಫೋನ್‌ಗಳು ಸ್ಮಾರ್ಟ್‌ಫೋನ್ ಪ್ರಿಯರ ಹಾಟ್‌ಫೇವರಿಟ್ ಆಗಿವೆ. ಅದರಂತೆ ಇದೀಗ ಶಿಯೋಮಿ ಕಂಪೆನಿ ಹೊಸ ಶಿಯೋಮಿ 13T ಪ್ರೊ ಸ್ಮಾರ್ಟ್‌ಫೋನ್ ಪರಿಚಯಿಸಲು ಮುಂದಾಗಿದೆ. ಇದು ಇದೇ ಸೆಪ್ಟೆಂಬರ್ 1 ರಂದು ಲಾಂಚ್ ಆಗುವ ಸೂಚನೆ ಸಿಕ್ಕಿದೆ.
ಹೌದು, ಶಿಯೋಮಿ 13T ಪ್ರೊ ಸ್ಮಾರ್ಟ್‌ಫೋನ್ ಶೀಘ್ರದಲ್ಲೇ ಜಾಗತಿಕ ಮಾರುಕಟ್ಟೆಗೆ ಎಂಟ್ರಿ ನೀಡುವ ಸುಳಿವು ದೊರೆತಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 9200 ಅಲ್ಟ್ರಾ ಪ್ರೊಸೆಸರ್‌ನೊಂದಿಗೆ ಬರಲಿದೆ. ಜೊತೆಗೆ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ನೊಂದಿಗೆ ಬರಲಿದೆ ಎಂದು ಅಂದಾಜಿಸಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ನೊಂದಿಗೆ ಬರತಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಶಿಯೋಮಿ 13T ಪ್ರೊ ಡಿಸ್‌ಪ್ಲೇ ರಚನೆ
ಶಿಯೋಮಿ 13T ಪ್ರೊ ಸ್ಮಾರ್ಟ್‌ಫೋನ್ 6.67 ಇಂಚಿನ ಅಮೋಲೆಡ್ ಕ್ರಿಸ್ಟಲ್ ರೆಸ್ ಪ್ಯಾನೆಲ್ ಅನ್ನು ಹೊಂದಿರಲಿದೆ. ಇದು 2712 x 1220 ಪಿಕ್ಸೆಲ್ ಸ್ಕ್ರಿನ್ ರೆಸಲ್ಯೂಶನ್ ಸಾಮರ್ಥ್ಯದಲ್ಲಿ ಬರಲಿದೆ. ಈ ಡಿಸ್‌ಪ್ಲೇ 446 PPI ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದ್ದು, 144Hz ರಿಫ್ರೆಶ್ ರೇಟ್ ಬೆಂಬಲಿಸಲಿದ ಎಂದು ಅಂದಾಜಿಸಲಾಗಿದೆ. ಜೊತೆಗೆ ಸ್ಮಾರ್ಟ್‌ಫೋನ್ ಡಿಸ್‌ಪ್ಲೇ 2600 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್‌ನೊಂದಿಗೆ ಬರುವ ನಿರೀಕ್ಷೆಯಿದೆ.
ಶಿಯೋಮಿ 13T ಪ್ರೊ ಪ್ರೊಸೆಸರ್ ಯಾವುದು?
ಶಿಯೋಮಿ 13T ಪ್ರೊ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 9200 ಅಲ್ಟ್ರಾ ಪ್ರೊಸೆಸರ್ ವೇಗವನ್ನು ಹೊಂದಿರಲಿದೆ. ಇದು ಆರ್ಮ್ ಇಮ್ಮಾರ್ಟಲಿಸ್-ಜಿ715 ಜಿಪಿಯು ಸಪೋರ್ಟ್ ಪಡೆದುಕೊಂಡಿದ್ದು, ಆಂಡ್ರಾಯ್ಡ್ 13 ಬೆಂಬದಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 16GB RAM ಮತ್ತು 1TB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿರಲಿದೆ.
ಶಿಯೋಮಿ 13T ಪ್ರೊ ಕ್ಯಾಮೆರಾ ಸೆಟ್‌ಅಪ್
ಶಿಯೋಮಿ 13T ಪ್ರೊ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ನೊಂದಿಗೆ ಬರುವ ನಿರೀಕ್ಷೆಯಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX 707 1 / 1.28 ಸೆನ್ಸಾರ್, ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಓಮ್ನಿವಿಷನ್ OV50D ಟೆಲಿಫೋಟೋ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಓಮ್ನಿವಿಷನ್ OV13B ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಅನ್ನು ಒಳಗೊಂಡಿದೆ. ಇದಲ್ಲದೆ 20 ಮೆಗಾಪಿಕ್ಸೆಲ್ ಸೋನಿ IMX 596 ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ.
ಶಿಯೋಮಿ 13T ಪ್ರೊ ಬ್ಯಾಟರಿ ಮತ್ತು ಇತರೆ
ಶಿಯೋಮಿ 13T ಪ್ರೊ ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 120W ಶಿಯೋಮಿ ಸ್ಮಾರ್ಟ್ ಹೈಪರ್ಚಾರ್ಜ್ ವೈರ್ಡ್ ತಂತ್ರಜ್ಞಾನದೊಂದಿಗೆ ಬರಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಯುಎಸ್‌ಬಿ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಬೆಂಬಲಿಸಲಿದೆ.
ಶಿಯೋಮಿ 13T ಪ್ರೊ ಬೆಲೆ ಮತ್ತು ಲಭ್ಯತೆ
ಶಿಯೋಮಿ 13T ಪ್ರೊ ಸ್ಮಾರ್ಟ್‌ಫೋನ್ 12GB + 512GB ರೂಪಾಂತರದ ಬೆಲೆ £699 (ಅಂದಾಜು 74,100ರೂ) ಇರಲಿದೆ ಎಂದು ಅಂದಾಜಿಸಲಾಗಿದೆ. ಇದರ 16GB RAM ಮತ್ತು 1TB ಸ್ಟೋರೇಜ್ ಹೊಂದಿರುವ ಪ್ರೊ ಮಾದರಿಯ ಬೆಲೆ €999 (ಅಂದಾಜು 90,500)ಆಗಿರಬಹುದು ಎಂಬ ನಿರೀಕ್ಷೆಯಿದೆ. ಈ ಸ್ಮಾರ್ಟ್‌ಫೋನ್ ಸೆಪ್ಟೆಂಬರ್ ತಿಂಗಳ ಮೊದಲ ವಾರದಲ್ಲಿ ಲಭ್ಯವಾಗಲಿದೆ. ಇನ್ನು ಸ್ಮಾರ್ಟ್‌ಫೋನ್ ಕಪ್ಪು, ಆಲ್ಪೈನ್ ಬ್ಲೂ ಕಲರ್ ಆಯ್ಕೆಯಲ್ಲಿ ಬರುವ ಸಾಧ್ಯತೆಯಿದೆ. ಇದು ಭಾರತಕ್ಕೆ ಎಂಟ್ರಿ ನೀಡುವ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ.


Click it and Unblock the Notifications








