Home
ಸುದ್ದಿಜಾಲ

ಶಿಯೋಮಿ 13T ಪ್ರೊ ಸ್ಮಾರ್ಟ್‌ಫೋನ್‌ ಲಾಂಚ್‌ ಡೇಟ್‌ ಬಹಿರಂಗ!

ಶಿಯೋಮಿ ಕಂಪೆನಿ ಶೀಘ್ರದಲ್ಲೇ ಶಿಯೋಮಿ 13T ಪ್ರೊ ಸ್ಮಾರ್ಟ್‌ಫೋನ್‌ ಪರಿಚಯಿಸುವುದು ಪಕ್ಕಾ ಆಗಿದೆ. ಸೆಪ್ಟೆಂಬರ್‌ ಮೊದಲ ವಾರದಲ್ಲೇ ಬಿಡುಗಡೆ ಆಗಬೇಕಿದ್ದ ಈ ಸ್ಮಾರ್ಟ್‌ಫೋನ್‌ ಇದೀಗ ತನ್ನ ಬಿಡುಗಡೆ ದಿನಾಂಕವನ್ನು ಬದಲಾಯಿಸಿದೆ. ಅದರಂತೆ ಈ ಸ್ಮಾರ್ಟ್‌ಫೋನ್‌ ಇದೇ ಸೆಪ್ಟೆಂಬರ್ 16 ರಂದು ಬಿಡುಗಡೆ ಆಗುವುದು ಪಕ್ಕಾ ಎನ್ನಲಾಗಿದೆ.

ಹೌದು, ಶಿಯೋಮಿ 13T ಪ್ರೊ ಸ್ಮಾರ್ಟ್‌ಫೋನ್‌ ಶೀಘ್ರದಲ್ಲೇ ಬಿಡುಗಡೆ ಆಗಲಿದೆ. ಇದೇ ಸಂದರ್ಭದಲ್ಲಿ ಈ ಸ್ಮಾರ್ಟ್‌ಫೋನ್‌ನ ಫೀಚರ್ಸ್‌ ಕೂಡ ಬಹಿರಂಗವಾಗಿದೆ. ಅದರಂತೆ ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್‌ ಡೈಮೆನ್ಸಿಟಿ 9200 ಪ್ಲಸ್ SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ನೊಂದಿಗೆ ಬರಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ನೊಂದಿಗೆ ಬರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಶಿಯೋಮಿ 13T ಪ್ರೊ ಸ್ಮಾರ್ಟ್‌ಫೋನ್‌ ಲಾಂಚ್‌ ಡೇಟ್‌ ಬಹಿರಂಗ!

ಶಿಯೋಮಿ 13T ಪ್ರೊ ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಶಿಯೋಮಿ 13T ಪ್ರೊ ಸ್ಮಾರ್ಟ್‌ಫೋನ್‌ 6.67 ಇಂಚಿನ OLED ಡಿಸ್‌ಪ್ಲೇಯನ್ನು ಹೊಂದಿರಲಿದೆ. ಈ ಡಿಸ್‌ಪ್ಲೇ 1440 x 3200 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿರಬಹುದು. ಇನ್ನು ಡಿಸ್‌ಪ್ಲೇ 144Hz ರಿಫ್ರೆಶ್ ರೇಟ್ ಬೆಂಬಲದೊಂದಿಗೆ ಬರಲಿದ್ದು, ಡಿಸ್‌ಪ್ಲೇ 2880Hz PWM ಡಿಮ್ಮಿಂಗ್‌ ಬೆಂಬಲಿಸಲಿದೆ. ಇದಲ್ಲದೆ ಡಿಸ್‌ಪ್ಲೇ 2600 ನೀಟ್ಸ್‌ ಬ್ರೈಟ್‌ನೆಸ್‌ನೊಂದಿಗೆ ಬರಲಿದೆ.

ಶಿಯೋಮಿ 13T ಪ್ರೊ ಪ್ರೊಸೆಸರ್‌ ನಿರೀಕ್ಷೆ?
ಶಿಯೋಮಿ 13T ಪ್ರೊ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್‌ ಡೈಮೆನ್ಸಿಟಿ 9200 ಪ್ಲಸ್ SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ ಎನ್ನಲಾಗಿದೆ. ಹಾಗೆಯೇ 12GB RAM ಮತ್ತು 256GB ಹಾಗೂ 16GB RAM ಮತ್ತು 512GB ಇಂಟರ್‌ ಸ್ಟೋರೇಜ್‌ ಆಯ್ಕೆಯಲ್ಲಿ ಬರಲಿದೆ ಎನ್ನಲಾಗಿದೆ.

ಶಿಯೋಮಿ 13T ಪ್ರೊ ಕ್ಯಾಮೆರಾ ಸೆಟ್‌ಅಪ್‌ ಏನಿದೆ?
ಶಿಯೋಮಿ 13T ಪ್ರೊ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ನೊಂದಿಗೆ ಬರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ನೊಂದಿಗೆ ಬರಲಿದೆ. ಇದಲ್ಲದೆ 20 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿರುತ್ತದೆ ಎನ್ನಲಾಗಿದೆ.

ಶಿಯೋಮಿ 13T ಪ್ರೊ ಬ್ಯಾಟರಿ ಮತ್ತು ಇತರೆ
ಶಿಯೋಮಿ 13T ಪ್ರೊ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 120W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಟೈಪ್‌ ಸಿ ಪೋರ್ಟ್‌ ಮತ್ತು ಹೆಡ್‌ಫೋನ್‌ ಜ್ಯಾಕ್‌ ಅನ್ನು ಬೆಂಬಲಿಸಲಿದೆ.

ಶಿಯೋಮಿ 13T ಪ್ರೊ ಸ್ಮಾರ್ಟ್‌ಫೋನ್‌ ಬೆಲೆ ಮತ್ತು ಲಭ್ಯತೆ
ಈ ಸ್ಮಾರ್ಟ್‌ಫೋನ್‌ ಇದೇ ಸೆಪ್ಟೆಂಬರ್ 16 ರಂದು ಬಿಡುಗಡೆ ಆಗಲಿದೆ. ಇದರ ಬೆಲೆ ನಿಖರವಾಗಿ ತಿಳಿದುಬಂದಿಲ್ಲ. ಇನ್ನು ಕೆಲವೇ ದಿನಗಳಲ್ಲಿ ಇದು ಬಿಡುಗಡೆ ಆಗುವುದರಿಂದ ಶೀಘ್ರದಲ್ಲೇ ಬೆಲೆ ವಿವರಗಳು ಬಹಿರಂಗವಾಗುವ ಸಾದ್ಯತೆಯಿದೆ.

ಇದರೊಂದಿಗೆ ಶಿಯೋಮಿ 13T ಸ್ಮಾರ್ಟ್‌ಫೋನ್‌ ಕೂಡ ಬಿಡುಗಡೆ ಆಗುವ ನಿರೀಕ್ಷೆಯಿದೆ. ಈ ಸ್ಮಾರ್ಟ್‌ಫೋನ್‌ 6.7 ಇಂಚಿನ ಪುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿರಲಿದೆ ಎನ್ನಲಾಗಿದೆ. ಇದು ಡೈಮೆನ್ಸಿಟಿ 9200 ಪ್ಲಸ್ ಅಥವಾ ಸ್ನಾಪ್‌ಡ್ರಾಗನ್ 7 ಪ್ಲಸ್ ಜನ್ 2 ಪ್ರೊಸೆಸರ್‌ ಹೊಂದಿರಬಹುದು ಎಂದು ಊಹಿಸಲಾಗಿದೆ. ಇನ್ನು ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ ಎಂದು ಅಂದಾಜಿಸಲಾಗಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ 12GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಹೊಂದಿರಬಹುದು ಎಂದು ಹೇಳಲಾಗಿದೆ.

Best Mobiles in India

English summary
Xiaomi 13T Pro With Triple-Camera Setup Now Tipped To Launch on September 16
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+