Home
ಸುದ್ದಿಜಾಲ

ಶಿಯೋಮಿ 13T ಸ್ಮಾರ್ಟ್‌ಫೋನ್‌ ಗ್ರ್ಯಾಂಡ್‌ ಎಂಟ್ರಿ! ಸ್ಟೈಲಿಶ್‌ ಲುಕ್‌, ಜಬರ್ದಸ್ತ್‌ ಫೀಚರ್ಸ್‌!

ಮೊಬೈಲ್‌ ಮಾರುಕಟ್ಟೆಯಲ್ಲಿ ಶಿಯೋಮಿ ಸ್ಮಾರ್ಟ್‌ಫೋನ್‌ಗಳಿಗೆ ಭಾರಿ ಬೇಡಿಕೆಯಿದೆ. ವಿಭಿನ್ನ ಫೀಚರ್ಸ್‌ ಹಾಗೂ ನವೀನ ಮಾದರಿಯ ಕ್ಯಾಮೆರಾ ಮಾಡ್ಯೂಲ್‌ಗಳಿಗೆ ಶಿಯೋಮಿ ಫೋನ್‌ಗಳು ಪ್ರಸಿದ್ಧಿ ಪಡೆದುಕೊಂಡಿವೆ. ಇದೀಗ ಶಿಯೋಮಿ ಕಂಪೆನಿ ಗ್ಲೋಬಲ್‌ ಮಾರುಕಟ್ಟೆಯಲ್ಲಿ ಹೊಸದಾಗಿ ಶಿಯೋಮಿ 13T ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ.

ಹೌದು, ಶಿಯೋಮಿ 13T ಸ್ಮಾರ್ಟ್‌ಫೋನ್‌ ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಇನ್ನು ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 8200 ಅಲ್ಟ್ರಾ SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದ್ದು, ಸ್ಕ್ವಾರಿಶ್ ಕ್ಯಾಮೆರಾ ಮಾಡ್ಯೂಲ್ ಅನ್ನು ಹೊಂದಿದೆ. ಇನ್ನುಳಿದಂತೆ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಪಡೆದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಶಿಯೋಮಿ 13T ಸ್ಮಾರ್ಟ್‌ಫೋನ್‌ ಗ್ರ್ಯಾಂಡ್‌ ಎಂಟ್ರಿ! ಸ್ಟೈಲಿಶ್‌ ಲುಕ್‌!

ಶಿಯೋಮಿ 13T ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಶಿಯೋಮಿ 13T ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,220x2,712 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಡಿಸ್‌ಪ್ಲೇ 144Hz ರಿಫ್ರೆಶ್ ರೇಟ್ ಬೆಂಬಲವನ್ನು ಪಡೆದಿದ್ದು, 480Hz ಟಚ್ ಸ್ಯಾಂಪ್ಲಿಂಗ್ ರೇಟ್ ಒಳಗೊಂಡಿದೆ. ಇದು 2,600 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಸಹ ನೀಡಿದೆ. ಇದಲ್ಲದೆ ಡಿಸ್‌ಪ್ಲೇ 2880Hz PWM ಡಿಮ್ಮಿಂಗ್ ಅನ್ನು ಸಹ ಹೊಂದಿದೆ. ಇನ್ನು ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ರಕ್ಷಣೆಯನ್ನು ಹೊಂದಿದೆ.

ಶಿಯೋಮಿ 13T ಪ್ರೊಸೆಸರ್‌ ಯಾವುದು?
ಶಿಯೋಮಿ 13T ಸ್ಮಾರ್ಟ್‌ಫೋನ್‌ 4nm ಮೀಡಿಯಾ ಟೆಕ್ ಡೈಮೆನ್ಸಿಟಿ 8200 ಅಲ್ಟ್ರಾ SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB, 8GB RAM + 256GB ಮತ್ತು 12GB RAM + 256GB ಸ್ಟೋರೇಜ್ ಸಾಮರ್ಥ್ಯದ ಮೂರು ವೇರಿಯೆಂಟ್‌ ಆಯ್ಕೆಗಳಲ್ಲಿ ಬರಲಿದೆ.

ಶಿಯೋಮಿ 13T ಕ್ಯಾಮೆರಾ ಸೆಟ್‌ಅಪ್‌
ಶಿಯೋಮಿ 13T ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ OIS ಮತ್ತು 24mm ಫೋಕಲ್ ಲೆಂತ್ ಅನ್ನು ಹೊಂದಿದೆ. ಇದರ ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಟೆಲಿಫೋಟೋ ಸೆನ್ಸಾರ್‌ ಅನ್ನು ಹೊಂದಿದ್ದು 2x zoom ಅನ್ನು ನೀಡಲಿದೆ. ಇನ್ನು ಮೂರನೇ ಕ್ಯಾಮೆರಾ 12 ಮೆಗಾಪಿಕ್ಸೆಲ್‌ ಅಲ್ಟ್ರಾ-ವೈಡ್ ಲೆನ್ಸ್‌ ಅನ್ನು ಒಳಗೊಂಡಿದೆ. ಇದಲ್ಲದೆ 20 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಶಿಯೋಮಿ 13T ಬ್ಯಾಟರಿ ಮತ್ತು ಇತರೆ
ಶಿಯೋಮಿ 13T ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 67W ಟರ್ಬೊ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇದರಿಂದ ಸ್ಮಾರ್ಟ್‌ಫೋನ್‌ ಅನ್ನು ನೀವು ಕೇವಲ 42 ನಿಮಿಷಗಳಲ್ಲಿ 0 ದಿಂದ 100% ಬ್ಯಾಟರಿಯನ್ನು ಚಾರ್ಜ್‌ ಮಾಡಲಿದೆ. ಅದರಲ್ಲೂ ಸಿಂಗಲ್‌ ಚಾರ್ಜ್‌ನಲ್ಲಿ 16 ಗಂಟೆಗಳವರೆಗೆ ವೀಡಿಯೊ ಪ್ಲೇಬ್ಯಾಕ್ ಟೈಂ ನೀಡಲಿದೆ ಎಂದು ವರದಿಯಾಗಿದೆ.

ಶಿಯೋಮಿ 13T ಬೆಲೆ ಮತ್ತು ಲಭ್ಯತೆ
ಶಿಯೋಮಿ 13T ಸ್ಮಾರ್ಟ್‌ಫೋನ್‌ 8GB RAM + 256GB ಸ್ಟೋರೇಜ್‌ ಆಯ್ಕೆಗೆ EUR 549 (ಸುಮಾರು 22,000ರೂ)ಬೆಲೆಯನ್ನು ಹೊಂದಿದೆ. ಇನ್ನುಳಿದ ವೇರಿಯೆಂಟ್‌ ಆಯ್ಕೆಗಳ ಬೆಲೆ ವಿವರಗಳು ಬಹಿರಂಗವಾಗಿಲ್ಲ. ಇನ್ನು ಸ್ಮಾರ್ಟ್‌ಫೋನ್‌ ಆಲ್ಪೈನ್ ಬ್ಲೂ, ಬ್ಲ್ಯಾಕ್ ಮತ್ತು ಮೆಡೋ ಗ್ರೀನ್ ಬಣ್ಣ ಆಯ್ಕೆಗಳಲ್ಲಿ ಬರುತ್ತದೆ.

Best Mobiles in India

English summary
Xiaomi 13T With Leica Tuned Cameras Launched: Price and Specs details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+