Home
ಸುದ್ದಿಜಾಲ

ಡ್ಯುಯಲ್‌ ಸೆಲ್ಫಿ ಕ್ಯಾಮೆರಾ ಇರುವ ಈ ಫೋನ್‌ ಬೆಲೆಯಲ್ಲಿ ಈಗ ಭಾರೀ ಇಳಿಕೆ!

ಫ್ಲಿಪ್‌ಕಾರ್ಟ್‌ (Flipkart) ಇ ಕಾಮರ್ಸ್ ಪ್ಲಾಟ್‌ಫಾರ್ಮ್‌ನಲ್ಲಿ ಮೊಬೈಲ್‌ಗಳಿಗೆ ಒಂದಿಲ್ಲೊಂದು ಭರ್ಜರಿ ರಿಯಾಯಿತಿ ಲಭ್ಯ ಇದ್ದು, ವಿಶೇಷ ದಿನಗಳು ಬಂದಾಗ ಅಧಿಕ ಡಿಸ್ಕೌಂಟ್‌ ಪಡೆಯಬಹುದಾಗಿದೆ. ಸದ್ಯ ಶಿಯೋಮಿಯ ಇತ್ತೀಚಿನ ಶಿಯೋಮಿ 14 CIVI (Xiaomi 14 CIVI) ಮೊಬೈಲ್‌ ಗಮನಾರ್ಹ ದರ ಕಡಿತದಲ್ಲಿ ಕಾಣಿಸಿಕೊಂಡಿದ್ದು, ರೆಡ್ಮಿ ಫೋನ್‌ ಪ್ರಿಯರಿಗೆ ಸಖತ್ ಖುಷಿ ನೀಡಿದೆ. ಅಂದಹಾಗೆ ಈ ಫೋನ್‌ ಮುಂಭಾಗದಲ್ಲಿ ಡ್ಯುಯಲ್‌ ಸೆಲ್ಫಿ ಕ್ಯಾಮೆರಾ ಆಯ್ಕೆ ಹೊಂದಿದ್ದು, ಪ್ರಮುಖ ಹೈಲೈಟ್‌ ಎನಿಸಿಕೊಂಡಿದೆ.

ಹೌದು, ಫ್ಲಿಪ್‌ಕಾರ್ಟ್‌ ಆಯೋಜಿಸಿರುವ ಈ ಸೇಲ್‌ನಲ್ಲಿ ಲಾವಾ ಕಂಪನಿಯ ಶಿಯೋಮಿ 14 CIVI (Xiaomi 14 CIVI) ಫೋನ್‌ ಶೇ. 21% ರಷ್ಟು ನೇರ ಡಿಸ್ಕೌಂಟ್‌ ಪಡೆದಿದೆ. ಈ ಮೊಬೈಲ್‌ನ 8 GB RAM + 256 GB ಸ್ಟೋರೇಜ್‌ ವೇರಿಯಂಟ್‌ ಆಫರ್‌ನಲ್ಲಿ 42,999ರೂ. ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಅಲ್ಲದೇ ಹೆಚ್ಚುವರಿಯಾಗಿ ಕೆಲವು ಆಯ್ದ ಬ್ಯಾಂಕ್‌ಗಳಿಂದ ರಿಯಾಯಿತಿ ಸಹ ಪಡೆಯಬಹುದಾಗಿದೆ.

ಡ್ಯುಯಲ್‌ ಸೆಲ್ಫಿ ಕ್ಯಾಮೆರಾ ಇರುವ ಈ ಫೋನ್‌ ಬೆಲೆಯಲ್ಲಿ ಈಗ ಭಾರೀ ಇಳಿಕೆ!

ಇನ್ನು ಈ ಮೊಬೈಲ್‌ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಹೊಂದಿದ್ದು, 4,700mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಹೊಂದಿದೆ. ಹಾಗೆಯೇ 32 ಮೆಗಾಪಿಕ್ಸಲ್‌ನ ಎರಡು ಡ್ಯುಯಲ್‌ ಸೆಲ್ಫಿ ಕ್ಯಾಮೆರಾ ಇವೆ. ಇನ್ನುಳಿದಂತೆ ಶಿಯೋಮಿ 14 CIVI ಮೊಬೈಲ್‌ನ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ ಓದಿರಿ.

ಶಿಯೋಮಿ 14 CIVI ಫೀಚರ್ಸ್‌ ಹೀಗಿವೆ

ಶಿಯೋಮಿ 14 CIVI ಸ್ಮಾರ್ಟ್‌ಫೋನ್‌ 6.55 ಇಂಚಿನ 1.5K ಕರ್ವ್ಡ್ AMOLED ಡಿಸ್‌ಪ್ಲೇ ಸೌಲಭ್ಯ ಪಡೆದಿದ್ದು, ಇದರ ಜೊತೆಗೆ 120Hz ರಿಫ್ರೆಶ್ ರೇಟ್ ಹಾಗೂ 240Hz ಟಚ್ ಸ್ಯಾಂಪ್ಲಿಂಗ್ ರೇಟ್ ಸೌಲಭ್ಯ ಇದೆ. ಹಾಗೆಯೇ ಈ ಫೋನಿನ ಡಿಸ್‌ಪ್ಲೇಯು 446ppi ಪಿಕ್ಸೆಲ್ ಸಾಂದ್ರತೆ ಮತ್ತು 3,000 ನಿಟ್ಸ್ ಬ್ರೈಟ್‌ನೆಸ್ ಹೊಂದಿದೆ. ಅಲ್ಲದೇ ಇದು HDR10+, ಡಾಲ್ಬಿ ವಿಷನ್ ಅನ್ನು ಬೆಂಬಲಿಸುತ್ತದೆ ಮತ್ತು ಗೊರಿಲ್ಲಾ ಗ್ಲಾಸ್ ವಿಕ್ಟಸ್ 2 ರಕ್ಷಣೆಯನ್ನು ಪಡೆದಿದೆ.

ಶಿಯೋಮಿ 14 CIVI ಮೊಬೈಲ್‌ ಕ್ವಾಲ್‌ಕಾಮ್‌ ಸ್ನಾಪ್‌ಡ್ರಾಗನ್ 8s ಜೆನ್‌ 3 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 14 ಓಎಸ್‌ ಸಪೋರ್ಟ್‌ನೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಇದು 8GB + 256GB ಮತ್ತು 12GB + 512GB ಸ್ಟೋರೇಜ್‌ ಸಾಮರ್ಥ್ಯದ ಎರಡು ವೇರಿಯಂಟ್‌ ಆಯ್ಕೆಯನ್ನು ಒಳಗೊಂಡಿದೆ.

ಶಿಯೋಮಿ 14 CIVI ಮೊಬೈಲ್‌ ತ್ರಿವಳಿ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದ್ದು, ಸೆಕೆಂಡರಿ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದ್ದು, ಇದರೊಂದಿಗೆ ತೃತೀಯ ಕ್ಯಾಮೆರಾ 12 ಮೆಗಾ ಪಿಕ್ಸೆಲ್ ಸೆನ್ಸಾರ್‌ ಆಯ್ಕೆ ಅನ್ನು ಪಡೆದಿದೆ. ಇದರೊಂದಿಗೆ ಮುಂಭಾಗದಲ್ಲಿ ಡ್ಯುಯಲ್‌ ಸೆಲ್ಫಿ ಕ್ಯಾಮೆರಾ ಆಯ್ಕೆ ಹೊಂದಿದ್ದು, ಅವುಗಳು ಕ್ರಮವಾಗಿ 32 ಮೆಗಾಪಿಕ್ಸಲ್‌ ಮತ್ತು 32 ಮೆಗಾ ಪಿಕ್ಸಲ್‌ ಸೆನ್ಸಾರ್‌ ಆಗಿವೆ.

ಶಿಯೋಮಿ 14 CIVI ಸ್ಮಾರ್ಟ್‌ಫೋನ್‌ 4,700mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದೆ. ಇದಕ್ಕೆ ಪೂರಕವಾಗಿ 67W ವೈರ್ಡ್ ಚಾರ್ಜಿಂಗ್‌ ಸೌಲಭ್ಯ ಪಡೆದುಕೊಂಡಿದೆ. ಇದು ಬ್ಯಾಟರಿ ಚಾರ್ಜ್ ಮಾಡಿದ 30 ನಿಮಿಷಗಳಲ್ಲಿ 80 ಪ್ರತಿಶತದಷ್ಟು ಚಾರ್ಜ್ ಅನ್ನು ನೀಡುತ್ತದೆ ಎನ್ನಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ5G, Wi-Fi 6, NFC, ಬ್ಲೂಟೂತ್ 5.4, GPS, ಗೆಲಿಲಿಯೋ, ಗ್ಲೋನಾಸ್, Beidou, NFC, ಮತ್ತು USB ಟೈಪ್-C ಪೋರ್ಟ್ ಅನ್ನು ಒಳಗೊಂಡಿದೆ.

Best Mobiles in India

English summary
Xiaomi 14 CIVI available at biggest discount price in india. check out price, specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+