ಡ್ಯುಯಲ್ ಸೆಲ್ಫಿ ಕ್ಯಾಮೆರಾ ಇರುವ ಈ ಫೋನ್ ಇದೀಗ ಪ್ರಿ-ಆರ್ಡರ್‌ಗೆ ಲಭ್ಯ; ಬೆಲೆ ಎಷ್ಟು?
ಲೀಡಿಂಗ್ ಮೊಬೈಲ್ ಬ್ರ್ಯಾಂಡ್‌ಗಳ ಪೈಕಿ ಒಂದಾಗಿರುವ ಶಿಯೋಮಿ ಸಂಸ್ಥೆಯು ಇತ್ತೀಗಷ್ಟೆ ಭಾರತದಲ್ಲಿ ಬಿಡುಗಡೆ ಮಾಡಿರುವ ಶಿಯೋಮಿ 14 ಸಿವಿ ( Xiaomi 14 Civi ) ಸ್ಮಾರ್ಟ್‌ಫೋನ್ ತನ್ನ ವಿಶೇಷ ಫೀಚರ್ಸ್‌ಗಳ ಮೂಲಕ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಅಂದಹಾಗೆ ಈ ಫೋನ್ ಇದೇ ಜೂನ್ 20 ರಂದು ಭಾರತದಲ್ಲಿ ಮಾರಾಟ ಪ್ರಾರಂಭ ಮಾಡಲಿದ್ದು, ಆದರೆ ಇದೀಗ ಪ್ರಿ-ಆರ್ಡರ್‌ಗೆ (Pre Order) ಅವಕಾಶ ನೀಡಿದೆ. ಆಸಕ್ತ ಖರೀದಿದಾರರು ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಆರ್ಡರ್ ಮಾಡಬಹುದು.
ಹೌದು, ಶಿಯೋಮಿ 14 ಸಿವಿ ( Xiaomi 14 Civi ) ಸ್ಮಾರ್ಟ್‌ಫೋನ್ ಈಗ ಪ್ರಿ-ಆರ್ಡರ್‌ಗೆ ಲಭ್ಯ ಇದೆ. ಅಂದಹಾಗೆ ಈ ಫೋನ್ ಎರಡು ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದ್ದು, ಅವುಗಳು ಕ್ರಮವಾಗಿ 8GB + 256GB ಮತ್ತು 12GB + 512GB ಸಾಮರ್ಥ್ಯದಲ್ಲಿ ಇವೆ. ಇನ್ನು ಈ ಫೋನಿನ ಆರಂಭಿಕ ವೇರಿಯಂಟ್ ಬೆಲೆಯು 42,999ರೂ. ಆಗಿದೆ. ಇದೇ ಜೂನ್ 20 ರಂದು ಫ್ಲಿಪ್‌ಕಾರ್ಟ್ ಹಾಗೂ ಮಿ ವೆಬ್‌ಸೈಟ್ ಮೂಲಕ ಮಾರಾಟ ಪ್ರಾರಂಭ ಮಾಡಲಿದೆ.

ಇನ್ನು ಈ ಫೋನ್ ಕ್ವಾಲ್‌ಕಾಮ್ ಸ್ನಾಪ್‌ಡ್ರಾಗನ್ 8s ಜೆನ್ 3 SoC ಪ್ರೊಸೆಸರ್ ಸಾಮರ್ಥ್ಯ ಪಡೆದುಕೊಂಡಿದೆ. ಇದರೊಂದಿಗೆ ಮುಂಭಾಗದಲ್ಲಿ ಡ್ಯುಯಲ್ ಸೆಲ್ಫಿ ಕ್ಯಾಮೆರಾ ಆಯ್ಕೆ ಹೊಂದಿದ್ದು, ಅವುಗಳು ಕ್ರಮವಾಗಿ 32 ಮೆಗಾಪಿಕ್ಸಲ್ ಮತ್ತು 32 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇವೆ. ಹಾಗಾದರೇ ಶಿಯೋಮಿ 14 ಸಿವಿ ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಶಿಯೋಮಿ 14 ಸಿವಿ ಫೀಚರ್ಸ್ ಹೀಗಿವೆ
ಶಿಯೋಮಿ 14 ಸಿವಿ ಸ್ಮಾರ್ಟ್‌ಫೋನ್ 6.55 ಇಂಚಿನ 1.5K ಕರ್ವ್ಡ್ AMOLED ಡಿಸ್‌ಪ್ಲೇ ಸೌಲಭ್ಯ ಪಡೆದಿದ್ದು, ಇದರ ಜೊತೆಗೆ 120Hz ರಿಫ್ರೆಶ್ ರೇಟ್ ಹಾಗೂ 240Hz ಟಚ್ ಸ್ಯಾಂಪ್ಲಿಂಗ್ ರೇಟ್ ಸೌಲಭ್ಯ ಇದೆ. ಹಾಗೆಯೇ ಈ ಫೋನಿನ ಡಿಸ್‌ಪ್ಲೇಯು 446ppi ಪಿಕ್ಸೆಲ್ ಸಾಂದ್ರತೆ ಮತ್ತು 3,000 ನಿಟ್ಸ್ ಬ್ರೈಟ್‌ನೆಸ್ ಹೊಂದಿದೆ. ಅಲ್ಲದೇ ಇದು HDR10+, ಡಾಲ್ಬಿ ವಿಷನ್ ಅನ್ನು ಬೆಂಬಲಿಸುತ್ತದೆ ಮತ್ತು ಗೊರಿಲ್ಲಾ ಗ್ಲಾಸ್ ವಿಕ್ಟಸ್ 2 ರಕ್ಷಣೆಯನ್ನು ಪಡೆದಿದೆ.
ಶಿಯೋಮಿ 14 ಸಿವಿ ಮೊಬೈಲ್ ಕ್ವಾಲ್‌ಕಾಮ್ ಸ್ನಾಪ್‌ಡ್ರಾಗನ್ 8s ಜೆನ್ 3 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 ಓಎಸ್ ಸಪೋರ್ಟ್‌ನೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಇದು 8GB + 256GB ಮತ್ತು 12GB + 512GB ಸ್ಟೋರೇಜ್ ಸಾಮರ್ಥ್ಯದ ಎರಡು ವೇರಿಯಂಟ್ ಆಯ್ಕೆಯನ್ನು ಒಳಗೊಂಡಿದೆ.
ಶಿಯೋಮಿ 14 ಸಿವಿ ಮೊಬೈಲ್ ತ್ರಿವಳಿ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದ್ದು, ಸೆಕೆಂಡರಿ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದ್ದು, ಇದರೊಂದಿಗೆ ತೃತೀಯ ಕ್ಯಾಮೆರಾ 12 ಮೆಗಾ ಪಿಕ್ಸೆಲ್ ಸೆನ್ಸಾರ್ ಆಯ್ಕೆ ಅನ್ನು ಹೊಂದಿದೆ. ಇದರೊಂದಿಗೆ ಮುಂಭಾಗದಲ್ಲಿ ಡ್ಯುಯಲ್ ಸೆಲ್ಫಿ ಕ್ಯಾಮೆರಾ ಆಯ್ಕೆ ಹೊಂದಿದ್ದು, ಅವುಗಳು ಕ್ರಮವಾಗಿ 32 ಮೆಗಾಪಿಕ್ಸಲ್ ಮತ್ತು 32 ಮೆಗಾ ಪಿಕ್ಸಲ್ ಸೆನ್ಸಾರ್ ಆಗಿವೆ.
ಶಿಯೋಮಿ 14 ಸಿವಿ ಸ್ಮಾರ್ಟ್‌ಫೋನ್ 4,700mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದೆ. ಇದಕ್ಕೆ ಪೂರಕವಾಗಿ 67W ವೈರ್ಡ್ ಚಾರ್ಜಿಂಗ್ ಸೌಲಭ್ಯ ಪಡೆದುಕೊಂಡಿದೆ. ಇದು ಬ್ಯಾಟರಿ ಚಾರ್ಜ್ ಮಾಡಿದ 30 ನಿಮಿಷಗಳಲ್ಲಿ 80 ಪ್ರತಿಶತದಷ್ಟು ಚಾರ್ಜ್ ಅನ್ನು ನೀಡುತ್ತದೆ ಎನ್ನಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ5G, Wi-Fi 6, NFC, ಬ್ಲೂಟೂತ್ 5.4, GPS, ಗೆಲಿಲಿಯೋ, ಗ್ಲೋನಾಸ್, Beidou, NFC, ಮತ್ತು USB ಟೈಪ್-C ಪೋರ್ಟ್ ಅನ್ನು ಒಳಗೊಂಡಿದೆ.


Click it and Unblock the Notifications








