ನಾಳೆ ಎಂಟ್ರಿ ಕೊಡಲಿದೆ ಶಿಯೋಮಿ 14 ಸಿವಿ; ಡ್ಯುಯಲ್ ಸೆಲ್ಫಿ ಕ್ಯಾಮೆರಾ ಖಚಿತ!
ಶಿಯೋಮಿ ಕಂಪನಿಯು ಭಾರತದಲ್ಲಿ ಮತ್ತೊಂದು ಹೊಸ ಸ್ಮಾರ್ಟ್‌ಫೋನ್ ಲಾಂಚ್ ಮಾಡಲು ಸಂಪೂರ್ಣ ತಯಾರಾಗಿದ್ದು, ಅದುವೇ ಶಿಯೋಮಿ 14 ಸಿವಿ (Xiaomi 14 civi) ಸ್ಮಾರ್ಟ್‌ಫೋನ್ ಆಗಿದೆ. ಈ ಬಹುನಿರೀಕ್ಷಿತ ಮೊಬೈಲ್ ಇದೇ ಜೂನ್ 12 ರಂದು ದೇಶಿಯ ಮಾರುಕಟ್ಟೆಗೆ ಅಧಕೃತವಾಗಿ ಲಗ್ಗೆ ಇಡಲಿದೆ. ಇನ್ನು ಈ ಫೋನ್ ಕ್ವಾಲ್ಕಮ್ ಸ್ನಾಪ್‌ಡ್ರಾಗನ್ 8s ಜನ್ 3 ಪ್ರೊಸೆಸರ್ ಪವರ್ ಅನ್ನು ಪಡೆದುಕೊಂಡಿದ್ದು, ಸಿನಿಮ್ಯಾಟಿಕ್ ವಿಷನ್ ಕ್ಯಾಮೆರಾ ಮಾದರಿಯನ್ನು ಒಳಗೊಂಡಿರುವುದು ಬಹುತೇಕ ಖಚಿತ ಆಗಿದೆ. ಇದರ ಕೆಲವು ಲೀಕ್ ಫೀಚರ್ಸ್ ಗ್ರಾಹಕರಿಗೆ ಕುತೂಹಲ ಮೂಡಿಸಿವೆ.
ಹೌದು, ಶಿಯೋಮಿ ಸಂಸ್ಥೆಯು ನಾಳೆ (ಜೂನ 12 ರಂದು) ತನ್ನ ಹೊಸ ಶಿಯೋಮಿ 14 ಸಿವಿ (Xiaomi 14 civi) ಫೋನ್ ಅನ್ನು ಬಿಡುಗಡೆ ಮಾಡಲಿದೆ. ಈ ಫೋನ್ ಲಾಂಚ್ ಕುರಿತಾಗಿ ಫ್ಲಿಪ್‌ಕಾರ್ಟ್ ಮೈಕ್ರೋ ಸೈಟ್ ಕೂಡಾ ತೆರೆದಿದೆ. ಇನ್ನು ಈ ಫೋನ್ LEICA (ಲೈಕಾ) ಕ್ಯಾಮೆರಾ ಲೆನ್ಸ್ ಸೌಲಭ್ಯ ಪಡೆದಿದ್ದು, ಇದರೊಂದಿಗೆ ಮುಂಭಾಗದಲ್ಲಿ 32ಎಂಪಿ ಸೆನ್ಸಾರ್‌ನ ಡ್ಯುಯಲ್ ಸೆಲ್ಫಿ ಕ್ಯಾಮೆರಾ ರಚನೆ ಇರಲಿದೆ ಎಂದು ತಿಳಿದುಬಂದಿದೆ.

ಅಂದಹಾಗೆ ಈ ಫೋನ್ ಕ್ರೂಸ್ ಬ್ಲೂ, ಮ್ಯಾಚ್ ಗ್ರೀನ್ ಹಾಗೂ ಶ್ಯಾಡೋ ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಎಂಟ್ರಿ ಕೊಡಲಿದೆ. ಇದರಲ್ಲದೇ ಈ ಫೋನ್ 4,700mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಪಡೆದಿರಲಿದ್ದು, ಜೊತೆಗೆ 67W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಪಡೆದಿರಲಿದೆ ಎನ್ನಲಾಗಿದೆ. ಹಾಗಾದರೇ ಶಿಯೋಮಿ 14 ಸಿವಿ ಫೋನಿನ ಇತರೆ ನಿರೀಕ್ಷಿತ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಶಿಯೋಮಿ 14 ಸಿವಿ ನಿರೀಕ್ಷಿತ ಫೀಚರ್ಸ್
ಶಿಯೋಮಿ 14 ಸಿವಿ ಸ್ಮಾರ್ಟ್‌ಫೋನ್ 6.55 ಇಂಚಿನ 1.5K ಅಮೋಲೆಡ್ ಡಿಸ್‌ಪ್ಲೇ ಪಡೆದಿರಲಿದ್ದು, ಇದರ ಜೊತೆಗೆ 120Hz ರಿಫ್ರೆಶ್ ರೇಟ್, 240Hz ಟಚ್ ಸ್ಯಾಂಪ್ಲಿಂಗ್ ರೇಟ್ ಮತ್ತು 3000 ನಿಟ್ಸ್ ಪೀಕ್ ಬ್ರೈಟ್‌ನೆಸ್ ಅನ್ನು ಹೊಂದಿರಲಿದೆ ಎಂದು ಹೇಳಲಾಗಿದೆ. ಇದರ ಜೊತೆಗೆ ಈ ಫೋನ್ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ 2 ಅನ್ನು ಹೊಂದಿರಬಹುದು ಎಂದು ತಿಳಿದುಬಂದಿದೆ.
ಶಿಯೋಮಿ 14 ಸಿವಿ ಸ್ಮಾರ್ಟ್‌ಫೋನ್ ಅಡ್ರಿನೋ 735 ಜಿಪಿಯು ಬಲದೊಂದಿಗೆ ಸ್ನಾಪ್‌ಡ್ರಾಗನ್ 8s ಜನ್ 3 ಪ್ರೊಸೆಸರ್‌ನಿಂದ ಕೆಲಸ ನಿರ್ವಹಿಸಲಿದೆ ಎನ್ನಲಾಗಿದ್ದು, ಇದು 12GB ವರೆಗೆ RAM ಮತ್ತು 512GB UFS 4.0 ವರೆಗೆ ಪ್ರಾರಂಭಿಸಬಹುದು ಎಂದು ಮೂಲಗಳಿಂದ ತಿಳಿದುಬಂದಿದೆ. ಹಾಗೆಯೇ ಇದು 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ, ಲೈಕಾ ಸಮ್ಮಿಲಕ್ಸ್ ಲೆನ್ಸ್, 12 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಕ್ಯಾಮೆರಾ ಮತ್ತು ಹಿಂಭಾಗದಲ್ಲಿ 50 ಮೆಗಾಪಿಕ್ಸೆಲ್ ಟೆಲಿಫೋಟೋ ಲೆನ್ಸ್ ಅನ್ನು ಹೊಂದಿರುತ್ತದೆ ಎಂದು ಹೇಳಲಾಗಿದೆ.
ಇದರೊಂದಿಗೆ ಈ ಫೋನ್ ಅಲ್ಟ್ರಾ-ವೈಡ್ ಲೆನ್ಸ್‌ನೊಂದಿಗೆ ಡ್ಯುಯಲ್ 32 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾಗಳನ್ನು ಇರುವುದು ಬಹುತೇಕ ಖಚಿತ ಎನ್ನಲಾಗಿದೆ. ಇನ್ನು ಈ ಫೋನಿನ ಬ್ಯಾಟರಿಯು 4,700mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಪಡೆದಿದ್ದು, ಇದಕ್ಕೆ ಪೂರಕವಾಗಿ 67W ವೇಗದ ಚಾರ್ಜಿಂಗ್ ಸಪೋರ್ಟ್ ಇರಲಿದೆ ಎಂದು ಹೇಳಾಗಿದೆ. ಅಲ್ಲದೇ ಆಂಡ್ರಾಯ್ಡ್ 14 ನೊಂದಿಗೆ ಶಿಯೋಮಿ ಹೈಪರ್ ಓಎಸ್ ಅನ್ನು ರನ್ ಮಾಡುತ್ತದೆ ಎಂದು ತಿಳಿದುಬಂದಿದೆ.
ಅಲ್ಲದೇ ಈ ಫೋನ್ ಕ್ಯಾಮೆರಾ ವಿಭಾಗದಲ್ಲಿ 4K ಅಲ್ಟ್ರಾ HD, ಫೋಕಸ್ ಸ್ವಿಚಿಂಗ್, ಶಾರ್ಟ್ ವಿಡಿಯೋ, ಡ್ಯುಯಲ್ ವಿಡಿಯೋ ಮೋಡ್, ರಿಯಲ್ ಟೈಮ್ ಸಬ್ ಟೈಟಲ್, ಪೊಕೆಟ್ ಮೀರರ್, ಜೂಮ್ ಸ್ಮೂತ್ ರೆಕಾರ್ಡಿಂಗ್ ನಂತಹ ಆಯ್ಕೆಗಳನ್ನು ಒಳಗೊಂಡಿರುವ ಸಾಧ್ಯತೆಗಳು ಇವೆ.


Click it and Unblock the Notifications








