Xiaomi 14 ಫೋನಿಗೆ ಇರುವ ಡಿಸ್ಕೌಂಟ್ ಬೆಲೆ ತಿಳಿದ್ರೆ, ನೀವು OMG ಅಂತೀರಾ!
ಇನ್ನೇನು ದೀಪಾವಳಿ ಹಬ್ಬ ಬಂದೇ ಬಿಡ್ತು. ದೈತ್ಯ ಇ ಕಾಮರ್ಸ್ ಅಮೆಜಾನ್ (Amazon) ವೆಬ್‌ಸೈಟ್‌ನಲ್ಲಿ ಇದೀಗ ಡಿಸ್ಕೌಂಟ್‌ಗಳ ಕಿಟಕಿ ತೆರೆದಿದೆ. ಈ ಮಾರಾಟದಲ್ಲಿ ಕೆಲವು ಜನಪ್ರಿಯ ಮೊಬೈಲ್‌ಗಳು ಸಖತ್ ಡಿಸ್ಕೌಂಟ್ ದರದಲ್ಲಿ ಖರೀದಿಗೆ ಲಭ್ಯ ಆಗಲಿವೆ. ಆ ಪೈಕಿ ಅಮೆಜಾನ್ ತಾಣದಲ್ಲಿ ಶಿಯೋಮಿ ಸಂಸ್ಥೆಯು ಶಿಯೋಮಿ 14 (Xiaomi 14) ಮೊಬೈಲ್ ಭಾರೀ ಜಬರ್ದಸ್ತ್ ಡಿಸ್ಕೌಂಟ್ ಬೆಲೆಯಲ್ಲಿ ಕಾಣಿಸಿಕೊಂಡಿದೆ.
ಹೌದು, ಅಮೆಜಾನ್ ಇ ಕಾಮರ್ಸ್ (Amazon) ತಾಣದಲ್ಲಿ ಇದೀಗ ಶಿಯೋಮಿ 14 (Xiaomi 14) ಫೋನ್ ಶೇ. 40% ರಷ್ಟು ಆಫರ್ ಬೆಲೆಯಲ್ಲಿ ಪಡೆದುಕೊಂಡಿದೆ. ಈ ಫೋನಿನ 12GB RAM + 512GB ವೇರಿಯಂಟ್ 47,999ರೂ. ಗಳ ಸಖತ್ ಡಿಸ್ಕೌಂಟ್ ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ. ಇದರ ಜೊತೆಗೆ ಗ್ರಾಹಕರು ಎಕ್ಸ್‌ಚೇಂಜ್ ಆಫರ್ ಸಹ ಪಡೆದುಕೊಂಡರೆ, ಈ ಫೋನ್ ಅನ್ನು ಇನ್ನಷ್ಟು ಡಿಸ್ಕೌಂಟ್ ಬೆಲೆಯಲ್ಲಿ ಖರೀದಿಸಬಹುದು.

ಅಂದಹಾಗೆ ಈ ದೈತ್ಯ ಮೊಬೈಲ್ ಕ್ವಾಲ್ಕಾಮ್ ಸ್ನಾಪ್‌ಡ್ರ್ಯಾಗನ್ 8 Gen 3 SoC ಪ್ರೊಸೆಸರ್ ಸೌಲಭ್ಯ ಪಡೆದಿದ್ದು, ಜೊತೆಗೆ ಟ್ರಿಪಲ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಹಾಗೆಯೇ ಇದು 4,610mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಹೊಂದಿದ್ದು, ಇದರ ಜೊತೆಗೆ 108 ಮೆಗಾ ಪಿಕ್ಸಲ್ ಪ್ರಾಥಮಿಕ ಕ್ಯಾಮೆರಾ ಪಡೆದಿದೆ. ಹಾಗಾದರೇ ಶಿಯೋಮಿ 14 ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಶಿಯೋಮಿ 14 - ಫೀಚರ್ಸ್
ಶಿಯೋಮಿ 14 ಮೊಬೈಲ್ 6.3 ಇಂಚಿನ ಕೇಂದ್ರಿತ ಪಂಚ್-ಹೋಲ್ ಫ್ಲಾಟ್ OLED ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 2670 x 1200 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದಲ್ಲಿದೆ. ಜೊತೆಗೆ ಡಿಸ್‌ಪ್ಲೇಯು 460 PPI ಮತ್ತು 1-120Hz ರಿಫ್ರೆಶ್ ರೇಟ್ (LTPO) ರೆಸಲ್ಯೂಶನ್ ಹೊಂದಿದೆ. ಇದು ಡಾಲ್ಬಿ ವಿಷನ್, ಡಿಸಿ ಡಿಮ್ಮಿಂಗ್, ಮತ್ತು 3000 ನಿಟ್ಸ್ ಲೋಕಲ್ ಪೀಕ್ ಬ್ರೈಟ್‌ನೆಸ್ ಲೆವೆಲ್ ಅನ್ನು ಬೆಂಬಲಿಸಲಿದೆ.
ಶಿಯೋಮಿ 14 ಮೊಬೈಲ್ ಕ್ವಾಲ್ಕಾಮ್ ಸ್ನಾಪ್‌ಡ್ರ್ಯಾಗನ್ 8 Gen 3 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 14 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದನ್ನು ಲಿಕ್ವಿಡ್ ಕೂಲಿಂಗ್ ಸಿಸ್ಟಮ್‌ನೊಂದಿಗೆ ಜೋಡಿಸಲಾಗಿದೆ. ಹಾಗೆಯೇ 12GB RAM ಮತ್ತು 512GB ಆಂತರೀಕ ಸ್ಟೋರೇಜ್ ಆಯ್ಕೆಯಲ್ಲಿ ಬರಲಿದೆ.
ಶಿಯೋಮಿ 14 ಮೊಬೈಲ್ ಲೈಕಾ-ಟ್ಯೂನ್ಡ್ ಕ್ಯಾಮೆರಾಗಳನ್ನು ಪಡೆದಿದ್ದು, ಹಿಂಭಾಗದಲ್ಲಿ ತ್ರಿವಳಿ ಕ್ಯಾಮೆರಾ ರಚನೆಯನ್ನು ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ದ್ವಿತೀಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಅಲ್ಟ್ರಾವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ 3.2x ಫ್ಲೋಟಿಂಗ್ ಟೆಲಿಫೋಟೋ ಲೆನ್ಸ್ ಅನ್ನು ಒಳಗೊಂಡಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ.
ಶಿಯೋಮಿ 14 ಮೊಬೈಲ್ 4,610mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದ್ದು, ಇದು 90W ವೈರ್ಡ್, 50W ವಾಯರ್‌ಲೆಸ್ ಮತ್ತು 10W ರಿವರ್ಸ್ ವಾಯರ್‌ಲೆಸ್ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುತ್ತದೆ. ಇದಲ್ಲದೆ ಸ್ಮಾರ್ಟ್‌ಫೋನ್ ಇನ್-ಸ್ಕ್ರೀನ್ ಫಿಂಗರ್‌ಪ್ರಿಂಟ್ ಸೆನ್ಸಾರ್, ಡಾಲ್ಬಿ ಅಟ್ಮಾಸ್-ಬೆಂಬಲಿತ ಡ್ಯುಯಲ್ ಸ್ಟಿರಿಯೊ ಸ್ಪೀಕರ್‌ಗಳು, ಎಕ್ಸ್-ಆಕ್ಸಿಸ್ ಲೀನಿಯರ್ ವೈಬ್ರೇಶನ್ ಮೋಟಾರ್ ನಂತಹ ಆಯ್ಕೆಗಳನ್ನು ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, ವೈಫೈ 7, ಬ್ಲೂಟೂತ್ 5.4, GNSS, NFC, ಮತ್ತು USB 3.2 ಅನ್ನು ಬೆಂಬಲಿಸಲಿದೆ.


Click it and Unblock the Notifications








