Home
ಸುದ್ದಿಜಾಲ

ಬಹಿರಂಗವಾಯ್ತು ಶಿಯೋಮಿ 14 ಪ್ರೊ ಸ್ಮಾರ್ಟ್‌ಫೋನ್‌ ಕ್ಯಾಮೆರಾ ಮಾಡ್ಯೂಲ್‌! ವಾವ್ಹ್‌ ಎನಿಸುವ ಫೀಚರ್ಸ್‌!

ಟೆಕ್‌ ದೈತ್ಯ ಶಿಯೋಮಿ ಕಂಪೆನಿ ಶೀಘ್ರದಲ್ಲೇ ಶಿಯೋಮಿ 14 ಸರಣಿ ಬಿಡುಗಡೆಗೆ ತಯಾರಿ ನಡೆಸಿದೆ. ಈ ಸರಣಿಯಲ್ಲಿ ಶಿಯೋಮಿ 14, ಶಿಯೋಮಿ 14 ಪ್ರೊ ಮತ್ತು ಶಿಯೋಮಿ 14 ಅಲ್ಟ್ರಾ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಲಿದೆ ಎಂದು ಅಂದಾಜಿಸಲಾಗಿದೆ. ಇದರಲ್ಲಿ ಶಿಯೋಮಿ 14 ಪ್ರೊ ಸ್ಮಾರ್ಟ್‌ಫೋನ್‌ ಅತ್ಯಾಕರ್ಷಕ ಫೀಚರ್ಸ್‌ಗಳಿಂದ ಗಮನಸೆಳೆಯುವ ಸೂಚನೆ ನೀಡಿದೆ.

ಹೌದು, ಶಿಯೋಮಿ 14 ಪ್ರೊ ಸ್ಮಾರ್ಟ್‌ಫೋನ್‌ ಫೀಚರ್ಸ್‌ ಆನ್‌ಲೈನ್‌ನಲ್ಲಿ ಬಹಿರಂಗವಾಗಿದೆ. ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್‌ ನೊಂದಿಗೆ ಬರುವ ಈ ಸ್ಮಾರ್ಟ್‌ಫೋನ್‌ ಈಗಾಗಲೇ ಸಖತ್‌ ಸಂಚಲನ ಸೃಷ್ಟಿಸಿದೆ. ಇನ್ನು ಶಿಯೋಮಿ 14 ಪ್ರೊ ಸ್ಮಾರ್ಟ್‌ಫೋನ್‌ 120W ವೇಗದ ಚಾರ್ಜಿಂಗ್ ಬೆಂಬಲವನ್ನು ನೀಡುತ್ತದೆ ಎಂದು ವರದಿಯಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳೊಂದಿಗೆ ಬರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಬಹಿರಂಗವಾಯ್ತು ಶಿಯೋಮಿ 14 ಪ್ರೊ ಕ್ಯಾಮೆರಾ ಮಾಡ್ಯೂಲ್‌! ವಾವ್ಹ್‌ ಎನಿಸುವ ಫೀಚರ್ಸ್

ಶಿಯೋಮಿ 14 ಪ್ರೊ ಡಿಸ್‌ಪ್ಲೇ ರಚನೆ ಏನಿರಬಹುದು?
ಶಿಯೋಮಿ 14 ಪ್ರೊ ಸ್ಮಾರ್ಟ್‌ಫೋನ್‌ 6.6 ಇಂಚಿನ ಫ್ಲಾಟ್ ಅಮೋಲೆಡ್‌ 2.5D ಡಿಸ್‌ಪ್ಲೇ ಹೊಂದಿರಲಿದೆ. ಈ ಡಿಸ್‌ಪ್ಲೇ 2K ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿರಲಿದೆ ಎನ್ನಲಾಗಿದೆ. ಇನ್ನು ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಬೆಂಬಲದೊಂದಿಗೆ ಬರುವ ನಿರೀಕ್ಷೆಯಿದೆ.

ಶಿಯೋಮಿ 14 ಪ್ರೊ ಪ್ರೊಸೆಸರ್ ಯಾವುದು?
ಶಿಯೋಮಿ 14 ಪ್ರೊ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 3 SoC ಚಿಪ್‌ಸೆಟ್‌ನಿಂದ ಚಾಲಿತವಾಗುವ ನಿರೀಕ್ಷೆಯಿದೆ. ಇದು 14-ಆಧಾರಿತ MIUI 15 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಆಯ್ಕೆಯಲ್ಲಿ ಬರಲಿದೆ. ಈ ಸ್ಮಾರ್ಟ್‌ಫೋನ್‌ ಮೆಮೊರಿ ಕಾರ್ಡ್‌ ಬೆಂಬಲಿಸುವ ಬಗ್ಗೆ ಯಾವುದೇ ಮಾಹಿತಿಯಿಲ್ಲ.

ಶಿಯೋಮಿ 14 ಪ್ರೊ ಕ್ಯಾಮೆರಾ ಸೆಟ್‌ಅಪ್‌
ಶಿಯೋಮಿ 14 ಪ್ರೊ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿರಬಹುದು. ಎರಡನೇ ಕ್ಯಾಮೆರಾ ಕೂಡ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಬರುವ ನಿರೀಕ್ಷೆಯಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 32 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾದೊಂದಿಗೆ ಬರುವ ಸಾಧ್ಯತೆಯಿದೆ.

ಶಿಯೋಮಿ 14 ಪ್ರೊ ಬ್ಯಾಟರಿ ಸಾಮರ್ಥ್ಯ
ಶಿಯೋಮಿ 14 ಪ್ರೊ ಸ್ಮಾರ್ಟ್‌ಫೋನ್‌ 4,860mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಬಹುದು. ಇದು 120W ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ ಬರಲಿದೆ ಎನ್ನಲಾಗಿದೆ. ಜೊತೆಗೆ 50W ವಾಯರ್‌ಲೆಸ್ ಚಾರ್ಜಿಂಗ್ ಬೆಂಬಲದೊಂದಿಗೆ ಜೋಡಿಸಬಹುದು. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಅನ್ನು ಹೊಂದಿರಲಿದೆ.

ಇತರೆ ಸೌಲಭ್ಯ
ಇದಲ್ಲದೆ ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್‌, ಹೈ-ರೆಸ್ ಆಡಿಯೋ, ಡಾಲ್ಬಿ ಅಟ್ಮಾಸ್ ಮತ್ತು ನೀರು ಮತ್ತು ಧೂಳಿನ ಪ್ರತಿರೋಧಕ್ಕಾಗಿ IP ರೇಟಿಂಗ್ ಅನ್ನು ಸಹ ಹೊಂದಿದೆ ಎನ್ನಲಾಗಿದೆ. ಇನ್ನು ಈ ಡಿವೈಸ್‌ ಯುಎಸ್‌ಬಿ ಟೈಪ್-ಸಿ ಪೋರ್ಟ್, ಸ್ಪೀಕರ್ ಗ್ರಿಲ್ ಮತ್ತು ಕೆಳಭಾಗದಲ್ಲಿ ಸಿಮ್ ಕಾರ್ಡ್ ಸ್ಲಾಟ್ ಅನ್ನು ಹೊಂದಿರುತ್ತದೆ ಎಂದು ರೆಂಡರ್‌ಗಳು ಬಹಿರಂಗಪಡಿಸುತ್ತವೆ.

ಶಿಯೋಮಿ 14 ಪ್ರೊ ಬೆಲೆ ಮತ್ತು ಲಭ್ಯತೆ
ಶಿಯೋಮಿ 14 ಪ್ರೊ ಸ್ಮಾರ್ಟ್‌ಫೋನ್‌ ಮೊದಲಿಗೆ ಚೀನಾದಲ್ಲಿ ಬಿಡುಗಡೆ ಆಗಲಿದೆ. ನಂತರದ ದಿನಗಳಲ್ಲಿ ಭಾರತಕ್ಕೂ ಕೂಡ ಕಾಲಿಡುವ ನಿರೀಕ್ಷೆಯನ್ನು ಇಡಲಾಗಿದೆ. ಆದರೆ ಇಲ್ಲಿಯವರೆಗೆ ಈ ಸ್ಮಾರ್ಟ್‌ಫೋನ್‌ನ ಬಿಡುಗಡೆ ದಿನಾಂಕ ಅಧಿಕೃತವಾಗಿಲ್ಲ. ಅಷ್ಟೇ ಯಾಕೆ ಈ ಸ್ಮಾರ್ಟ್‌ಫೋನ್‌ ಬೆಲೆ ಏನಿರಲಿದೆ ಅನ್ನೊದು ಕೂಡ ಇನ್ನು ಬಹಿರಂಗವಾಗಿಲ್ಲ. ಈ ಸ್ಮಾರ್ಟ್‌ಫೋನ್‌ ಸದ್ಯದಲ್ಲೇ ಬಿಡುಗಡೆ ಆಗುವುದು ಪಕ್ಕಾ ಆಗಿರುವುದರಿಂದ ಮಾರುಕಟ್ಟೆಯಲ್ಲಿ ಹೊಸ ಅಲೆಯನ್ನು ಸೃಷ್ಟಿಸುವ ನಿರೀಕ್ಷೆಯಿದೆ.

Best Mobiles in India

English summary
Xiaomi 14 Pro Smartphone design revealed through renders: massive camera module and more
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+