ನೀವು ಬೇಡಾ ಅಂದ್ರೂ ಶಿಯೋಮಿಯ ಈ ದೈತ್ಯ ಫೋನಿಗೆ ಬಿಗ್ ಡಿಸ್ಕೌಂಟ್!
ಲೀಡಿಂಗ್ ಮೊಬೈಲ್ ಕಂಪನಿಗಳಲ್ಲಿ ಶಿಯೋಮಿ ಕಂಪನಿಯು ಕೂಡಾ ಒಂದಾಗಿದೆ. ಈ ಕಂಪನಿಯು ಹೈ ಎಂಡ್ ಮಾದರಿಯ ಫೋನ್‌ಗಳ ಆಯ್ಕೆ ಸಹ ಹೊಂದಿದ್ದು, ಆ ಪೈಕಿ ಕಂಪನಿಯ ಇತ್ತೀಚಿನ ಶಿಯೋಮಿ 14 ಮೊಬೈಲ್ ಬೊಂಬಾಟ್ ಫೀಚರ್ಸ್‌ಗಳೊಂದಿಗೆ ಮಾರುಕಟ್ಟೆಯಲ್ಲಿ ಅಬ್ಬರಿಸಿದೆ. ಖುಷಿ ವಿಷಯ ಅಂದ್ರೆ ಈ ಫೋನ್ ಇದೀಗ ಭರ್ಜರಿ ಡಿಸ್ಕೌಂಟ್ ಪಡೆದಿದ್ದು, ಗ್ರಾಹಕರು OMG ಎನ್ನುವಂತೆ ಮಾಡಿದೆ.
ಹೌದು, ಶಿಯೋಮಿ 14 ಅಧಿಕೃತ ಶಿಯೋಮಿ ವೆಬ್‌ಸೈಟ್ (Mi.com) ನಲ್ಲಿ ಆಕರ್ಷಕ ಶೇ. 12% ರಷ್ಟು ಡಿಸ್ಕೌಂಟ್ ಪಡೆದಿದೆ. 12 GB RAM + 512 GB ವೇರಿಯಂಟ್ ಅನ್ನು ಆಫರ್‌ನಲ್ಲಿ 69,999 ರೂ. ಗಳಿಗೆ ಖರೀದಿ ಮಾಡಬಹುದು. ಹಾಗೆಯೇ ನೋ ಕಾಸ್ಟ್ ಇಎಮ್‌ಐ ಸೌಲಭ್ಯದ ಆಯ್ಕೆಗಳು ಹಾಗೂ ಆಯ್ದ ಕೆಲವು ಬ್ಯಾಂಕ್‌ಗಳಿಂದ ಹೆಚ್ಚುವರಿ ರಿಯಾಯಿತಿ ಸಹ ಸಿಗುತ್ತವೆ. ಹಾಗಾದರೇ ಶಿಯೋಮಿ 14 ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಶಿಯೋಮಿ 14 - ಫೀಚರ್ಸ್
ಶಿಯೋಮಿ 14 ಮೊಬೈಲ್ 6.3 ಇಂಚಿನ ಕೇಂದ್ರಿತ ಪಂಚ್-ಹೋಲ್ ಫ್ಲಾಟ್ OLED ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇಯು 2670 x 1200 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಈ ಡಿಸ್‌ಪ್ಲೇಯು 460 PPI ಮತ್ತು 1-120Hz ರಿಫ್ರೆಶ್ ರೇಟ್ (LTPO) ರೆಸಲ್ಯೂಶನ್ ಪಡೆದಿದೆ. ಇದು ಡಾಲ್ಬಿ ವಿಷನ್, ಡಿಸಿ ಡಿಮ್ಮಿಂಗ್, ಮತ್ತು 3000 ನಿಟ್ಸ್ ಲೋಕಲ್ ಪೀಕ್ ಬ್ರೈಟ್‌ನೆಸ್ ಲೆವೆಲ್ ಅನ್ನು ಬೆಂಬಲಿಸಲಿದೆ.

ಶಿಯೋಮಿ 14 ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 ಜೆನ್ 3 SoC ಪ್ರೊಸೆಸರ್ ಪವರ್ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 14 ಸಪೋರ್ಟ್ ಜೊತೆಗೆ ಕೆಲಸ ನಿರ್ವಹಿಸಲಿದೆ. ಇದನ್ನು ಲಿಕ್ವಿಡ್ ಕೂಲಿಂಗ್ ಸಿಸ್ಟಮ್‌ನೊಂದಿಗೆ ಜೋಡಿಸಲಾಗಿದೆ. ಹಾಗೆಯೇ 12GB RAM ಮತ್ತು 512GB ಆಂತರೀಕ ಸ್ಟೋರೇಜ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ.
ಶಿಯೋಮಿ 14 ಮೊಬೈಲ್ ಲೈಕಾ-ಟ್ಯೂನ್ಡ್ ಕ್ಯಾಮೆರಾಗಳನ್ನು ಹೊಂದಿದ್ದು, ಮೂರು ಕ್ಯಾಮೆರಾ ರಚನೆಯನ್ನು ಪಡೆದಿದೆ. ಇದರಲ್ಲಿ ಮೊದಲ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಅಲ್ಟ್ರಾವೈಡ್ ಲೆನ್ಸ್ ಹಾಗೂ ಮೂರನೇ ಕ್ಯಾಮೆರಾ 50 ಮೆಗಾ ಪಿಕ್ಸೆಲ್ 3.2x ಫ್ಲೋಟಿಂಗ್ ಟೆಲಿಫೋಟೋ ಲೆನ್ಸ್ ಅನ್ನು ಪಡೆದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.
ಶಿಯೋಮಿ 14 ಮೊಬೈಲ್ 4,610mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದ್ದು, ಇದು 90W ವೈರ್ಡ್, 50W ವಾಯರ್‌ಲೆಸ್ ಮತ್ತು 10W ರಿವರ್ಸ್ ವಾಯರ್‌ಲೆಸ್ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುತ್ತದೆ. ಇದಲ್ಲದೆ ಸ್ಮಾರ್ಟ್‌ಫೋನ್ ಇನ್-ಸ್ಕ್ರೀನ್ ಫಿಂಗರ್‌ಪ್ರಿಂಟ್ ಸೆನ್ಸಾರ್, ಡಾಲ್ಬಿ ಅಟ್ಮಾಸ್-ಬೆಂಬಲಿತ ಡ್ಯುಯಲ್ ಸ್ಟಿರಿಯೊ ಸ್ಪೀಕರ್‌ಗಳು, ಎಕ್ಸ್-ಆಕ್ಸಿಸ್ ಲೀನಿಯರ್ ವೈಬ್ರೇಶನ್ ಮೋಟಾರ್ ನಂತಹ ಆಯ್ಕೆಗಳನ್ನು ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, ವೈಫೈ 7, ಬ್ಲೂಟೂತ್ 5.4, GNSS, NFC, ಮತ್ತು USB 3.2 ಆಯ್ಕೆ ಇವೆ.
ಶಿಯೋಮಿ 14 ಮೊಬೈಲ್ 12GB + 512GB ರೂಪಾಂತರ ಆಯ್ಕೆ ಹೊಂದಿದೆ. ಹಾಗೆಯೇ ಈ ಫೋನ್ ಕಪ್ಪು, ಬಿಳಿ ಅಥವಾ ಜೇಡ್ ಗ್ರೀನ್ ಬಣ್ಣ ಆಯ್ಕೆಗಳಲ್ಲಿ ಖರೀದಿ ಮಾಡಬಹುದಾಗಿದ್ದು, ಗ್ರಾಹಕರು ಅಧಿಕೃತ ಮಿ ವೆಬ್‌ಸೈಟ್ ತಾಣದಲ್ಲಿ ಖರೀದಿ ಮಾಡಬಹುದು.


Click it and Unblock the Notifications








