Home
ಸುದ್ದಿಜಾಲ

ಧೂಳೆಬ್ಬಿಸಲು ರೆಡಿಯಾಗಿದೆ ಶಿಯೋಮಿ 14 ಫೋನ್‌ ಸರಣಿ!..ಲಾಂಚ್‌ಗೆ ದಿನಗಣನೆ!

ಶಿಯೋಮಿ ಕಂಪೆನಿಯ ಸ್ಮಾರ್ಟ್‌ಫೋನ್‌ಗಳಿಗೆ ಮಾರುಕಟ್ಟೆಯಲ್ಲಿ ಸಖತ್ ಡಿಮ್ಯಾಂಡ್‌ ಇದೆ. ಬೇಡಿಕೆಗೆ ಅನುಗುಣವಾಗಿ ಶಿಯೋಮಿ ಸಂಸ್ಥೆಯು ಕೂಡ ಅನೇಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುತ್ತಾ ಬಂದಿದೆ. ಇದರ ಮುಂದುವರೆದ ಭಾಗವಾಗಿ ಇದೀಗ ಶಿಯೋಮಿ 14 ಸರಣಿಯನ್ನು ಪರಿಚಯಿಸಲು ಸಿದ್ಧತೆ ನಡೆಸಿದ್ದು, ಬಿಡುಗಡೆಯ ಅಧಿಕೃತ ದಿನಾಂಕವನ್ನು ಸಹ ಬಹಿರಂಗಗೊಳಿಸಿದೆ.

ಹೌದು, ಶಿಯೋಮಿ ಸಂಸ್ಥೆಯ ಶಿಯೋಮಿ 14 ಸರಣಿಯು ಶಿಯೋಮಿ 13 ಸರಣಿಯ ಉತ್ತರಾಧಿಕಾರಿ ಎಂದೇ ಗುರುತಿಸಿಕೊಂಡಿದೆ. ಅಂದಹಾಗೆ ಈ ನೂತನ ಸರಣಿಯು ಇದೇ ಫೆಬ್ರವರಿ 25 ರಂದು ಅಧಿಕೃತವಾಗಿ ಗ್ಲೋಬಲ್ ಮಾರುಕಟ್ಟೆಗೆ ಲಾಂಚ್ ಆಗಲಿದೆ. ಈ ಸರಣಿಯು ಶಿಯೋಮಿ 14, ಶಿಯೋಮಿ 14 ಪ್ರೊ ಮತ್ತು ಶಿಯೋಮಿ 14 ಅಲ್ಟ್ರಾ ಮಾಡೆಲ್‌ಗಳನ್ನು ಒಳಗೊಂಡಿದೆ.

ಧೂಳೆಬ್ಬಿಸಲು ರೆಡಿಯಾಗಿದೆ ಶಿಯೋಮಿ 14 ಫೋನ್‌ ಸರಣಿ!..ಲಾಂಚ್‌ಗೆ ದಿನಗಣನೆ!

ಶಿಯೋಮಿ 14 ಸರಣಿಯ (Xiaomi 14) ಎಲ್ಲಾ ಫೋನ್‌ಗಳು ಸ್ನಾಪ್‌ಡ್ರಾಗನ್ 8 ಜೆನ್‌ 3 ಚಿಪ್‌ಸೆಟ್‌ ಪ್ರೊಸೆಸರ್‌ನಿಂದ ಕೆಲಸ ಮಾಡಲಿವೆ. ಅಲ್ಲದೇ ಈ ಫೋನ್‌ಗಳು IP68 ನೀರು ಮತ್ತು ಧೂಳಿನ ಪ್ರತಿರೋಧ ಸೌಲಭ್ಯ ಪಡೆದುಕೊಂಡಿವೆ. ಹಾಗೆಯೇ ಆಂಡ್ರಾಯ್ಡ್‌ 14 ಓಎಸ್‌ ಸಪೋರ್ಟ್‌ ಸಹ ಇದೆ. ಹಾಗಾದರೇ ಶಿಯೋಮಿ 14 ಸರಣಿ ಫೋನ್‌ಗಳ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಫೆಬ್ರವರಿ 25 ರಂದು ಲಾಂಚ್

ಶಿಯೋಮಿ ಸಂಸ್ಥೆಯು ತನ್ನ ಬಹುನಿರೀಕ್ಷಿತ ಶಿಯೋಮಿ 14 ಸರಣಿಯನ್ನು ಇದೇ ಫೆಬ್ರವರಿ 25 ರಂದು ವರ್ಲ್ಡ್‌ ಮೊಬೈಲ್ ವರ್ಲ್ಡ್ ಕಾಂಗ್ರೆಸ್ (MWC) 2024 ಕ್ಕೆ ಮುಂಚಿತವಾಗಿ ಬಿಡುಗಡೆ ಮಾಡಲು ಸಿದ್ಧವಾಗಿದೆ. ಶಿಯೋಮಿ 14 ಅಲ್ಟ್ರಾ ಫೋನ್‌ ಮಾಡೆಲ್‌ ಸಾಕಷ್ಟು ಕುತೂಹಲ ಹುಟ್ಟುಹಾಕಿದೆ.

ಧೂಳೆಬ್ಬಿಸಲು ರೆಡಿಯಾಗಿದೆ ಶಿಯೋಮಿ 14 ಫೋನ್‌ ಸರಣಿ!..ಲಾಂಚ್‌ಗೆ ದಿನಗಣನೆ!

ಶಿಯೋಮಿ 14 ಸ್ಮಾರ್ಟ್‌ಫೋನ್‌

ಸ್ಮಾರ್ಟ್‌ಫೋನ್‌ 6.36 ಇಂಚಿನ Huaxing C8 LTPO AMOLED ಡಿಸ್‌ಪ್ಲೇ ಹೊಂದಿರಲಿದೆ. ಈ ಡಿಸ್‌ಪ್ಲೇ 1.5K ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ ಬರಲಿದೆ. ಹಾಗೆಯೇ ಈ ಫೋನ್ ಸ್ನಾಪ್‌ಡ್ರಾಗನ್ 8 ಜನ್ 3 SoC ಪ್ರೊಸೆಸರ್‌ ವೇಗದೊಂದಿಗೆ ಬರಲಿದೆ. ಇದು HyperOS ಸಪೋರ್ಟ್‌ ಜೊತೆಗೆ ಕಾರ್ಯ ನಿರ್ವಹಿಸಲಿದೆ.

ಈ ಫೋನ್ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ OV50H ಸೆನ್ಸಾರ್‌ ಸೌಲಭ್ಯ ಪಡೆದಿರಲಿದೆ. ಇದಲ್ಲದೆ 32 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾದೊಂದಿಗೆ ಬರಲಿದೆ ಎಂದು ಹೇಳಲಾಗಿದೆ. ಹಾಗೆಯೇ ಈ ಫೋನ್ 4,600mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ.

ಶಿಯೋಮಿ 14 ಅಲ್ಟ್ರಾ ಸ್ಮಾರ್ಟ್‌ಫೋನ್‌

ಈ ಸ್ಮಾರ್ಟ್‌ಫೋನ್‌ 6.7 ಇಂಚಿನ 2K AMOLED ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇಯು 1440 x 3200 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿರಲಿ ಇದೆ. ಈ ಫೋನ್ ಕ್ವಾಲ್‌ಕಾಮ್‌ ಸ್ನಾಪ್‌ಡ್ರಾಗನ್ 8 Gen 3 SoC ಪ್ರೊಸೆಸರ್‌ ಪವರ್‌ ಅನ್ನು ಪಡೆದಿದ್ದು, ಇದು HyperOS ಸ್ಕಿನ್‌ನೊಂದಿಗೆ ಆಂಡ್ರಾಯ್ಡ್ 14 ಸಪೋರ್ಟ್‌ನೊಂದಿಗೆ ಕಾರ್ಯ ನಿರ್ವಹಿಸಲಿದೆ.

ಇನ್ನು ಈ ಫೋನ್ ಕ್ವಾಡ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ LYT-900 ಸೆನ್ಸಾರ್‌ ಅನ್ನು ಹೊಂದಿರಲಿದೆ. ಹಾಗೆಯೇ ಇದಲ್ಲದೆ 32 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ಜೊತೆಗೆ 5180 mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್‌, ವೈಫೈ, ಯುಎಸ್‌ಬಿ ಟೈಪ್‌ ಸಿ ಪೋರ್ಟ್‌, ಹೆಡ್‌ಪೋನ್‌ ಜ್ಯಾಕ್‌ ಅನ್ನು ಬೆಂಬಲಿಸಲಿದೆ.

Best Mobiles in India

English summary
Xiaomi 14 Series Confirmed to Launch on February 25. Specifications, Price and all details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+