Home
ಸುದ್ದಿಜಾಲ

ಶಿಯೋಮಿ 14 ಸರಣಿ ಸ್ಮಾರ್ಟ್‌ಫೋನ್‌ ಲಾಂಚ್‌ ಡೇಟ್‌ ಬಹಿರಂಗ!. ಟ್ರಿಪಲ್‌ ರಿಯರ್‌ ಕ್ಯಾಮೆರಾ ವಿಶೇಷ!

ಶಿಯೋಮಿ 14 ಸರಣಿ ಸ್ಮಾರ್ಟ್‌ಫೋನ್‌ ಬಗ್ಗೆ ಸಾಕಷ್ಟು ನಿರೀಕ್ಷೆಗಳು ಗರಿಗೆದರಿವೆ. ಈಗಾಗಲೇ ಟೆಕ್‌ ವಲಯದಲ್ಲಿ ಭಾರಿ ಸೌಂಡ್‌ ಮಾಡುತ್ತಿರುವ ಈ ಸರಣಿಯು ಇದೇ ಅಕ್ಟೋಬರ್ 26ರಂದು ಬಿಡುಗಡೆ ಆಗಲಿದೆ ಎಂದು ಹೇಳಲಾಗಿದೆ. ಇನ್ನು ಈ ಸರಣಿಯಲ್ಲಿ ಶಿಯೋಮಿ 14 ಮತ್ತು ಶಿಯೋಮಿ 14ಪ್ರೊ ಸ್ಮಾರ್ಟ್‌ಫೋನ್‌ಗಳು ಬರಲಿವೆ ಎಂದು ವರದಿಯಾಗಿದೆ.

ಹೌದು, ಶಿಯೋಮಿ 14 ಸರಣಿಯ ಬಿಡುಗಡೆ ದಿನಾಂಕ ಬಹಿರಂಗವಾಗಿದೆ. ಮಾತ್ರವಲ್ಲ ಈ ಸ್ಮಾರ್ಟ್‌ಫೋನ್‌ಗಳ ಫೀಚರ್ಸ್‌ ಹಾಗೂ ಡಿಸೈನ್‌ ವಿವರಗಳು ಕೂಡ ಆನ್‌ಲೈನ್‌ನಲ್ಲಿ ಬಹಿರಂಗವಾಗಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ನೊಂದಿಗೆ ಬರಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಶಿಯೋಮಿ 14 ಸರಣಿ ಲಾಂಚ್‌ ಡೇಟ್‌ ಬಹಿರಂಗ!.  ಟ್ರಿಪಲ್‌ ರಿಯರ್‌ ಕ್ಯಾಮೆರಾ ವಿಶೇಷ!

ಶಿಯೋಮಿ 14 ಡಿಸ್‌ಪ್ಲೇ ಹೇಗಿರಲಿದೆ?
ಶಿಯೋಮಿ 14 ಸ್ಮಾರ್ಟ್‌ಫೋನ್‌ 6.36 ಇಂಚಿನ Huaxing C8 LTPO AMOLED ಡಿಸ್‌ಪ್ಲೇ ಹೊಂದಿರಲಿದೆ. ಈ ಡಿಸ್‌ಪ್ಲೇ 1.5K ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ ಬರಲಿದೆ. ಇನ್ನು ಡಿಸ್‌ಪ್ಲೇ 460ppi ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದೆ. ಇದಲ್ಲದೆ ಡಿಸ್‌ಪ್ಲೇ 1Hz ನಿಂದ 120Hz ವರೆಗಿನ ಹೊಂದಾಣಿಕೆಯ ರಿಫ್ರೆಶ್ ರೇಟ್‌ ಬೆಂಬಲಿಸಲಿದೆ. ಜೊತೆಗೆ ಡಿಸ್‌ಪ್ಲೇ 3000 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಮತ್ತು ಫುಲ್‌ ಡಿಸಿ ಡಿಮ್ಮಿಂಗ್‌ ನೀಡಲು ಪರದೆಯನ್ನು ರೇಟ್ ಮಾಡಲಾಗಿದೆ.

ಶಿಯೋಮಿ 14 ಪ್ರೊಸೆಸರ್‌ ಯಾವುದು?
ಶಿಯೋಮಿ 14 ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 ಜನ್ 3 SoC ಪ್ರೊಸೆಸರ್‌ ವೇಗದೊಂದಿಗೆ ಬರಲಿದೆ. ಇದು HyperOS ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 16GB RAM ಮತ್ತು 1TB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಆಯ್ಕೆಯಲ್ಲಿ ಬರಲಿದೆ ಎನ್ನಲಾಗಿದೆ. ಈ ಫೋನ್‌ ಮೆಮೊರಿ ಕಾರ್ಡ್‌ ಬೆಂಬಲಿಸುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಿಲ್ಲ.

ಶಿಯೋಮಿ 14 ಸರಣಿ ಲಾಂಚ್‌ ಡೇಟ್‌ ಬಹಿರಂಗ!.  ಟ್ರಿಪಲ್‌ ರಿಯರ್‌ ಕ್ಯಾಮೆರಾ ವಿಶೇಷ!

ಶಿಯೋಮಿ 14 ಕ್ಯಾಮೆರಾ ಸೆಟ್‌ಅಪ್‌
ಶಿಯೋಮಿ 14 ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ OV50H ಸೆನ್ಸಾರ್‌, ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಅಲ್ಟ್ರಾ-ವೈಡ್ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಟೆಲಿಫೋಟೋ ಸೆನ್ಸಾರ್‌ ಅನ್ನು ಒಳಗೊಂಡಿರಲಿದೆ. ಇದಲ್ಲದೆ 32 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾದೊಂದಿಗೆ ಬರಲಿದೆ ಎಂದು ಹೇಳಲಾಗಿದೆ.

ಶಿಯೋಮಿ 14 ಬ್ಯಾಟರಿ ಮತ್ತು ಇತರೆ ಫೀಚರ್ಸ್‌
ಶಿಯೋಮಿ 14 ಸ್ಮಾರ್ಟ್‌ಫೋನ್‌ 4,600mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 90W ವೈರ್ಡ್ ಚಾರ್ಜಿಂಗ್, 50W ವೈರ್‌ಲೆಸ್ ಚಾರ್ಜಿಂಗ್ ಮತ್ತು 10W ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ ಎಂದು ವರದಿಯಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಅನ್ನು ಹೊಂದಿರಲಿದೆ. ಇದಲ್ಲದೆ ಲೈಟ್ ಸೆನ್ಸರ್, ಪ್ರಾಕ್ಸಿಮಿಟಿ ಸೆನ್ಸರ್, ಅಕ್ಸಿಲೆರೊಮೀಟರ್, ಕಂಪಾಸ್, ಜಿರೋಸ್ಕೋಪ್ ಬೆಂಬಲಿಸಲಿದೆ.

ಶಿಯೋಮಿ 14 ಸರಣಿ ಲಾಂಚ್‌ ಡೇಟ್‌ ಬಹಿರಂಗ!.  ಟ್ರಿಪಲ್‌ ರಿಯರ್‌ ಕ್ಯಾಮೆರಾ ವಿಶೇಷ!

ಶಿಯೋಮಿ 14 ಬೆಲೆ ಮತ್ತು ಲಭ್ಯತೆ
ಶಿಯೋಮಿ 14 ಸ್ಮಾರ್ಟ್‌ಫೋನ್‌ ಬೆಲೆ ವಿವರಗಳು ಇನ್ನು ಕೂಡ ಬಹಿರಂಗವಾಗಿಲ್ಲ. ಇನ್ನು ಈ ಸ್ಮಾರ್ಟ್‌ಫೋನ್‌ ಸರಣಿ ಮೊದಲಿಗೆ ಚೀನಾದಲ್ಲಿ ಮಾತ್ರ ಬಿಡುಗಡೆ ಆಗಲಿದೆ. ಈ ಸ್ಮಾರ್ಟ್‌ಫೋನ್‌ ಕ್ಲಾಸಿಕ್ ಬ್ಲ್ಯಾಕ್, ರಾಕ್ ಬ್ಲೂ ಮತ್ತು ಸ್ನೋ ಮೌಂಟೇನ್ ಪಿಂಕ್ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಬರಲಿದೆ. ನಂತರದ ದಿನಗಳಲ್ಲಿ ಭಾರತಕ್ಕೂ ಎಂಟ್ರಿ ನೀಡಲಿದೆಯಾ ಅನ್ನೊದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

Best Mobiles in India

English summary
Xiaomi 14 Specifications Teased Ahead of October 26 Launch: Details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+