ಇಂದು ದೈತ್ಯ ಶಿಯೋಮಿ 14 ಅಲ್ಟ್ರಾ ಫೋನಿನ ಸೇಲ್!..ಇದರ ಫೀಚರ್ಸ್‌ಗೆ ಫಿದಾ ಆಗ್ತೀರಾ!
ಪ್ರಮುಖ ಮೊಬೈಲ್ ಬ್ರ್ಯಾಂಡ್ ಎನಿಸಿರುವ ಶಿಯೋಮಿ ಸಂಸ್ಥೆಯು ಹೊಸದಾಗಿ ಲಾಂಚ್ ಮಾಡಿರುವ 'ಶಿಯೋಮಿ 14 ಅಲ್ಟ್ರಾ' ದೈತ್ಯ ಫೀಚರ್ಸ್‌ಗಳಿಂದ ಗ್ರಾಹಕರ ಗಮನ ಸೆಳೆದಿದೆ. ಈ ಫೋನ್ ಇಂದು (ಏಪ್ರಿಲ್ 11) ರಂದು ಫ್ಲಿಪ್‌ಕಾರ್ಟ್ ಪ್ಲಾಟ್‌ಫಾರ್ಮ್ ಮೂಲಕ ಮಧ್ಯಾಹ್ನ ಸೇಲ್ ಪ್ರಾರಂಭ ಮಾಡಿದೆ.
ಹೌದು, ಫ್ಲಿಪ್‌ಕಾರ್ಟ್ ತಾಣದಲ್ಲಿ ಇಂದು ಶಿಯೋಮಿ 14 ಅಲ್ಟ್ರಾ ಮೊಬೈಲ್ ಮಾರಾಟ ಶುರು ಮಾಡಿದೆ. ಈ ಫೋನ್ 16 GB RAM + 512 GB ವೇರಿಯಂಟ್ ಆಯ್ಕೆ ಹೊಂದಿದ್ದು, ಈ ವೇರಿಯಂಟ್ ಬೆಲೆಯು 99,999ರೂ. ಆಗಿದೆ. ಇನ್ನು ಈ ಫೋನ್ ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 8 Gen 3 SoC ಪ್ರೊಸೆಸರ್ ಸೌಲಭ್ಯ ಪಡೆದಿದೆ.

ಹಾಗೆಯೇ ಈ ಮೊಬೈಲ್ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಸೌಲಭ್ಯ ಒಳಗೊಂಡಿದೆ. ಹಾಗೆಯೇ ಇದು ಇದರ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ LYT900 ಸೆನ್ಸಾರ್ ಸೌಲಭ್ಯವನ್ನು ಪಡೆದುಕೊಂಡಿದೆ. ಇನ್ನುಳಿದಂತೆಶಿಯೋಮಿ 14 ಅಲ್ಟ್ರಾ ಮೊಬೈಲ್‌ನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಶಿಯೋಮಿ 14 ಅಲ್ಟ್ರಾ - ಫೀಚರ್ಸ್ ಮಾಹಿತಿ
ಶಿಯೋಮಿ 14 ಅಲ್ಟ್ರಾ ಮೊಬೈಲ್ 6.73 ಇಂಚಿನ ಡಿಸ್‌ಪ್ಲೇ ಅನ್ನು ಪಡೆದಿದ್ದು, ಇದು LTPO AMOLED ಮೈಕ್ರೋ-ಕರ್ವ್ ಡಿಸ್‌ಪ್ಲೇ ಹೊಂದಿದೆ. ಇನ್ನು ಡಿಸ್‌ಪ್ಲೇಯು 3,200 x 1,440 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದಲ್ಲಿ ಇದೆ. ಇದಲ್ಲದೆ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ನೊಂದಿಗೆ ಬರಲಿದ್ದು, 3,000 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಲೆವೆಲ್ ಅನ್ನು ಹೊಂದಿದೆ.
ಶಿಯೋಮಿ 14 ಅಲ್ಟ್ರಾ ಮೊಬೈಲ್ ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 8 ಜೆನ್ 3 SoC ಪ್ರೊಸೆಸರ್ ಅನ್ನು ಪವರ್ ಪಡೆದಿದೆ. ಹಾಗೆಯೇ ಇದು ಆಂಡ್ರಾಯ್ಡ್ 14-ಆಧಾರಿತ ಹೈಪರ್ಓಎಸ್‌ನಲ್ಲಿ ಕೆಲಸ ನಿರ್ವಹಿಸುತ್ತದೆ. ಹಾಗೆಯೇ 16 GB RAM + 512 GB ಆಂತರೀಕ ಸ್ಟೋರೇಜ್ ಸಾಮರ್ಥ್ಯದ ಆಯ್ಕೆ ಪಡೆದಿದೆ.
ಶಿಯೋಮಿ 14 ಅಲ್ಟ್ರಾ ಮೊಬೈಲ್ ಕ್ವಾಡ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಮೊದಲ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ LYT900 ಸೆನ್ಸಾರ್ ನಲ್ಲಿದೆ. ದ್ವಿತೀಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಪಡೆದಿದೆ. ಹಾಗೆಯೇ ಮೂರನೇ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ 5x ಆಪ್ಟಿಕಲ್ ಜೂಮ್ ಪಡೆದಿದ್ದು, ನಾಲ್ಕನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.
ಶಿಯೋಮಿ 14 ಅಲ್ಟ್ರಾ ಮೊಬೈಲ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಪಡೆದಿದ್ದು, ಇದು 90W ವೈರ್ಡ್, 80W ವಾಯರ್‌ಲೆಸ್ ಮತ್ತು 10W ವಾಯರ್‌ಲೆಸ್ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, ವೈಫೈ, ಬ್ಲೂಟೂತ್ 5.4, NFC, GPS, GLONASS, ಗೆಲಿಲಿಯೋ, BeiDou, NavIC, ಮತ್ತು ಚಾರ್ಜಿಂಗ್ ಮತ್ತು ಡೇಟಾ ವರ್ಗಾವಣೆಗಾಗಿ USB ಟೈಪ್-C ಪೋರ್ಟ್ ಆಯ್ಕೆ ಇವೆ.
ಶಿಯೋಮಿ 14 ಅಲ್ಟ್ರಾ ಮೊಬೈಲ್ 16GB RAM ಮತ್ತು 512GB ವೇರಿಯಂಟ್ ಬೆಲೆಯು 99,999ರೂ. ಆಗಿದೆ. ಈ ಫೋನ್ ಇಂದು ಫ್ಲಿಪ್‌ಕಾರ್ಟ್ ತಾಣದಲ್ಲಿ ಖರೀದಿಗೆ ಲಭ್ಯ ಇದ್ದು, ಗ್ರಾಹಕರು ಈ ಸ್ಮಾರ್ಟ್‌ಫೋನ್ ಅನ್ನು ಬ್ಲ್ಯಾಕ್ ಮತ್ತು ವೈಟ್ ಕಲರ್ ಆಯ್ಕೆಗಳಲ್ಲಿ ಖರೀದಿ ಮಾಡಬಹುದು.


Click it and Unblock the Notifications








