Home
ಸುದ್ದಿಜಾಲ

ಬಹಿರಂಗವಾಯ್ತು ಶಿಯೋಮಿ 14 ಅಲ್ಟ್ರಾ ಫೋನ್‌ನ ಬ್ಯಾಟರಿ ವಿವರ! ಏನೆಲ್ಲಾ ನಿರೀಕ್ಷೆ?

ಮುಂದಿನ ವರ್ಷ ಬಿಡುಗಡೆ ಆಗಲಿರುವ ಪ್ರಮುಖ ಸ್ಮಾರ್ಟ್‌ಫೋನ್‌ಗಳಲ್ಲಿ 14 ಅಲ್ಟ್ರಾ ಕೂಡ ಒಂದಾಗಿದೆ. ಶಿಯೋಮಿ 14 ಅಲ್ಟ್ರಾ ಸ್ಮಾರ್ಟ್‌ಫೋನ್‌ ಬಗ್ಗೆ ಟೆಕ್‌ ವಲಯದಲ್ಲಿ ಭಾರಿ ನಿರೀಕ್ಷೆ ಇಡಲಾಗಿದೆ. ಇದೀಗ ಈ ಸ್ಮಾರ್ಟ್‌ಫೋನ್‌ನ ಬ್ಯಾಟರಿ ಗಾತ್ರ ಮತ್ತು ಚಾರ್ಜಿಂಗ್‌ ಸಾಮರ್ಥ್ಯ ಬಹಿರಂಗವಾಗಿದೆ. ಈ ಮೂಲಕ ಟೆಕ್‌ ಲೋಕದಲ್ಲಿ ಹೊಸ ಸಂಚಲನ ಶುರುವಾಗಿದೆ.

ಹೌದು, ಶಿಯೋಮಿ 14 ಅಲ್ಟ್ರಾ ಸ್ಮಾರ್ಟ್‌ಫೋನ್‌ 2024 ರ ಎರಡನೇ ತ್ರೈಮಾಸಿಕದಲ್ಲಿ ಅನಾವರಣಗೊಳ್ಳುವ ನಿರೀಕ್ಷೆಯಿದೆ. ಇನ್ನು ತಯಾರಿಕೆ ಹಂತದಲ್ಲಿರುವ ಈ ಫೋನ್‌ ಬ್ಯಾಟರಿ ಸಾಮರ್ಥ್ಯದ ವಿವರಗಳು ಆನ್‌ಲೈನ್‌ನಲ್ಲಿ ಬಹಿರಂಗವಾಗಿದೆ. ಈ ಮೂಲಕ ಸ್ಮಾರ್ಟ್‌ಫೋನ್‌ ಬಗ್ಗೆ ಸಾಕಷ್ಟು ನಿರೀಕ್ಷೆ ಗರಿಗೆದರುವಂತೆ ಮಾಡಿದೆ. ಹಾಗಾದ್ರೆ ಶಿಯೋಮಿ 14 ಅಲ್ಟ್ರಾ ಫೋನ್‌ನ ಬ್ಯಾಟರಿ ಮತ್ತು ಚಾರ್ಜಿಂಗ್‌ ಸಾಮರ್ಥ್ಯದ ಬಗ್ಗೆ ಏನೆಲ್ಲಾ ನಿರೀಕ್ಷಿಸಲಾಗಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಬಹಿರಂಗವಾಯ್ತು ಶಿಯೋಮಿ 14 ಅಲ್ಟ್ರಾ ಫೋನ್‌ನ ಬ್ಯಾಟರಿ ವಿವರ! ಏನೆಲ್ಲಾ ನಿರೀಕ್ಷೆ?

ಶಿಯೋಮಿ 14 ಅಲ್ಟ್ರಾ ಬ್ಯಾಟರಿ ಗಾತ್ರ ಸಾಮರ್ಥ್ಯ ಬಹಿರಂಗ!
ಶಿಯೋಮಿ 14 ಅಲ್ಟ್ರಾ ಸ್ಮಾರ್ಟ್‌ಫೋನ್‌ನಲ್ಲಿ 5,180mAh ಸಾಮರ್ಥ್ಯದ ಬ್ಯಾಟರಿಯನ್ನು ನಿರೀಕ್ಷಿಸಲಾಗಿದೆ. ಇದು 90W ವೈರ್ಡ್ ಚಾರ್ಜಿಂಗ್ ಮತ್ತು 50W ವೈರ್‌ಲೆಸ್ ಚಾರ್ಜಿಂಗ್‌ಗೆ ಬೆಂಬಲದೊಂದಿಗೆ ಬರಲಿದೆ ಎಂದು ವರದಿಯಾಗಿದೆ.

ಶಿಯೋಮಿ 14 ಅಲ್ಟ್ರಾ ಫೀಚರ್ಸ್‌ ನಿರೀಕ್ಷೆ ಏನು?
ಶಿಯೋಮಿ 14 ಅಲ್ಟ್ರಾ ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯೊಂದಿಗೆ ಬರಬಹುದು. ಈ ಡಿಸ್‌ಪ್ಲೇ 1440 x 3200 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿ ಬರಲಿದೆ. ಇನ್ನು ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದ್ದು, 526 ಪಿಪಿಐ ಪಿಕ್ಸೆಲ್‌ ಸಾಂದ್ರತೆಯಲ್ಲಿರಲಿದೆ. ಜೊತೆಗೆ ಡಿಸ್‌ಪ್ಲೇ 144 Hz ರಿಫ್ರೆಶ್‌ ರೇಟ್‌ನಲ್ಲಿರಲಿದೆ ಎಂದು ನಿರೀಕ್ಷಿಸಲಾಗಿದೆ.

ಬಹಿರಂಗವಾಯ್ತು ಶಿಯೋಮಿ 14 ಅಲ್ಟ್ರಾ ಫೋನ್‌ನ ಬ್ಯಾಟರಿ ವಿವರ! ಏನೆಲ್ಲಾ ನಿರೀಕ್ಷೆ?

ಶಿಯೋಮಿ 14 ಅಲ್ಟ್ರಾ ಪ್ರೊಸೆಸರ್‌ ಯಾವುದು?
ಶಿಯೋಮಿ 14 ಅಲ್ಟ್ರಾ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8 Gen 3 SoC ಪ್ರೊಸೆಸರ್‌ನಲ್ಲಿರಲಿದೆ. ಇದು HyperOS ಆಧಾರಿತ ಆಂಡ್ರಾಯ್ಡ್‌ 14 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM 256 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದಲ್ಲಿ ಬರಲಿದೆ. ಇನ್ನು ಈ ಫೋನ್‌ ಮೆಮೊರಿ ಕಾರ್ಡ್‌ ಬೆಂಬಲದೊಂದಿಗೆ ಬರುವುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಶಿಯೋಮಿ 14 ಅಲ್ಟ್ರಾ ಕ್ಯಾಮೆರಾ ನಿರೀಕ್ಷೆ ಏನಿದೆ?
ಶಿಯೋಮಿ 14 ಅಲ್ಟ್ರಾ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ಗಳೊಂದಿಗೆ ಬರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 200 ಮೆಗಾಪಿಕ್ಸೆಲ್‌ ಸೆನ್ಸಾರ್‌ ನಲ್ಲಿರಲಿದೆ. ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ನೊಂದಿಗೆ ಬರಲಿದೆ. ಮೂರು ಮತ್ತು ನಾಲ್ಕನೇ ಕ್ಯಾಮೆರಾಗಳು ಕೂಡ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ನಲ್ಲಿರಲಿದೆ ಎಂದು ಹೇಳಲಾಗಿದೆ. ಇದಲ್ಲದೆ 32 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿರಬಹುದು ಎಂದು ಅಂದಾಜಿಸಲಾಗಿದೆ.

ಬಹಿರಂಗವಾಯ್ತು ಶಿಯೋಮಿ 14 ಅಲ್ಟ್ರಾ ಫೋನ್‌ನ ಬ್ಯಾಟರಿ ವಿವರ! ಏನೆಲ್ಲಾ ನಿರೀಕ್ಷೆ?

ಶಿಯೋಮಿ 14 ಅಲ್ಟ್ರಾ ಬೆಲೆ ಮತ್ತು ಲಭ್ಯತೆ
ಶಿಯೋಮಿ 14 ಅಲ್ಟ್ರಾ ಸ್ಮಾರ್ಟ್‌ಫೋನ್‌ ಮುಂದಿನ ವರ್ಷ ಏಪ್ರಿಲ್‌ ತಿಂಗಳಿನಲ್ಲಿ ಬಿಡುಗಡೆ ಆಗುವ ನಿರೀಕ್ಷೆಯಿದೆ. ಆದರೆ ಇದರ ಬೆಲೆ ವಿವರಗಳ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ.

ಇನ್ನು ಶಿಯೋಮಿ 14 ಸರಣಿಯಲ್ಲಿ ಈಗಾಗಲೇ ಶಿಯೋಮಿ 14 ಪ್ರೊ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ 6.73 ಇಂಚಿನ 2.5D LTPO ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,440x3,200 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಜೊತೆಗೆ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಬೆಂಬಲವನ್ನು ಹೊಂದಿದೆ. ಇದು 4nm ಸ್ನಾಪ್‌ಡ್ರಾಗನ್ 8 Gen 3 ಚಿಪ್‌ಸೆಟ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 16GB RAM ಮತ್ತು 1TB ಇಂಟರ್‌ ಸ್ಟೋರೇಜ್‌ ಆಯ್ಕೆಯಲ್ಲಿ ಬರಲಿದೆ.

ಇನ್ನು ಸ್ಮಾರ್ಟ್‌ಫೋನ್‌ ಸಮ್ಮಿಲಕ್ಸ್ ಲೆನ್ಸ್‌ನೊಂದಿಗೆ ಲೈಕಾ-ಬ್ರಾಂಡ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಹಂಟರ್ 900 ಸೆನ್ಸಾರ್, ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಟೆಲಿಫೋಟೋ ಕ್ಯಾಮೆರಾ ಮತ್ತು ಮೂರನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಶೂಟರ್ ಅನ್ನು ಒಳಗೊಂಡಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 4,880mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 120W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

Best Mobiles in India

English summary
Xiaomi 14 Ultra Samrtphone battery Features leaked: Expected Specs Details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+