ಶಿಯೋಮಿ 14 ಅಲ್ಟ್ರಾ ಫೋನ್ ಫೀಚರ್ಸ್ ಬಹಿರಂಗ: ಏನೆಲ್ಲಾ ನಿರೀಕ್ಷೆ?
ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಕ ಕಂಪೆನಿ ಶಿಯೋಮಿ ಶೀಘ್ರದಲ್ಲೇ Xiaomi 14 ಅಲ್ಟ್ರಾ ಸ್ಮಾರ್ಟ್‌ಫೋನ್ ಪರಿಚಯಿಸುವ ಸಾಧ್ಯತೆಯಿದೆ. ಇನ್ನು ಈ ಸ್ಮಾರ್ಟ್‌ಫೋನ್ ಫೆಬ್ರವರಿಯಲ್ಲಿ ಬಿಡುಗಡೆ ಆಗುವ ನಿರೀಕ್ಷೆ ಇಡಲಾಗಿದೆ. ಇದೀಗ ಈ ಸ್ಮಾರ್ಟ್‌ಫೋನ್‌ನ ಫೀಚರ್ಸ್ ಆನ್‌ಲೈನ್‌ನಲ್ಲಿ ಬಹಿರಂಗವಾಗಿದ್ದು, ಟೆಕ್ ವಲಯದಲ್ಲಿ ಸಂಚಲನ ಸೃಷ್ಟಿಸಿದೆ.
ಹೌದು, ಶಿಯೋಮಿ 14 ಅಲ್ಟ್ರಾ ಸ್ಮಾರ್ಟ್‌ಫೋನ್ ಫೀಚರ್ಸ್ ಆನ್‌ಲೈನ್‌ನಲ್ಲಿ ಸೋರಿಕೆಯಾಗಿದೆ. ಇದರಲ್ಲಿ ಸ್ಮಾರ್ಟ್‌ಫೋನ್‌ನ ಲಾಂಚ್ ಟೈಮ್‌ಲೈನ್ ಮತ್ತು ಕೆಲವು ಕ್ಯಾಮೆರಾ ಫೀಚರ್ಸ್‌ಗಳ ಬಗ್ಗೆ ಮಾಹಿತಿ ಬಹಿರಂಗವಾಗಿದೆ. ಅದರಂತೆ ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 3 SoC ಪ್ರೊಸೆಸರ್ ವೇಗವನ್ನು ಹೊಂದಿರಲಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್‌ನ ಫೀಚರ್ಸ್ ಹೇಗಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಶಿಯೋಮಿ 14 ಅಲ್ಟ್ರಾ ಫೀಚರ್ಸ್ ನಿರೀಕ್ಷೆ ಏನು?
ಶಿಯೋಮಿ 14 ಅಲ್ಟ್ರಾ ಸ್ಮಾರ್ಟ್‌ಫೋನ್ 6.7 ಇಂಚಿನ 2K AMOLED ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 1440 x 3200 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದಲ್ಲಿರಲಿದೆ. ಜೊತೆಗೆ ಡಿಸ್‌ಪ್ಲೇ 144 Hz ರಿಫ್ರೆಶ್ ರೇಟ್ ಬೆಂಬಲದೊಂದಿಗೆ ಬರಲಿದೆ. ಇನ್ನು ಡಿಸ್‌ಪ್ಲೇ HDR10+, AI ಡಿಸ್‌ಪ್ಲೇ ಬೆಂಬಲ, ಸನ್‌ಲೈಟ್ ಡಿಸ್‌ಪ್ಲೇ 3.0, ಡಿಸ್‌ಪ್ಲೇ ಮೇಟ್ A, ರೀಡಿಂಗ್ ಮೋಡ್ 3.0 ಹೊಂದಿದೆ. ಜೊತೆಗೆ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ 2 ಪ್ರೊಟೆಕ್ಷನ್ ಪಡೆದಿದೆ.
ಶಿಯೋಮಿ 14 ಅಲ್ಟ್ರಾ ಪ್ರೊಸೆಸರ್ ಯಾವುದು?
ಶಿಯೋಮಿ 14 ಅಲ್ಟ್ರಾ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 3 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು HyperOS ಸ್ಕಿನ್‌ನೊಂದಿಗೆ Android 14 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12 GB RAM ಮತ್ತು 256 GB ಇಂಟರ್ ಸ್ಟೋರೇಜ್‌ನೊಂದಿಗೆ ಬರಲಿದೆ. ಈ ಸ್ಮಾರ್ಟ್‌ಫೋನ್ ಮೆಮೊರಿ ಕಾರ್ಡ್ ಬೆಂಬಲಿಸಲಿದೆಯಾ ಎಂಬುದರ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ.

ಶಿಯೋಮಿ 14 ಅಲ್ಟ್ರಾ ಕ್ಯಾಮೆರಾ ಸೆಟಪ್ ಏನು?
ಶಿಯೋಮಿ 14 ಅಲ್ಟ್ರಾ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ LYT-900 ಸೆನ್ಸಾರ್ ಅನ್ನು ಹೊಂದಿರಲಿದೆ. ಇದು 32 ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾದೊಂದಿಗೆ ಬರುವ ನಿರೀಕ್ಷೆಯನ್ನು ಇಡಲಾಗಿದೆ. ಇದಲ್ಲದೆ ಹಿಂಭಾಗದ ಕ್ಯಾಮೆರಾ ವ್ಯವಸ್ಥೆಯು 120mm ಪೆರಿಸ್ಕೋಪ್ ಟೆಲಿಫೋಟೋ ಶೂಟರ್ ಮತ್ತು ವೇರಿಯೊ-ಸಮ್ಮಿಲಕ್ಸ್ 1:1.63-2.5/12-120 ಆಸ್ಫೆರಿಕಲ್ (ASPH) ಲೆನ್ಸ್ ಅನ್ನು ಒಳಗೊಂಡಿರುತ್ತದೆ.
ಶಿಯೋಮಿ 14 ಅಲ್ಟ್ರಾ ಬ್ಯಾಟರಿ ಮತ್ತು ಇತರೆ ಸೌಲಭ್ಯ
ಶಿಯೋಮಿ 14 ಅಲ್ಟ್ರಾ ಸ್ಮಾರ್ಟ್‌ಫೋನ್ 5180 mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್, ವೈಫೈ, ಯುಎಸ್‌ಬಿ ಟೈಪ್ ಸಿ ಪೋರ್ಟ್, ಹೆಡ್‌ಪೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಪ್ರಾಕ್ಸಿಮಿಟಿ ಸೆನ್ಸಾರ್, ಆಂಬಿಯೆಂಟ್ ಲೈಟ್ ಸೆನ್ಸಾರ್, ಅಕ್ಸಿಲೆರೊಮೀಟರ್, ಗೈರೊಸ್ಕೋಪ್, ಎಲೆಕ್ಟ್ರಿಕ್ ಕಂಪಾಸ್, ಹಾಲ್ ಸೆನ್ಸರ್, ಮಲ್ಟಿ-ಡಾಟ್ ಲೇಸರ್ ಫೋಕಸ್ ಸೆನ್ಸಾರ್ ಅನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ.
ಶಿಯೋಮಿ 14 ಅಲ್ಟ್ರಾ ಬೆಲೆ ಮತ್ತು ಲಭ್ಯತೆ
ಶಿಯೋಮಿ 14 ಅಲ್ಟ್ರಾ ಸ್ಮಾರ್ಟ್‌ಫೋನ್ ಬೆಲೆ ವಿವರಗಳು ಬಹಿರಂಗವಾಗಿಲ್ಲ. ಇನ್ನು ಸ್ಮಾರ್ಟ್‌ಫೋನ್ ಫೆಬ್ರವರಿ 26 ರಿಂದ ಫೆಬ್ರವರಿ 29 ರವರೆಗೆ ಬಾರ್ಸಿಲೋನಾದಲ್ಲಿ ನಡೆಯಲಿರುವ ಮೊಬೈಲ್ ವರ್ಲ್ಡ್ ಕಾಂಗ್ರೆಸ್ (MWC) 2024 ನಲ್ಲಿ ಈ ಹ್ಯಾಂಡ್‌ಸೆಟ್ ಜಾಗತಿಕವಾಗಿ ಪರಿಚಯಿಸುವ ನಿರೀಕ್ಷೆಯಿದೆ.


Click it and Unblock the Notifications








