ಮಾರುಕಟ್ಟೆಗೆ ಎಂಟ್ರಿ ಕೊಟ್ಟ ಶಿಯೋಮಿ 14 ಅಲ್ಟ್ರಾ ಸ್ಮಾರ್ಟ್‌ಫೋನ್: ಕ್ವಾಡ್ ಕ್ಯಾಮೆರಾ ವಿಶೇಷ!
ಟೆಕ್ ವಲಯದಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿದ್ದ ಶಿಯೋಮಿ 14 ಅಲ್ಟ್ರಾ ಸ್ಮಾರ್ಟ್‌ಫೋನ್ ಬಿಡುಗಡೆ ಆಗಿದೆ. ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇದು ಮೂರು-ಹಂತದ ವಿನ್ಯಾಸವನ್ನು ಸಂಪೂರ್ಣವಾಗಿ ಸುತ್ತುವರಿದ ಲೋಹದ ಮಧ್ಯ-ಫ್ರೇಮ್‌ನೊಂದಿಗೆ ಹೊಂದಿದೆ.
ಹೌದು, Xiaomi 14 Ultra ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 3 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಮೊದಲ AI ದೊಡ್ಡ ಮಾದರಿಯ ಕಂಪ್ಯೂಟೇಶನಲ್ ಫೋಟೋಗ್ರಫಿ ಪ್ಲಾಟ್‌ಫಾರ್ಮ್ ಅನ್ನು ಪರಿಚಯಿಸಿದೆ. ಹಾಗಾದ್ರೆ Xiaomi 14 Ultra ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ನೊಂದಿಗೆ ಬರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಶಿಯೋಮಿ 14 ಅಲ್ಟ್ರಾ ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಶಿಯೋಮಿ 14 ಅಲ್ಟ್ರಾ ಸ್ಮಾರ್ಟ್‌ಫೋನ್ 6.73 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 3200 x 1440 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದಲ್ಲಿ ಬರಲಿದೆ. ಜೊತೆಗೆ ಡಿಸ್‌ಪ್ಲೇಯು 20:9 ರಚನೆಯ ಅನುಪಾತದಲ್ಲಿದ್ದು, 3000 ನಿಟ್ಸ್ ವರೆಗೆ ಗರಿಷ್ಠ ಬ್ರೈಟ್‌ನೆಸ್ ನೀಡಲಿದೆ. ಇದಲ್ಲದೆ Xiaomi ಸೆರಾಮಿಕ್ ಗ್ಲಾಸ್ ಪ್ರೊಟೆಕ್ಷನ್ ಪಡೆದಿದೆ.
ಶಿಯೋಮಿ 14 ಅಲ್ಟ್ರಾ ಪ್ರೊಸೆಸರ್ ಯಾವುದು?
ಶಿಯೋಮಿ 14 ಅಲ್ಟ್ರಾ ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 8 Gen 3 4nm ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು Android 14 ಆಧಾರಿತ HyperOS ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಹಾಗೂ 16GB RAM ಮತ್ತು 512GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ.
ಶಿಯೋಮಿ 14 ಅಲ್ಟ್ರಾ ಕ್ಯಾಮೆರಾ ಸೆಟಪ್ ಏನಿದೆ?
ಶಿಯೋಮಿ 14 ಅಲ್ಟ್ರಾ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದ್ದು, ಹೈಪರ್ OIS, LED ಫ್ಲ್ಯಾಷ್ ಒಳಗೊಂಡಿದೆ. ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ 122° ಲೈಕಾ ಅಲ್ಟ್ರಾ-ವೈಡ್ ಆಂಗಲ್ ಲೆನ್ಸ್ ಹೊಂದಿದೆ. ಮೂರನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಲೈಕಾ ಟೆಲಿಫೋಟೋ ಲೆನ್ಸ್ ಹಾಗೂ ನಾಲ್ಕನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ 5X 30cm ಲೈಕಾ ಪೆರಿಸ್ಕೋಪ್ ಟೆಲಿಫೋಟೋ ಲೆನ್ಸ್ ಹೊಂದಿದೆ. ಇದಲ್ಲದೆ 32ಮೆಗಾಪಿಕ್ಸೆಲ್ ಓಮ್ನಿವಿಷನ್ OV32B40 ಫ್ರಂಟ್ ಫೇಸಿಂಗ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.
ಶಿಯೋಮಿ 14 ಅಲ್ಟ್ರಾ ಬ್ಯಾಟರಿ ಯಾವುದು?
ಶಿಯೋಮಿ 14 ಅಲ್ಟ್ರಾ ಸ್ಮಾರ್ಟ್‌ಫೋನ್ 5300mAh ಸಾಮರ್ಥ್ಯದ ಬ್ಯಾಟರಿ ಜೊತೆಗೆ 90W ವೈರ್ಡ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. 80W ವಾಯರ್‌ಲೆಸ್ ಚಾರ್ಜಿಂಗ್, 10W ರಿವರ್ಸ್ ವಾಯರ್‌ಲೆಸ್ ಚಾರ್ಜಿಂಗ್ ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G SA/NSA, ಡ್ಯುಯಲ್ 4G VoLTE, Wi-Fi 7 802.11 be, Bluetooth 5.4, Beidou, Galileo, GLONASS, GPS (L1 + L5), NavIC, USB Type-C 3.2 Gen 1, NFC, ಸ್ಯಾಟ್‌ಲೈಟ್ ಕಮ್ಯೂನಿಕೇಷನ್ ಹೊಂದಿದೆ.

ಶಿಯೋಮಿ 14 ಅಲ್ಟ್ರಾ ಬೆಲೆ ಮತ್ತು ಲಭ್ಯತೆ
ಶಿಯೋಮಿ 14 ಅಲ್ಟ್ರಾ ಸ್ಮಾರ್ಟ್‌ಫೋನ್ ಫೆಬ್ರವರಿ 27 ರಂದು ಬೆಳಿಗ್ಗೆ 10 ಗಂಟೆಗೆ ಮಾರಾಟವಾಗಲಿದೆ. ಇದರ 12GB + 256GB ಮಾದರಿಯ ಆಯ್ಕೆಯು 6499 ಯುವಾನ್ (ಅಂದಾಜು 76,058ರೂ) 16GB+512GB ಮಾದರಿಗೆ 6999 ಯುವಾನ್ (ಅಂದಾಜು 80,639ರೂ), ಬೆಲೆಯನ್ನು ಹೊಂದಿದೆ.


Click it and Unblock the Notifications








