ಬಹು ನಿರೀಕ್ಷಿತ ಶಿಯೋಮಿ 14 ಸರಣಿ ಬಿಡುಗಡೆ! ಲೈಕಾ ಬ್ರಾಂಡ್ ಕ್ಯಾಮೆರಾ ವಿಶೇಷ!
ಟೆಕ್ ದೈತ್ಯ ಶಿಯೋಮಿ ಕಂಪೆನಿ ತನ್ನ ಬಹು ನಿರೀಕ್ಷಿತ ಶಿಯೋಮಿ 14 ಸರಣಿಯನ್ನು ಬಿಡುಗಡೆ ಮಾಡಿದೆ. ಈ ಸರಣಿಯಲ್ಲಿ ಶಿಯೋಮಿ 14 ಮತ್ತು ಶಿಯೋಮಿ 14 ಪ್ರೊ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ಗಳು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 3 SoC ಪ್ರೊಸೆಸರ್ ಹೊಂದಿದ್ದು, ಶಿಯೋಮಿ ಸಂಸ್ಥೆಯ HyperOSನಲ್ಲಿ ರನ್ ಆಗಲಿವೆ.
ಹೌದು, ಶಿಯೋಮಿ 14 ಸರಣಿಯು ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಇನ್ನು ಈ ಸರಣಿಯ ಸ್ಮಾರ್ಟ್‌ಫೋನ್‌ಗಳು 2K ರೆಸಲ್ಯೂಶನ್ ಮತ್ತು 120Hz ಡೈನಾಮಿಕ್ ರಿಫ್ರೆಶ್ ರೇಟ್ ಬೆಂಬಲದೊಂದಿಗೆ LTPO OLED ಡಿಸ್‌ಪ್ಲೇಗಳನ್ನು ಒಳಗೊಂಡಿವೆ. ಇದಲ್ಲದೆ ಸ್ಮಾರ್ಟ್‌ಫೋನ್‌ಗಳು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್ ಸರಣಿಯ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಶಿಯೋಮಿ 14 ಪ್ರೊ ಫೀಚರ್ಸ್ ಹೇಗಿದೆ?
ಶಿಯೋಮಿ 14 ಪ್ರೊ ಸ್ಮಾರ್ಟ್‌ಫೋನ್ 6.73 ಇಂಚಿನ 2.5D LTPO ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,440x3,200 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಜೊತೆಗೆ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಬೆಂಬಲವನ್ನು ಹೊಂದಿದೆ. ಇದು 4nm ಸ್ನಾಪ್‌ಡ್ರಾಗನ್ 8 Gen 3 ಚಿಪ್‌ಸೆಟ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 16GB RAM ಮತ್ತು 1TB ಇಂಟರ್ ಸ್ಟೋರೇಜ್ ಆಯ್ಕೆಯಲ್ಲಿ ಬರಲಿದೆ.
ಇನ್ನು ಸ್ಮಾರ್ಟ್‌ಫೋನ್ ಸಮ್ಮಿಲಕ್ಸ್ ಲೆನ್ಸ್‌ನೊಂದಿಗೆ ಲೈಕಾ-ಬ್ರಾಂಡ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಹಂಟರ್ 900 ಸೆನ್ಸಾರ್, ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಟೆಲಿಫೋಟೋ ಕ್ಯಾಮೆರಾ ಮತ್ತು ಮೂರನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಶೂಟರ್ ಅನ್ನು ಒಳಗೊಂಡಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 4,880mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 120W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, Wi-Fi 7, USB 3.2 ಪೋರ್ಟ್, ಬ್ಲೂಟೂತ್ ಮತ್ತು USB ಟೈಪ್-ಸಿ ಪೋರ್ಟ್ ಅನ್ನು ಒಳಗೊಂಡಿವೆ.

ಶಿಯೋಮಿ 14 ಫೀಚರ್ಸ್ ಹೇಗಿದೆ?
ಶಿಯೋಮಿ 14 ಸ್ಮಾರ್ಟ್‌ಫೋನ್ 6.36 ಇಂಚಿನ LTPO AMOLED ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,200x2,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಡಿಸ್‌ಪ್ಲೇ 460ppi ಪಿಕ್ಸೆಲ್ ಸಾಂದ್ರತೆ ಮತ್ತು 1Hz ನಿಂದ 120Hz ವರೆಗಿನ ಹೊಂದಾಣಿಕೆಯ ರಿಫ್ರೆಶ್ ರೇಟ್ ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 3 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇನ್ನು ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದ್ದು, ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ 4,610mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 90W ವೈರ್ಡ್ ಚಾರ್ಜಿಂಗ್ ಬೆಂಬಲ, 50W ವೈರ್‌ಲೆಸ್ ಚಾರ್ಜಿಂಗ್ ಬೆಂಬಲಿಸಲಿದೆ.

ಶಿಯೋಮಿ 14 ಸರಣಿ ಬೆಲೆ ಮತ್ತು ಲಭ್ಯತೆ
ಶಿಯೋಮಿ 14 ಪ್ರೊ ಸ್ಮಾರ್ಟ್‌ಫೋನ್ 12GB RAM + 256GB ಸ್ಟೋರೇಜ್ ಆಯ್ಕೆಯ ಬೆಲೆ CNY 4,999 (ಸುಮಾರು 56,500ರೂ)ಆಗಿದೆ. ಇದರ 16GB + 512GB ರೂಪಾಂತರದ ಆಯ್ಕೆಯು CNY 5,499 (ಅಂದಾಜು 62,000ರೂ)ಬೆಲೆಯಲ್ಲಿ ಬರಲಿದೆ. ಇನ್ನು 16GB + 1TB ಕಾನ್ಫಿಗರೇಶನ್ ಆಯ್ಕೆಯು CNY 5,999 (ಸರಿಸುಮಾರು 68,200ರೂ)ಬೆಲೆಯನ್ನು ಹೊಂದಿದೆ.
ಇನ್ನು ಶಿಯೋಮಿ 14 ಸ್ಮಾರ್ಟ್‌ಫೋನ್ 8GB RAM + 256GB ಸ್ಟೋರೇಜ್ ಆಯ್ಕೆಯು CNY 3,999 (ಸುಮಾರು 50,000ರೂ)ಬೆಲೆ ಹೊಂದಿದೆ. ಇದರ 12GB + 256GB ರೂಪಾಂತರದ ಆಯ್ಕೆಯು CNY 4,299 (ಸರಿಸುಮಾರು 48,000ರೂ)ಬೆಲೆಯನ್ನು ಒಳಗೊಂಡಿದೆ. ಜೊತೆಗೆ 16GB RAM + 512GB ಮಾದರಿಗೆ CNY 4,599 (ಸುಮಾರು 52,000ರೂ)ಬೆಲೆ ನಿಗಧಿಪಡಿಸಲಾಗಿದೆ.
ಈ ಎರಡೂ ಸ್ಮಾರ್ಟ್‌ಫೋನ್‌ಗಳು ಕ್ಲಾಸಿಕ್ ಬ್ಲ್ಯಾಕ್, ರಾಕ್ ಬ್ಲೂ, ಸ್ನೋ ಮೌಂಟೇನ್ ಪಿಂಕ್ ಮತ್ತು ವೈಟ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿದೆ. ಇದು ಭಾರತಕ್ಕೆ ಯಾವಾಗ ಎಂಟ್ರಿ ನೀಡಲಿದೆ ಅನ್ನೊದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.


Click it and Unblock the Notifications








