Home
ಸುದ್ದಿಜಾಲ

ಏ.4ಕ್ಕೆ ಸೇಲ್..! 5000 ರಿಯಾಯಿತಿ ಘೋಷಣೆ.. 5000 ಕ್ಯಾಶ್‌ಬ್ಯಾಕ್ ಸಿಗುತ್ತೆ.. ಯಾವ ಫೋನ್, ವಿಶೇಷತೆಗಳೇನು?

ಶಿಯೋಮಿ ಇತ್ತೀಚೆಗೆ ಭಾರತದಲ್ಲಿ ಎರಡು ಹೊಸ ಫೋನ್‌ಗಳನ್ನು ಬಿಡುಗಡೆ ಮಾಡಿದೆ. ಇವುಗಳು ಶಿಯೋಮಿ 15 (Xiaomi 15) ಮತ್ತು ಶಿಯೋಮಿ 15 ಅಲ್ಟ್ರಾ (Xiaomi 15 Ultra) ಹೆಸರಿನೊಂದಿಗೆ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿವೆ. ಹೌದು, ಕಂಪನಿಯು ತನ್ನ ಶಿಯೋಮಿ 15 (Xiaomi 15) ಸರಣಿಯ ಅಡಿಯಲ್ಲಿ ಈ ಮೊಬೈಲ್‌ಗಳನ್ನು ದೇಶೀಯ ಮಾರುಕಟ್ಟೆಗೆ ಪರಿಚಯಿಸಿದೆ. ಅಂದಹಾಗೆ, ಇದೇ ಏಪ್ರಿಲ್ 4 ರಂದು ಶಿಯೋಮಿ 15 ಫೋನಿನ ಮುಕ್ತ ಮಾರಾಟ ನಡೆಯಲಿದೆ ಎಂದು ಕಂಪನಿ ತಿಳಿಸಿದೆ. ಈ ಫೋನಿನ ಬೆಲೆ, ಆಫರ್ ಮತ್ತು ವಿಶೇಷತೆಗಳ ಬಗ್ಗೆ ಇಲ್ಲಿದೆ ಮಾಹಿತಿ.

ಶಿಯೋಮಿ 15 ಫೋನನ್ನು ಮಾರ್ಚ್ 11 ರಂದು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲಾಯಿತು. ಈ ಫೋನಿನ ವಿಶೇಷತೆಗಳ ಬಗ್ಗೆ ಹೇಳುವುದಾದರೆ, ಈ ಫೋನಿನಲ್ಲಿ 50MP + 50MP + 32MP ಟ್ರಿಪಲ್ ಕ್ಯಾಮೆರಾ ಸೆಟಪ್ ಇದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 ಎಲೈಟ್ ಪ್ರೊಸೆಸರ್‌ನೊಂದಿಗೆ ಕೆಲಸ ಮಾಡುತ್ತದೆ. ಈ ಮೊಬೈಲ್ 6.36 ಇಂಚಿನ ಡಿಸ್ಪ್ಲೇ ಹೊಂದಿದೆ. ಇದರೊಂದಿಗೆ 5240mAh ಬ್ಯಾಟರಿ, 90W ವೈರ್ಡ್ ಹೈಪರ್‌ಚಾರ್ಜ್ ಮತ್ತು 50W ವೈರ್‌ಲೆಸ್ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಏ.4ಕ್ಕೆ ಸೇಲ್..! 5000 ರಿಯಾಯಿತಿ.. 5000 ಕ್ಯಾಶ್‌ಬ್ಯಾಕ್ ಸಿಗುತ್ತೆ.. ಯಾವ ಫೋನ್

ಶಿಯೋಮಿ 15 ಬೆಲೆ ಮತ್ತು ಲಭ್ಯತೆ

ಶಿಯೋಮಿ 15 ಫೋನ್ ಒಂದೇ ಸ್ಟೊರೇಜ್ ಆಯ್ಕೆಯಲ್ಲಿ ಬಿಡುಗಡೆಯಾಗಿದೆ. ನೀವು 12GB RAM + 512GB ಸ್ಟೊರೇಜ್ ರೂಪಾಂತರದಲ್ಲಿ ಖರೀದಿಸಬಹುದು. ಇದರ ಬೆಲೆ 64,999 ರೂ. ಆಗಿದೆ. ಈ ಮೊಬೈಲ್ ಕಪ್ಪು, ಬಿಳಿ ಮತ್ತು ಹಸಿರು ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದೆ. ಈಗಾಗಲೇ ಅಮೆಜಾನ್ ಸೈಟ್‌ನಲ್ಲಿ ಮುಂಗಡ ಬುಕಿಂಗ್ ಪ್ರಾರಂಭವಾಗಿದೆ. ಈ ಪ್ರೀ ಬುಕಿಂಗ್ ಏಪ್ರಿಲ್ 2 ರವರೆಗೆ ಇರುತ್ತದೆ. ಇದೇ ಏಪ್ರಿಲ್ 4 ರಂದು ಮುಕ್ತ ಮಾರಾಟ ನಡೆಯಲಿದೆ ಎಂದು ಕಂಪನಿ ದೃಢಪಡಿಸಿದೆ.

ನೀವು 12GB RAM + 512GB ಸ್ಟೋರೇಜ್ ಹೊಂದಿರುವ ರೂಪಾಂತರವನ್ನು ರಿಯಾಯಿತಿಯೊಂದಿಗೆ ಖರೀದಿಸಬಹುದು. ಕಂಪನಿಯು ಐಸಿಐಸಿಐ ಕ್ರೆಡಿಟ್ ಕಾರ್ಡ್‌ಗಳಲ್ಲಿ 5000 ರೂ.ಗಳ ತ್ವರಿತ ರಿಯಾಯಿತಿ ಘೋಷಿಸಿದೆ. ನೀವು 59,999 ರೂ. ಬಜೆಟ್ ಒಳಗೆ ಆರ್ಡರ್ ಮಾಡಬಹುದು. ಇದು ಅಮೆಜಾನ್ ಮತ್ತು ಶಿಯೋಮಿ ಪ್ಲಾಟ್‌ಫಾರ್ಮ್‌ಗಳಲ್ಲಿ ರ್ಡರ್ ಮಾಡಲು ಲಭ್ಯವಿದೆ. ಜೊತಗೆ 5,999 ರೂ. ಮೌಲ್ಯದ ಶಿಯೋಮಿ ಕೇರ್ ಪ್ಲಾನ್ ಪಡೆಯಬಹುದು.

ಶಿಯೋಮಿ 15 ವೈಶಿಷ್ಟ್ಯಗಳು

ಶಿಯೋಮಿ 15 ಸ್ಮಾರ್ಟ್‌ಫೋನ್ 6.36 ಇಂಚಿನ ಡಿಸ್ಪ್ಲೇ ಹೊಂದಿದೆ. ಇದು 2,670 × 1,200 ಪಿಕ್ಸೆಲ್‌ಗಳ ರೆಸಲ್ಯೂಶನ್ ಬೆಂಬಲದೊಂದಿಗೆ ಬರುತ್ತದೆ. ಈ ಡಿಸ್ಪ್ಲೇಯು 120Hz ರಿಫ್ರೆಶ್ ದರ ಮತ್ತು 3,200 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಹೊಂದಿದೆ. ಇದು ಶಿಯೋಮಿ ಶೀಲ್ಡ್ ಗ್ಲಾಸ್ ರಕ್ಷಣೆಯನ್ನು ಹೊಂದಿದೆ. ಈ ಫೋನ್ ಸ್ನಾಪ್‌ಡ್ರಾಗನ್ 8 ಎಲೈಟ್ ಆಕ್ಟಾಕೋರ್ ಪ್ರೊಸೆಸರ್‌ ಹೊಂದಿದೆ. ಈ ಮೊಬೈಲ್ ಶಿಯೋಮಿ ಹೈಪರ್‌ಓಎಸ್ 2 ಜೊತೆಗೆ ಕೆಲಸ ಮಾಡುತ್ತದೆ. ಗ್ರಾಫಿಕ್ಸ್‌ಗಾಗಿ ಇದು, ಅಡ್ರಿನೊ 830 ಜಿಪಿಯು ಹೊಂದಿದೆ. ಈ ಫೋನ್ 12GB RAM + 512GB ಸ್ಟೊರೇಜ್ ಆಯ್ಕೆ ಒಳಗೊಂಡಿದೆ.

ಶಿಯೋಮಿ 15 ಫೋನ್ ಅದ್ಭುತ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಇದು ಹೈಪರ್ OIS, LED ಫ್ಲ್ಯಾಶ್, ಲೈಕಾ ಸಮ್ಮಿಲಕ್ಸ್ ಲೆನ್ಸ್‌ನೊಂದಿಗೆ ಬರುತ್ತದೆ. ಇದರೊಂದಿಗೆ 50 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಆಂಗಲ್ ಲೆನ್ಸ್ ಮತ್ತು 50 ಮೆಗಾಪಿಕ್ಸೆಲ್ ಇನ್ಫಿನಿಟಿ ಲೈಕಾ ಟೆಲಿಫೋಟೋ ಸೆನ್ಸರ್ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನಿನಲ್ಲಿ 32 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಲಭ್ಯವಿದೆ. ಈ ಮೊಬೈಲ್ 5,240mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 90W ವೈರ್ಡ್ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಜೊತೆಗೆ 50W ವೈರ್‌ಲೆಸ್ ಚಾರ್ಜಿಂಗ್, ಮ್ಯಾಗ್ನೆಟಿಕ್ ಚಾರ್ಜಿಂಗ್ ಮತ್ತು 10W ವೈರ್‌ಲೆಸ್ ಚಾರ್ಜಿಂಗ್ ತಂತ್ರಜ್ಞಾನ ಒಳಗೊಂಡಿದೆ.

ಶಿಯೋಮಿ 15 ಫೋನ್ ಇನ್ ಡಿಸ್ಪ್ಲೇ ಅಲ್ಟ್ರಾಸಾನಿಕ್ ಫಿಂಗರ್‌ಪ್ರಿಂಟ್ ಸೆನ್ಸರ್ ಮತ್ತು ಇನ್ಫ್ರಾರೆಡ್ ಸೆನ್ಸರ್ ಹೊಂದಿದೆ. ಇದು ಧೂಳು ಮತ್ತು ನೀರಿನ ವಿರುದ್ಧ ರಕ್ಷಣೆಗಾಗಿ IP68 ರೇಟಿಂಗ್ ಪಡೆದಿದೆ. ಇದರೊಂದಿಗೆ ಯುಎಸ್‌ಬಿ ಟೈಪ್ ಸಿ ಆಡಿಯೋ, ಹೈ ರೆಸ್ ಆಡಿಯೋ, ಸ್ಟೀರಿಯೊ ಸ್ಪೀಕರ್‌ಗಳು, ಡಾಲ್ಬಿ ಅಟ್ಮಾಸ್ ಲಭ್ಯವಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಮೊಬೈಲ್ 5G SA/NSA, ಡ್ಯುಯಲ್ 4G VoLTE, ವೈ-ಫೈ 7, ಬ್ಲೂಟೂತ್ 5.4, ಎನ್‌ಎಫ್‌ಸಿ, ಯುಎಸ್‌ಬಿ ಟೈಪ್ ಸಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಏ.4ಕ್ಕೆ ಸೇಲ್..! 5000 ರಿಯಾಯಿತಿ.. 5000 ಕ್ಯಾಶ್‌ಬ್ಯಾಕ್ ಸಿಗುತ್ತೆ.. ಯಾವ ಫೋನ್

ಶಿಯೋಮಿ 15 ಅಲ್ಟ್ರಾ ಬೆಲೆ ಮತ್ತು ಆಫರ್

ಶಿಯೋಮಿ 15 ಅಲ್ಟ್ರಾ ಸಹ ಒಂದೇ ಸ್ಟೊರೇಜ್ ಆಯ್ಕೆಯಲ್ಲಿ ಬಿಡುಗಡೆಯಾಗಿದೆ. ಈ ಫೋನಿನ 16GB + 512GB ಸ್ಟೊರೇಜ್ ರೂಪಾಂತರದ ಬೆಲೆ 1,09,999 ರೂ. ಆಗಿದೆ. ಇದಲ್ಲದೆ, ಶಿಯೋಮಿ 15 ಅಲ್ಟ್ರಾ ಫೋಟೋಗ್ರಫಿ ಕಿಟ್ ಲೆಜೆಂಡ್ ಆವೃತ್ತಿಯನ್ನು 11,999 ರೂ.ಗೆ ಬಿಡುಗಡೆ ಮಾಡಲಾಗಿದೆ. ಇದು ಸಿಲ್ವರ್ ಕ್ರೋಮ್ ಬಣ್ಣದಲ್ಲಿ ಖರೀದಿಗೆ ಲಭ್ಯವಿದೆ. ಕಂಪನಿಯು ಐಸಿಐಸಿಐ ಬ್ಯಾಂಕ್ ಕಾರ್ಡ್‌ಗಳ ಪಾವತಿ ಮೇಲೆ 10,000 ರೂ.ಗಳ ತ್ವರಿತ ರಿಯಾಯಿತಿ ನೀಡಲಿದೆ. ಜೊತೆಗೆ 5,000 ಕ್ಯಾಶ್‌ಬ್ಯಾಕ್ ಸಹ ಲಭ್ಯವಿದೆ.

ಶಿಯೋಮಿ 15 ಅಲ್ಟ್ರಾ ವೈಶಿಷ್ಟ್ಯಗಳು

ಶಿಯೋಮಿ 15 ಅಲ್ಟ್ರಾ ಸ್ಮಾರ್ಟ್‌ಫೋನ್ 6.73 ಇಂಚಿನ ಡಿಸ್ಪ್ಲೇ ಹೊಂದಿದೆ. ಇದು 3,100 x 1,440 ಪಿಕ್ಸೆಲ್‌ಗಳ ರೆಸಲ್ಯೂಶನ್ ಬೆಂಬಲದೊಂದಿಗೆ ಬರುತ್ತದೆ. ಈ ಡಿಸ್ಪ್ಲೇಯು 120Hz ರಿಫ್ರೆಶ್ ದರ ಮತ್ತು 3,200 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಹೊಂದಿದೆ. ಇದು ಶಿಯೋಮಿ ಸೆರಾಮಿಕ್ ಗ್ಲಾಸ್ ರಕ್ಷಣೆಯನ್ನು ಹೊಂದಿದೆ. ಈ ಮೊಬೈಲ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 ಎಲೈಟ್ ಆಕ್ಟಾಕೋರ್ ಪ್ರೊಸೆಸರ್‌ ಹೊಂದಿದೆ. ಈ ಮೊಬೈಲ್ ಆಂಡ್ರಾಯ್ಡ್ 15 ಆಧಾರಿತ ಹೈಪರ್‌ಓಎಸ್ 2 ಜೊತೆಗೆ ಕೆಲಸ ಮಾಡುತ್ತದೆ. ಗ್ರಾಫಿಕ್ಸ್‌ಗಾಗಿ ಇದು, ಅಡ್ರಿನೊ 830 ಜಿಪಿಯು ಹೊಂದಿದೆ. ಈ ಫೋನ್ 12GB RAM, 512GB ಮತ್ತು 1TB ಸ್ಟೊರೇಜ್ ಆಯ್ಕೆ ಒಳಗೊಂಡಿದೆ.

ಶಿಯೋಮಿ 15 ಅಲ್ಟ್ರಾ ಮೊಬೈಲ್ 200 ಮೆಗಾಪಿಕ್ಸೆಲ್ ಲೈಕಾ ಪೆರಿಸ್ಕೋಪ್ ಲೆನ್ಸ್ ಹೊಂದಿದೆ. ಇದರೊಂದಿಗೆ 50 ಮೆಗಾಪಿಕ್ಸೆಲ್ ಲೈಕಾ ಪ್ರಾಥಮಿಕ ಕ್ಯಾಮೆರಾ, OIS ಬೆಂಬಲದೊಂದಿಗೆ 50 ಮೆಗಾಪಿಕ್ಸೆಲ್ ಲೈಕಾ ಟೆಲಿಫೋಟೋ ಲೆನ್ಸ್ ಮತ್ತು 50 ಮೆಗಾಪಿಕ್ಸೆಲ್ ಲೈಕಾ ಅಲ್ಟ್ರಾ ವೈಡ್ ಕ್ಯಾಮೆರಾ ಲಭ್ಯವಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನ್ 32 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ. ಈ ಶಿಯೋಮಿ ಸ್ಮಾರ್ಟ್‌ಫೋನ್ 5,410mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 90W ವೈರ್ಡ್ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಜೊತೆಗೆ 80W ವೈರ್‌ಲೆಸ್ ಚಾರ್ಜಿಂಗ್ ತಂತ್ರಜ್ಞಾನ ಒಳಗೊಂಡಿದೆ.

ಶಿಯೋಮಿ 15 ಅಲ್ಟ್ರಾ ಫೋನ್ ಇನ್ ಡಿಸ್ಪ್ಲೇ ಅಲ್ಟ್ರಾಸಾನಿಕ್ ಫಿಂಗರ್‌ಪ್ರಿಂಟ್ ಸೆನ್ಸರ್ ಹೊಂದಿದೆ. ಇದು ಧೂಳು ಮತ್ತು ನೀರಿನ ವಿರುದ್ಧ ರಕ್ಷಣೆಗಾಗಿ IP68 ರೇಟಿಂಗ್ ಪಡೆದಿದೆ. ಇದರೊಂದಿಗೆ ಯುಎಸ್‌ಬಿ ಟೈಪ್ ಸಿ ಆಡಿಯೋ, ಸ್ಟೀರಿಯೊ ಸ್ಪೀಕರ್‌ಗಳು, ಡಾಲ್ಬಿ ಅಟ್ಮಾಸ್ ಲಭ್ಯವಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು 5G, ಡ್ಯುಯಲ್ 4G VoLTE, ವೈ-ಫೈ, ಬ್ಲೂಟೂತ್, ಎನ್‌ಎಫ್‌ಸಿ, ಯುಎಸ್‌ಬಿ ಟೈಪ್ ಸಿ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.

Best Mobiles in India

English summary
Xiaomi 15 goes on open sale from april 4 in amazon: check price, offers, specifications and more details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+