ಹೊಸ Xiaomi 15 ಸೇಲ್ ಶುರು; 5000 ರಿಯಾಯಿತಿ.. ಖರೀದಿಗೆ ಮುಗಿಬಿದ್ದ ಜನ.. ಬೆಲೆ, ವಿಶೇಷತೆಗಳೇನು?
ಶಿಯೋಮಿ ಕಳೆದ ತಿಂಗಳು ಭಾರತದಲ್ಲಿ ಹೊಸ ಫೋನನ್ನು ಬಿಡುಗಡೆ ಮಾಡಿತ್ತು. ಇದು ಶಿಯೋಮಿ 15 (Xiaomi 15) ಹೆಸರಿನೊಂದಿಗೆ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ. ಇದರ ಜೊತೆಗೆ ಶಿಯೋಮಿ 15 ಅಲ್ಟ್ರಾ (Xiaomi 15 Ultra) ಅನ್ನು ಲಾಂಚ್ ಮಾಡಲಾಗಿದೆ. ಅಂದಹಾಗೆ, ಈ ಪೈಕಿ ಶಿಯೋಮಿ 15 ಫೋನ್ ಖರೀದಿಗೆ ಲಭ್ಯವಿದೆ. ಈ ಮೊಬೈಲ್ ಸ್ಯಾಮ್‌ಸಂಗ್ ಗ್ಯಾಲಕ್ಸಿ S25, ಐಫೋನ್ 16 (iPhone 16) ಮತ್ತು ಗೂಗಲ್ ಪಿಕ್ಸೆಲ್ 9 ಫೋನ್‌ಗಳಿಗೆ ಪೈಪೋಟಿ ನೀಡಲು ಸಜ್ಜಾಗಿದೆ. ಬನ್ನಿ, ಈ ಫೋನಿನ ಬೆಲೆ, ಆಫರ್ ಮತ್ತು ವಿಶೇಷತೆಗಳನ್ನು ತಿಳಿಯೋಣ.
ಶಿಯೋಮಿ 15 ಮೊಬೈಲ್ ಕಳೆದ ತಿಂಗಳು (ಮಾರ್ಚ್ 11) ದೇಶೀಯ ಮಾರುಕಟ್ಟೆಗೆ ಬಂದಿತ್ತು. ಈ ಫೋನಿನ ವಿಶೇಷತೆಗಳನ್ನು ನೋಡುವುದಾದರೆ, ಈ ಮೊಬೈಲ್ 6.36 ಇಂಚಿನ ಡಿಸ್ಪ್ಲೇಯೊಂದಿಗೆ ಹೊಂದಿದೆ. ಇದು 5240mAh ಬ್ಯಾಟರಿ, 90W ವೈರ್ಡ್ ಹೈಪರ್‌ಚಾರ್ಜ್ ಮತ್ತು 50W ವೈರ್‌ಲೆಸ್ ಚಾರ್ಜಿಂಗ್ ಒಳಗೊಂದಿದೆ. ಈ ಫೋನಿನಲ್ಲಿ 50MP + 50MP + 32MP ಟ್ರಿಪಲ್ ಕ್ಯಾಮೆರಾ ಸೆಟಪ್ ಲಭ್ಯವಿದೆ. ಈ ಫೋನ್ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 8 ಎಲೈಟ್ ಪ್ರೊಸೆಸರ್ ಹೊಂದಿದೆ.

ಭಾರತದಲ್ಲಿ ಶಿಯೋಮಿ 15 ಬೆಲೆ
ಶಿಯೋಮಿ 15 ಫೋನ್ ಅಮೆಜಾನ್, ಶಿಯೋಮಿ ಅಧಿಕೃತ ವೆಬ್‌ಸೈಟ್ ಮತ್ತು ಇತರೆ ಚಿಲ್ಲರೆ ವ್ಯಾಪಾರಿಗಳ ಮೂಲಕ ಮಾರಾಟವಾಗಲಿದೆ. ಇದು ಕೇವಲ 12GB RAM + 512GB ಸ್ಟೊರೇಜ್ ಆಯ್ಕೆಯಲ್ಲಿ ಮಾತ್ರ ಖರೀದಿಗೆ ಲಭ್ಯವಿದೆ. ಇದರ ಬಿಡುಗಡೆ ಬೆಲೆ 64,999 ರೂ. ಆಗಿದೆ. ಈ ಮೊಬೈಲ್ ಕಪ್ಪು, ಬಿಳಿ ಮತ್ತು ಹಸಿರು ಬಣ್ಣಗಳ ಆಯ್ಕೆಯಲ್ಲಿ ಬರುತ್ತದೆ. ಕಂಪನಿಯು ಐಸಿಐಸಿಐ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಬಳಸಿ ಶಿಯೋಮಿ 15 ಖರೀದಿಯ ಮೇಲೆ 5,000 ರೂ.ಗಳ ರಿಯಾಯಿತಿ ನೀಡುತ್ತಿದೆ. ನೀವು 59,999 ರೂ.ಗಳ ಬಜೆಟ್ ಒಳಗೆ ಕೊಳ್ಳಬಹುದು.
ಶಿಯೋಮಿ 15 ಫೋನಿನ ವೈಶಿಷ್ಟ್ಯಗಳು
ಶಿಯೋಮಿ 15 ಮೊಬೈಲ್ 6.36 ಇಂಚಿನ ಡಿಸ್ಪ್ಲೇ ಹೊಂದಿದೆ. ಇದು 2,670 × 1,200 ಪಿಕ್ಸೆಲ್‌ಗಳ ರೆಸಲ್ಯೂಶನ್ ಬೆಂಬಲ ಪಡೆದಿದೆ. ಈ ಸ್ಕ್ರೀನ್ 120Hz ರಿಫ್ರೆಶ್ ದರದ ಬೆಂಬಲ ಮತ್ತು 3,200 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಹೊಂದಿದೆ. ಈ ಫೋನಿ ಡಿಸ್‌ಪ್ಲೇ ಶಿಯೋಮಿ ಶೀಲ್ಡ್ ಗ್ಲಾಸ್ ರಕ್ಷಣೆಯೊಂದಿಗೆ ಬರುತ್ತದೆ.
ಶಿಯೋಮಿ 15 ಸ್ಮಾರ್ಟ್‌ಫೋನ್ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 8 ಎಲೈಟ್ ಆಕ್ಟಾ-ಕೋರ್ ಪ್ರೊಸೆಸರ್ ಹೊಂದಿದೆ. ಈ ಫೋನ್ ಶಿಯೋಮಿ ಹೈಪರ್ ಓಎಸ್ 2 ಜೊತೆಗೆ ಕೆಲಸ ಮಾಡುತ್ತದೆ. ಇದು ಗ್ರಾಫಿಕ್ಸ್‌ಗಾಗಿ, ಅಡ್ರಿನೊ 830 ಜಿಪಿಯು ಸಹ ಹೊಂದಿದೆ. ಈ ಫೋನಿನಲ್ಲಿ 12GB RAM ಮತ್ತು 512GB ಆಂತರಿಕ ಸ್ಟೊರೇಜ್ ಲಭ್ಯವಿದೆ.
ಶಿಯೋಮಿ 15 ಫೋನ್ ಬೊಂಬಾಟ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ ಟ್ರಿಪಲ್ ಕ್ಯಾಮೆರಾ ಸೆಟಪ್ ಅಳವಡಿಸಲಾಗಿದೆ. ಈ ಮೊಬೈಲ್ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಹೊಂದಿದೆ. ಇದು ಹೈಪರ್ OIS, ಎಲ್‌ಇಡಿ ಫ್ಲ್ಯಾಶ್ ಲೈಟ್, ಲೈಕಾ ಸಮ್ಮಿಲಕ್ಸ್ ಲೆನ್ಸ್ ಒಳಗೊಂಡಿದೆ. ಹಾಗೆಯೇ ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಆಂಗಲ್ ಲೆನ್ಸ್ ಮತ್ತು ತೃತೀಯ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಇನ್ಫಿನಿಟಿ ಲೈಕಾ ಟೆಲಿಫೋಟೋ ಸೆನ್ಸರ್ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನಿನಲ್ಲಿ 32 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಇದೆ.

ಶಿಯೋಮಿ 15 ಮೊಬೈಲ್ 5,240mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 90W ವೈರ್ಡ್ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಜೊತೆಗೆ 50W ವೈರ್‌ಲೆಸ್ ಚಾರ್ಜಿಂಗ್, ಮ್ಯಾಗ್ನೆಟಿಕ್ ಚಾರ್ಜಿಂಗ್ ಮತ್ತು 10W ವೈರ್‌ಲೆಸ್ ಚಾರ್ಜಿಂಗ್ ತಂತ್ರಜ್ಞಾನ ಸಹ ನೀಡಲಾಗಿದೆ.
ಶಿಯೋಮಿ 15 ಸ್ಮಾರ್ಟ್‌ಫೋನ್ ಧೂಳು ಮತ್ತು ನೀರಿನ ವಿರುದ್ಧ ರಕ್ಷಣೆಗಾಗಿ IP68 ರೇಟಿಂಗ್ ಹೊಂದಿದೆ. ಇದು ಇನ್ ಡಿಸ್ಪ್ಲೇ ಅಲ್ಟ್ರಾಸಾನಿಕ್ ಫಿಂಗರ್‌ಪ್ರಿಂಟ್ ಸೆನ್ಸರ್ ಒಳಗೊಂಡಿದೆ. ಹಾಗೆಯೇ ಇನ್ಫ್ರಾರೆಡ್ ಸೆನ್ಸರ್ ಇದೆ. ಅಲ್ಲದೆ, ಯುಎಸ್‌ಬಿ ಟೈಪ್ ಸಿ ಆಡಿಯೋ, ಹೈ ರೆಸ್ ಆಡಿಯೋ, ಸ್ಟೀರಿಯೊ ಸ್ಪೀಕರ್‌ಗಳು, ಡಾಲ್ಬಿ ಅಟ್ಮಾಸ್ ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು 5G SA/NSA, ಡ್ಯುಯಲ್ 4G VoLTE, ವೈ-ಫೈ 7, ಬ್ಲೂಟೂತ್ 5.4, ಎನ್‌ಎಫ್‌ಸಿ, ಯುಎಸ್‌ಬಿ ಟೈಪ್ ಸಿ ಸೇರಿದಂತೆ ಮುಂತಾದ ಸೌಲಭ್ಯಗಳೊಂದಿಗೆ ಬರುತ್ತದೆ.


Click it and Unblock the Notifications








