ಶಿಯೋಮಿಯಿಂದ ಹೊಸ ಲ್ಯಾಪ್‌ಟಾಪ್‌ ಬಿಡುಗಡೆ! ವಾವ್ಹ್‌ ಎನಿಸುವ ವಿನ್ಯಾಸ!

|

ಶಿಯೋಮಿ ಕಂಪೆನಿ ಸ್ಮಾರ್ಟ್‌ಫೋನ್‌ ಮಾತ್ರವಲ್ಲ ಲ್ಯಾಪ್‌ಟಾಪ್‌ ಮಾರುಕಟ್ಟೆಯಲ್ಲಿಯೂ ಜನಪ್ರಿಯ ಬ್ರ್ಯಾಂಡ್‌ ಎನಿಸಿಕೊಂಡಿದೆ. ಇದೀಗ ತನ್ನ ಹೊಸ ಶಿಯೋಮಿ ಬುಕ್‌ ಏರ್‌ 13 ಲ್ಯಾಪ್‌ಟಾಪ್‌ ಬಿಡುಗಡೆ ಮಾಡಿದೆ. ಆಕರ್ಷಕ ವಿನ್ಯಾಸದಲ್ಲಿ ಬಂದಿರುವ ಈ ಲ್ಯಾಪ್‌ಟಾಪ್‌ 12 ನೇ ತಲೆಮಾರಿನ ಇಂಟೆಲ್‌ ಕೋರ್‌ i7 ಪ್ರೊಸೆಸರ್‌ ಅನ್ನು ಒಳಗೊಂಡಿದೆ. ಇದು ಡಾಲ್ಬಿ ಅಟ್ಮಾಸ್‌ ಸ್ಟೀರಿಯೋ ಸ್ಪೀಕರ್‌ಗಳನ್ನು ಒಳಗೊಂಡಿದೆ. ಇನ್ನು ಲ್ಯಾಪ್‌ಟಾಪ್‌ 2-ಇನ್-1 ವಿನ್ಯಾಸವನ್ನು 360-ಡಿಗ್ರಿ ಹಿಂಜ್‌ನೊಂದಿಗೆ ಹೊಂದಿದೆ.

ಶಿಯೋಮಿ

ಹೌದು, ಶಿಯೋಮಿ ಕಂಪೆನಿ ಹೊಸ ಶಿಯೋಮಿ ಬುಕ್‌ ಏರ್‌ 13 ಅನ್ನು ಪರಿಚಯಿಸಿದೆ. ಈ ಲ್ಯಾಪ್‌ಟಾಪ್‌ 60Hz ರಿಫ್ರೆಶ್‌ ರೇಟ್‌ ಬೆಂಬಲಿಸುವ 13.3-ಇಂಚಿನ ಒಎಲ್‌ಇಡಿ ಡಿಸ್‌ಪ್ಲೇ ಹೊಂದಿದೆ. ಇದು 65W ವೇಗದ ಚಾರ್ಜಿಂಗ್‌ ಬೆಂಬಲಿಸುವ 58.3WHr ಬ್ಯಾಟರಿಯನ್ನು ಒಳಗೊಂಡಿದೆ. ಇನ್ನು ಲ್ಯಾಪ್‌ಟಾಪ್‌ ಡಿಸ್‌ಪ್ಲೇ ಗೊರಿಲ್ಲಾ ಗ್ಲಾಸ್‌ 3 ಪ್ರೊಟೆಕ್ಷನ್‌ ಅನ್ನು ಪಡೆದುಕೊಂಡಿದೆ. ಇನ್ನುಳಿದಂತೆ ಈ ಹೊಸ ಲ್ಯಾಪ್‌ಟಾಪ್‌ ವಿಶೇಷತೆ ಏನಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಶಿಯೋಮಿ ಬುಕ್‌ ಏರ್‌ 13

ಶಿಯೋಮಿ ಬುಕ್‌ ಏರ್‌ 13 ಹೆಸರೇ ಸೂಚಿಸುವಂತೆ 13.3-ಇಂಚಿನ E4 OLED ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 2,880 x 1,800 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು 600 ನಿಟ್ಸ್‌ ಬ್ರೈಟ್‌ನೆಸ್ ಅನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 60Hz ರಿಫ್ರೆಶ್ ರೇಟ್‌ ಮತ್ತು 16:10 ರಚನೆಯ ಅನುಪಾತವನ್ನು ಒಳಗೊಂಡಿದೆ. ಈ ಡಿಸ್‌ಪ್ಲೇ ಡಾಲ್ಬಿ ವಿಷನ್ ಬೆಂಬಲವನ್ನು ಹೊಂದಿದ್ದು, ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್‌ ಅನ್ನು ಪಡೆದುಕೊಂಡಿದೆ.

ಶಿಯೋಮಿ ಬುಕ್ ಏರ್ 13

ಶಿಯೋಮಿ ಬುಕ್ ಏರ್ 13 ಲ್ಯಾಪ್‌ಟಾಪ್‌ 12 ನೇ ತಲೆಮಾರಿನ ಇಂಟೆಲ್‌ ಕೋರ್‌ i7 ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ವಿಂಡೋಸ್ 11 ಓಎಸ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದನ್ನು ಇಂಟೆಲ್‌ ಐರಿಸ್‌ Xe GPU ನೊಂದಿಗೆ ಜೋಡಿಸಲಾಗಿದೆ. ಹಾಗೆಯೇ 16GB RAM ಮತ್ತು 512GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಈ ಲ್ಯಾಪ್‌ಟಾಪ್‌ ಡಾಲ್ಬಿ ಅಟ್ಮಾಸ್ ಸ್ಟೀರಿಯೋ ಸ್ಪೀಕರ್‌ಗಳನ್ನು ಕೂಡ ಒಳಗೊಂಡಿದ್ದು, ಲ್ಯಾಪ್‌ಟಾಪ್ 2-ಇನ್-1 ವಿನ್ಯಾಸವನ್ನು 360-ಡಿಗ್ರಿ ಹಿಂಜ್‌ ಹೊಂದಿದೆ.

ಶಿಯೋಮಿ ಬುಕ್ ಏರ್ 13 ಲ್ಯಾಪ್‌ಟಾಪ್

ಶಿಯೋಮಿ ಬುಕ್ ಏರ್ 13 ಲ್ಯಾಪ್‌ಟಾಪ್ 65W ವೇಗದ ಚಾರ್ಜಿಂಗ್‌ ಬೆಂಬಲಿಸುವ 58.3WHr ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದೆ. ಇನ್ನು ಲ್ಯಾಪ್‌ಟಾಪ್‌ ಕನೆಕ್ಟಿವಿಟಿ ಆಯ್ಕೆಗಳಲ್ಲಿ WiFi-6E, ಬ್ಲೂಟೂತ್ 5.2, ಎರಡು ಥಂಡರ್‌ಬೋಲ್ಟ್‌ 4 ಪೋರ್ಟ್‌ಗಳು ಮತ್ತು ಆಡಿಯೊ ಜ್ಯಾಕ್ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಶಿಯೋಮಿ ಬುಕ್‌ ಏರ್‌ 13 ಚೀನಾದಲ್ಲಿ ಮಾತ್ರ ಬಿಡುಗಡೆಯಾಗಿದೆ. ಪ್ರಸ್ತುತ ಶಿಯೋಮಿ ಬುಕ್‌ ಏರ್‌ 13 i5 ರೂಪಾಂತರಕ್ಕೆ CNY 5999 (ಅಂದಾಜು 68,336ರೂ.) ಬೆಲೆಯನ್ನು ಹೊಂದಿದೆ. ಆದರೆ ಶಿಯೋಮಿ ಬುಕ್‌ ಏರ್‌ 13 ಲ್ಯಾಪ್‌ಟಾಪ್‌ i7 ರೂಪಾಂತರದ ಆಯ್ಕೆಯ ಬೆಲೆ CNY 6999 (ಅಂದಾಜು 79,753ರೂ.) ಬೆಲೆಯಲ್ಲಿ ದೊರೆಯಲಿದೆ. ಇನ್ನು ಈ ಲ್ಯಾಪ್‌ಟಾಪ್ ಭಾರತದಲ್ಲಿ ಬಿಡುಗಡೆಯಾಗುವುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಸಂದರ್ಭದಲ್ಲಿ

ಇನ್ನು ಇದೇ ಸಂದರ್ಭದಲ್ಲಿ ಶಿಯೋಮಿ ಕಪೆನಿ ತನ್ನ ಹೊಸ ರೆಡ್ಮಿ ನೋಟ್‌ 12 ಪ್ರೊ 5G ಸರಣಿಯನ್ನು ಕೂಡ ಪರಿಚಯಿಸಿದೆ. ಇದರಲ್ಲಿ ರೆಡ್ಮಿ ನೋಟ್‌ 12 ಪ್ರೊ, ನೋಟ್‌ 12 ಪ್ರೊ+, ಮತ್ತು ನೋಟ್‌ 12 ಎಕ್ಸ್‌ಪ್ಲೋರರ್‌ ಎಡಿಷನ್‌ ಫೋನ್‌ಗಳನ್ನು ಪರಿಚಯಿಸಲಾಗಿದೆ. ಇದರಲ್ಲಿ ರೆಡ್ಮಿ ನೋಟ್‌ 12 5G ಸ್ಮಾರ್ಟ್‌ಫೋನ್‌ 6.67 ಇಂಚಿನ ಫ್ಲಾಟ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಅನ್ನು ಬೆಂಬಲಿಸಲಿದೆ. ಇದು 240Hz ಟಚ್‌ ಸ್ಯಾಪ್ಲಿಂಗ್‌ ರೇಟ್‌ ಅನ್ನು ಸಹ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್‌ ಸೆನ್ಸಾರ್‌ ಪಡೆದಿದೆ.

Best Mobiles in India

English summary
Xiaomi Book Air 13 with convertible form factor launched.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X