ಭಾರತದ ಮಾರುಕಟ್ಟೆಗೆ ಶೀಘ್ರದಲ್ಲೇ ಎಂಟ್ರಿ ನೀಡಲಿದೆ ರೆಡ್‌ಮಿ 9 ಸ್ಮಾರ್ಟ್‌ಫೋನ್!
ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಕ ಶಿಯೋಮಿ ತನ್ನ ವಿಶೇಷ ಫೀಚರ್ಸ್ ಸ್ಮಾರ್ಟ್‌ಫೋನ್‌ಗಳ ಮೂಲಕ ಗುರುತಿಸಿಕೊಂಡಿದೆ. ತನ್ನ ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಗ್ರಾಹಕರಿಂದ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಶಿಯೋಮಿ ಶೀಘ್ರದಲ್ಲೇ ಭಾರತದ ಮಾರುಕಟ್ಟೆಯಲ್ಲಿ ರೆಡ್‌ಮಿ 9 ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಲಿದೆ ಎಂದು ವರದಿ ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಇದೇ ಆಗಸ್ಟ್ 27 ರಂದು ದೇಶದಲ್ಲಿ ಮಧ್ಯಾಹ್ನ 12 ಗಂಟೆಗೆ ಬಿಡುಗಡೆ ಮಾಡಲಾಗುವುದು ಎಂದು ಶಿಯೋಮಿ ಕಂಪನಿ ಖಚಿತಪಡಿಸಿದೆ.

ಹೌದು, ಶಿಯೋಮಿ ಕಂಪೆನಿ ತನ್ನ ಹೊಸ ರೆಡ್‌ಮಿ 9 ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಲು ಸಿದ್ದತೆ ನಡೆಸಿದೆ. ಇನ್ನು ಶಿಯೋಮಿ ಕಂಪೆನಿ ರೆಡ್‌ಮಿ 9 ಸ್ಮಾರ್ಟ್‌ಫೋನ್ ಅನ್ನು ಕಳೆದ ಜೂನ್‌ನಲ್ಲಿ ಸ್ಪೇನ್ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿತ್ತು. ಇದಲ್ಲದೆ ಈಗಾಗಲೇ ಭಾರತದಲ್ಲಿ ರೆಡ್‌ಮಿ 9 ಪ್ರೈಮ್ ಆಗಿ ಬಿಡುಗಡೆ ಮಾಡಲಾಗಿದೆ. ಆದ್ದರೇ ಸದ್ಯದಲ್ಲೇ ಬಿಡುಗಡೆ ಆಗಲಿರುವ ರೆಡ್‌ಮಿ 9 ಸ್ಮಾರ್ಟ್‌ಫೋನ್ ಕುರಿತು ಹೆಚ್ಚಿನ ಮಾಹಿತಿ ಸದ್ಯ ಲಭ್ಯವಾಗಿಲ್ಲ. ಆದರೂ ರೆಡ್‌ಮಿ 9 ಸ್ಮಾರ್ಟ್‌ಫೋನ್ ರೆಡ್‌ಮಿ 9C ಸ್ಮಾರ್ಟ್‌ಫೋನ್‌ನ ಸ್ವಲ್ಪ ತಿರುಚಿದ ಆವೃತ್ತಿಯಾಗಿದೆ ಎಂದು ಹೇಳಲಾಗ್ತಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆಯೇನು ಅನ್ನೊದನ್ನ ತಿಳಿದುಕೊಳ್ಳೋಣ ಬನ್ನಿರಿ.

ಡಿಸ್‌ಪ್ಲೇ
ಇನ್ನು ಶಿಯೋಮಿ ರೆಡ್‌ಮಿ 9 ಸ್ಮಾರ್ಟ್‌ಫೋನ್ 6.53-ಇಂಚಿನ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು ಎಚ್‌ಡಿ + ರೆಸಲ್ಯೂಶನ್ ಹೊಂದಿದೆ. ಅಲ್ಲದೆ ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿರುವ ಸಾಧ್ಯತೆ ಇದೆ.

ಪ್ರೊಸೆಸರ್
ಇದು ರೆಡ್‌ಮಿ 9C ಸ್ಮಾರ್ಟ್‌ಫೋನ್‌ನಂತೆ ಮೀಡಿಯಾ ಟೆಕ್ ಜಿ 35 ಆಕ್ಟಾ-ಕೋರ್ SoC ಪ್ರೊಸೆಸರ್ ಹೊಂದಿರುವ ಸಾಧ್ಯತೆಯಿದೆ. ಜೊತೆಗೆ ಇದು ಆಂಡ್ರಾಯ್ಡ್ 10 ಓಎಸ್ ಆಧಾರಿತ MIUI 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ ಎಂದು ನಿರೀಕ್ಷಿಸಲಾಗಿದೆ.

ಕ್ಯಾಮೆರಾ ವಿನ್ಯಾಸ
ರೆಡ್‌ಮಿ 9 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿರುವ ಸಾದ್ಯತೆ ಇದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಅಲ್ಟ್ರಾವೈಡ್ ಆಂಗಲ್ ಲೆನ್ಸ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿರುವ ನಿರೀಕ್ಷೆ ಇದೆ. ಅಲ್ಲದೆ ಇದು 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ.

ಬ್ಯಾಟರಿ ಮತ್ತು ಇತರೆ
ಶಿಯೋಮಿ ರೆಡ್‌ಮಿ 9 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು 4G VOLTE, ವೈ-ಫೈ, ಬ್ಲೂಟೂತ್ 5.0, GPS, USB-C, ಐಆರ್ ಬ್ಲಾಸ್ಟರ್ ಮತ್ತು 3.5mm ಆಡಿಯೊ ಜ್ಯಾಕ್ ಅನ್ನು ಬೆಂಬಲಿಸಲಿದೆ ಎನ್ನಲಾಗಿದೆ.


Click it and Unblock the Notifications