Just In
- 16 hrs ago
ಒಪ್ಪೋ ಕಂಪೆನಿಯ ಈ ಸ್ಮಾರ್ಟ್‌ಫೋನ್ ಮೇಲೆ ಭಾರಿ ನಿರೀಕ್ಷೆ? ಲಾಂಚ್ ಯಾವಾಗ?
- 17 hrs ago
ಫ್ಲಿಪ್ಕಾರ್ಟ್ನಲ್ಲಿ ಐಫೋನ್ 14 ಪ್ಲಸ್ ಬೆಲೆಯಲ್ಲಿ ಭಾರಿ ಕಡಿತ! ಇದಕ್ಕಿಂತ ಒಳ್ಳೆ ಟೈಂ ಸಿಗೋದಿಲ್ಲ!
- 18 hrs ago
ರಾಷ್ಟ್ರಮಟ್ಟದಲ್ಲಿ ಮೆಚ್ಚುಗೆ ಗಳಿಸಿದ ಬೆಂಗಳೂರಿನ 8 ವರ್ಷದ ಆಂಡ್ರಾಯ್ಡ್ ಆಪ್ ಡೆವಲಪರ್!
- 20 hrs ago
ಭಾರತದಲ್ಲಿ ಹೊಸ ಸಂಚಲನ ಸೃಷ್ಟಿಸಿದ ಫೈರ್ಬೋಲ್ಟ್ ಕಂಪೆನಿ!..ಪ್ರತಿಸ್ಫರ್ಧಿಗಳು ಕಂಗಾಲು!
Don't Miss
- Sports
ಆರ್ಸಿಬಿ ತನ್ನ ಆಟಗಾರರನ್ನು ನಂಬಲ್ಲ ಎಂದ ಕ್ರಿಸ್ ಗೇಲ್: ತಿರುಗಿಬಿದ್ದ ಅಭಿಮಾನಿಗಳು ಕೊಟ್ಟ ಉತ್ತರವೇನು?
- News
Vishnuvardhan Memorial: ಇಂದು ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ, ವಿಷ್ಣು ಅಭಿಮಾನಿಗಳ ಅಸಮಾಧಾನವೇನು?
- Automobiles
'ಮಹೀಂದ್ರಾ ಸ್ಕಾರ್ಪಿಯೊ ಎನ್' ಈ ರೂಪಾಂತರಗಳಿಗೆ ಬರೋಬ್ಬರಿ 2 ವರ್ಷ ಕಾಯಬೇಕು..
- Movies
Breaking: ಕನ್ನಡ ಚಲನಚಿತ್ರರಂಗದ ಹಿರಿಯ ನಟ ಮನ್ದೀಪ್ ರಾಯ್ ನಿಧನ
- Lifestyle
Horoscope Today 29 Jan 2023: ಭಾನುವಾರ: ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
- Finance
ಅಭ್ಯರ್ಥಿಯ ಸಂದರ್ಶನ ಮಾಡುತ್ತಿದ್ದಾಗಲೇ ಗೂಗಲ್ ಎಚ್ಆರ್ ವಜಾ!
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಭಾರತಕ್ಕೆ ಎಂಟ್ರಿ ಕೊಡಲು ರೆಡಿಯಾಗಿದೆ ಶಿಯೋಮಿಯ 65 ಇಂಚಿನ ಸ್ಮಾರ್ಟ್‌ಟಿವಿ!
ಶಿಯೋಮಿಯ ಕಂಪನಿಯು ಸ್ಮಾರ್ಟ್‌ಫೋನ್ ಸೇರಿದಂತೆ ಹಲವು ಗ್ಯಾಜೆಟ್ ಉತ್ಪನ್ನಗಳನ್ನು ಬಿಡುಗಡೆ ಮಾಡಿದ್ದು, ಅವುಗಳಲ್ಲಿ ಕಂಪನಿಯ ಸ್ಮಾರ್ಟ್‌ಟಿವಿಗಳು ಸಹ ಜನಪ್ರಿಯತೆ ಗಳಿಸಿವೆ. ಕಂಪನಿಯ ಸ್ಮಾರ್ಟ್‌ಟಿವಿಗಳು ಉತ್ತಮ ಫೀಚರ್ಸ್‌ಗಳನ್ನು ಹೊಂದಿದ್ದು, ಜೊತೆಗೆ ಅಗ್ಗದ ಪ್ರೈಸ್‌ಟ್ಯಾಗ್‌ನಲ್ಲಿ ಲಭ್ಯವಾಗುತ್ತಿರುವುದು ಪ್ಲಸ್‌ಪಾಯಿಂಟ್ ಆಗಿದೆ. ಈಗ ಅಂತಹದೊಂದು ಸ್ಮಾರ್ಟ್‌ಟಿವಿಯನ್ನು ದೇಶಿಯ ಮಾರುಕಟ್ಟೆಗೆ ಬಿಡುಗಡೆ ಮಾಡಲು ತುದಿಗಾಲಲ್ಲಿದೆ.

ಹೌದು, ಶಿಯೋಮಿ ಸಂಸ್ಥೆಯು ಇದೇ ಸೆಪ್ಟಂಬರ್ 17ರಂದು ಬೆಂಗಳೂರಿನಲ್ಲಿ ನಡೆಯುವ 'ಸ್ಮಾರ್ಟ್‌ರ್ ಲಿವಿಂಗ್-2020' ಕಾರ್ಯಕ್ರಮದಲ್ಲಿ 65 ಇಂಚಿನ ಸ್ಮಾರ್ಟ್‌ಟಿವಿಯನ್ನು ಬಿಡುಗಡೆ ಮಾಡಲು ರೆಡಿಯಾಗಿದೆ. ಈ ಸ್ಮಾರ್ಟ್‌ಟಿವಿಯು ಈಗಾಗಲೇ ಚೀನಾ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದ್ದು, 4K ಪ್ಯಾನೆಲ್ ಒಳಗೊಂಡಂತೆ ಹಲವು ಅತ್ಯುತ್ತಮ ಫೀಚರ್ಸ್‌ಗಳನ್ನು ಈ ಸ್ಮಾರ್ಟ್‌ಟಿವಿಯು ಒಳಗೊಂಡಿದೆ. ಹಾಗಾದರೇ ಶಿಯೋಮಿಯ 65 ಇಂಚಿನ ಸ್ಮಾರ್ಟ್‌ಟಿವಿ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಹೊಂದಿದೆ ಎಂಬುದನ್ನು ಮುಂದೆ ನೋಡೋಣ.

ಡಿಸ್‌ಪ್ಲೇ ರಚನೆ
ಶಿಯೋಮಿಯ ಈ ಸ್ಮಾರ್ಟ್‌ಟಿವಿಯು 65 ಇಂಚಿನ LED ಡಿಸ್‌ಪ್ಲೇಯನ್ನು ಹೊಂದಿದ್ದು, ಡಿಸ್‌ಪ್ಲೇಯು 3840 x 2160 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದಲ್ಲಿದೆ. HDR ಮತ್ತು 4K ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದ್ದು, ಜೊತೆಗೆ ಎಚ್‌ಆರ್‌ಡಿ ವಿಡಿಯೊಗಳನ್ನು ಸಹ ಸಪೋರ್ಟ್ ಮಾಡುತ್ತದೆ. ನೋಡಲು ಆಕರ್ಷಕವಾಗಿದ್ದು, ಸುತ್ತಲೂ ಕಡಿಮೆ ಅಂಚಿನ ರಚನೆಯನ್ನು ಪಡೆದಿದೆ.

ಫೀಚರ್ಸ್‌ಗಳೇನು
ಈ ಸ್ಮಾರ್ಟ್‌ಟಿವಿಯು 1.5GHz ಕ್ವಾಡ್‌ಕೋರ್ ಪ್ರೊಸೆಸರ್ ಜೊತೆಗೆ 750MHz Mali-450 GPU ಅನ್ನು ಒಳಗೊಂಡಿದೆ. ಇದರೊಂದಿಗೆ 2GB RAM ಮತ್ತು 8GB ಸ್ಟೋರೇಜ್ ಆಯ್ಕೆಯನ್ನು ಹೊಂದಿದ್ದು, ವೈಫೈ, ಬ್ಲೂಟೂತ್, ಮೂರು ಎಚ್‌ಡಿಎಮ್‌ಐ ಫೋರ್ಟ್‌ಗಳು, ಎರಡು ಯುಎಸ್‌ಬಿ ಫೋರ್ಟ್‌ಗಳು ಮತ್ತು ಐದರನೆಟ್ ಸೇರಿದಂತೆ ಇತ್ತೀಚಿನ ಅಗತ್ಯ ಫೀಚರ್ಸ್‌ಗಳನ್ನು ಪಡೆದುಕೊಂಡಿದೆ.

ನೆಟ್‌ಫ್ಲಿಕ್ಸ್ ಮತ್ತು ಸೌಂಡ್
65 ಇಂಚಿನ ಸ್ಮಾರ್ಟ್‌ಟಿವಿಯು ಜನಪ್ರಿಯ ವಿಡಿಯೊ ಸ್ಟ್ರಿಮಿಂಗ್ ಆಪ್ ನೆಟ್‌ಫ್ಲಿಕ್ಸ್ ಇನ್‌ಬಿಲ್ಟ್ ಹೊಂದಿರಲಿದೆ. ಹಾಗೂ ಡಾಲ್ಬಿ ಸೌಂಡ್ ಮತ್ತು ಡಿಟಿಎಸ್ ಸೌಂಡ್‌ನ ಬೆಂಬಲ ಪಡೆದಿದ್ದು, ಅತ್ಯುತ್ತಮ ಸೌಂಡ್ ಔಟ್‌ಪುಟ್ ಹೊರಹಾಕಲಿದೆ. ಆಂಡ್ರಾಯ್ಡ್ ಆಧಾರಿತ PatchWall ಓಎಸ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಬ್ಲೂಟೂತ್ ವಾಯಿಸ್ ಕಂಟ್ರೂಲ್ ಸೌಲಭ್ಯವನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ
ಈಗಾಗಲೇ ಚೀನಾದಲ್ಲಿ ಬಿಡುಗಡೆ ಆಗಿ ಮಾರಾಟ ಕಾಣುತ್ತಿರುವ 65 ಇಂಚಿನ ಸ್ಮಾರ್ಟ್‌ಟಿವಿ ಸ್ಮಾರ್ಟ್‌ಟಿವಿಯನ್ನು ಇದೇ ಸೆಪ್ಟೆಂಬರ್ 17ರಂದು ಬೆಂಗಳೂರಿನಲ್ಲಿ ಲಾಂಚ್ ಮಾಡಲಿದೆ. ಚೀನಾದಲ್ಲಿ ಈ ಟಿವಿಯ ಬೆಲೆಯು RMB 3,999 ಆಗಿದ್ದು, ಭಾರತದಲ್ಲಿ 41,490ರೂ.ಗಳು ಆಗಿರಲಿದೆ ಎಂದು ಅಂದಾಜಿಸಲಾಗಿದೆ. ಇದರೊಂದಿಗೆ ಶಿಯೋಮಿ 'ಮಿ ಬ್ಯಾಂಡ್ 4' ಡಿವೈಸ್ 1,799ರೂ.ಗಳಿಗೆ ಲಾಂಚ್ ಆಗುವ ನಿರೀಕ್ಷೆಗಳಿವೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470