ಶಿಯೋಮಿ 13 ಸರಣಿ ಲಾಂಚ್‌ ಡೇಟ್‌ ಬಹಿರಂಗ! ಫೀಚರ್ಸ್‌ ಹೇಗಿದೆ?

|

ಶಿಯೋಮಿ ಕಂಪೆನಿಯ ಸ್ಮಾರ್ಟ್‌ಫೋನ್‌ಗಳಿಗೆ ಮಾರುಕಟ್ಟೆಯಲ್ಲಿ ಭಾರಿ ಬೇಡಿಕೆಯಿದೆ. ಇದಕ್ಕೆ ತಕ್ಕಂತೆ ಶಿಯೋಮಿ ಕಂಪೆನಿ ಕೂಡ ಅನೇಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುತ್ತಾ ಬಂದಿದೆ. ಇದರ ಮುಂದುವರೆದ ಭಾಗವಾಗಿ ಇದೀಗ ಶಿಯೋಮಿ 13 ಸರಣಿಯನ್ನು ಪರಿಚಯಿಸಲು ಸಿದ್ಧತೆ ನಡೆಸಿದ್ದು, ಬಿಡುಗಡೆ ದಿನಾಂಕವನ್ನು ಬಹಿರಂಗಗೊಳಿಸಿದೆ. ಇನ್ನು ಈ ಸರಣಿಯಲ್ಲಿ ಶಿಯೋಮಿ 13 ಮತ್ತು ಶಿಯೋಮಿ 13 ಪ್ರೊ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಲಿದೆ.

ಶಿಯೋಮಿ

ಹೌದು, ಶಿಯೋಮಿ ಕಂಪೆನಿ ಇದೇ ಡಿಸೆಂಬರ್‌ 1ರಂದು ಶಿಯೋಮಿ 13 ಸರಣಿ ಬಿಡುಗಡೆ ಮಾಡುವುದಾಗಿ ಹೇಳಿದೆ. ಈ ಸರಣಿಯ ಸ್ಮಾರ್ಟ್‌ಫೋನ್‌ಗಳು MIUI 14 ಔಟ್-ಆಫ್-ಬಾಕ್ಸ್‌ನೊಂದಿಗೆ ಬರಲಿದೆ ಎಂದು ಶಿಯೋಮಿ ದೃಢಪಡಿಸಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ಗಳು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8 Gen 2 ಆಕ್ಟಾ-ಕೋರ್‌ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ ಎನ್ನಲಾಗಿದೆ. ಇದರಲ್ಲಿ ಶಿಯೋಮಿ 13 ಪ್ರೊ ಫೋನ್‌ನ ವಿಶೇಷತೆ ಏನಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೆ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೆ ರಚನೆ ಮತ್ತು ವಿನ್ಯಾಸ

ಶಿಯೋಮಿ 13 ಪ್ರೊ 6.7 ಇಂಚಿನ ಸ್ಯಾಮ್‌ಸಂಗ್ E6 ಅಮೋಲ್ಡ್ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಇದು 1440 x 3200 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿರುವ ಸಾಧ್ಯತೆಯಿದೆ. ಇನ್ನು ಡಿಸ್‌ಪ್ಲೇ 120Hz ರಿಫ್ರೆಶ್‌ ರೆಟ್‌ ಮತ್ತು ಡಾಲ್ಬಿ ವಿಷನ್ ಬೆಂಬಲವನ್ನು ಪಡೆದಿದೆ. ಜೊತೆಗೆ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ಪ್ರೊಟೆಕ್ಷನ್‌ ಅನ್ನು ಒಳಗೊಂಡಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಶಿಯೋಮಿ ಶೇರ್‌ ಮಾಡಿರುವ ಅಧಿಕೃತ ಪೋಸ್ಟರ್‌ ಹೇಳುವಂತೆ ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8 Gen 2 ಆಕ್ಟಾ-ಕೋರ್‌ ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ಆಪರೇಟಿಂಗ್ ಸಿಸ್ಟಮ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿರಲಿದೆ. ಇದಲ್ಲದೆ 8GB RAM ಮತ್ತು 128GB ಸ್ಟೋರೇಜ್‌ ಆಯ್ಕೆಯಲ್ಲಿ ಬರುವ ಸಾಧ್ಯತೆ ಕೂಡ ಇದೆ. ಇದರೊಂದಿಗೆ 512GB ಸ್ಟೋರೇಜ್‌ ಆಯ್ಕೆಯು ಸಹ ಬರುವ ಸಾಧ್ಯತೆಯಿದೆ.

ಕ್ಯಾಮೆರಾ ಸೆಟ್‌ಅಪ್‌ ಏನಿರಲಿದೆ?

ಕ್ಯಾಮೆರಾ ಸೆಟ್‌ಅಪ್‌ ಏನಿರಲಿದೆ?

ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ನಲ್ಲಿ ಬರುವ ಸಾಧ್ಯತೆಯಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೋನಿ IMX989 ಸೆನ್ಸಾರ್‌, ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಅಲ್ಟ್ರಾವೈಡ್ ಆಂಗಲ್ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಟೆಲಿಫೋಟೋ ಲೆನ್ಸ್ ಅನ್ನು ಒಳಗೊಂಡಿರಬಹುದು. ಇದಲ್ಲದೆ 32 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಶಿಯೋಮಿ 13 ಪ್ರೊ ಸ್ಮಾರ್ಟ್‌ಫೋನ್‌ 4,800mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ ಎಂದು ಹೇಳಲಾಗುತ್ತದೆ. ಇದು 120 ವ್ಯಾಟ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಬಹುದು ಎಂದು ನಿರೀಕ್ಷಿಸಲಾಗಿದೆ. ಜತೆಗೆ ರಿವರ್ಸ್ ಚಾರ್ಜಿಂಗ್ ಮತ್ತು ವೈರ್‌ಲೆಸ್ ಫಾಸ್ಟ್ ಚಾರ್ಜಿಂಗ್ ಬೆಂಬಲದೊಂದಿಗೆ ಬರುತ್ತದೆ ಎಂದು ಅಂದಾಜಿಸಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ, ಬ್ಲೂಟೂತ್ 5.2, USB ಟೈಪ್-C ಪೋರ್ಟ್‌ ಅನ್ನು ಬೆಂಬಲಿಸಲಿದೆ. ಇದಲ್ಲದೆ ಫಿಂಗರ್‌ಪ್ರಿಂಟ್ ಸೆನ್ಸಾರ್‌, ಅಕ್ಸಿಲೆರೊಮೀಟರ್, ಗೈರೊ, ದಿಕ್ಸೂಚಿ, ಬಾರೋಮೀಟರ್ ಅನ್ನು ಹೊಂದಿರುವ ನಿರೀಕ್ಷೆಯಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಇನ್ನು ಶಿಯೋಮಿ 13 ಸರಣಿ ಡಿಸೆಂಬರ್‌ನಲ್ಲಿ ಚೀನಾದಲ್ಲಿ ಮೊದಲಿಗೆ ಬಿಡುಗಡೆಯಾಗಲಿದೆ. ನಂತರದ ದಿನಗಳಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ. ಇದರ ಕಲರ್‌ ಆಯ್ಕೆಗಳ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ.

Best Mobiles in India

English summary
Xiaomi has announced the launch date of Xiaomi 13 series

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X