Home
ಸುದ್ದಿಜಾಲ

ಶಿಯೋಮಿಯ ಈ 5 ಫೋನ್ ಖರೀದಿಸುವ ಗ್ರಾಹಕರು ಶಾಕ್ ಆಗೋದು ಪಕ್ಕಾ!

ಪ್ರಮುಖ ಮೊಬೈಲ್‌ ಕಂಪನಿಗಳಲ್ಲಿ ಒಂದಾಗಿರುವ ಶಿಯೋಮಿ ಸಂಸ್ಥೆಯು ಭಿನ್ನ ಶ್ರೇಣಿಯಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಗ್ರಾಹಕರಿಂದ ಸೈ ಎನಿಸಿಕೊಂಡಿದೆ. ಇತ್ತೀಚಿಗಷ್ಟೆ ಕೆಲವು ಫೋನ್‌ಗಳ ಬೆಲೆ ಏರಿಕೆ ಮಾಡಿ ಅಚ್ಚರಿ ತಂದಿತ್ತು. ಆದರೆ ಇದೀಗ ಕಂಪನಿಯು ಮತ್ತೆ ತನ್ನ ಐದು ಸ್ಮಾರ್ಟ್‌ಫೋನ್‌ಗಳ ಬೆಲೆಯಲ್ಲಿ ಏರಿಕೆ ಮಾಡಿದೆ. ರೆಡ್ಮಿ ನೋಟ್ 10T, ರೆಡ್ಮಿ ನೋಟ್ 10S, ರೆಡ್ಮಿ 9 ಪವರ್, ರೆಡ್ಮಿ 9 ಮತ್ತು ರೆಡ್ಮಿ 9i ಬೆಲೆ ಏರಿಕೆ ಕಂಡ ಸ್ಮಾರ್ಟ್‌ಫೋನ್‌ಗಳಾಗಿವೆ.

ಕಂಡಿದೆ

ರೆಡ್ಮಿ ನೋಟ್ 10T ಫೋನ್‌ ಬೆಲೆಯಲ್ಲಿ 1,000ರೂ.ಗಳ ಏರಿಕೆ ಆಗಿದೆ. ರೆಡ್ಮಿ ನೋಟ್ 10S ಫೋನ್‌ 500ರೂ. ಹೆಚ್ಚಳ ಕಂಡಿದೆ. ರೆಡ್ಮಿ 9 ಪವರ್ ಫೋನ್‌ ಸಹ 500ರೂ.ಗಳ ಏರಿಕೆ ಕಂಡಿದೆ. ಅದೇ ರೀತಿ ರೆಡ್ಮಿ 9 ಮತ್ತು ರೆಡ್ಮಿ 9i ಸ್ಮಾರ್ಟ್‌ಫೋನ್‌ಗಳು ಸಹ ಕ್ರಮವಾಗಿ 500ರೂ.ಗಳ ಹೆಚ್ಚಳ ಕಂಡಿವೆ.

ಹೊಸ ಪ್ರೈಸ್‌ ಟ್ಯಾಗ್‌ಗಳು

ಹೊಸ ಪ್ರೈಸ್‌ ಟ್ಯಾಗ್‌ಗಳು

ರೆಡ್ಮಿ ನೋಟ್ 10T ಫೋನ್ 4GB+64GB ವೇರಿಯಂಟ್‌ ಬೆಲೆ 14,999ರೂ. ಮತ್ತು 6GB+128GB ವೇರಿಯಂಟ್‌ ಬೆಲೆ 16,999ರೂ. ಆಗಿದೆ. ರೆಡ್ಮಿ ನೋಟ್ 10S ಫೋನ್ 6GB+128GB ವೇರಿಯಂಟ್ 16,499ರೂ. ಪ್ರೈಸ್‌ ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ. ರೆಡ್ಮಿ 9 ಪವರ್ ಫೋನ್ 4GB+64GB ಬೇಸ್‌ ವೇರಿಯಂಟ್ ಬೆಲೆಯು 11,499ರೂ. ಆಗಿದೆ. ರೆಡ್ಮಿ 9 ಫೋನ್ 4GB+64GB ವೇರಿಯಂಟ್‌ 9,499ರೂ.ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ರೆಡ್ಮಿ 9i ಫೋನ್ 4GB+64GB ಬೇಸ್‌ ವೇರಿಯಂಟ್ ಬೆಲೆಯು 8,799ರೂ. ಆಗಿದೆ. ಇನ್ನು ಈ ಐದು ಫೋನ್‌ಗಳ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ರೆಡ್ಮಿ ನೋಟ್ 10T ಫೋನ್ ಫೀಚರ್ಸ್‌

ರೆಡ್ಮಿ ನೋಟ್ 10T ಫೋನ್ ಫೀಚರ್ಸ್‌

ರೆಡ್ಮಿ ನೋಟ್ 10T ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಆಕ್ಟಾ-ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಸಾಮರ್ಥ್ಯ ಹೊಂದಿದೆ. ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್‌ ಎಫ್ / 1.79 ಲೆನ್ಸ್ ಹೊಂದಿದೆ. 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 18W ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ.

ರೆಡ್ಮಿ ನೋಟ್ 10S ಫೋನ್ ಫೀಚರ್ಸ್‌

ರೆಡ್ಮಿ ನೋಟ್ 10S ಫೋನ್ ಫೀಚರ್ಸ್‌

ರೆಡ್‌ಮಿ ನೋಟ್ 10s ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ 6.43 ಇಚಿನ AMOLED ಫುಲ್‌ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಮೀಡಿಯಾ ಟೆಕ್ ಹೆಲಿಯೊ G95 SoC ಪ್ರೊಸೆಸರ್‌ ಸಾಮರ್ಥ್ಯ ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಆಧಾರಿತ MIUI 12.5 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಅಪ್‌ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 33W ಫಾಸ್ಟ್ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

ರೆಡ್ಮಿ 9 ಪವರ್ ಫೋನ್ ಫೀಚರ್ಸ್‌

ರೆಡ್ಮಿ 9 ಪವರ್ ಫೋನ್ ಫೀಚರ್ಸ್‌

ರೆಡ್‌ಮಿ 9 ಪವರ್ ಸ್ಮಾರ್ಟ್‌ಫೋನ್‌ 1,080x2,340 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.53 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಡಾಟ್‌ಡ್ರಾಪ್‌ ಡಿಸ್‌ಪ್ಲೇ ಆಗಿದೆ. ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 662 SoC ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್ 10 ನಲ್ಲಿ MIUI 12 ರೊಂದಿಗೆ ಕಾರ್ಯನಿರ್ವಹಿಸುತ್ತದೆ. ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ವನ್ನು ಹೊಂದಿದೆ. 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ರೆಡ್ಮಿ 9 ಫೋನ್ ಫೀಚರ್ಸ್‌

ರೆಡ್ಮಿ 9 ಫೋನ್ ಫೀಚರ್ಸ್‌

ರೆಡ್ಮಿ 9 ಸ್ಮಾರ್ಟ್‌ಫೋನ್ 1080 x 2340 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.53 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಮೀಡಿಯಾ ಟೆಕ್ ಹಿಲಿಯೊ G85 ಆಕ್ಟಾ ಕೋರ್ ಪ್ರೊಸೆಸರ್‌ ಸಾಮರ್ಥ್ಯ ಹೊಂದಿದ್ದು, ಅದಕ್ಕೆ ಪೂಕರವಾಗಿ ಆಂಡ್ರಾಯ್ಡ್ 10 ಓಎಸ್ ಬೆಂಬಲ ಪಡೆದಿದೆ. ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್ ರಚನೆಯನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾವು 48ಎಂಪಿ ಸೆನ್ಸಾರ್‌ನಲ್ಲಿದೆ. 5020mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದೆ. ಇದರೊಂದಿಗೆ 22.5W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಬೆಂಬಲವನ್ನು ಒದಗಿಸಲಾಗಿದೆ.

ರೆಡ್‌ಮಿ 9i ಫೋನ್ ಫೀಚರ್ಸ್‌

ರೆಡ್‌ಮಿ 9i ಫೋನ್ ಫೀಚರ್ಸ್‌

ರೆಡ್‌ಮಿ 9i ಸ್ಮಾರ್ಟ್‌ಫೋನ್ 6.53-ಇಂಚಿನ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು ಎಚ್‌ಡಿ + ರೆಸಲ್ಯೂಶನ್ ಪಡೆದಿದೆ. ಮೀಡಿಯಾ ಟೆಕ್ ಹಿಲಿಯೊ G25 SoC ಪ್ರೊಸೆಸರ್‌ ನಲ್ಲಿ ಕಾರ್ಯನಿರ್ವಹಿಸಲಿದೆ. ಸಿಂಗಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. 13 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯ ಪಡೆದಿದೆ. ಇದರೊಂದಿಗೆ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಪಡೆದುಕೊಂಡಿದೆ.

Best Mobiles in India

English summary
Xiaomi Has Increased Price of These Five Redmi Phones in India.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+