ಮತ್ತೆ ಭಾರೀ ಬೆಲೆ ಏರಿಕೆ ಕಂಡ ರೆಡ್ಮಿ ನೋಟ್ 10 ಪ್ರೊ!

|

ಪ್ರತಿಷ್ಠಿತ ಮೊಬೈಲ್ ತಯಾರಿಕಾ ಸಂಸ್ಥೆಗಳಲ್ಲಿ ಒಂದಾದ ಶಿಯೋಮಿ ಕಂಪನಿಯು ರೆಡ್ಮಿ ಸರಣಿಯಲ್ಲಿ ಹಲವು ಸ್ಮಾರ್ಟ್‌ಫೋನ್‌ ಫೋನ್‌ ಮಾಡೆಲ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಆ ಪೈಕಿ ಇತ್ತೀಚಿಗಷ್ಟೆ ನೂತನವಾಗಿ ಬಿಡುಗಡೆ ಮಾಡಿದ್ದ, ಬಜೆಟ್ ಬೆಲೆಯ ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್‌ ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರನ್ನು ಆಕರ್ಷಿಸಿದೆ. ಆದರೆ ಇದೀಗ ಶಿಯೋಮಿಯು ಈ ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಏರಿಕೆ ಮಾಡಿದ್ದು, ಗ್ರಾಹಕರಿಗೆ ಶಾಕ್ ನೀಡಿದೆ.

ಸಂಸ್ಥೆಯು

ಹೌದು, ಶಿಯೋಮಿ ಮೊಬೈಲ್ ಕಂಪನಿ ಸಂಸ್ಥೆಯು ತನ್ನ ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ 500ರೂ.ಗಳನ್ನು ಏರಿಕೆ ಮಾಡಿದೆ. ಈ ಫೋನ್ 6GB + 128GB ಮತ್ತು 4GB RAM + 64GB ಸ್ಟೋರೇಜ್‌ ವೇರಿಯಂಟ್ ಆಯ್ಕೆಗಳನ್ನು ಹೊಂದಿದೆ. ದರ ಹೆಚ್ಚಳದಿಂದಾಗಿ 6GB + 128GB ವೇರಿಯಂಟ್ ಫೋನ್ ಈಗ 17,999 ರೂ. ಪ್ರೈಸ್‌ಟ್ಯಾಗ್ ಹೊಂದಿದೆ. ಆದರೆ 4GB RAM/64GB ವೇರಿಯಂಟ್ ದರ ಏರಿಕೆವು 15,999ರೂ. ಆಗಿದೆ. ಇನ್ನುಳಿದಂತೆ ರೆಡ್ಮಿ ನೋಟ್ 10 ಪ್ರೊ ಫೋನಿನ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಹಾಗೂ ವಿನ್ಯಾಸ

ಡಿಸ್‌ಪ್ಲೇ ರಚನೆ ಹಾಗೂ ವಿನ್ಯಾಸ

ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಸೂಪರ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 100% ಡಿಸಿಐ-ಪಿ 3 ವೈಡ್ ಕಲರ್ ಗ್ಯಾಮಟ್, HDR-10 ಬೆಂಬಲ ಮತ್ತು ಟಿವಿ ರೈನ್‌ಲ್ಯಾಂಡ್ ಕಡಿಮೆ ಹೊಂದಿದೆ. ಈ ಡಿಸ್‌ಪ್ಲೇ 1200 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದೆ. ಇದನ್ನು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ನಿಂದ ರಕ್ಷಿಸಲಾಗಿದೆ.

ಪ್ರೊಸೆಸರ್‌ ಕಾರ್ಯ

ಪ್ರೊಸೆಸರ್‌ ಕಾರ್ಯ

ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732G SoC ಪ್ರೊಸೆಸರ್‌ ಅನ್ನು ಹೊಂದಿದೆ. ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಈ ಪೋನ್ 6GB RAM + 64GB ಮತ್ತು 6GB + 128GB ಸ್ಟೋರೇಜ್ ವೇರಿಯಂಟ್‌ ಆಯ್ಕೆಗಳನ್ನು ಒಳಗೊಂಡಿದೆ.

ಕ್ವಾಡ್‌ ಕ್ಯಾಮೆರಾ ವಿಶೇಷತೆ

ಕ್ವಾಡ್‌ ಕ್ಯಾಮೆರಾ ವಿಶೇಷತೆ

ಇದು ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ಐಸೊಸೆಲ್ GW3 ಸೆನ್ಸಾರ್‌, ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೂಪರ್ ಮ್ಯಾಕ್ರೋ ಶೂಟರ್ ಜೊತೆಗೆ 2x ಜೂಮ್, ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್- ಆಂಗಲ್ ಶೂಟರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್‌ 5,020mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, ಇದು 33W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE, ವೈ-ಫೈ, ಬ್ಲೂಟೂತ್, ಇನ್ಫ್ರಾರೆಡ್ (IR), USB ಟೈಪ್-ಸಿ, ಮತ್ತು 3.5mm ಹೆಡ್‌ಫೋನ್‌ ಜ್ಯಾಕ್ ಅನ್ನು ಒಳಗೊಂಡಿದೆ. ಜೊತೆಗೆ ಹೈ-ರೆಸ್ ಬೆಂಬಲದೊಂದಿಗೆ ನೀವು ಸ್ಟಿರಿಯೊ ಸ್ಪೀಕರ್‌ಗಳನ್ನು ಸಹ ಪಡೆಯುತ್ತೀರಿ.

Best Mobiles in India

English summary
Xiaomi Increases Redmi Note 10 Pro Price, Here Is What It Costs Now.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X