ಶಿಯೋಮಿ ಇಂಡಿಪೆಂಡೆನ್ಸ್‌ ಡೇ ಸೇಲ್‌ನಲ್ಲಿ ಈ ಸ್ಮಾರ್ಟ್‌ಫೋನ್‌ಗಳಿಗೆ ಬಿಗ್‌ ಆಫರ್!

|

ದೇಶದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮಕ್ಕೆ ದಿನಗನಣೆ ಶುರುವಾಗಿದೆ. ಇದೇ ಸಮಯದಲ್ಲಿ ಇ-ಕಾಮರ್ಸ್‌ ಪ್ಲಾಟ್‌ಫಾರ್ಮ್‌ಗಳು ತಮ್ಮ ಗ್ರಾಹಕರಿಗೆ ವಿಶೇಷ ಆಫರ್‌ಗಳನ್ನು ಘೋಷಿಸಿವೆ. ಅಲ್ಲದೆ ಸ್ವಾತಂತ್ರ್ಯ ಅಮೃತಮಹೋತ್ಸವದ ಸಂಭ್ರಮವನ್ನು ಹೆಚ್ಚಿಸುವುದಕ್ಕೆ ಅನೇಕ ಸ್ಮಾರ್ಟ್‌ಫೋನ್‌ ಕಂಪೆನಿಗಳು ಕೂಡ ವಿಶೇಷ ಡಿಸ್ಕೌಂಟ್‌ ನೀಡುತ್ತಿವೆ. ಅದರಂತೆ ಇದೀಗ ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಕಂಪೆನಿ ಶಿಯೋಮಿ ಕಂಪೆನಿ ತನ್ನ ಹಲವು ಆಯ್ದ ಸ್ಮಾರ್ಟ್‌ಫೋನ್‌ಗಳ ಮೇಲೆ ಬಿಗ್‌ ಡಿಸ್ಕೌಂಟ್‌ ಘೋಷಣೆ ಮಾಡಿದೆ.

ಶಿಯೋಮಿ

ಹೌದು, ಶಿಯೋಮಿ ಕಂಪೆನಿ ಭಾರತದಲ್ಲಿ ಶಿಯೋಮಿ ಇಂಡಿಪೆಂಡೆನ್ಸ್ ಡೇ ಸೇಲ್‌ ಅನ್ನು ನಡೆಸುತ್ತಿದೆ. ಈ ಸೇಲ್‌ನಲ್ಲಿ ಶಿಯೋಮಿ ಮತ್ತು ರೆಡ್ಮಿ ಸ್ಮಾರ್ಟ್‌ಫೋನ್‌ಗಳ ಮೇಲೆ ಸೇಲ್‌ ಆಫರ್‌ ಮೇಲೆ ಅನ್ನು ಘೋಷಿಸಿದೆ. ಸ್ಮಾರ್ಟ್‌ಫೋನ್‌ ಪ್ರಿಯರು ಅಮೆಜಾನ್‌ ಮತ್ತು ಶಿಯೋಮಿ ವೆಬ್‌ಸೈಟ್‌ಗಳಲ್ಲಿ ಈ ಡಿಸ್ಕೌಂಟ್‌ ಲಭ್ಯವಾಗಲಿದೆ. ಇನ್ನು ಈ ಆಫರ್‌ ಆಗಸ್ಟ್ 6 ರಿಂದ ಆಗಸ್ಟ್ 11 ರವರೆಗೆ ಪಡೆದುಕೊಳ್ಳಬಹುದಾಗಿದೆ. ಈ ಆಫರ್‌ ಈಗಾಗಲೇ ಲೈವ್ ಆಗಿವೆ ಎಂದು ಹೇಳಲಾಗಿದೆ.

ಶಿಯೋಮಿ

ಶಿಯೋಮಿ ಇಂಡಿಪೆಂಡೆನ್ಸ್‌ ಡೇ ಸೇಲ್‌ನಲ್ಲಿ ಶಿಯೋಮಿ ಮತ್ತು ರೆಡ್ಮಿ ಸ್ಮಾರ್ಟ್‌ಫೋನ್‌ಗಳನ್ನು ಡಿಸ್ಕೌಂಟ್‌ನಲ್ಲಿ ಖರೀದಿಸಬಹುದಾಗಿದೆ. ಶೀಯೋಮಿ ಕಂಪೆನಿಯ ಪಾಲುದಾರ ಚಾನಲ್‌ಗಳಲ್ಲಿ ಈ ಡಿಸ್ಕೌಂಟ್‌ ದೊರೆಯಲಿದೆ. ಇದರಲ್ಲಿ ಪ್ರಮುಖವಾಗಿ ಶಿಯೋಮಿ 12 ಪ್ರೊ ಸ್ಮಾರ್ಟ್‌ಫೋನ್‌ ಅನ್ನು ನೀವು ಮೊದಲ ಬಾರಿಗೆ 49,999ರೂ.ಗಳಿಗೆ ಖರೀದಿಸಬಹುದಾಗಿದೆ. ಇದಲ್ಲದೆ SBI ಕ್ರೆಡಿಟ್ ಕಾರ್ಡ್ ಬಳಸಿ 2,000 ರೂಪಾಯಿಗಳ ತ್ವರಿತ ರಿಯಾಯಿತಿಯನ್ನು ಕೂಡ ಪಡೆದುಕೊಳ್ಳಬಹುದಾಗಿದೆ. ಇನ್ನುಳಿದಂತೆ ಈ ಸೇಲ್‌ನಲ್ಲಿ ಯಾವೆಲ್ಲಾ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಶಿಯೋಮಿ 12 ಪ್ರೊ

ಶಿಯೋಮಿ 12 ಪ್ರೊ

ಶಿಯೋಮಿ ಇಂಡಿಪೆಂಡೆನ್ಸ್‌ ಡೇ ಸೇಲ್‌ನಲ್ಲಿ ಶಿಯೋಮಿ 12 ಪ್ರೊ ಸ್ಮಾರ್ಟ್‌ಫೋನ್‌ ವಿಶೇಷ ಡಿಸ್ಕೌಂಟ್‌ ಪಡೆದುಕೊಂಡಿದೆ. 62,999ರೂ. ಬೆಲೆಯನ್ನು ಹೊಂದಿರುವ ಈ ಸ್ಮಾರ್ಟ್‌ಫೋನ್‌ ಖರೀದಿಸುವ ಗ್ರಾಹಕರು ಅಮೆಜಾನ್‌ನಲ್ಲಿ 5,000 ರೂಪಾಯಿ ಮೌಲ್ಯದ ಕೂಪನ್ ಅನ್ನು ಬಳಸಬಹುದು. ಇದರೊಂದಿಗೆ ಎಲ್ಲಾ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ಗಳ ಮೂಲಕ 6,000ರೂ.ಗಳ ರಿಯಾಯಿತಿಯನ್ನು ಪಡೆದುಕೊಳ್ಳಬಹುದು. ಇದಲ್ಲದೆ, ಎಸ್‌ಬಿಐ ಕ್ರೆಡಿಟ್ ಕಾರ್ಡ್ ಬಳಕೆದಾರರು ಹೆಚ್ಚುವರಿ 2,000ರೂ. ಡಿಸ್ಕೌಂಟ್‌ ದೊರೆಯಲಿದೆ. ಇದೆಲ್ಲವನ್ನು ಒಟ್ಟುಗೂಡಿಸಿದರೆಈ ಸ್ಮಾರ್ಟ್‌ಫೋನ್ ಅನ್ನು 49,999ರೂ. ಬೆಲೆಯಲ್ಲಿ ಖರೀದಿಸಬಹುದಾಗಿದೆ.

ಶಿಯೋಮಿ

ಇನ್ನು ಶಿಯೋಮಿ 12 ಪ್ರೊ ಸ್ಮಾರ್ಟ್‌ಫೋನ್‌ 6.72 ಇಂಚಿನ WQHD+ E5 ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ ಕೋರ್‌ ಸ್ನಾಪ್‌ಡ್ರಾಗನ್‌ 8 Gen 1 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೋನಿ IMX707 ಸೆನ್ಸಾರ್‌ ಅನ್ನು ಹೊಂದಿದೆ. ಜೊತೆಗೆ 4,600mAh ಲಿ-ಪಾಲಿಮರ್‌ ಬ್ಯಾಟರಿಯನ್ನು ಹೊಂದಿದೆ. ಇದು 120W ಶಿಯೋಮಿ ಹೈಪರ್‌ ಚಾರ್ಜ್ ವೇಗದ ವೈರ್ಡ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ಶಿಯೋಮಿ 11T ಪ್ರೊ

ಶಿಯೋಮಿ 11T ಪ್ರೊ

ಶಿಯೋಮಿ 11T ಪ್ರೊ ಸ್ಮಾರ್ಟ್‌ಫೋನ್‌ ಶಿಯೋಮಿ ಇಂಡಿಪೆಂಡೆನ್ಸ್‌ ಡೇ ಸೇಲ್‌ನಲ್ಲಿ ನಿಮಗೆ 29,999ರೂ.ಬೆಲೆಗೆ ದೊರೆಯಲಿದೆ. ಈ ಸ್ಮಾರ್ಟ್‌ಫೋನ್‌ ಮೂಲಬೆಲೆ 39,999ರೂ.ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.67 ಇಂಚಿನ ಫ್ಲಾಟ್ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್‌ ರೇಟ್‌ ಅನ್ನು ಒಳಗೊಂಡಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 888 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದ್ದು, 108 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಮುಖ್ಯ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 120W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.

ಶಿಯೋಮಿ 11 ಲೈಟ್‌ NE

ಶಿಯೋಮಿ 11 ಲೈಟ್‌ NE

ಇನ್ನು ಶೀಯೋಮಿ 11 ಲೈಟ್‌ NE ಸ್ಮಾರ್ಟ್‌ಫೋನ್‌ ಶಿಯೋಮಿ ಇಂಡಿಪೆಂಡೆನ್ಸ್‌ ಡೆ ಸೇಲ್‌ ಪ್ರಯುಕ್ತ ನಿಮಗೆ ಕೇವಲ 18,999ರೂ.ಗಳಿಗೆ ಲಭ್ಯವಿರುತ್ತದೆ. ಈ ಸ್ಮಾರ್ಟ್‌ಫೋನ್‌ 6.55 ಇಂಚಿನ ಫುಲ್‌ ಹೆಚ್‌ಡಿ + OLED ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 780G SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 11 ಬೆಂಬಲವನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಪಡೆದಿದೆ. ಜೊತೆಗೆ 4,250mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದಕ್ಕೆ ಪೂರಕವಾಗಿ ಈ ಫೋನ್ 33W ಫಾಸ್ಟ್‌ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ರೆಡ್ಮಿ ನೋಟ್‌ 11 ಪ್ರೊ ಪ್ಲಸ್‌ 5G

ರೆಡ್ಮಿ ನೋಟ್‌ 11 ಪ್ರೊ ಪ್ಲಸ್‌ 5G

ಶಿಯೋಮಿ ಇಂಡಿಪೆಂಡೆನ್ಸ್‌ ಡೇ ಸೇಲ್‌ನಲ್ಲಿ ರೆಡ್ಮಿ ಸ್ಮಾರ್ಟ್‌ಫೋನ್‌ಗಳಿಗೂ ಕೂಡ ವಿಶೇಷ ಡಿಸ್ಕೌಂಟ್‌ ಲಭ್ಯವಾಗುತ್ತಿದೆ. ಇದರಲ್ಲಿ ರೆಡ್ಮಿ ನೋಟ್‌ 11 ಪ್ರೊ+ 5G ಸ್ಮಾರ್ಟ್‌ಫೋನ್‌ 24,999ರೂ. ಬದಲಿಗೆ 19,999ರೂ. ಬೆಲೆಯಲ್ಲಿ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ಹೆಚ್‌ಡಿ+ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 695 ಪ್ರೊಸೆಸರ್‌ ಬಲವನ್ನು ಪಡೆದಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ಕ್ಯಾಮೆರಾವನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108MP ಸೆನ್ಸಾರ್‌, ಒಳಗೊಂಡಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದ್ದು, 67W ವೇಗದ ಚಾರ್ಜಿಂಗ್ ಅನ್ನು ಹೊಂದಿದೆ.

ರೆಡ್ಮಿ 10A ಸ್ಪೋರ್ಟ್‌

ರೆಡ್ಮಿ 10A ಸ್ಪೋರ್ಟ್‌

ಇದಲ್ಲದೆ ನೀವು ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ ಆಗಿರುವ ರೆಡ್ಮಿ 10A ಸ್ಪೋರ್ಟ್ ಸ್ಮಾರ್ಟ್‌ಫೋನ್‌ ಕೂಡ ಡಿಸ್ಕೌಂಟ್‌ ಪಡೆದುಕೊಂಡಿದೆ. ಆದರಿಂದ ಈ ಸ್ಮಾರ್ಟ್‌ಫೋನ್‌ ಅನ್ನು ನೀವು ಕೇವಲ 10,999ರೂ.ಗಳಿಗೆ ಖರೀದಿಸಲು ಸಾಧ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.53-ಇಂಚಿನ HD+ IPS ಡಿಸ್ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹೆಲಿಯೊ G25 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು 10W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

Best Mobiles in India

English summary
Xiaomi Independence Day sale: Big Discounts on Xiaomi and Redmi smartphones

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X