ಭಾರತಕ್ಕೆ ಶೀಘ್ರದಲ್ಲೇ ಎಂಟ್ರಿ ನೀಡಲಿದೆ ಶಿಯೋಮಿ ಮಿ 10i ಸ್ಮಾರ್ಟ್‌ಫೋನ್‌!

|

ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಶಿಯೋಮಿ 2021 ರಲ್ಲಿ ಮಿ 10i ಅನ್ನು ಭಾರತದಲ್ಲಿ ಬಿಡುಗಡೆ ಮಾಡಲು ಸಿದ್ದತೆ ನಡೆಸಿದೆ. ಇದು ಶಿಯೋಮಿಯ 2021ನೇ ವರ್ಷದ ಮೊದಲ ಸ್ಮಾರ್ಟ್‌ಫೋನ್‌ ಆಗಿರಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 108 ಮೆಗಾಪಿಕ್ಸೆಲ್ ಪ್ರೈಮರಿ ಸೆನ್ಸಾರ್‌ ಒಳಗೊಂಡ ಕ್ವಾಡ್-ಕ್ಯಾಮೆರಾ ಹೊಂದಿರಲಿದೆ ಎನ್ನಲಾಗಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ ಕುರಿತು ಟೀಸರ್ ಬಿಡುಗಡೆ ಆಗಿದ್ದು, ಸ್ಮಾರ್ಟ್‌ಫೋನ್‌ನ ಕೆಲವು ವಿಶೇಷತೆಗಳು ಬಹಿರಂಗೊಂಡಿವೆ.

ಶಿಯೋಮಿ

ಹೌದು, ಶಿಯೋಮಿ ಕಂಪೆನಿ ಭಾರತದಲ್ಲಿ ತನ್ನ ಹೊಸ ಶಿಯೋಮಿ 10i ಅನ್ನು ಬಿಡುಗಡೆ ಮಾಡಲು ಸಿದ್ದತೆ ನಡೆಸಿದೆ. ಈ ಸ್ಮಾರ್ಟ್‌ಫೋನ್‌ ಶಿಯೋಮಿ ಆನ್‌ಲೈನ್ ಲೈ ವ್‌ಸ್ಟ್ರೀಮ್ ಈವೆಂಟ್ ಮೂಲಕ ಜನವರಿ 5, 2021ಕ್ಕೆ ಬಿಡುಗಡೆ ಆಗಲಿದೆ. ಇದು ಈಗಾಗಲೇ ಚೀನಾದಲ್ಲಿ ಬಿಡುಗಡೆ ಆಗಿರುವ ರೆಡ್ಮಿ ನೋಟ್‌ 9 ಪ್ರೊ 5G ಎಂದು ಹೇಳಲಾಗ್ತಿದೆ. ಆದರೂ ಭಾರತದಲ್ಲಿ ಇದು ಇನ್ನಷ್ಟು ಭಿನ್ನವಾಗಿ ಲಭ್ಯವಾಗಲಿದೆ ಎಂದು ಅಂದಾಜಿಸಲಾಗಿದೆ. ಸದ್ಯ ಲಭ್ಯ ಮಾಹಿತಿಯ ಪ್ರಕಾರ ಸ್ಮಾರ್ಟ್‌ಫೋನ್‌ ವಿಶೇಷತೆ ಬಗ್ಗೆ ತಿಳಿಸಿಕೊಡ್ತೀವಿ. ಮುಂದೆ ಓದಿರಿ.

ಡಿಸ್‌ಪ್ಲೇ ಹೇಗಿರಲಿದೆ ?

ಡಿಸ್‌ಪ್ಲೇ ಹೇಗಿರಲಿದೆ ?

ಶಿಯೋಮಿ ಮಿ 10i ಸ್ಮಾರ್ಟ್‌ಫೋನ್‌ 1080x2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67 ಇಂಚಿನ ಡಿಸ್‌ಪ್ಲೇ ಹೊಂದಿರಲಿದೆ ಎನ್ನಲಾಗಿದೆ. ಈ ಡಿಸ್‌ಪ್ಲೇ 125Hz ರಿಫ್ರೆಶ್‌ ರೇಟ್‌ ಜೊತೆಗೆ 450 ನಿಟ್ಸ್‌ ಬ್ರೈಟ್‌ನೆಶ್‌ ಅನ್ನು ಒಳಗೊಂಡಿದೆ. ಇನ್ನು ಡಿಸ್‌ಪ್ಲೇ 84.6% ಸ್ಕ್ರೀನ್‌ ಟು ಬಾಡಿ ಅನುಪಾತವನ್ನು ಹೊಂದಿದೆ ಎಂದು ನಿರೀಕ್ಷಿಸಲಾಗಿದೆ.

ಪ್ರೊಸೆಸರ್‌ ಏನು?

ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 750G ಪ್ರೊಸೆಸರ್‌ ಹೊಂದಿರಲಿದೆ ಎನ್ನಲಾಗಿದ್ದು, ಇದು ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೆ 6GB RAM+128GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿರುವ ಸಾಧ್ಯತೆ ಇದೆ.

ಕ್ಯಾಮೆರಾ ವಿಶೇಷತೆ

ಕ್ಯಾಮೆರಾ ವಿಶೇಷತೆ

ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಹೊಂದಿರಲಿದ್ದು, ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌, ಮೂರು ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿರಲಿದೆ ಎಂದು ಹೇಳಲಾಗಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್‌

ಬ್ಯಾಟರಿ ಮತ್ತು ಇತರೆ ಫೀಚರ್ಸ್‌

ಶಿಯೋಮಿ ಮಿ10 I ಸ್ಮಾರ್ಟ್‌ಫೋನ್‌ 5820mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W ಫಾಸ್ಟ್ ಚಾರ್ಜಿಂಗ್ ಸಿಸ್ಟಮ್ ಅನ್ನು ಹೊಂದಿರುತ್ತದೆ ಎಂದು ನಾವು ನಿರೀಕ್ಷಿಸಬಹುದು. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ, ಹಾಟ್‌ಸ್ಪಾಟ್‌, GPS, USB ಟೈಪ್‌ ಸಿ2 ಅನ್ನು ಬೆಂಬಲಿಸಲಿದೆ ಎಂದು ಅಂದಾಜಿಸಲಾಗಿದೆ.

Best Mobiles in India

English summary
It is official. Xiaomi is bringing the Mi 10i as its first smartphone launch in 2021 to India.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X