2023ರಲ್ಲಿ ಈ ಸ್ಮಾರ್ಟ್‌ಫೋನ್‌ ಸೌಂಡ್‌ ಮಾಡೋದು ಪಕ್ಕಾ! ಏನೆಲ್ಲಾ ನಿರೀಕ್ಷೆ?

|

ಶಿಯೋಮಿ ಕಂಪೆನಿಯ ಶಿಯೋಮಿ Civi 3 ಸ್ಮಾರ್ಟ್‌ಫೋನ್‌ ಈಗಾಗಲೇ ಸಾಕಷ್ಟು ಸೌಂಡ್‌ ಮಾಡ್ತಿದೆ. ಬಿಡುಗಡೆಗೂ ಮುನ್ನವೇ ವಿವಿಧ ಕಾರಣಗಳಿಂದ ಈ ಫೋನ್‌ ಸದ್ದು ಮಾಡ್ತಿದೆ. ಅಲ್ಲದೆ ಇದರ ಫೀಚರ್ಸ್‌ ಕಾರಣಗಳಿಂದಾಗಿಯೂ ಫೋನ್‌ ಪ್ರಿಯರ ಗಮನಸೆಳೆದಿದೆ. ಇದೀಗ ಇಡೀ ಮಾರುಕಟ್ಟೆಯೆ ಸಂಚಲನಗೊಳ್ಳುವಂತ ಸುದ್ದಿಯೊಂದು ಹೊರಬಿದ್ದಿದೆ. ಅದರಂತೆ ಶಿಯೋಮಿ Civi 3 ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಡೈಮೆನ್ಸಿಟಿ 8200 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ ಎಂದು ಹೇಳಲಾಗ್ತಿದೆ.

2023ರಲ್ಲಿ ಈ ಸ್ಮಾರ್ಟ್‌ಫೋನ್‌ ಸೌಂಡ್‌ ಮಾಡೋದು ಪಕ್ಕಾ! ಏನೆಲ್ಲಾ ನಿರೀಕ್ಷೆ?

ಹೌದು, ಶಿಯೋಮಿ Civi 3 ಸ್ಮಾರ್ಟ್‌ಫೋನ್‌ ಭಾರಿ ಸಂಚಲನ ಸೃಷ್ಟಿಸುವ ನಿರೀಕ್ಷೆ ಹುಟ್ಟುಹಾಕಿದೆ. ಅದಕ್ಕೆ ತಕ್ಕಂತೆ ಈ ಸ್ಮಾರ್ಟ್‌ಫೋನ್‌ ಫೀಚರ್ಸ್‌ ಬಗ್ಗೆ ಎಲ್ಲೆಡೆ ಸಹಜ ಕುತೂಹಲ ಗರಿಗೆದರಿದೆ. ಇದರ ಪ್ರೊಸೆಸರ್‌ ವಿಚಾರ ಇದೀಗ ಎಲ್ಲೆಡೆ ಸಂಚಲನ ಸೃಷ್ಟಿಸುವ ಮೂಲಕ ಈ ಫೋನ್‌ ಮಾರುಕಟ್ಟೆಯಲ್ಲಿ ದೂಳೆಬ್ಬಿಸುವ ಸೂಚನೆ ನೀಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 2023 ರ ದ್ವಿತೀಯಾರ್ಧದಲ್ಲಿ ಬಿಡುಗಡೆಯಾಗುವ ಸಾದ್ಯತೆಯಿದೆ. ಇನ್ನುಳಿದಂತೆ ಈ ಫೋನ್‌ನಲ್ಲಿ ಯಾವೆಲ್ಲಾ ಫೀಚರ್ಸ್‌ ನಿರೀಕ್ಷಿಸಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸೈನ್‌ ಹೇಗಿರಲಿದೆ?
ಶಿಯೋಮಿ Civi 3 ಸ್ಮಾರ್ಟ್‌ಫೋನ್‌ 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿರಬಹುದು. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿರಬಹುದು ಎನ್ನಲಾಗಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಡೈಮೆನ್ಸಿಟಿ 8200 ಚಿಪ್‌ಸೆಟ್‌ ಮೂಲಕ ಕಾರ್ಯನಿರ್ವಹಿಸಲಿದೆ ಎನ್ನಲಾಗಿದೆ. ಜೊತೆಗೆ 8GB RAM ಮತ್ತು 256 GB ಇಂಟರ್‌ ಸ್ಟೋರೇಜ್‌ ಆಯ್ಕೆಯೊಂದಿಗೆ ಬರಬಹುದು ಎಂದು ಅಂದಾಜಿಸಲಾಗಿದೆ.

2023ರಲ್ಲಿ ಈ ಸ್ಮಾರ್ಟ್‌ಫೋನ್‌ ಸೌಂಡ್‌ ಮಾಡೋದು ಪಕ್ಕಾ! ಏನೆಲ್ಲಾ ನಿರೀಕ್ಷೆ?

ಕ್ಯಾಮೆರಾ ವಿಶೇಷತೆ?
ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ನೊಂದಿಗೆ ಬರಲಿದೆ ಎಂದು ವರದಿಯಾಗಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 16 ಮೆಗಾಪಿಕ್ಸೆಲ್‌ ಅಲ್ಟ್ರಾ-ವೈಡ್ ಆಂಗಲ್ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಡೆಪ್ತ್ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ಸೆಲ್ಫಿ ಕ್ಯಾಮೆರಾದೊಂದಿಗೆ ಬರಲಿದೆ ಎಂದು ಅಂದಾಜಿಸಲಾಗಿದೆ.

ಬ್ಯಾಟರಿ ಬ್ಯಾಕ್‌ಅಪ್‌ ಎಷ್ಟಿರಬಹುದು?
ಶಿಯೋಮಿ Civi 3 ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದ್ದು, 80W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಬಹುದು ಎನ್ನುವ ನಿರೀಕ್ಷೆಯಿದೆ. ಇದರೊಂದಿಗೆ ಈ ಸ್ಮಾರ್ಟ್‌ಫೋನ್‌ನ ಮೇಲೆ ಭಾರಿ ನಿರೀಕ್ಷೆ ಇಡಲಾಗಿದೆ. ಆದರೆ ಈ ಫೋನ್‌ನ ಫೀಚರ್ಸ್‌ ವಿವರಗಳು ಮುಂದಿನ ದಿನಗಳಲ್ಲಿ ಬಹಿರಂಗವಾಗುವ ಸಾಧ್ಯತೆಯಿದೆ.

2023ರಲ್ಲಿ ಈ ಸ್ಮಾರ್ಟ್‌ಫೋನ್‌ ಸೌಂಡ್‌ ಮಾಡೋದು ಪಕ್ಕಾ! ಏನೆಲ್ಲಾ ನಿರೀಕ್ಷೆ?

ಇನ್ನು ಕಳೆದ ವರ್ಷ ಎಂಟ್ರಿ ನೀಡಿದ್ದ ಶಿಯೋಮಿ Civi 2 ಸ್ಮಾರ್ಟ್‌ಫೋನ್‌ ಕೂಡ ಆಕರ್ಷಕ ಫೀಚರ್ಸ್‌ಗಳಿಂದ ಗಮನಸೆಳೆದಿತ್ತು. ಈ ಸ್ಮಾರ್ಟ್‌ಫೋನ್‌ 6.55 ಇಂಚಿನ OLED ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1000 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ನೀಡಲಿದೆ. ಇದು 120Hz ರಿಫ್ರೆಶ್ ರೇಟ್‌ ಮತ್ತು 240Hz ಟಚ್ ಸ್ಯಾಂಪ್ಲಿಂಗ್‌ ರೇಟ್‌ ಅನ್ನು ನೀಡಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಹೊಂದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಪಡೆದಿದೆ. ಇದು ಕೂಡ ಡ್ಯುಯಲ್‌ ಸೆಲ್ಫಿ ಕ್ಯಾಮೆರಾಗಳನ್ನು ಪಡೆದಿದೆ. ಇದು 32 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಈ ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದ್ದು, 67W ಫಾಸ್ಟ್ ಚಾರ್ಜಿಂಗ್ ಟೆಕ್ನಾಲಜಿಯನ್ನು ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್‌ ಐಸ್ ಬ್ಲೂ, ಪಿಂಕ್, ಕಪ್ಪು ಮತ್ತು ಬಿಳಿ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿದೆ.

Best Mobiles in India

English summary
Xiaomi is working on launching Civi 3 in the second half of 2023.know more details in kannada

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X