ಶೀಘ್ರದಲ್ಲೇ ಭಾರತಕ್ಕೆ ಎಂಟ್ರಿ ನೀಡಲಿದೆ ಶಿಯೋಮಿ ಮಿ10 ಫೋನ್!
ಚೀನಾ ಮೂಲದ ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಕ ಶಿಯೋಮಿ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಂದ ಭಾರತದ ಮಾರುಕಟ್ಟೆಯಲ್ಲಿ ಪ್ರಾಬಲ್ಯವನ್ನ ಸಾಧಿಸಿದೆ. ಹೊಸ ಮಾದರಿಯ ಫೀಚರ್ಸ್‌ಗಳ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಸೈ ಎನಿಸಿಕೊಂಡಿರುವ ಶಿಯೋಮಿ ಕಂಪೆನಿ ಇದೀಗ ತನ್ನ ಹೊಸ ಆವೃತ್ತಿಯ ಸ್ಮಾರ್ಟ್‌ಫೋನ್ ಅನ್ನು ಭಾರತದ ಮಾರುಕಟ್ಟೆಗೆ ಪರಿಚಯಿಸಲು ಪ್ಲ್ಯಾನ್ ಮಾಡಿಕೊಂಡಿದೆ. ಈ ಹೊಸ ಸ್ಮಾರ್ಟ್‌ಫೋನ್ ಎರಡು ವೇರಿಯೆಂಟ್ ಆಯ್ಕೆಯಲ್ಲಿ ಲಬ್ಯವಾಗಲಿದೆ ಎನ್ನಲಾಗ್ತಿದೆ.

ಹೌದು, ಶಿಯೋಮಿ ಕಂಪೆನಿ ತನ್ನ ಹೊಸ ಮಿ10 ಸ್ಮಾರ್ಟ್‌ಫೋನ್ ಅನ್ನು ಭಾರತದ ಮಾರುಕಟ್ಟೆಗೆ ಪರಿಚಯಿಸಲು ಪ್ಲ್ಯಾನ್ ರೂಪಿಸಿಕೊಂಡಿದೆ. ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 865 ಪ್ರೊಸೆಸರ್ ಹೊಂದಿರಲಿದೆ ಎನ್ನಲಾಗ್ತಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್ ಕ್ವಾಡ್ ಕ್ಯಾಮೆರಾ ಸೆಟ್‌ಅಪ್ ಹೊಂದಿರಲಿದ್ದು, 108ಮೆಗಾ ಪಿಕ್ಸೆಲ್ ಹೊಂದಿರುವ ಪ್ರೈಮರಿ ಕ್ಯಾಮೆರಾವನ್ನು ಹೊಂದಿರಲಿದೆ. ಸದ್ಯ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನ ಹೊಂದಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಯೋಣ ಬನ್ನಿ

ಡಿಸ್‌ಪ್ಲೇ
ಈ ಸ್ಮಾರ್ಟ್‌ಫೋನ್ 1080 x 2340 ಸ್ಕ್ರೀನ್ ರೆಸಲ್ಯೂಶನ್ ಹೊಂದಿರುವ 6.67 ಇಂಚಿನ ಫುಲ್‌ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ ಪ್ಲಸ್ ಬಾಗಿದ ಮಾದರಿಯ ಅಮೋಲೆಡ್ ಸ್ಕ್ರೀನ್ ಹೊಂದಿದೆ. ಅಲ್ಲದೆ ಈ ಡಿಸ್‌ಪ್ಲೇ ಸ್ಕ್ರೀನ್ 90Hz ರಿಫ್ರೆಶ್ ರೇಟ್ ಅನ್ನು ಹೊಂದಿದೆ. ಇದಲ್ಲದೆ ಇದರ ಸ್ಕ್ರೀನ್ ಟು ಬಾಡಿ ನಡುವಿನ ಅನುಪಾತ 89.6% ರಷ್ಟಿದೆ. ಜೊತೆಗೆ ಡಿಸ್‌ಪ್ಲೇ ರಚನೆ 19.5:9 ಅನುಪಾತವನ್ನು ಹೊಂದಿದ್ದು,386ppi ಪಿಕ್ಸೆಲ್ ಸಾಂದ್ರತೆಯನ್ನ ಒಳಗೊಂಡಿದೆ.

ಪ್ರೊಸೆಸರ್
ಶಿಯೋಮಿ ಮಿ10 ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 865 ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ 8GB RAM ಮತ್ತು128GB, 8GB RAM ಮತ್ತು 256GB ಹಾಗೂ 12GB RAM + 512GB ಆಂತರಿಕ ಸಾಮರ್ಥ್ಯದ ಎರಡು ವೇರಿಯೆಂಟ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇನ್ನು ಮೆಮೊರಿ ಕಾರ್ಡ್ ಮೂಲಕ ಸ್ಟೋರೇಜ್ ಸಾಮರ್ಥ್ಯ ವಿಸ್ತರಿಸಲು ಇದರಲ್ಲಿ ಅವಕಾಶವನ್ನ ನೀಡಿಲ್ಲ.

ಕ್ಯಾಮೆರಾ ವಿನ್ಯಾಸ
ಇದು ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ವೈಡ್ ಆಂಗಲ್ ಲೆನ್ಸ್ , ಮೂರು ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 20 ಮೆಗಾಪಿಕ್ಸೆಲ್ ಫ್ರಂಟ್ ಫೇಸಿಂಗ್ ಪಂಚ್ ಹೋಲ್ ಸೆಲ್ಫಿ ಕ್ಯಾಮೆರಾವನ್ನ ಹೊಂದಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ನಲ್ಲಿ HDR ಇಮೇಜ್ ಮೋಡ್ ಅನ್ನು ಒಳಗೊಂಡಿದೆ ಎಂದು ಹೇಳಲಾಗ್ತಿದೆ.

ಬ್ಯಾಟರಿ ಮತ್ತು ಇತರೆ
ಈ ಸ್ಮಾರ್ಟ್‌ಫೋನ್ 4780mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದ್ದು, 30Wಫಾಸ್ಟ್ ಚಾರ್ಜಿಂಗ್‌ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್ v5.0, ಹಾಟ್‌ಸ್ಪಾಟ್, ವೈಫೈ, ಯುಎಸ್‌ಬಿ ಪೋರ್ಟ್, 4G VOLTE, ಅನ್ನು ಬೆಂಬಲಿಸಲಿದೆ. ಸದ್ಯ ಈ ಸ್ಮಾರ್ಟ್‌ಫೋನ್ ಕೋರಲ್ ಗ್ರೀನ್ ಮತ್ತು ಟ್ವಿಲೈಟ್ ಗ್ರೇ ಕಲರ್‌ನಲ್ಲಿ ಲಭ್ಯವಾಗಲಿದೆ ಎನ್ನಲಾಗ್ತಿದ್ದು, ಇದರ ಬೆಲೆ ಹಾಗೂ ಬಿಡುಗಡೆಯ ದಿನಾಂಕದ ಬಗ್ಗೆ ಕಂಪೆನಿ ಇನ್ನು ಯಾವುದೇ ಮಾಹಿತಿಯನ್ನ ಬಿಟ್ಟುಕೊಟ್ಟಿಲ್ಲ.


Click it and Unblock the Notifications




