ಭಾರೀ ಬೆಲೆ ಇಳಿಕೆ ಕಂಡ 'ಶಿಯೋಮಿ ಮಿ 10' ಸ್ಮಾರ್ಟ್‌ಫೋನ್!
ಶಿಯೋಮಿ ಕಂಪನಿಯು ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ಹೊಸ ಶಿಯೋಮಿ ಮಿ 10 ಸ್ಮಾರ್ಟ್‌ಫೋನ್ ಹಲವು ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರನ್ನು ಸೆಳೆದಿದೆ. ಈ ಫೋನಿನ ಬೆಲೆಯಲ್ಲಿ ಈಗ ಭರ್ಜರಿ ಬೆಲೆ ಇಳಿಕೆ ಆಗಿದ್ದು, ಈ ಮೂಲಕ ಗ್ರಾಹಕರನ್ನು ತನ್ನತ್ತ ಮತ್ತೊಮ್ಮೆ ಆಕರ್ಷಿಸಿದೆ. ಈ ಸ್ಮಾರ್ಟ್‌ಫೋನಿನ ಮುಖ್ಯ ಕ್ಯಾಮೆರಾವು 108ಎಂಪಿ ಸೆನ್ಸಾರ್‌ನಲ್ಲಿರುವುದು ಮುಖ್ಯ ಹೈಲೈಟ್ ಆಗಿ ಕಾಣಿಸಿಕೊಂಡಿದೆ.

ಶಿಯೋಮಿ ಸಂಸ್ಥೆಯು ಪ್ಲ್ಯಾಗ್‌ಶಿಪ್ ಮಿ 10 ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಈಗ 5000ರೂ.ಗಳ ಭಾರೀ ಇಳಿಕೆ ಕಂಡಿದೆ. ಮಿ 10 ಸ್ಮಾರ್ಟ್‌ಫೋನ್ 128GB ವೇರಿಯಂಟ್ 49,999ರೂ. ಬೆಲೆಯಲ್ಲಿ ಲಾಂಚ್ ಆಗಿತ್ತು. ಇದೀಗ 5000ರೂ.ಗಳ ದರ ಕಡಿತ ಕಂಡು 44,999ರೂ. ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ. ಹಾಗೆಯೇ ಈ ಫೋನ್ 256GB ಸ್ಟೋರೇಜ್ ವೇರಿಯಂಟ್ ಆಯ್ಕೆಯನ್ನು ಸಹ ಪಡೆದುಕೊಂಡಿದೆ. ಜೊತೆಗೆ 4780mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಹೊಂದಿದೆ. ಇನ್ನುಳಿದಂತೆ ಮಿ 10 ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನು ಹೊಂದಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ವಿನ್ಯಾಸ
ಶಿಯೋಮಿ ಮಿ 10 ಸ್ಮಾರ್ಟ್‌ಫೋನ್ 1080x2340 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ ಜೊತೆಗೆ 6.67 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ AMOLED ಡಿಸ್‌ಪ್ಲೇಯನ್ನ ಹೊಂದಿದೆ. ಡಿಸ್‌ಪ್ಲೇಯು 180Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಒಳಗೊಂಡಿದೆ. ಡಿಸ್‌ಪ್ಲೇಯ ಅನುಪಾತವು 19.5:9 ಆಗಿದೆ. ಜೊತೆಗೆ ಈ ಡಿಸ್‌ಪ್ಲೇಯು 1120 ನಿಟ್ಸ್ ಬ್ರೈಟ್ನೆಸ್ ಸಾಮರ್ಥ್ಯವನ್ನು ಒಳಗೊಂಡಿದೆ.

ಪ್ರೊಸೆಸರ್ ಕಾರ್ಯ
ಶಿಯೋಮಿ ಮಿ 10 ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 865 ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ 8GB RAM ಮತ್ತು 128GB ಮತ್ತು 256GB ಆಂತರಿಕ ಸಂಗ್ರಹ ಸಾಮರ್ಥ್ಯದ ಆಯ್ಕೆಗಳನ್ನು ಪಡೆದಿದೆ. ಮೆಮೊರಿ ಕಾರ್ಡ್ ಮೂಲಕ ಬಾಹ್ಯ ಸಂಗ್ರಹ ಸಾಮರ್ಥ್ಯ ವಿಸ್ತರಿಸಿಕೊಳ್ಳುವ ಅವಕಾಶದ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ವಿಶೇಷ ಕ್ಯಾಮೆರಾ
ಶಿಯೋಮಿ ಮಿ 10 ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108ಎಂಪಿ ಸೆನ್ಸಾರ್‌ನಲ್ಲಿದೆ. ಸೆಕೆಂಡರಿ ಕ್ಯಾಮೆರಾವು 13ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಮೂರನೇ ಮತ್ತು ನಾಲ್ಕನೇ ಕ್ಯಾಮೆರಾಗಳು ಕ್ರಮವಾಗಿ 2 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಸೆಲ್ಫಿಗಾಗಿ 20ಎಂಪಿ ಸೆನ್ಸಾರ್ ಕ್ಯಾಮೆರಾವನ್ನು ನೀಡಲಾಗಿದೆ. ಆಕರ್ಷಕ ಎಡಿಟಿಂಗ್ ಆಯ್ಕೆಗಳು ಇವೆ.

ಬ್ಯಾಟರಿ ಮತ್ತು ಇತರೆ
ಶಿಯೋಮಿ ಮಿ 10 ಸ್ಮಾರ್ಟ್‌ಫೋನ್ 4780mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. ಜೊತೆಗೆ 10W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, ಯುಎಸ್‌ಬಿ ಟೈಪ್-ಸಿ ಪೋರ್ಟ್, ವೈ-ಫೈ 5, ಬ್ಲೂಟೂತ್ ವಿ 5.1, NFC, ಜಿಪಿಎಸ್, 3.5 ಎಂಎಂ ಆಡಿಯೊ ಜ್ಯಾಕ್ ಅನ್ನು ಬೆಂಬಲಿಸಲಿದೆ. ಅಲ್ಲದೆ ಆಪ್ಟಿಕಲ್ ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಹೊಂದಿದೆ. ಜೊತೆಗೆ ಅಲ್ಟ್ರಾಸಾನಿಕ್ ದೂರ ಸೆನ್ಸಾರ್, ಆಂಬಿಯೆಂಟ್ ಲೈಟ್ ಸೆನ್ಸಾರ್, ಅನ್ನು ಒಳಗೊಂಡಿದೆ.


Click it and Unblock the Notifications